Site icon Vistara News

KPTCL Exam Scam | ಬೆಳಗಾವಿಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಪಾಲ್ಗೊಂಡ ಮೂವರು ಆರೋಪಿಗಳ ಬಂಧನ

KPTCL exam scam

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮ ಪ್ರಕರಣದಲ್ಲಿ (KPTCL exam scam) ಮತ್ತೆ ಮೂವರು ಆರೋಪಿಗಳನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದು, ಈ ಮೂಲಕ ಪ್ರಕರಣದಲ್ಲಿ ಬಂಧಿತರ ಒಟ್ಟು ಸಂಖ್ಯೆ 20ಕ್ಕೇರಿದೆ.

ಮೂಡಲಗಿ ತಾಲೂಕಿನ ಅರಭಾವಿ ಗ್ರಾಮದ ಅಕ್ಷಯ ಭಂಡಾರಿ, ಬಿರಣಗಡ್ಡಿ ಗ್ರಾಮದ ಬಸವರಾಜ ದುಂದನಟಿ, ರಾಜಾಪುರ ಗ್ರಾಮದ ಶ್ರೀಧರ ಲಕ್ಕಪ್ಪ ಕಟ್ಟಿಕಾರ್ ಬಂಧಿತರು. ಆರೋಪಿ ಅಕ್ಷಯ ಭಂಡಾರಿ, ಬೆಂಗಳೂರಿನಿಂದ ಎಲೆಕ್ಟ್ರಾನಿಕ್ ಡಿವೈಸ್ ತಂದು ಪ್ರಕರಣದ ಕಿಂಗ್‌ಪಿನ್ ಸಂಜು ಭಂಡಾರಿಗೆ ನೀಡಿದ್ದ. ಈತನಿಂದ ಮೊಬೈಲ್, 68 ಎಲೆಕ್ಟ್ರಾನಿಕ್ ಉಪಕರಣಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಆರೋಪಿ ಬಸವರಾಜ ದುಂದನಟಿ ವಿರುದ್ಧ ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಹೇಳಿ ಅಕ್ರಮದಲ್ಲಿ ಭಾಗಿಯಾದ ಆರೋಪವಿತ್ತು. ಈತನಿಂದ ಮೊಬೈಲ್, ಮೋಟಾರ್ ಸೈಕಲ್ ಜಪ್ತಿ ಮಾಡಲಾಗಿದೆ. ಆರೋಪಿ ಶ್ರೀಧರ ಲಕ್ಕಪ್ಪ ಕಟ್ಟಿಕಾರ್ ವಿರುದ್ಧ ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ಕೊಟ್ಟ ಆರೋಪವಿತ್ತು, ಈತನಿಂದ ಒಂದು ಮೊಬೈಲ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಇದನ್ನೂ ಓದಿ | Accident Case | 16 ಜನರಿದ್ದ ಕ್ರೂಸರ್‌ ಪಲ್ಟಿ; ಮೂವರು ಗಂಭೀರ, 13 ಜನರಿಗೆ ಸಣ್ಣಪುಟ್ಟ ಗಾಯ

Exit mobile version