Araga Jnanendra: ಮೋದಿಯವರ ವಯಸ್ಸು ಒಂದೊಂದು ದಿನವೂ ದೇಶಕ್ಕೆ ಮುಖ್ಯವಾಗುತ್ತೆ  - Vistara News

ಕರ್ನಾಟಕ

Araga Jnanendra: ಮೋದಿಯವರ ವಯಸ್ಸು ಒಂದೊಂದು ದಿನವೂ ದೇಶಕ್ಕೆ ಮುಖ್ಯವಾಗುತ್ತೆ 

VISTARANEWS.COM


on

ಆರಗ ಜ್ಞಾನೇಂದ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo
ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಹುಬ್ಬಳ್ಳಿ

Road Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ, ಮತ್ತೋರ್ವ ಗಂಭೀರ

Road Accident : ಖಾಸಗಿ ಬಸ್‌ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಅಸುನೀಗಿದ್ದಾರೆ. ಮತ್ತೊರ್ವ ಗಂಭೀರ ಗಾಯಗೊಂಡಿದ್ದು, ಸ್ಥಳೀಯರು ಆಸ್ಪತ್ರೆಗೆ ರವಾನಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ.

VISTARANEWS.COM


on

By

Road Accident in Hubballi
ಸಾಂದರ್ಭಿಕ ಚಿತ್ರ
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಅಂಚಟಗೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೋರ್ವ ಗಂಭೀರ ಗಾಯಗೊಂಡಿದ್ದಾರೆ.

ಆಂಧ್ರಪ್ರದೇಶದ ಕರ್ನೂಲು ಜಿಲ್ಲೆಯ ನಾಲ್ವರು ಕಾರಿನಲ್ಲಿದ್ದರು ಎಂದು ತಿಳಿದು ಬಂದಿದೆ. ಖಾಸಗಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೂವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಒಬ್ಬ ಗಾಯಾಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಇನ್ನೂ ಮೃತರ ಗುರುತುಗಳು ಪತ್ತೆಯಾಗಿಲ್ಲ, ಪೊಲೀಸರು ಈ ಸಂಬಂಧ ತನಿಖೆಯನ್ನು ನಡೆಸುತ್ತಿದ್ದಾರೆ. ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

ಕಾಶ್ಮೀರದಲ್ಲಿ ಮುಳುಗಿದ ದೋಣಿ; ನಾಲ್ವರು ಶಾಲಾ ಮಕ್ಕಳು ಜಲಸಮಾಧಿ

ಶ್ರೀನಗರ: ಜಮ್ಮು-ಕಾಶ್ಮೀರದ (Jammu Kashmir) ಜೇಲಂ ನದಿಯಲ್ಲಿ (Jhelum River) ಮಂಗಳವಾರ (ಏಪ್ರಿಲ್‌ 16) ಬೆಳಗ್ಗೆ ದೋಣಿಯೊಂದು ಮುಳುಗಿದ್ದು (Boat Capsize), ನಾಲ್ವರು ಶಾಲಾ ಮಕ್ಕಳು ಸೇರಿ ಹಲವರು ಮಂದಿ ಜಲಸಮಾಧಿಯಾಗಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ಮಕ್ಕಳು ಸೇರಿ ಹಲವರು ಮಂದಿ ಸಂಚರಿಸುತ್ತಿದ್ದರು. ಇದೇ ವೇಳೆ ದೋಣಿಯು ಮಗುಚಿದೆ. ಹಲವು ಮಂದಿ ನೀರಿನಲ್ಲಿ ಮುಳುಗಿದ್ದು, ರಾಜ್ಯ ವಿಪತ್ತು ನಿರ್ವಹಣಾ ಪಡೆಯ (SDRF) ಸಿಬ್ಬಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ತಿಳಿದುಬಂದಿದೆ. ನಾಲ್ವರು ಶಾಲಾ ಮಕ್ಕಳು ಮೃತಪಟ್ಟರೆ, ಮೂವರು ನಾಪತ್ತೆಯಾಗಿದ್ದಾರೆ. ಇದುವರೆಗೆ 12 ಮಂದಿಯನ್ನು ರಕ್ಷಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು-ಕಾಶ್ಮೀರದಲ್ಲಿ ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಜೇಲಂ ನದಿಯು ಉಕ್ಕಿ ಹರಿಯುತ್ತಿದೆ. ಶಾಲಾ ಮಕ್ಕಳು ಸೇರಿ ಹಲವರು ಇದ್ದ ದೋಣಿಯು ತುಂಬಿದ ನದಿಯಲ್ಲಿ ಶ್ರೀನಗರದ ಗಂಡ್ಬಾಲ್‌ನಿಂದ ಬಟ್ವಾರದವರೆಗೆ ಚಲಿಸುತ್ತಿತ್ತು. ಇದೇ ವೇಳೆ ಹಡಗು ಮಗುಚಿದೆ.

ಅಗತ್ಯಕ್ಕಿಂತ ಹೆಚ್ಚಿನ ಜನ ದೋಣಿಯಲ್ಲಿದ್ದ ಕಾರಣ ದುರಂತ ಸಂಭವಿಸಿದೆಯೋ, ನೀರಿನ ಸೆಳವಿಗೆ ಸಿಲುಕಿ ಮಗುಚಿದೆಯೋ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ. ಜಮ್ಮು-ಕಾಶ್ಮೀರ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣೆಗೆ ಸ್ಥಳೀಯರೂ ನೆರವು ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Rameshwaram Cafe Blast: ಐಟಿ ಬಿಟಿ ಜನರೇ ರಾಮೇಶ್ವರಂ ಕೆಫೆ ಬಾಂಬರ್‌ಗಳ ಟಾರ್ಗೆಟ್ ಆಗಿದ್ದರು!

