ಬೆಂಗಳೂರು: ಓರಾಯನ್ ಮಾಲ್‌ನ ಹೊರಾಂಗಣದಲ್ಲಿ ತಣ್ಣನೆ ಬೀಸುತ್ತಿದ್ದ ಗಾಳಿ. ಪಕ್ಕದಲ್ಲೊಂದು ಕೆರೆ. ಆ ಸುಂದರ ಪರಿಸರದಲ್ಲೊಂದು ವರ್ಣರಂಜಿತ ವೇದಿಕೆ. ಆ ವೇದಿಕೆಯಲ್ಲಿ ಚೇತನ್ ಸೂರ್ಯ ಅವರ STELLER STUDIO & EVENT MANAGEMENT ಸಂಸ್ಥೆ, PRK Audio ಸಂಸ್ಥೆಯ ಸಹಯೋಗದೊಂದಿಗೆ ಆಯೋಜಿಸಿರುವ ” ಅಪ್ಪು ಕಪ್ ಸೀಸನ್ 2″ (ಶಟಲ್ ಬ್ಯಾಡ್ಮಿಂಟನ್ ಟೂರ್ನಿ) ಅಪ್ಪು ಸಂಭ್ರಮ ಸಮಾರಂಭ (Appu Cup Season 2) ಅದ್ಧೂರಿಯಾಗಿ ನಡೆಯಿತು. ಸಾಯಿ ಗೋಲ್ಡ್ ಪ್ಯಾಲೆಸ್‌ನ ಶರವಣ ಅವರು ನಿರ್ಮಿಸಿರುವ ಐದು ಕೆಜಿ ತೂಕದ ಅಪ್ಪು ಭಾವಚಿತ್ರವುಳ್ಳ ಬೆಳ್ಳಿ ಕಪ್ಅನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಹಾಗೂ ಶ್ರೀಮುರಳಿ ಅವರಿಂದ ಅನಾವರಣವಾಯಿತು. ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ ಗುರುಕರ್, ಸಾ.ರಾ.ಗೋವಿಂದು ಮುಂತಾದವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.
ಟ್ರೋಫಿ ಅನಾವರಣಗೊಳಿಸಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್, ಶಟಲ್ ಆಟ, ಅಪ್ಪು ಅವರ ಮೆಚ್ಚಿನ ಆಟ. ಕಳೆದ ವರ್ಷದಿಂದ ಅಪ್ಪು ಕಪ್ ಟೂರ್ನಿಯನ್ನು ಚೇತನ್ ಅವರು ಚೆನ್ನಾಗಿ ಆಯೋಜಿಸಿಕೊಂಡು ಬರುತ್ತಿದ್ದಾರೆ. ಅವರಿಗೆ ಹಾಗೂ ಭಾಗವಹಿಸಿರುವ ಎಲ್ಲರಿಗೂ ಒಳ್ಳೆಯದಾಗಲಿ ಎಂದರು. ‘ಯಾವುದಾದರೂ ಆಟದ ನೆಪದಲ್ಲಿ ಕಲಾವಿದರನ್ನು ಒಟ್ಟಾಗಿ ಸೇರಿಸುವ ಆಸೆ ಅಪ್ಪು ಅವರಿಗಿತ್ತು. ಅದು ಹೊರದೇಶದಲ್ಲಿ ಅದನ್ನು ನಡೆಸಬೇಕೆಂಬುದು ಅವರ ಯೋಚನೆಯಾಗಿತ್ತು. ಸದಾ ಒಬ್ಬರಿಗೆ ಒಳೆಯದನ್ನೇ ಬಯಸುವ ಹೃದಯ ಅವರಿಗಿತ್ತು. ಅಂತಹ ಪುನೀತ್ ರಾಜಕುಮಾರ್ ಅವರ ನೆನಪಿನಲ್ಲಿ ನಡೆಯುತ್ತಿರುವ “ಅಪ್ಪು ಕಪ್ ಸೀಸನ್ 2” ಯಶಸ್ವಿಯಾಗಲಿ’ ಎಂದು ಶ್ರೀಮುರಳಿ ಹಾರೈಸಿದರು.
