Site icon Vistara News

Arun Somanna: ವಂಚನೆ, ಜೀವ ಬೆದರಿಕೆ; ಕೇಂದ್ರ ಸಚಿವ ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್

Arun Somanna

ಬೆಂಗಳೂರು: ವಂಚನೆ, ಜೀವ ಬೆದರಿಕೆ ಆರೋಪದಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ ಪುತ್ರನ ಮೇಲೆ ಎಫ್‌ಐಆ‌ರ್ ದಾಖಲಾಗಿದೆ. ಇವೆಂಟ್ ಮ್ಯಾನೇಜ್‌ಮೆಂಟ್ ಕಂಪನಿ ವ್ಯವಹಾರದಲ್ಲಿ ದಂಪತಿಗೆ ವಂಚನೆ, ಜೀವ ಬೆದರಿಕೆ ಹಾಕಿರುವ ಆರೋಪದಲ್ಲಿ ಅರುಣ್ ಸೋಮಣ್ಣ ಸೇರಿ ಮೂವರ ವಿರುದ್ಧ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರುಣ್ ಸೋಮಣ್ಣ, ಜೀವನ್ ಕುಮಾ‌ರ್ ಮತ್ತು ಪ್ರಮೋದ್ ರಾವ್ ಎಂಬುವವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಬೆಂಗಳೂರಿನ ಸಂಜಯ ನಗರದ ಎಇಸಿಎಸ್ ನಿವಾಸಿ ತೃಪ್ತಿ ಹೆಗಡೆ ಎಂಬುವವರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. 37ನೇ ಹೆಚ್ಚುವರಿ ಚೀಫ್ ಮೆಟ್ರೊಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಆದೇಶದ ಮೇರೆಗೆ ಅರುಣ್ ಸೋಮಣ್ಣ‌ ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ದೂರುದಾರರಾದ ತೃಪ್ತಿ ಹಾಗೂ ಮಧ್ವರಾಜ್ ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ನಡೆಸುತ್ತಿದ್ದರು. 2013ರಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಧ್ವರಾಜ್‌ಗೆ ಆರುಣ್ ಸೋಮಣ್ಣ ಪರಿಚಯವಾಗಿತ್ತು. 2017ರಲ್ಲಿ ಅರುಣ್ ಸೋಮಣ್ಣ ಪುತ್ರಿಯ ಹುಟ್ಟುಹಬ್ಬ ಕಾರ್ಯಕ್ರಮವನ್ನೂ ಮಧ್ವರಾಜ್ ಒಡೆತನದ ಕಂಪನಿ ಆಯೋಜಿಸಿತ್ತು. ಇದರಿಂದ ಆರುಣ್ ಸೋಮಣ್ಣ ಮಧ್ವರಾಜ್ ಜತೆ ಉತ್ತಮ ಬಾಂಧವ್ಯ ಏರ್ಪಟ್ಟಿತ್ತು.

ಅರುಣ್, ಮಧ್ವರಾಜ್ ಜಂಟಿಯಾಗಿ ನೈಬರ್‌ ಹುಡ್ ಎಂಬ ಇವೆಂಟ್ ಮ್ಯಾನೇಜ್ ಮೆಂಟ್ ಕಂಪನಿಯನ್ನು ಪಾರ್ಟ್ನರ್‌ಶಿಪ್ ಡೀಡ್ ಮೇಲೆ ಆರಂಭಿಸಿದ್ದರು. ಆದ್ದರಿಂದ ಕಂಪನಿಯ ಹೂಡಿಕೆ, ಪಾವತಿ ಹಾಗೂ ಸಂಗ್ರಹಣೆಯ ಸಂಪೂರ್ಣ ಜವಾಬ್ದಾರಿಯನ್ನು ಅರುಣ್ ವಹಿಸಿಕೊಂಡಿದ್ದರು. ನಂತರ ಕೆಲ ತಿಂಗಳಲ್ಲಿ ಕಂಪನಿಯ ವ್ಯವಹಾರದಲ್ಲಿ ನಷ್ಟವಾಗಿತ್ತು. ಈ ಹಿನ್ನೆಲೆ ಮಧ್ವರಾಜ್‌ಗೆ ಕಂಪನಿಗೆ ರಾಜೀನಾಮೆ ನೀಡಲು ಒತ್ತಾಯಿಸಿ ಕಿರುಕುಳ, ಕುಟುಂಬಕ್ಕೆ ಬೆದರಿಕೆ ಹಾಕಿರುವ ಆರೋಪ ಅರುಣ್‌ ಸೋಮಣ್ಣ ವಿರುದ್ಧ ಕೇಳಿಬಂದಿದೆ.