Rameshwaram Cafe Blast: ಬಾಂಬರ್‌ಗಳ ಟಾರ್ಗೆಟ್‌ ಮುಖ್ಯವಾಗಿ ಹಿಂದೂಗಳಾಗಿದ್ದು, ಐಟಿ ಬಿಟಿ ಕಂಪನಿಗಳ ನಡುವೆಯೇ ಬಾಂಬ್‌ ಇಡಲು ಮೊದಲು ಪ್ಲಾನ್‌ ಮಾಡಿದ್ದರು. ಎಸ್ಇಜೆಡ್ ಏರಿಯಾದಲ್ಲಿ ಸ್ಫೋಟ ಮಾಡಬೇಕು ಅಂತ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಟಾರ್ಗೆಟ್ ಮಾಡಿದ್ದರು.

VISTARANEWS.COM


on

Rameshwaram Cafe
Koo

ಬೆಂಗಳೂರು: ರಾಜಧಾನಿಯ ವೈಟ್‌ಫೀಲ್ಡ್‌ನಲ್ಲಿರುವ (Blast in bengaluru) ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ (Rameshwaram Cafe Blast) ಪ್ರಕರಣದಲ್ಲಿ ಬಂಧಿಸಲಾಗಿರುವ ಇಬ್ಬರು ಪ್ರಮುಖ ಉಗ್ರರನ್ನು (cafe bombers) ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಬೆಚ್ಚಿ ಬೀಳಿಸುವ ಕೆಲವು ಸಂಗತಿಗಳನ್ನು ಇವರು ಹೊರಗೆಡಹಿದ್ದಾರೆ. ಬೆಂಗಳೂರಿಗೆ ಅಂತಾರಾಷ್ಟ್ರೀಯ ಖ್ಯಾತಿ ತಂದುಕೊಟ್ಟ ಐಟಿ ಬಿಟಿ ಹಬ್‌ (IT hub) ಮೇಲೆಯೇ ಇವರು ಬಾಂಬ್‌ ದಾಳಿ (Bomb Blast) ನಡೆಸಲು ಸ್ಕೆಚ್‌ ಹಾಕಿದ್ದರು ಎಂಬುದು ಗೊತ್ತಾಗಿದೆ.

ರಾಮೇಶ್ವರಂ ಕೆಫೆ (Rameshwaram Cafe Blast) ಬಾಂಬರ್‌ಗಳನ್ನು ಎನ್‌ಐಎ (NIA) ಸತತವಾಗಿ ಡ್ರಿಲ್‌ ಮಾಡುತ್ತಿದ್ದು ವಿಚಾರಣೆಯ ವೇಳೆ ಬಾಂಬರ್‌ಗಳು ಹಲವು ಸಂಗತಿಗಳನ್ನು ಬಿಚ್ಚಿಟ್ಟಿದ್ದಾರೆ. ಬಾಂಬರ್‌ಗಳ ಟಾರ್ಗೆಟ್‌ ಮುಖ್ಯವಾಗಿ ಹಿಂದೂಗಳಾಗಿದ್ದು, ಐಟಿ ಬಿಟಿ ಕಂಪನಿಗಳ ನಡುವೆಯೇ ಬಾಂಬ್‌ ಇಡಲು ಮೊದಲು ಪ್ಲಾನ್‌ ಮಾಡಿದ್ದರು. ಎಸ್ಇಜೆಡ್ ಏರಿಯಾದಲ್ಲಿ ಸ್ಫೋಟ ಮಾಡಬೇಕು ಅಂತ ಅಬ್ದುಲ್ ಮತೀನ್ ತಾಹಾ ಹಾಗೂ ಮುಸಾವೀರ್ ಹುಸೇನ್ ಟಾರ್ಗೆಟ್ ಮಾಡಿದ್ದರು.

ಅದಕ್ಕೆ ಕಾರಣವೂ ಇತ್ತು. ಎಸ್ಎಜೆಡ್ ಏರಿಯಾದಲ್ಲಿ ಸ್ಫೋಟ ನಡೆಸಿದರೆ ದೇಶ ಹಾಗೂ ವಿದೇಶಗಳಲ್ಲೂ ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ. ಎಸ್ಇಜೆಡ್ ಏರಿಯಾದಲ್ಲಿ ದೊಡ್ಡ ದೊಡ್ಡ ಬಹುರಾಷ್ಟ್ರೀಯ ಐಟಿಬಿಟಿ ಕಂಪನಿಗಳಿವೆ. ಸಾವಿರಾರು ಜನ ಟೆಕ್ಕಿಗಳು ಕೆಲಸ ಮಾಡುತ್ತಾರೆ. ಸಾಕಷ್ಟು ಸುದ್ದಿಯಾಗಿ ತಮ್ಮ ಕೃತ್ಯ ಅಂತಾರಾಷ್ಟ್ರೀಯವಾಗಿ ಮಿಂಚುತ್ತದೆ ಎಂದು ಪಾತಕಿಗಳು ವೈಟ್‌ಫೀಲ್ಡ್‌ನ ಹಲವೆಡೆ ಓಡಾಡಿದ್ದರು.