‘ನಾಡು ಕಂಡ ಶ್ರೇಷ್ಠ ನಟ ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ನಡೆಯುತ್ತಿರುವ ಈ “ಅಪ್ಪು ಕಪ್” ಶಟಲ್ ಬ್ಯಾಡ್ಮಿಂಟನ್ ಟೂರ್ನಿಯ ಬಗ್ಗೆ ಚೇತನ್ ಸೂರ್ಯ ಅವರು ಹೇಳಿದಾಗ ಬಹಳ ಸಂತೋಷವಾಯಿತು. ನಾನು ಮೊದಲೇ ತಿಳಿಸಿದಂತೆ ಈ ಟೂರ್ನಿಯ ಮೊದಲ ವಿಜೇತರಿಗೆ 100 ಗ್ರಾಂ ಬಂಗಾರ, ದ್ವಿತೀಯ ವಿಜೇತರಿಗೆ 50 ಗ್ರಾಂ ಬಂಗಾರ ಹಾಗೂ ಮೂರನೇ ವಿಜೇತರಿಗೆ 25 ಗ್ರಾಂ ಬಂಗಾರವನ್ನು ಬಹುಮಾನ ನೀಡುವುದಾಗಿ ಸಾಯಿ ಗೋಲ್ಡ್ ಪ್ಯಾಲೆಸ್‌ನ ಶರವಣ ತಿಳಿಸಿದರು.
ನಾವು ಕಳೆದ ವರ್ಷದಿಂದ ಆಯೋಜಿಸುತ್ತಿರುವ “ಅಪ್ಪು ಕಪ್” ಗೆ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರು ಸಹಕಾರ ನೀಡಿರುವುದು ಬಹಳ ಖುಷಿಯಾಗಿದೆ. ಶ್ರೀಮುರಳಿ ಅವರು ಹೇಳಿದಂತೆ ಮುಂದಿನ ವರ್ಷ ಹೊರದೇಶದಲ್ಲಿ ಈ ಟೂರ್ನಿಯ ಸೆಮಿಫೈನಲ್ ಹಾಗೂ ಫೈನಲ್ ಆಯೋಜಿಸಲು ಪ್ರಯತ್ನ ಪಡುತ್ತೇನೆ. ಈ ಬಾರಿ ಟೂರ್ನಿಯಲ್ಲಿ ಹತ್ತು ತಂಡಗಳಿದೆ. ಹತ್ತು ತಂಡಗಳ ಮಾಲೀಕರಿಗೆ, ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರಿಗೆ ಹಾಗೂ ಎಲ್ಲಾ ತಂಡಗಳ ಮಾಲೀಕರಿಗೆ, ಆಟಗಾರರಿಗೆ ಧನ್ಯವಾದ ತಿಳಿಸಿದ “ಅಪ್ಪು ಕಪ್”ನ ರೂವಾರಿ ಚೇತನ್ ಸೂರ್ಯ, ಜುಲೈ 26, 27, 28 ಬೆಂಗಳೂರಿನಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆಯಲಿದೆ ಎಂದರು.
ಇದೇ ಸಂದರ್ಭದಲ್ಲಿ ಹತ್ತು ತಂಡಗಳ ಲೋಗೊ, ಜರ್ಸಿ ಅನಾವರಣ ಮಾಡಿ, ತಂಡದ ಮಾಲೀಕರ ಹಾಗೂ ಆಟಗಾರರ ಪರಿಚಯ ಮಾಡಿಕೊಡಲಾಯಿತು. ALL OK (ಅಲೋಕ್), ಸಮರ್ಜಿತ್ ಲಂಕೇಶ್, ಐಶ್ವರ್ಯ ಸಿಂದೋಗಿ, ಅಭಿಲಾಶ್ ದಳಪತಿ, ಕಾವ್ಯ ಶಾ, ಶರತ್ ಕ್ಷತ್ರಿಯ, ದಿಲೀಪ್ ಕೆಂಪೇಗೌಡ, ಸಿರಿ ರಾಜು, ರಾಮ್ ಪವನ್, ಐಶಾನ, ಲಾವಣ್ಯ, ದೇವನ್, ರಾಘವ್ ನಾಗ್, ಸುನಾಮಿ ಕಿಟ್ಟಿ, ವಿಜಯ್ ಸಿದ್ದರಾಜ್, ವ್ಯಾಸರಾಜ ಸೋಸಲೆ, ಜ್ಯೋತಿ ವ್ಯಾಸರಾಜ್ ಸೇರಿದಂತೆ ಹೆಸರಾಂತ ಕಲಾವಿದರಿಂದ ಮನೋರಂಜನಾ ಕಾರ್ಯಕ್ರಮ ಅಚ್ಚುಕಟ್ಟಾಗಿ ನಡೆಯಿತು. “ಅಪ್ಪು ಕಪ್” ನಲ್ಲಿ ಆಡುತ್ತಿರುವ ತಂಡಗಳು ಹೀಗಿದೆ.
