ಬೆಂಗಳೂರು: ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದಲ್ಲಿ ಅಂಥ ಬದಲಾವಣೆ ಏನೂ ಆಗಿಲ್ಲ. ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ ಅವರು ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ. ಬಾಲಚಂದ್ರ ಜಾರಕಿಹೊಳಿ ಅವರು 1,14,242 ಮತಗಳನ್ನು ಪಡೆದುಕೊಂಡರೆ, ಪಕ್ಷೇತರ ಅಭ್ಯರ್ಥಿ ಭೀಮಪ್ಪ ಗಡಾದ್ ಅವರು 43674 ಮತಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅರವಿಂದ್ ದಳವಾಯಿ ಅವರು 23820 ಮತಗಳನ್ನು ಪಡೆದುಕೊಂಡು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟಿದ್ದಾರೆ(Arabhavi Election Result).
2023ರ ಚುನಾವಣಾ ಅಭ್ಯರ್ಥಿಗಳು
ಹಾಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತ್ತೆ ಬಿಜೆಪಿಯಿಂದ ಸ್ಪರ್ಧಿಸಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅರವಿಂದ ದಳವಾಯಿ ಮತ್ತು ಜೆಡಿಎಸ್‌ನಿಂದ ಪ್ರಕಾಶ್ ಕಲಶೆಟ್ಟಿ ಅವರು ಕಣದಲ್ಲಿದ್ದರು.
ಇದನ್ನೂ ಓದಿ: Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಡಬಲ್ ಎಂಜಿನ್ನ ಕೊಂಡಿ ಕಳಚಿದ ‘ಕೈ’
2018ರ ಚುನಾವಣೆ ಫಲಿತಾಂಶ ಏನಾಗಿತ್ತು?
2004ರಿಂದಲೂ ಬಾಲಚಂದ್ರ ಜಾರಕಿಹೊಳಿ ಅವರು ಈ ಕ್ಷೇತ್ರವನ್ನು ಗೆಲ್ಲುತ್ತಾ ಬಂದಿದ್ದಾರೆ. ಮೊದಲೆರಡು ಚುನಾವಣೆಗಳನ್ನು ಅವರು ಜೆಡಿಎಸ್‌ನಿಂದ ಸ್ಪರ್ಧಿಸಿ ಗೆದ್ದರೆ, ಉಳಿದ ಚುನಾವಣೆಗಳನ್ನು ಅವರು ಬಿಜೆಪಿಯಿಂದ ಸ್ಪರ್ಧಿಸಿದ್ದರು. 2018ರಲ್ಲಿ ಬಾಲಚಂದ್ರ ಜಾರಕಿಹೊಳಿ ಅವರೇ ಗೆದ್ದಿದ್ದಾರೆ. ಅವರು 96144 ಮತಗಳನ್ನು ಪಡೆದುಕೊಂಡರೆ, ಕಾಂಗ್ರೆಸ್ ಪಕ್ಷದ ಭೀಮಪ್ಪ ಗುಂಡಪ್ಪ ಗಡಾದ್ ಅವರು 48816 ಮತಗಳನ್ನು ಪಡೆದುಕೊಂಡರಷ್ಟೇ, ಭಾರೀ ಅಂತರಿಂದ ಬಾಲಚಂದ್ರ ಜಾರಕಿಹೊಳಿ ಅವರು ಗೆದ್ದಿದ್ದರು.