ಅದರೆ ಐಟಿಬಿಟಿ ಏರಿಯಾದಲ್ಲಿ ಬಾಂಬ್ ಇಡುವುದು ಅಷ್ಟು ಸುಲಭವಲ್ಲ‌ ಎಂದು ಅವರಿಗೆ ಮನವರಿಕೆಯಾಗಿತ್ತು. ಕಂಪನಿಗಳು ಇರುವ ಪ್ರದೇಶದಲ್ಲಿ ಟೈಟ್ ಸೆಕ್ಯುರಿಟಿ, ಸಿಸಿಟಿವಿಗಳ ಕಣ್ಗಾವಲು, ಮೆಟಲ್ ಡಿಟೆಕ್ಟರ್ಸ್ ಕಂಡುಬಂದಿದ್ದು, ಕಂಪನಿ ಕಂಪೌಂಡ್‌ಗಳ ಒಳಗೆ ಹೋಗುವುದು ಅಷ್ಟು ಸುಲಭವಲ್ಲ ಎಂದು ಅರ್ಥವಾಗಿತ್ತು. ನಂತರ ಫ್ಲಾನ್ ಚೇಂಜ್‌ ಮಾಡಿ, ಅದೇ ಪ್ರದೇಶದಲ್ಲಿ ಬ್ಲಾಸ್ಟ್ ಮಾಡಬೇಕು ಎಂದು ತೀರ್ಮಾನಿಸಿದ್ದರು.

ಈ ವೇಳೆ ಅವರಿಗೆ ಕಂಡಿದ್ದು ವೈಟ್‌ಫೀಲ್ಡ್‌ನ ರಾಮೇಶ್ವರಂ ಕೆಫೆ. ಅತಿ ಹೆಚ್ಚು ಜನ ಸೇರುತ್ತಾರೆ, ಇಲ್ಲಿಗೂ ಟೆಕ್ಕಿಗಳು ಬರುತ್ತಾರೆ. ಕೆಫೆ ಎಂಟ್ರಿಯಾಗಲು ಯಾವುದೇ ಅಡೆತಡೆ ಇರುವುದಿಲ್ಲ. ಸೆಕ್ಯುರಿಟಿ, ಮೆಟಲ್ ಡಿಟೆಕ್ಟರ್ ಕೂಡ ಇಲ್ಲ. ಆದ್ದರಿಂದ ಬಾಂಬ್ ಸ್ಫೋಟ ನಡೆಸಲು ರಾಮೇಶ್ವರಂ ಕೆಫೆ ಸೂಕ್ತ ಸ್ಥಳ ಎಂದು ಸೆಲೆಕ್ಟ್ ಮಾಡಿದ್ದರು. ಅಲ್ಲದೆ ಇದೇ ವೇಳೆ ರಾಮಮಂದಿರ ಕೂಡ ಉದ್ಘಾಟನೆಯಾಗಿದ್ದು, ಈ ಸಮಯದಲ್ಲಿ ಕೆಫೆ ಮುಂಭಾಗದಲ್ಲಿ ಸಂಭ್ರಮಾಚರಣೆ ಕೂಡ ನಡೆದಿತ್ತು.

ಮಾರ್ಚ್ 1ರಂದು ಕೆಫೆಯಲ್ಲಿ ಬಾಂಬ್ ಇಟ್ಟು ಸ್ಫೋಟ ನಡೆಸಲಾಗಿತ್ತು. ಕೇವಲ ಸಿಸಿಟಿವಿ ಫೂಟೇಜ್‌ನ ಪ್ರಾಥಮಿಕ ಸಾಕ್ಷ್ಯಗಳನ್ನು ಇಟ್ಟುಕೊಂಡು ಎನ್‌ಐಎ ದೇಶಾದ್ಯಂತ ಭಾರಿ ಪ್ರಮಾಣದ ತಲಾಶೆ ನಡೆಸಿತ್ತು. ಕೊನೆಗೂ ಕೋಲ್ಕತ್ತಾದಲ್ಲಿ ಪಾತಕಿಗಳು ಸಿಕ್ಕಿಬಿದ್ದಿದ್ದಾರೆ.

ಉಗ್ರರ ಕ್ಲೂ ಸಿಕ್ಕಿದ್ದು ಹೀಗೆ

ಉಗ್ರರು ಕೋಲ್ಕತ್ತಾದಲ್ಲಿಯೇ ಇದ್ದಾರೆ ಎಂಬುದು ಎನ್‌ಐಎಗೆ ಗೊತ್ತಾದದ್ದು ಹೇಗೆ? ಇದೂ ಕುತೂಹಲಕಾರಿಯಾಗಿದೆ. ಮಾರ್ಚ್ 1ರಂದು ಬೆಂಗಳೂರಿನಲ್ಲಿ ಬಾಂಬ್ ಸ್ಫೋಟ ನಡೆಸಿದ ನಂತರ ಇಬ್ಬರೂ ರಾಜ್ಯದಿಂದ ಎಸ್ಕೇಪ್ ಆಗಿದ್ದರು. ತಮಿಳುನಾಡು, ಒಡಿಶಾಗಳಲ್ಲಿ ಸುತ್ತಾಡಿ ಪಶ್ಚಿಮ ಬಂಗಾಳ ಸೇರಿಕೊಂಡಿದ್ದರು. ಹಲವಾರು ದಿನ ಸುತ್ತಾಡಿ ಕೈಯಲ್ಲಿದ್ದ ಹಣ ಖಾಲಿಯಾಗಿತ್ತು.

ಹ್ಯಾಂಡ್ಲರ್ ಮೂಲಕ ಇವರ ಬೇನಾಮಿ ಅಕೌಂಟ್‌ಗೆ ಹಣ ವರ್ಗಾವಣೆಯಾಗುತ್ತಿತ್ತು. ಶಂಕಿತರು ಬಳಸುತ್ತಿದ್ದ ಅಕೌಂಟ್ ಮಾಹಿತಿಯನ್ನು NIA ಸಂಗ್ರಹಿಸಿತ್ತು. ಇದೇ ಆಧಾರದ ಮೇಲೆ ತನಿಖೆ ಮುಂದುವರಿದಿತ್ತು. ಅಂತಿಮವಾಗಿ ಕೋಲ್ಕತ್ತಾದಲ್ಲಿ ಹಣದ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಹಾಗಾಗಿ ಕೋಲ್ಕತ್ತಾದಲ್ಲಿ ತನಿಖಾ ತಂಡ ಬೀಡುಬಿಟ್ಟಿತ್ತು.

