ಬೆಂಗಳೂರು: ಅಶ್ವಿನಿ ಪುನೀತ್ ರಾಜ್‌ಕುಮಾರ್ (Ashwini Puneeth Rajkumar) ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಕಿಡಿಗೇಡಿಗಳ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಪ್ಪು ಅಭಿಮಾನಿ ಆಂಜನೇಯ ಎಂಬುವವರು ನೀಡಿದ ದೂರಿನ ಮೇರೆಗೆ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿಡಿಗೇಡಿಗಳು ʼಗಜಪಡೆʼ ಎಂಬ ನಕಲಿ ಖಾತೆ ಸೃಷ್ಟಿಸಿ ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರನ್ನು ನಿಂದಿಸಿದ್ದಾರೆ. ನಂತರ ಖಾತೆಯನ್ನು ಸುದೀಪ್ ಆಭಿಮಾನಿ ಎಂದು ಹೆಸರು ಬದಲಾಯಿಸಿ ಸುದೀಪ್, ಪುನೀತ್ ಅಭಿಮಾನಿಗಳ ನಡುವೆ ಭಿನ್ನಾಭಿಪ್ರಾಯ ಉಂಟಾಗುವಂತೆ ಮಾಡಿದ್ದಾರೆ. ಹೀಗಾಗಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಅಂಜನೇಯ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ದೂರಿನ ಅನ್ವಯ ನಗರದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ | Kangana Ranaut: ಕಂಗನಾ ಪ್ರಕಾರ ಮೊದಲ ಪ್ರಧಾನಿ ಸುಭಾಷ್ ಚಂದ್ರ ಬೋಸ್ ಅಂತೆ! ಕಾರಣವೇನು?
ಏನಿದು ಪ್ರಕರಣ?
ಇತ್ತೀಚೆಗೆ ರಾಯಲ್ ಚಾಲೆಂಜರ್ಸ್ ಬ್ಯಾಂಗಲೋರ್ ಇದ್ದ ಹೆಸರನ್ನು ಬದಲಾವಣೆ ಮಾಡಲು, ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್ ಆಯೋಜನೆ ಮಾಡಿತ್ತು. ಕಾರ್ಯಕ್ರಮದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂದು ಹೆಸರನ್ನು ಬದಲಿಸಲಾಗಿತ್ತು. ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಹೊಸ ಜೆರ್ಸಿ ಅನಾವರಣ ಮಾಡಿದ್ದರು. ಆದರೆ, ಅಶ್ವಿನಿ ಅವರು ಕಾರ್ಯಕ್ರಮಕ್ಕೆ ಬಂದಿದ್ದಕ್ಕೇ ಆರ್‌ಸಿಬಿ ಸತತವಾಗಿ ಸೋಲುತ್ತಿದೆ ಎಂದು ಕಿಡಿಗೇಡಿಗಳು ಪೋಸ್ಟ್ ಮಾಡಿದ್ದರು.
@GAJAPADE6 ಹೆಸರಿನ ಟ್ವಿಟರ್ ಖಾತೆಯಿಂದ, “ಶುಭ ಕಾರ್ಯಕ್ಕೆ ಮುತ್ತೈದೆಯರನ್ನು ಕರೆಯಬೇಕು. ಗಂಡ ಸತ್ತ ಮುಂ.. ಯರನ್ನು ಕರೀಬಾರದು. ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ಗೆ ಈ ಮುಂ…ಯನ್ನು ಕರೆದಿದ್ದಕ್ಕೆ ಎಲ್ಲ ಮ್ಯಾಚ್ ಸೋಲ್ತಾ ಇದ್ದಾರೆ” ಎಂದು #Yuvarajkumar #PuneethRajkumar #Yuva #Dboss #DevilTheHero ಎಂಬ ಹ್ಯಾಷ್‌ಟ್ಯಾಗ್ ಹಾಕಿ ಪೋಸ್ಟ್ ಮಾಡಿದ್ದರು.
Respect Women#DrPuneethRajkumar #Yuva pic.twitter.com/ssmhs7Fc5s
— Yuva Trends (@Yuva_trends) April 4, 2024
ಟ್ವಿಟರ್ ಖಾತೆಯೇ ಮಾಯ!
ಆರ್‌ಸಿಬಿ ಸೋಲಿಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರೇ ಹೊಣೆ ಎಂದು ಟ್ವಿಟರ್‌ನಲ್ಲಿ ನಿಂದಿಸಿರುವುದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಗಜಪಡೆ ಎಂದಿದ್ದ ಖಾತೆ ಹೆಸರನ್ನು ಸುದೀಪ್ ಅಭಿಮಾನಿ ಎಂದು ಹೆಸರು ಬದಲಾಯಿಸಿ, ಪ್ರಮುಖ ನಟರ ಅಭಿಮಾನಿಗಳ ನಡುವೆ ದ್ವೇಷ ಸೃಷ್ಟಿಸಲು ಪ್ರಯತ್ನಿಸಲಾಗಿದೆ. ನಂತರ ಹೆಸರು ಬದಲಿಸಿದ ಸ್ಕ್ರೀನ್ ಶಾಟ್ ಅನ್ನು ಎಲ್ಲೆಡೆ ವೈರಲ್ ಮಾಡಲಾಗಿದೆ ಎಂದು ಯುವ ಟ್ರೆಂಡ್ಸ್ ಅಸಲಿ ವಿಚಾರವನ್ನು ಪೋಸ್ಟ್ ಮಾಡಿದೆ. ಇದೀಗ ಗಜಪಡೆ ಹೆಸರಿನ ಖಾತೆಯೂ ನಿಷ್ಕ್ರಿಯಗೊಂಡಿದೆ.