Site icon Vistara News

Artists Protest | ಕಲಾವಿದರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ.1ರಂದು ವಿಧಾನ ಸೌಧದ ಎದುರು ಪ್ರತಿಭಟನೆ

Artists Protest

ಕೂಡ್ಲಿಗಿ: ಮಾನವೀಯ ಮೌಲ್ಯಗಳನ್ನು ಪ್ರತಿಬಿಂಬಿಸುವ ಮತ್ತು ಸ್ವಾಭಿಮಾನದ ಬದುಕನ್ನು ರೂಪಿಸಿಕೊಳ್ಳಲು ಜಾನಪದ ಕಲೆಗಳನ್ನು ಉಳಿಸಿ ಬೆಳೆಸುವ ಕೆಲಸ ಮಾಡಬೇಕು. ಆದರೆ, ರಾಜ್ಯದ ಕಲಾವಿದರು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಹೀಗಾಗಿ ರಾಜ್ಯದ ಕಲಾವಿದರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಫೆಬ್ರವರಿ 1 ರಂದು ಬೆಂಗಳೂರಿನಲ್ಲಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ (Artists Protest) ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಲಾವಿದರ ಸಂಘದ ಅಧ್ಯಕ್ಷ ಗುಬ್ಬಿ ವೀರೇಶ್ ಪ್ರಸಾದ್ ಹೇಳಿದರು.

ತಾಲೂಕಿನ ಹುರುಳಿಹಾಳ್ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಗ್ರಾಮೀಣ ಜನಪದ ಕಲೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಎಲ್ಲ ಕಲಾವಿದರ ಪರವಾಗಿ ನಾನು ರಾಜ್ಯದಲ್ಲಿ ಹೋರಾಟ ಮಾಡುತ್ತಿದ್ದೇನೆ. ಈ ಪ್ರತಿಭಟನೆಯಲ್ಲಿ ಸಾವಿರಾರು ಕಲಾವಿದರು ಭಾಗವಹಿಸಿ ನಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿಯನ್ನು ಸಲ್ಲಿಸೋಣ ಎಂದರು.

ಕಲಾವಿದರಿಗಾಗಿ ಮಂಡಳಿ ಸ್ಥಾಪನೆ ಮಾಡುವುದು, ಕಲಾವಿದರ ಮಾಸಾಶನ, ಗ್ರಾಮೀಣ ಕಲಾವಿದರಿಗೆ ಸರ್ಕಾರದ ವೇದಿಕೆಗಳಲ್ಲಿ ಕಲೆ ಪ್ರದರ್ಶನ ಮಾಡಲು ಅವಕಾಶ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಕಲಾವಿದರೆಲ್ಲರೂ ಒಗ್ಗಟ್ಟಾಗಿ ನಮ್ಮ ಶಕ್ತಿ ಪ್ರದರ್ಶನ ಮಾಡಿದರೆ ಮುಂದೊಂದು ದಿನ ಜಯ ಸಿಗುವುದು ನಿಶ್ಚಿತ ಎಂದು ತಿಳಿಸಿದರು.

ಇದನ್ನೂ ಓದಿ | Mahadayi Dispute | ಮಹದಾಯಿ ಕುರಿತು ಸ್ಪಷ್ಟನೆ ಕೇಳಿದ ಪರಿಸರ ಸಚಿವಾಲಯ, ಡಿಪಿಆರ್‌ಗೆ ಅಸ್ತು ಎಂದರೂ ರಾಜ್ಯಕ್ಕೆ ಕಂಟಕ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕೂಡ್ಲಿಗಿ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ಯಮನೂರಪ್ಪ ಅವರು ಮಾತನಾಡಿ, ಗ್ರಾಮೀಣ ಭಾಗದಲ್ಲಿ ಕಲಾವಿದರು ಎಲೆ ಮರೆ ಕಾಯಿಯಂತೆ ಅವರ ಕಲೆಯನ್ನು ಪ್ರದರ್ಶಿಸುತ್ತಿದ್ದಾರೆ. ಇವರು ಸರ್ಕಾರದ ಸೌಲಭ್ಯದಿಂದ ವಂಚಿತರಾಗಿದ್ದಾರೆ. ಗ್ರಾಮೀಣ ಭಾಗದ ಕಲಾವಿದರಿಗೆ ಹಂಪಿ ಉತ್ಸವದಲ್ಲಿ ಕಲೆಯನ್ನು ಪ್ರದೇಶಿಸಲು ವೇದಿಕೆಯ ಅವಕಾಶ ಸಿಗದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನಾನು ಯಾವಾಗಲೂ ಕಲೆಗೆ ಗೌರವ ಕೊಡುವಂತ ವ್ಯಕ್ತಿ. ತಾಲೂಕಿನ ಜನರ ಒಡನಾಟವಿದೆ ಮತ್ತು ಇಲ್ಲಿಯ ಸಮಸ್ಯೆ ನನಗೆ ತಿಳಿದಿದೆ. ಈ ಭಾರಿ ಕ್ಷೇತ್ರದಲ್ಲಿ ಶಾಸಕನಾಗುವುದಕ್ಕೆ ಬಂದಿದ್ದೇನೆ, ಅವಕಾಶ ಸಿಕ್ಕರೆ ಕಲಾವಿದರಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತೇನೆ. ಕಲಾವಿದರ ಬದಕು ಕಟ್ಟಿ ಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರಲಿ ಎಂದು ಕೋರಿದರು.

ಕಾರ್ಯಕ್ರಮದಲ್ಲಿ ಪ್ರಾರ್ಥನೆಯನ್ನು ಭಜನೆ ವಾದ್ಯಗಳೊಂದಿಗೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಕಲಾವಿದರ ಸಂಘದ ರಾಜ್ಯ ಅಧ್ಯಕ್ಷ ಹಾಗೂ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ವೈ.ಯಮನೂರಪ್ಪ ಅವರ ನೇತೃತ್ವದಲ್ಲಿ ಜಿಲ್ಲಾ ಅಧ್ಯಕ್ಷರಾಗಿ ನಿಂಗಪ್ಪ, ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಬಣಕಾರ ಮೂಗಪ್ಪ ಅವರನ್ನು ನೇಮಕ ಮಾಡಿ ಆದೇಶ ಪತ್ರ ವಿತರಿಸಲಾಯಿತು.

ವಿವಿಧ ಕಲಾವಿದರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಪ್ರಶಸ್ತಿಪತ್ರ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಬಣಕಾರ್ ಮೂಗಪ್ಪ, ಉಜ್ಜಿನಿ ವೀರೇಶ್, ಅಕ್ಷಯ್ ಕುಮಾರ್, ಹುಳಿಯಾಳ ಗ್ರಾಮ ಪಂಚಾಯಿತಿ ಅಧ್ಯಕ್ಷ ಓಬಳಾಪುರ ತಿಪ್ಪೇಸ್ವಾಮಿ, ಉಪಾಧ್ಯಕ್ಷ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು, ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದ ಕಲಾವಿದರು ಸೇರಿ ನೂರಾರು ಮಂದಿ ಭಾಗವಹಿಸಿದ್ದರು.

ಇದನ್ನೂ ಓದಿ | KSRTC Bumper Gift | ಸಾರ್ವತ್ರಿಕ, ಹಬ್ಬದ ರಜೆಗಳಂದು ಕೆಲಸ ಮಾಡುವ ಸಿಬ್ಬಂದಿಗೆ ಹೆಚ್ಚುವರಿ ವೇತನ‌

Exit mobile version