ನಂತರ ಅಲ್ಲಿನ ಲಾಡ್ಜ್‌ಗಳ ಲೆಡ್ಜರ್‌ಗಳು ಹಾಗೂ ಸಿಸಿಟಿವಿ ಫೂಟೇಜ್‌ಗಳನ್ನು ಇಟ್ಟುಕೊಂಡು ಪರಿಶೀಲಿಸಲಾಗಿತ್ತು. ನಕಲಿ ಗುರುತಿನ ದಾಖಲೆ ನೀಡಿ ಲಾಡ್ಜ್‌ನಲ್ಲಿ ವಾಸವಾಗಿದ್ದ ಉಗ್ರರ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿ ದಾಳಿ ಮಾಡಿದಾಗ ಸಿಕ್ಕಿಬಿದ್ದಿದ್ದರು.

ಇದನ್ನೂ ಓದಿ: Rameshwaram Cafe Blast: ರಾಮೇಶ್ವರಂ ಕೆಫೆ ಬಾಂಬರ್‌ಗಳಿಗೆ 10 ದಿನ ಎನ್‌ಐಎ ಕಸ್ಟಡಿ; ಮತ್ತಷ್ಟು ಗ್ರಿಲ್‌ ಮಾಡಲು ಪೊಲೀಸರು ಸಜ್ಜು

Continue Reading

ಕೊಡಗು

Elephant Death: ಕ್ಯೂಟ್‌ ಆಗಿ ಆಟವಾಡುತ್ತಿದ್ದ ತಬ್ಬಲಿ ಮರಿಯಾನೆಗೆ ಕೊನೆಗೂ ಸಿಗಲಿಲ್ಲ ತಾಯಿ

Elephant Death: ಕೊಡಗಿನ ಕಾಫಿ ತೋಟಕ್ಕೆ ದಾಳಿ ಮಾಡಿದ್ದ ಆನೆ ಹಿಂಡನ್ನು ಓಡಿಸುತ್ತಿದ್ದಾಗ, ಮರಿಯಾನೆ ಅದರ ತಾಯಿಯಿಂದ ಬೇರ್ಪಟ್ಟಿತ್ತು. ತಾಯಿಯಿಂದ ಬೇರ್ಪಟ್ಟು ಅಲೆದಾಡುತ್ತಿದ್ದ ಈ ಆನೆಯನ್ನು ಅದರ ತಾಯಿಯೊಂದಿಗೆ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಸಾಕಷ್ಟು ಪ್ರಯತ್ನ ಪಟ್ಟಿದ್ದರು.

VISTARANEWS.COM


on

elephant death in dubare camp
Koo

ಕೊಡಗು: ತಾಯಿ ಕಾಡಾನೆಯಿಂದ ಬೇರ್ಪಟ್ಟು ತಬ್ಬಲಿಯಾಗಿದ್ದ ಮರಿಯಾನೆ (Elephant cub) ಕೊನೆಗೂ ತಾಯಿಯನ್ನು ಕಾಣದೆ ಸಾವು (Elephant Death) ಕಂಡಿದೆ. ಕೊಡಗು ಜಿಲ್ಲೆಯ ದುಬಾರೆ (Dubare) ಸಾಕಾನೆ ಶಿಬಿರದಲ್ಲಿ (Elephant camp) ಘಟನೆ ನಡೆದಿದೆ.

ಕೊಡಗಿನ ಕಾಫಿ ತೋಟಕ್ಕೆ ದಾಳಿ ಮಾಡಿದ್ದ ಆನೆ ಹಿಂಡನ್ನು ಓಡಿಸುತ್ತಿದ್ದಾಗ, ಮರಿಯಾನೆ ಅದರ ತಾಯಿಯಿಂದ ಬೇರ್ಪಟ್ಟಿತ್ತು. ತಾಯಿಯಿಂದ ಬೇರ್ಪಟ್ಟು ಅಲೆದಾಡುತ್ತಿದ್ದ ಈ ಆನೆಯನ್ನು ಅದರ ತಾಯಿಯೊಂದಿಗೆ ಸೇರಿಸಲು ಅರಣ್ಯ ಇಲಾಖೆ ಸಿಬ್ಬಂದಿ ಸಾಕಷ್ಟು ಪ್ರಯತ್ನ ಪಟ್ಟಿದ್ದರು.

ತಾಯಿಗಾಗಿ ಅಲೆದು ನಿತ್ರಾಣಗೊಂಡಿದ್ದ 5 ತಿಂಗಳ ಮರಿಯಾನೆಯನ್ನು ರಕ್ಷಿಸಿ ದುಬಾರೆ ಶಿಬಿರಕ್ಕೆ ಶಿಫ್ಟ್ ಮಾಡಲಾಗಿತ್ತು. ಗಂಜಿ ಹಾಲು ನೀಡಿ ಆರೈಕೆ ಮಾಡಲು ಯತ್ನಿಸಲಾಗಿತ್ತು. ವನ್ಯಜೀವಿ ವೈದ್ಯ ಡಾ. ಚೆಟ್ಟಿಯಪ್ಪ ಚಿಕಿತ್ಸೆ ನೀಡುತ್ತಿದ್ದರು. ಕಳೆದ ಕೆಲವು ದಿನಗಳಿಂದ ಕೊಂಚ ಚೇತರಿಸಿಕೊಂಡಿದ್ದ ಮರಿ ಆನೆ ಇದಿಗ ದಿಢೀರ್ ಸಾವು ಕಂಡಿದೆ.

