Site icon Vistara News

ARUN SHYAM M | ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್‌ಗೆ ಡಾಕ್ಟರೇಟ್ ಪದವಿ

ARUN SHYAM M

ಬೆಂಗಳೂರು: ನಗರದ ಅಲಯನ್ಸ್ ಯೂನಿವರ್ಸಿಟಿಯ ಘಟಿಕೋತ್ಸವದಲ್ಲಿ ಕರ್ನಾಟಕ ಸರ್ಕಾರದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅರುಣ್ ಶ್ಯಾಮ್ ಎಂ. (ARUN SHYAM M) ಅವರಿಗೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ. ಕಾನೂನಿನ ವಿಷಯದಲ್ಲಿ ಇವರು ಮಂಡಿಸಿರುವ ಸಂಶೋಧನಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ.

ಮೂಲತ: ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ಕೊಳ್ಳಾಡು ಗ್ರಾಮದ ಪಂಜಿಗದ್ದೆ ಎಂ. ಈಶ್ವರ ಭಟ್ ಮತ್ತು ಕುಸುಮ ಈಶ್ವರ ಭಟ್‌ ಅವರ ಪುತ್ರರಾದ ಅರುಣ್‌ ಶ್ಯಾಮ್ ಅವರು, ೨೦೦೬ರಲ್ಲಿ ಹೈಕೋರ್ಟ್‌ನಲ್ಲಿ ವಕೀಲ ವೃತ್ತಿ ಆರಂಭಿಸಿದ್ದರು. ಮುಂದೆ ಸ್ವಂತ ಕಚೇರಿ ಆರಂಭಿಸಿ ವಕೀಲಿ ವೃತ್ತಿ ಮುಂದುವರಿಸಿದರು. ವಿಟ್ಲ ಮಾದಕಟ್ಟೆ ಹಿ.ಪ್ರಾ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ, ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯಲ್ಲಿ ಪ್ರೌಢ ಶಿಕ್ಷಣ, ವಿಟ್ಲದ ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಪಿಯುಸಿ, ಪುತ್ತೂರು ವಿವೇಕಾನಂದ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡ ಇವರು, ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಕಾನೂನು ಪದವಿ ಬಳಿಕ ಶಿವಮೊಗ್ಗದ ನ್ಯಾಷನಲ್ ಲಾ ಕಾಲೇಜಿನಿಂದ ಎಲ್‌ಎಲ್‌ಎಂ ಪದವಿ ಪಡೆದಿದ್ದಾರೆ.

ಬೆಂಗಳೂರಿನ ಅಲಯನ್ಸ್ ಯುನಿವರ್ಸಿಟಿಯಲ್ಲಿ ಪಿಎಚ್‌ಡಿ ಅಧ್ಯಯನ ನಡೆಸಿ ಡಾಕ್ಟರೇಟ್ ಪದವಿ ಪಡೆದಿರುವ ಅರುಣ್‌ಶ್ಯಾಮ್‌ ಅವರು, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ ಅಕಾಡೆಮಿಕ್ ಕೌನ್ಸಿಲ್‌ ಸದಸ್ಯರಾಗಿಯೂ ಕಾರ್ಯ ನಿರ್ವಹಿಸುತ್ತಿದ್ದು, ಸದ್ಯ ಬೆಂಗಳೂರಿನಲ್ಲಿ ವಾಸವಿದ್ದಾರೆ.

ಇದನ್ನೂ ಓದಿ | Sekhar Rao | ಕರ್ಣಾಟಕ ಬ್ಯಾಂಕ್‌ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಶೇಖರ್ ರಾವ್ ನೇಮಕ

Exit mobile version