Site icon Vistara News

Gruha Lakshmi Scheme: ಜೂ.16ರಿಂದ ಗೃಹಲಕ್ಷ್ಮಿ ಯೋಜನೆಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆ ಆರಂಭ

#image_title

ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಲ್ಲಿ 2000 ರೂಪಾಯಿ ಸಹಾಯಧನ ಪಡೆಯಲು ಮಹಿಳೆಯರು (ಮನೆ ಯಜಮಾನಿ) ಜೂನ್ 16ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ.

ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯಲ್ಲಿ ಬಿಪಿಎಲ್, ಎಪಿಎಲ್, ಅಂತ್ಯೋದಯ ಕಾರ್ಡ್ನಲ್ಲಿ ನಮೂದಿಸಿರುವಂತೆ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2000 ರೂ.ಗಳನ್ನು ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ (DBT) ಮೂಲಕ ನೀಡಲಾಗುತ್ತದೆ. ಕುಟುಂಬದ ಯಜಮಾನಿಯು ಆರ್ಥಿಕವಾಗಿ ಸಬಲೀಕರಣಗೊಂಡಲ್ಲಿ ಕುಟುಂಬದ ಸಮಗ್ರ ಅಭಿವೃದ್ದಿಯನ್ನು ಖಚಿತ ಪಡಿಸಬಹುದು.

ಇದನ್ನೂಓದಿ | Free Electricity: ಗೃಹ ಜ್ಯೋತಿ ಅರ್ಜಿ ಸ್ವೀಕಾರ ಆರಂಭ ಮುಂದೂಡಿಕೆ; ದಿಢೀರ್‌ ನಿರ್ಧಾರಕ್ಕೆ ಕಾರಣವೇನು?

ಈ ಯೋಜನೆಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮೂಲಕ 2023-24ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅನುಷ್ಠಾನ ಮಾಡುತ್ತಿದೆ.

ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಪ್ರಮುಖ ಅಂಶಗಳು

ಯೋಜನೆಯ ಕುರಿತಂತೆ ಸಂದೇಹ, ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ (Helpline) – 1902 ಗೆ ಸಂಪರ್ಕಿಸಬಹುದಾಗಿದೆ.

Exit mobile version