ಅರಣ್ಯ ಇಲಾಖೆಯಿಂದ ಮೃತ ಆನೆ ಮರಿಯ ಅಂತ್ಯಸಂಸ್ಕಾರಕ್ಕೆ ಸಿದ್ಧತೆ ಮಾಡಲಾಗಿದೆ. 25 ದಿನಗಳಿಂದ ಮರಿಯಾನೆ ತಾಯಿಗಾಗಿ ಕಾಡು- ಊರು ಅಲೆದಿತ್ತು. ಎಲ್ಲಿಯೂ ತಾಯಿ ಸಿಗದ ಹಿನ್ನೆಲೆಯಲ್ಲಿ ಒಂಟಿಯಾಗಿದ್ದ ಮರಿ ಆನೆ ಆಹಾರ ಸೇವಿಸುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ರಕ್ಷಣೆಯಾದರೂ ಕೂಡ ಬದುಕುಳಿಯದ ಮರಿ‌ ಆನೆ ದುರಂತ ಅಂತ್ಯ ಕಂಡಿದೆ. ದುಬಾರೆ ಶಿಬಿರದ ಸಿಬ್ಬಂದಿ ಮರಿಯಾನೆಗಾಗಿ ಕಣ್ಣೀರು ಮಿಡಿದಿದ್ದಾರೆ.

ಕುಡಿಯಲು ನೀರು ಸಿಗದೆ ಕಾಡಾನೆಗಳು ಸಾವು

ರಾಮನಗರ: ಕನಕಪುರ ತಾಲೂಕಿನ ಯಲವನತ್ತ ಅರಣ್ಯಪ್ರದೇಶ ಹಾಗೂ ಬೆಟ್ಟಹಳ್ಳಿ ಬೀಟ್‌ನಲ್ಲಿ ಕಾಡಾನೆಗಳು (Elephants Death) ಮೃತಪಟ್ಟಿವೆ. 35 ಹಾಗೂ 14 ವರ್ಷದ ಎರಡು ಕಾಡಾನೆಗಳು ಉಸಿರು ನಿಲ್ಲಿಸಿದೆ. ಬಿಸಿಲಿನ ಬೇಗೆ ತಾಳಲಾರದೆ ಕಾಡಾನೆಗಳು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ರಾಮನಗರದ ಕನಕಪುರ ವಲಯದ ಬೆಟ್ಟಹಳ್ಳಿ ಬೀಟ್‌ನಲ್ಲಿ ಘಟನೆ ನಡೆದಿದೆ. ಕಳೆದ ಮೂರು ದಿನಗಳ ಹಿಂದೆ 14 ವರ್ಷದ ಒಂಟಿ ಸಲಗ ನಿತ್ರಾಣಗೊಂಡಿತ್ತು. ನಿತ್ರಾಣಗೊಂಡಿದ್ದ ಕಾಡಾನೆಯನ್ನು ಗಮನಿಸಿದ ಅರಣ್ಯ ಸಿಬ್ಬಂದಿ ವೈದ್ಯಕೀಯ ಚಿಕಿತ್ಸೆಯನ್ನು ಕೊಡಿಸಿದ್ದರು. ಆದರೆ ಇದೀಗ ಕಾಡಂಚಿನಲ್ಲಿ ಕೊನೆಯುಸಿರೆಳೆದಿದೆ.

ಸ್ಥಳಕ್ಕೆ ಡಿಎಫ್‌ಓ ರಾಮಕೃಷ್ಣಪ್ಪ, ಕನಕಪುರ ಎಸಿಎಫ್ ಗಣೇಶ್ ಹಾಗು ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಕಾಡಾನೆ ಸಾವಿನ ಬಗ್ಗೆ ನಿಖರ ಮಾಹಿತಿ ಲಭ್ಯವಾಗಲಿದೆ.

elephants Death in Ramanagara

ಕಾಡಿನಲ್ಲಿ ಕುಡಿಯಲು ನೀರು ಸಿಗದೆ ಪರದಾಡಿ ನಿತ್ರಾಣಗೊಂಡು ಮೃತಪಟ್ಟಿರುವ ಶಂಕೆ ಇದೆ. 14 ವರ್ಷದ ಕಾಡಾನೆ ಕಳೆದ ಮೂರು ದಿನಗಳ ಹಿಂದೆ ನಿತ್ರಾಣಗೊಂಡಿತ್ತು. ಇದೀಗ ನಿತ್ರಾಣಗೊಂಡಿದ್ದ ಕಾಡಾನೆ ಸೇರಿ ಮತ್ತೊಂದು 35 ವರ್ಷದ ಕಾಡಾನೆಯೂ ಮೃತಪಟ್ಟಿದೆ. ಕನಕಪುರ -ತಮಿಳುನಾಡು ಗಡಿಭಾಗ ಯಲವನತ್ತ ಕಾಡಂಚಿನಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.

ಇದನ್ನೂ ಓದಿ: Elephant Attack: ವಾಕಿಂಗ್‌ ಹೋಗುತ್ತಿದ್ದ ವ್ಯಕ್ತಿ ಮೇಲೆರಗಿ ಕೊಂದುಹಾಕಿದ ಒಂಟಿ ಸಲಗ

Continue Reading

ಕ್ರೈಂ

Assault Case: ಪುರಸಭೆ ಸದಸ್ಯೆಯ ಪತಿ, ರೌಡಿಶೀಟರ್‌ನಿಂದ ಮಾರಣಾಂತಿಕ ಹಲ್ಲೆ; ಕಾರಣವೇ ಇಲ್ಲ!

