Site icon Vistara News

ಬೆಳಗಾವಿಯಲ್ಲಿ ನಕಲಿ ಎಸಿಬಿ ಅಧಿಕಾರಿಗಳ ಬಂಧನ

belgavi cyber police

ಬೆಳಗಾವಿ : ಎಸಿಬಿ ಅಧಿಕಾರಿಗಳೆಂದು ಹೇಳಿಕೊಂಡು ಸರ್ಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುತ್ತಿದ್ದ ವಂಚಕರನ್ನು ಬೆಳಗಾವಿಯ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಇಂದು (ಗುರುವಾರ) ಮೂವರು ಆರೋಪಿಗಳಾದ ಮುರುಗೆಪ್ಪ ಪೂಜಾರ, ರಾಜೇಶ್ ಚೌಗುಲೆ, ರಜನೀಕಾಂತ್ ಎಂಬವರನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತರು ಆರ್​​ಟಿಒ, ಸಬ್​ರಿಜಿಸ್ಟಾರ್​ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಎಸಿಬಿ ಅಧಿಕಾರಿಗಳೆಂದು ಹೇಳಿ ಬೆದರಿಕೆ ಹಾಕಿ ಹಣ ಪೀಕುತ್ತಿದ್ದರು.

ಇದನ್ನು ಓದಿ| ಬಿಡಿಎ ಬ್ರೋಕರ್‌ಗಳ ಮನೆ ಮೇಲೆ ಎಸಿಬಿ ದಾಳಿ: ಭ್ರಷ್ಟ ಅಧಿಕಾರಿಗಳ ಎದೆಯಲ್ಲಿ ನಡುಕ

ಇವರು ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ, ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಬೇಕು, ಇಲ್ಲದಿದ್ದರೆ ಕಚೇರಿಯ ಕಡತಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು ಹೆದರಿಸುತ್ತಿದ್ದರು. ಆ ಮೂಲಕ ಅಧಿಕಾರಿಗಳಿಂದ ಹಣ ಪಡೆಯುತ್ತಿದ್ದರು. ಸದ್ಯ ಖದೀಮರ ಜಾಲವನ್ನು ಬೇಧಿಸಿದ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಸಿಪಿಐ ಗಡ್ಡೇಕರ್ ನೇತೃತ್ವದ ತಂಡ ಕೊನೆಗೂ ಆರೋಪಿಗಳ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದೆ. ಈ ಸಂಬಂಧ ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಇದನ್ನೂ ಓದಿ: ಶ್ರೀಕಿಗಾಗಿ 10 ದಿನ ಬೆಂಗಳೂರು ತಡಕಾಡಿದ ಕೇರಳ ಪೊಲೀಸ್‌ ತಂಡ: ಹಾಗಿದ್ರೆ ಎಲ್ಲಿದ್ದಾನೆ ಈ ಹ್ಯಾಕರ್‌?

Exit mobile version