Site icon Vistara News

Wrestlers Protest: ಬ್ರಿಜ್‌ಭೂಷಣ್ ಸಿಂಗ್ ಬಂಧಿಸಿ, ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಿ: ಸಿದ್ದರಾಮಯ್ಯ ಆಗ್ರಹ

Siddaramaiah On Narendra Modi

Did PV Narasimha Rao Give RS 15 Lakh? Siddaramaiah's Tongue Slips Again

ಬೆಂಗಳೂರು: ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸಿ, ನೊಂದ ಮಹಿಳಾ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಲೈಂಗಿಕ ದೌರ್ಜನ್ಯ ಎಸಗಿರುವ ಬ್ರಿಜ್‌ಭೂಷಣ್‌ ಸಿಂಗ್‌ ಬಂಧನಕ್ಕೆ ಪ್ರತಿಭಟನೆ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳನ್ನು ಪೊಲೀಸರು ಬಂಧಿಸಿ ದೌರ್ಜನ್ಯ ಎಸಗಿರುವುದು ಖಂಡನೀಯ. ತಕ್ಷಣ ಬಂಧಿತ ಮಹಿಳಾ ಕುಸ್ತಿಪಟುಗಳನ್ನು ಬಿಡುಗಡೆಗೊಳಿಸಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಆಗ್ರಹಿಸಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನೆಯನ್ನು ಪ್ರಜಾಪ್ರಭುತ್ವದ ಹಬ್ಬ ಎಂಬಂತೆ ಸಂಭ್ರಮಿಸಲಾಗಿದೆ. ಆದರೆ, ಸರ್ಕಾರ, ಅಲ್ಲಿಂದ ಕೂಗಳತೆಯ ದೂರದಲ್ಲಿ ಧರಣಿ ನಡೆಸುತ್ತಿರುವ ಮಹಿಳಾ ಕುಸ್ತಿಪಟುಗಳ ಪ್ರತಿಭಟನೆಯ ಪ್ರಜಾಸತ್ತಾತ್ಮಕ ಹಕ್ಕನ್ನು ಪೊಲೀಸರ ಮೂಲಕ ಹತ್ತಿಕ್ಕಲು ಹೊರಟಿರುವುದು ಆತ್ಮವಂಚನಾ ನಡವಳಿಕೆಯ ಪ್ರತೀಕ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ | congress guarantee: ಗ್ಯಾರಂಟಿಗಳ ಅನುಷ್ಠಾನವು ಸಿದ್ದರಾಮಯ್ಯ ಚೆಕ್‌ಗೆ ಸಹಿ ಹಾಕುವಷ್ಟು ಸುಲಭ ಅಲ್ಲ: ಸಚಿವ ಡಾ. ಸುಧಾಕರ್

ಕೇಂದ್ರ ಸರ್ಕಾರ ತಕ್ಷಣ ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿರುವ ಬಿಜೆಪಿ ಸಂಸದ ಬ್ರಿಜ್‌ಭೂಷಣ್ ಸಿಂಗ್ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Exit mobile version