Assault Case: ಆನೇಕಲ್ ಪಟ್ಟಣದ ಮಂಜುನಾಥ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ರೌಡಿ ಶೀಟರ್ ಶ್ರೀರಾಮ್ ಎಂಬಾತ ಹಾಗೂ ಆತನ ಗ್ಯಾಂಗ್‌ನಿಂದ ಹಲ್ಲೆ ನಡೆದಿದೆ. ರೌಡಿಶೀಟರ್‌ ಶ್ರೀರಾಮ್‌, ಪುರಸಭೆ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ. ಕಾಂಗ್ರೆಸ್‌ ಕಾರ್ಯಕರ್ತನೂ ಆಗಿದ್ದಾನೆ.

VISTARANEWS.COM


on

assault case anekal
ರೌಡಿಶೀಟರ್‌ ಶ್ರೀರಾಮ್‌, ಗಾಯಾಳು ವೆಂಕಟೇಶಪ್ಪ
Koo

ಆನೇಕಲ್: ಬೆಂಗಳೂರು ಹೊರವಲಯದ ಆನೇಕಲ್ (Anekal) ಪಟ್ಟಣದಲ್ಲಿ ರೌಡಿಶೀಟರ್‌ಗಳ ದಾಂಧಲೆ (Crime News) ಮುಂದುವರಿದಿದೆ. ನಿನ್ನೆ ರಾತ್ರಿ ನಡುರಸ್ತೆಯಲ್ಲಿ ಕಾರಿನಲ್ಲಿ ಬಂದ ರೌಡಿಶೀಟರ್‌ (Rowdysheeter) ಒಬ್ಬಾತ ತನ್ನ ಗುಂಪುಸಹಿತ ವ್ಯಕ್ತಿಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ (Assault Case) ನಡೆಸಿದ್ದಾನೆ.

ಆನೇಕಲ್ ಪಟ್ಟಣದ ಮಂಜುನಾಥ್ ಬಡಾವಣೆಯಲ್ಲಿ ಘಟನೆ ನಡೆದಿದ್ದು, ರೌಡಿ ಶೀಟರ್ ಶ್ರೀರಾಮ್ ಎಂಬಾತ ಹಾಗೂ ಆತನ ಗ್ಯಾಂಗ್‌ನಿಂದ ಹಲ್ಲೆ ನಡೆದಿದೆ. ರೌಡಿಶೀಟರ್‌ ಶ್ರೀರಾಮ್‌, ಪುರಸಭೆ ಸದಸ್ಯೆಯೊಬ್ಬರ ಪತಿಯಾಗಿದ್ದಾನೆ. ಕಾಂಗ್ರೆಸ್‌ ಕಾರ್ಯಕರ್ತನೂ ಆಗಿದ್ದಾನೆ.

ಈತ ಬೈಕ್‌ನಲ್ಲಿ ಹೋಗುತ್ತಿದ್ದ ವೆಂಕಟೇಶಪ್ಪ (65) ಎಂಬವರ ಮೇಲೆ ವಿನಾಕಾರಣ ಕಾಲು ಕೆರೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಗಲಾಟೆ ತಡೆಯಲು ಬಂದ ಮಂಜುನಾಥ್ ಎಂಬಾತನ ಮೇಲೆಯೂ ದಾಳಿ ಮಾಡಿದ್ದಾನೆ. ವೆಂಕಟೇಶಪ್ಪ ತಮ್ಮ ಬೈಕಿನಲ್ಲಿ ಮನೆಗೆ ತೆರಳುತ್ತಿದ್ದು, ಅದೇ ರಸ್ತೆಯಲ್ಲಿ ಶ್ರೀರಾಮ್ ಹಾಗೂ ತಂಡ ಕಾರಿನಲ್ಲಿ ಬಂದಿದೆ.

ಶ್ರೀರಾಮ್‌ ಏಕಾಏಕಿ ವೆಂಕಟೇಶಪ್ಪನವರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದನೆ ಶುರುಮಾಡಿದ್ದಾನೆ. ಯಾಕಪ್ಪ ಬೈತಿದ್ದೀಯ ಎಂದು ವೆಂಕಟೇಶಪ್ಪ ಪ್ರಶ್ನೆ ಮಾಡಿದ್ದಕ್ಕೆ ಕಾರಿನಿಂದ ಇಳಿದು ಥಳಿಸಿದ್ದಾನೆ. ಅಷ್ಟಕ್ಕೇ ನಿಲ್ಲದೆ ಕಲ್ಲು ತೆಗೆದುಕೊಂಡು ವೆಂಕಟೇಶಪ್ಪನವರ ಮೇಲೆ ಗುದ್ದಿದ್ದಾನೆ. ಕುಡಿದ ಮತ್ತಿನಲ್ಲಿದ್ದ ಶ್ರೀರಾಮ್ ಮತ್ತು ಆತನ ಪಟಾಲಂ ಯದ್ವಾತದ್ವಾ ಹಲ್ಲೆ ನಡೆಸಿದೆ. ವೆಂಕಟೇಶಪ್ಪನವರ ಹಲ್ಲುಗಳು ಮುರಿದಿದ್ದು, ಮೈಯ ಮೇಲೆ ಗಾಯಗಳಾಗಿವೆ.

