ಹರಪನಹಳ್ಳಿ: ತಾಲೂಕಿನ ಯರಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಅರಸೀಕೆರೆ (Arasikere) ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ (Pratibha Karanji) ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಯರಬಳ್ಳಿ ಉಮಾಪತಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಮಕ್ಕಳಿಗೆ ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸುವಂತೆ ಪ್ರೋತ್ಸಾಹಿಸಿ ಎಂದು ತಿಳಿಸಿದರು.
ಜಿ.ಪಂ.ಮಾಜಿ ಉಪಾಧ್ಯಕ್ಷ ಡಿ.ಸಿದ್ದಪ್ಪ ಮಾತನಾಡಿ, ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಲಿಸಬೇಕು, ಇಂದಿನ ವಿದ್ಯಾರ್ಥಿಗಳೇ ಮುಂದಿನ ದೇಶದ ಉತ್ತಮ ಪ್ರಜೆಗಳಾಗಬೇಕು, ಊರಿನ ಎಲ್ಲರ ಸಹಕಾರದಿಂದ ಅದ್ದೂರಿಯಾಗಿ ಪ್ರತಿಭಾ ಕಾರಂಜಿಯನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ: Weather Report : ರಾಜ್ಯಾದ್ಯಂತ ನಾಳೆ ವ್ಯಾಪಕ ಮಳೆ
ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ 12 ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಬಿ.ಆರ್.ಪಿ. ಅಣ್ಣಪ್ಪ, ತಾಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಕಥೆಗಾರ ಮಂಜಣ್ಣ, ನೌಕರರ ಸಂಘದ ಅಧ್ಯಕ್ಷ ರಾಮಪ್ಪ, ಪದ್ಮಲತಾ, ಅರ್ಜುನ್ ಪರುಸಪ್ಪ ಮಾತನಾಡಿದರು.
ಇದನ್ನೂ ಓದಿ: Vijayanagara News: ಕಲಿಕೆಯ ಜತೆಗೆ ಕ್ರೀಡೆಗೂ ಆದ್ಯತೆ ನೀಡಿ: ಶಾಸಕ ಎಚ್.ಆರ್.ಗವಿಯಪ್ಪ
ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ.ಅಧ್ಯಕ್ಷ ಎಸ್.ಅಜ್ಜಯ್ಯ, ಉಪಾಧ್ಯಕ್ಷೆ ಭಾಗ್ಯಮ್ಮ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ರಂಗಮ್ಮ, ಉಪಾಧ್ಯಕ್ಷೆ ಯಶೋಧಮ್ಮ, ಗ್ರಾಮ ಪಂಚಾಯಿತಿ ಸದಸ್ಯರಾದ ಬಿ. ಸಿದ್ದೇಶ್, ಎಚ್. ಹನುಮಂತಪ್ಪ, ಚೌಡಮ್ಮ, ಮಂಜಮ್ಮ, ಸಿಆರ್‌ಪಿ ಸಿದ್ದೇಶ್ವರ, ಬಂದಮ್ಮ, ಗ್ರಾಮದ ಮುಖಂಡರಾದ ಜಾತಪ್ಪ, ಶ್ರೀಪತಿ, ಮುಖ್ಯಗುರು ಕರಿಬಸಪ್ಪ ಸೇರಿದಂತೆ ಗ್ರಾಮ ಪಂಚಾಯಿತಿ ಸದಸ್ಯರು, ಎಸ್‌ಡಿಎಂಸಿ ಸದಸ್ಯರು, ಮುಖಂಡರು, ಶಾಲೆಗಳ ಮುಖ್ಯ ಗುರುಗಳು, ಸಿಬ್ಬಂದಿ ಹಾಜರಿದ್ದರು.