ಇದನ್ನೂ ಓದಿ | Train Accident : ಹಳಿ ದಾಟುವಾಗ ರೈಲಿಗೆ ಸಿಲುಕಿ ವಿದ್ಯಾರ್ಥಿನಿ ಸಾವು

ಕಂಪನಿಯಲ್ಲಿ ಲಾಸ್ ಆಗಿದ್ದ ಹಣವನ್ನು ಬೆದರಿಸಿ, ಹಲ್ಲೆ ಮಾಡಿಸಿ ಮಧ್ವರಾಜ್ ದಂಪತಿಯಿಂದ ವಸೂಲಿ ಮಾಡಿರುವ ಆರೋಪವಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಸಂಜಯ ನಗರ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪಿಎಸ್‌ಐ ಕಿರುಕುಳ; ಕುಡಿದ ಅಮಲಿನಲ್ಲಿ ಠಾಣೆ ಎದುರೇ ಪೆಟ್ರೋಲ್‌ ಸುರಿದು ಬೆಂಕಿ ಹಚ್ಚಿಕೊಂಡ

ಕಾರವಾರ: ಪಿಎಸ್ಐ ಮಾನಸಿಕ ಕಿರುಕುಳ (Self Harming) ನೀಡುತ್ತಿದ್ದಾರೆ ಎಂದು ಆರೋಪಿಸಿ ವ್ಯಕ್ತಿಯೊಬ್ಬ ಠಾಣೆ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಜೋಯಿಡಾದ ರಾಮನಗರ ಪೊಲೀಸ್ ಠಾಣೆ ಬಳಿ ಘಟನೆ ನಡೆದಿದೆ.

ರಾಮನಗರ ಹನುಮಾನ್ ಗಲ್ಲಿಯ ನಿವಾಸಿ ಭಾಸ್ಕರ್ ಬೋಂಡೆಲ್ಕರ್ ಆತ್ಮಹತ್ಯೆಗೆ ಯತ್ನಿಸಿದವರು. ಜೂಜಾಟ ಆರೋಪದಡಿ ಭಾಸ್ಕರ್‌ ವಿರುದ್ಧ ರಾಮನಗರ ಪಿಎಸ್ಐ ಬಸವರಾಜ್ ಮಗನೂರು ಪ್ರಕರಣ ದಾಖಲಿಸಿದ್ದರು. ನಿನ್ನೆ ಗುರುವಾರ ಜಮೀನು ವಿಚಾರಕ್ಕೆ ಭಾಸ್ಕರ್‌ ಮದ್ಯ ಸೇವಿಸಿ ಬೈಕ್‌ ಮೂಲಕ ಠಾಣೆಗೆ ತೆರಳಿದ್ದಾನೆ.

ಇದನ್ನೂ ಓದಿ | Self Harming : 6 ತಿಂಗಳ ಹಿಂದಷ್ಟೇ ಮದುವೆ ಆಗಿದ್ದ ನವ ವಿವಾಹಿತೆ ಶವವಾಗಿ ಪತ್ತೆ; ಕೊಂದವರು ಯಾರು?

ಮದ್ಯ ಸೇವಿಸಿದ್ದರಿಂದ ಬೈಕ್ ಠಾಣೆಯಲ್ಲಿ ಬಿಟ್ಟು ಹೋಗುವಂತೆ ಪಿಎಸ್ಐ ಬಸವರಾಜ್‌ ಸೂಚಿಸಿದ್ದಾರೆ. ಇಷ್ಟಕ್ಕೆ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಮದ್ಯದ ಅಮಲಿನಲ್ಲಿ ಭಾಸ್ಕರ್‌ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಗಂಭೀರವಾಗಿ ಗಾಯಗೊಂಡ ಭಾಸ್ಕರ್‌ನನ್ನು ಬೆಳಗಾವಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ರಾಮನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Exit mobile version