ಗಾಯಾಳುವಿಗೆ ಆನೇಕಲ್ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ರೌಡಿಶೀಟರ್‌ ಶ್ರೀರಾಮ್‌, ತಾನು ರಾಜಕೀಯವಾಗಿ ಪ್ರಭಾವಿ ಎಂಬ ದರ್ಪದಿಂದ ಈ ಪರಿಸರದಲ್ಲಿ ವರ್ತಿಸುತ್ತಿದ್ದು, ದುರ್ಬಲರನ್ನು ಪೀಡಿಸುವುದು ಸಾಮಾನ್ಯವಾಗಿದೆ ಎಂದು ಸ್ಥಳೀಯರು ಹೇಳಿದ್ದಾರೆ. ಈತನ ಮೇಲೆ ಹಲ್ಲೆ, ಕೊಲೆ ಬೆದರಿಕೆ, ಸುಲಿಗೆ ಸೇರಿದಂತೆ ಹಲವು ಪ್ರಕರಣಗಳಿವೆ. ಈತನನ್ನು ಬಂಧಿಸಿ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಯುವಕನ ಕಿರುಕುಳ ತಾಳದೆ ಬಾಲಕಿ ಆತ್ಮಹತ್ಯೆ

ಕೊಪ್ಪಳ: ಫೋನ್‌ನಲ್ಲಿ‌ ಯುವಕ ನೀಡುತ್ತಿದ್ದ ಕಿರುಕುಳ‌ ತಾಳಲಾರದೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಚ್ಚಲಕುಂಟ ಗ್ರಾಮದಲ್ಲಿ ನಡೆದಿದೆ. ಆರೋಪಿ ಬಂಧನಕ್ಕೆ ಆಗ್ರಹಿಸಿ ಪೊಲೀಸ್ ಠಾಣೆ ಎದುರು ಶವವಿಟ್ಟು ಬಾಲಕಿತ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಪೂಜಾ ಯಡ್ಡೋಣಿ(16) ಆತ್ಮಹತ್ಯೆ ಮಾಡಿಕೊಂಡ‌ ಬಾಲಕಿ. ಪುರಷೋತ್ತಮ ಎನ್ನುವ ಯುವಕ ಪೂಜಾಳ‌ ಮನೆಯ ಮೊಬೈಲ್‌ಗೆ ಕರೆ ಮಾಡುತ್ತಿದ್ದ. ಬೇರೊಂದು ನಂಬರ್ ಮೂಲಕ‌‌ ಕಾನ್ಫರೆನ್ಸ್ ಕಾಲ್ ಮಾಡಿ ಕಿರುಕುಳ‌ ನೀಡುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ಯುವಕನ ಕಿರುಕುಳ‌ ತಾಳಲಾರದೆ ಏ.7 ರಂದು ವಿಷ ಸೇವಿಸಿದ್ದ ಪೂಜಾ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಮೃತಪಟ್ಟಿದ್ದಾಳೆ.

ಈ ಹಿನ್ನೆಲೆಯಲ್ಲಿ ಉಚ್ಚಲಕುಂಟ ಗ್ರಾಮಸ್ಥರು, ಆರೋಪಿ ಪುರಷೋತ್ತಮ ಬಂಧನಕ್ಕೆ‌ ಆಗ್ರಹಿಸಿ ಬೇವೂರು ಪೊಲೀಸ್ ಠಾಣೆ ಎದುರು ಪೂಜಾ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಆರೋಪಿ ಬಂಧನ ಮಾಡುವರೆಗೂ ಶವ ತೆಗೆದುಕೊಂಡು ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

ಇದನ್ನೂ ಓದಿ: Crime News: ಕೃಷಿ ಹೊಂಡದಲ್ಲಿ ಬಿದ್ದು ಬಾಲಕ ಸಾವು; ರೈಲಿಗೆ ಸಿಲುಕಿ ದಂಪತಿ ದುರ್ಮರಣ

Continue Reading
Advertisement
Breast Cancer
ಲೈಫ್‌ಸ್ಟೈಲ್4 mins ago

Brest Cancer: ಮಹಿಳೆಯರೇ ಹುಷಾರ್‌; 2040ರ ವೇಳೆಗೆ ಸ್ತನ ಕ್ಯಾನ್ಸರ್‌ಗೆ 10 ಲಕ್ಷ ಜನ ಬಲಿಯಾಗಲಿದ್ದಾರಂತೆ!

BSP Candidates List
ಪ್ರಮುಖ ಸುದ್ದಿ4 mins ago

BSP List: ವಾರಾಣಸಿಯಲ್ಲಿ ಮೋದಿ ವಿರುದ್ಧ ಬಿಎಸ್‌ಪಿ ಅಭ್ಯರ್ಥಿ ಯಾರು? ಗ್ಯಾಂಗ್‌ಸ್ಟರ್‌ ಪತ್ನಿಗೂ ಟಿಕೆಟ್!

Road Accident in Hubballi
ಹುಬ್ಬಳ್ಳಿ18 mins ago

Road Accident : ಹುಬ್ಬಳ್ಳಿಯಲ್ಲಿ ಭೀಕರ ಅಪಘಾತಕ್ಕೆ ಮೂವರು ಬಲಿ, ಮತ್ತೋರ್ವ ಗಂಭೀರ

Rameshwaram Cafe
ಕ್ರೈಂ36 mins ago

Rameshwaram Cafe Blast: ಐಟಿ ಬಿಟಿ ಜನರೇ ರಾಮೇಶ್ವರಂ ಕೆಫೆ ಬಾಂಬರ್‌ಗಳ ಟಾರ್ಗೆಟ್ ಆಗಿದ್ದರು!

New Job Trend
ಉದ್ಯೋಗ39 mins ago

New Job Trend: ಉದ್ಯೋಗ ಕ್ಷೇತ್ರದಲ್ಲೊಂದು ಹೊಸ ಟ್ರೆಂಡ್; ಏನಿದು ಡ್ರೈ ಪ್ರಮೋಷನ್?

