ಕಾರವಾರ: ಗಣೇಶ ಚತುರ್ಥಿ(Ganesh Chaturthi) ಹಿನ್ನೆಲೆಯಲ್ಲಿ ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಸುಪ್ರಸಿದ್ಧ ಇಡಗುಂಜಿ ಮಹಾಗಣಪತಿ ಕ್ಷೇತ್ರಕ್ಕೆ ಬುಧವಾರ ಜನ ಜನಸಾಗರವೇ ಹರಿದು ಬಂದಿತ್ತು. ವಿವಿಧೆಡೆಯಿಂದ ಸಾವಿರಾರು ಮಂದಿ ಆಗಮಿಸಿ ವಿಘ್ನ ನಿವಾರಕ ಮಹಾಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ, ದರ್ಶನ ಪಡೆದರು.
ಕಳೆದೆರಡು ವರ್ಷದಿಂದ ಕೊರೊನಾ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿಯಂದು ಇಲ್ಲಿ ದೇವರ ದರ್ಶನಕ್ಕೆ ಅವಕಾಶ ಇರಲಿಲ್ಲ. ಆದರೆ, ಈ ಬಾರಿ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಆಡಳಿತ ಸಮಿತಿ ದೇಗುಲದಲ್ಲಿ ಸಾರ್ವಜನಿಕರಿಗೆ ಪೂಜೆಗೆ ಅವಕಾಶ ಕಲ್ಪಿಸಿರುವುದರಿಂದ ವಿಜೃಂಭಣೆಯಿಂದ ಹಬ್ಬ ಆಚರಣೆ ಮಾಡಲಾಗಿದೆ.
ಮುಂಜಾನೆ 5 ಗಂಟೆಗೆ ಗಣಪತಿಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರಗಳನ್ನು ನೆರವೇರಿಸಿ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ದೇಗುಲ ಆಡಳಿತ ಮಂಡಳಿಯಿಂದ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.
ಇದನ್ನೂ ಓದಿ | Ganesh Chaturthi 2022 | ಬೆಂಗಳೂರಿನ ಗೊಲ್ಲಹಳ್ಳಿಯ ಸಿದ್ದಿ ವಿನಾಯಕನಿಗೆ ಅದ್ಧೂರಿ ಪೂಜೆ