Samarjit in opening event of
— ಸಿನಿ_ಚಿಂತಕ (@CineChintaka) July 14, 2024
Appu Cup Season 2 ( Badminton league)#AppuLiveson #Appu pic.twitter.com/DtNckuex48
1) ಅರಸು ಹಂಟರ್ಸ್ ಮಾಲೀಕರು ಆನಂದ್(PRO Win management) . ನಾಯಕ ಹರೀಶ್ ನಾಗರಾಜ್. 2) ಬಿಂದಾಸ್ ರಾಯಲ್ ಚಾಲೆಂಜರ್ಸ್ ಮಾಲೀಕರು ಪರಿತೋಷ್ ಮೂರ್ತಿ(Oirgin Ventures), ನಾಯಕ ರವಿ ಚೇತನ್. 3) ಪವರ್ ಪೈತಾನ್ಸ್ ಮಾಲೀಕರು ಐಶ್ವರ್ಯ (SN Jals Events), ನಾಯಕ ಸದಾಶಿವ ಶೆಣೈ. 4) ದೊಡ್ಮನೆ ಡ್ರಾಗನ್ಸ್ ಮಾಲೀಕರು ಮಹೇಶ್ ಗೌಡ,(MKJ Group), ನಾಯಕ ಪ್ರಮೋದ್ ಶೆಟ್ಟಿ. 5) ಜಾಕಿ ರೈಡರ್ಸ್ ಮಾಲೀಕರು ಶ್ರೀಹರ್ಷ(Sri Entertainments), ನಾಯಕ ಮನು ರವಿಚಂದ್ರನ್, 6) ರಾಜಕುಮಾರ ಕಿಂಗ್ಸ್ (Kings Club), ಮಾಲೀಕರು ವಿ.ರವಿಕುಮಾರ್ & ಶಂಶುದ್ದೀನ್, ನಾಯಕ ವಿಕ್ರಮ್ ರವಿಚಂದ್ರನ್, 7) ಗಂಧದಗುಡಿ ವಾರಿಯರ್ಸ್ ಮಾಲೀಕರು ಡಾ.ಚೇತನ ಆರ್ ಎಸ್,(Kalaluha), ನಾಯಕ ಭುವನ್ ಗೌಡ, 8)ವೀರ ಕನ್ನಡಿಗ ಬುಲ್ಸ್ ಮಾಲೀಕರು ಮೋನೀಶ್ ಸಿ.(Builder), ನಾಯಕ ದಿಲೀಪ್ ರಾಜ್. 9)ಯುವರತ್ನ ಚಾಂಪಿಯನ್ಸ್ ಮಾಲೀಕರು ಬಿ.ಎಂ.ಶ್ರೀರಾಮ್ ಕೋಲಾರ್(Deepa Films), ನಾಯಕ ಪ್ರವೀಣ್ ತೇಜ್, 10) ಮೌರ್ಯ ವೈಟ್ ಗೋಲ್ಡ್, ಮಾಲೀಕರು ಬಾಬು ಸಿ.ಜೆ(White Gold), ನಾಯಕ ನಿರಂಜನ್ ದೇಶಪಾಂಡೆ.
ಇದನ್ನೂ ಓದಿ: Appu Cup Badminton: ʼಅಪ್ಪು ಕಪ್ ಸೀಸನ್ 2ʼ; ಟೀಮ್ ಬಿಲ್ಡಿಂಗ್‌ಗೆ ಶುಭ ಕೋರಿದ ಅಶ್ವಿನಿ ಪುನೀತ್ ರಾಜಕುಮಾರ್