Boat Capsize
ದೇಶ56 mins ago

Boat Capsize: ಕಾಶ್ಮೀರದಲ್ಲಿ ಮುಳುಗಿದ ದೋಣಿ; ನಾಲ್ವರು ಶಾಲಾ ಮಕ್ಕಳು ಜಲಸಮಾಧಿ

IPL 2024
ಕ್ರಿಕೆಟ್1 hour ago

IPL 2024: ದಯವಿಟ್ಟು ಆರ್​ಸಿಬಿ ತಂಡವನ್ನು ಮಾರಿಬಿಡಿ; ಅಳಲು ತೋಡಿಕೊಂಡ ಟೆನಿಸ್​ ದಿಗ್ಗಜ

IPL 2024
ಕ್ರಿಕೆಟ್1 hour ago

IPL 2024: ವಿಶ್ರಾಂತಿ ಬಯಸಿದ ಗ್ಲೆನ್ ಮ್ಯಾಕ್ಸ್​ವೆಲ್​; ಮುಂದಿನ ಪಂದ್ಯಗಳಿಗೆ ಅಲಭ್ಯ

elephant death in dubare camp
ಕೊಡಗು2 hours ago

Elephant Death: ಕ್ಯೂಟ್‌ ಆಗಿ ಆಟವಾಡುತ್ತಿದ್ದ ತಬ್ಬಲಿ ಮರಿಯಾನೆಗೆ ಕೊನೆಗೂ ಸಿಗಲಿಲ್ಲ ತಾಯಿ

Right To Sleep
ಪ್ರಮುಖ ಸುದ್ದಿ2 hours ago

Right To Sleep: ನಿದ್ದೆ ಮನುಷ್ಯನ ಹಕ್ಕು, ಯಾರೂ ಕಸಿಯುವಂತಿಲ್ಲ ಎಂದು ಹೈಕೋರ್ಟ್‌ ಆದೇಶ!

Sharmitha Gowda in bikini
ಕಿರುತೆರೆ6 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ6 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya
ಭವಿಷ್ಯ6 hours ago

Dina Bhavishya : ಇವತ್ತು ಒಂದು ದಿನ ಈ ರಾಶಿಯವರು ಹೊಸ ಕೆಲಸಕ್ಕೆ ಕೈ ಹಾಕ್ಬೇಡಿ

HD Kumaraswamy apologised to womens for his statement and slams DK Shivakumar
Lok Sabha Election 202423 hours ago

HD Kumaraswamy: ನನ್ನ ಹೇಳಿಕೆಯಿಂದ ನೋವಾಗಿದ್ದರೆ ವಿಷಾದಿಸುತ್ತೇನೆ; ಡಿಕೆಶಿ ವಿರುದ್ಧ ಹರಿಹಾಯ್ದ ಎಚ್‌ಡಿಕೆ

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯ ಉದ್ಯೋಗಿಗಳಿಗೆ ಕಾರ್ಯಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ

Modi in Karnataka Modi roadshow in coastal area Mangalore Watch video
Lok Sabha Election 20242 days ago

Modi in Karnataka: ಕರಾವಳಿಯಲ್ಲಿ ಮೋದಿ ಮೋಡಿ; ಭರ್ಜರಿ ರೋಡ್‌ ಶೋ! ವಿಡಿಯೊ ನೋಡಿ

dina bhavishya
ಭವಿಷ್ಯ2 days ago

Dina Bhavishya: ಸತ್ಯ ಹೇಳಿದ್ರೆ ಈ ರಾಶಿಯವರಿಗೆ ಬಂಧುಗಳಿಂದ ಟೀಕೆಗಳು ಎದುರಾಗುತ್ತವೆ

Dina Bhavishya
ಭವಿಷ್ಯ3 days ago

Dina Bhavishya : ಹಣಕಾಸಿನ ವ್ಯವಹಾರಗಳಲ್ಲಿ ಈ ರಾಶಿಯವರಿಗೆ ಯಶಸ್ಸು ಕಟ್ಟಿಟ್ಟಬುತ್ತಿ

Rameshwaram Cafe Blast Fake IDs created and captured bombers hiding in Kolkata
ಕ್ರೈಂ4 days ago

Rameshwaram Cafe Blast: ನಕಲಿ ಐಡಿ ಸೃಷ್ಟಿಸಿ ಕೋಲ್ಕತ್ತಾದಲ್ಲಿ ಅಡಗಿದ್ದ ಬಾಂಬರ್‌ಗಳನ್ನು ಸೆರೆ ಹಿಡಿದಿದ್ದೇ ರೋಚಕ!

Dina Bhavishya
ಭವಿಷ್ಯ4 days ago

Dina Bhavishya : ಹತಾಶೆಯಲ್ಲಿ ಈ ರಾಶಿಯವರು ಆತುರದ ತೀರ್ಮಾನ ಕೈಗೊಳ್ಳಬೇಡಿ..

Lok Sabha Election 2024 Vokkaliga support us says DK Shivakumar
ಕರ್ನಾಟಕ5 days ago

Lok Sabha Election 2024: ಒಕ್ಕಲಿಗರ ಬೆಂಬಲ ನಮಗೇ; ನಿರ್ಮಲಾನಂದನಾಥ ಶ್ರೀ ಹೆಸರನ್ನು ರಾಜಕೀಯಕ್ಕೆ ಎಳೆದಿಲ್ಲ: ಡಿಕೆಶಿ ಸ್ಪಷ್ಟನೆ

Lok Sabha Election 2024 Rahul Gandhi should apologise for lying demand BS Yediyurappa
Lok Sabha Election 20245 days ago

Lok Sabha Election 2024: ಸುಳ್ಳು ಹೇಳಿದ ರಾಹುಲ್‌ ಗಾಂಧಿ ಕ್ಷಮೆ ಕೋರಲಿ: ಬಿ.ಎಸ್.‌ ಯಡಿಯೂರಪ್ಪ ಆಗ್ರಹ

ಟ್ರೆಂಡಿಂಗ್‌