ಬೆಂಗಳೂರು: ಬಿಎಂಟಿಸಿ ಬಸ್‌ನಲ್ಲಿ ಟಿಕೆಟ್ ಕೇಳಿದ ಮಹಿಳೆಯನ್ನು ಕಂಡಕ್ಟರ್ ಮನಬಂದಂತೆ ಥಳಿಸಿರುವ ಘಟನೆ (Assault Case) ಸಿದ್ದಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮಂಗಳವಾರ ನಡೆದಿದೆ. ಈ ಬಗ್ಗೆ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಅಮಾನತಾಗಿದ್ದ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತನ್ಜಿಲಾ ಇಸ್ಮಾಯಿಲ್ ಹಲ್ಲೆಗೊಳಗಾದ ಮಹಿಳೆ. ನಿರ್ವಾಹಕ ಹೊನ್ನಪ್ಪ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಳೇಕಳ್ಳಿಯಿಂದ ಶಿವಾಜಿನಗರಕ್ಕೆ ಹೊರಟಿದ್ದ ಮಹಿಳೆ, ಬಿಳೇಕಳ್ಳಿ ಬಳಿ ಟಿಕೆಟ್ ಕೇಳಿದ್ದಾಳೆ. ಆ ವೇಳೆ ಕಂಡಕ್ಟರ್ ಕೊಟ್ಟಿರಲಿಲ್ಲ. ಮತ್ತೆ ಡೈರಿ ಸರ್ಕಲ್ ಬಳಿ ಟಿಕೆಟ್ ಕೇಳಿದಾಗ ಗಲಾಟೆಯಾಗಿದೆ. ಈ ವೇಳೆ ಮಹಿಳೆ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸುವ ಮೂಲಕ ಕಂಡಕ್ಟರ್ ಅಟ್ಟಹಾಸ ಮೆರೆದಿದ್ದಾನೆ.
ಇದನ್ನೂ ಓದಿ | Self Harming: ಐಪಿಎಲ್ ಬೆಟ್ಟಿಂಗ್‌ನಲ್ಲಿ 1.5 ಕೋಟಿ ಕಳೆದುಕೊಂಡ ಪತಿ; ಸಾಲಗಾರರ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡ ಪತ್ನಿ
ಬಿಳೆಕಳ್ಳಿ ಬಳಿ ಬಸ್ ಹತ್ತಿದ್ದ ಮಹಿಳೆಗೆ ಟಿಕೆಟ್ ನೀಡಲು ಆಧಾರ್ ಕಾರ್ಡ್ ತೋರಿಸುವಂತೆ ಕಂಡಕ್ಟರ್ ಹೇಳಿದ್ದಾನೆ. ಆದರೆ ಎರಡು ಬಸ್ ಸ್ಟಾಪ್ ಹೋದರೂ ಆಧಾರ್ ಕಾರ್ಡ್ ತೋರಿಸಿರಲಿಲ್ಲ. ಸ್ಟೇಜ್ ಮುಕ್ತಾಯ ಆಗುತ್ತೆ ಬೇಗ ಆಧಾರ್ ಕಾರ್ಡ್ ತೋರಿಸಿ, ಇಲ್ಲದಿದ್ದರೆ ಹಣ ಕೊಟ್ಟು ಟಿಕೆಟ್ ತೆಗೆದುಕೊಳ್ಳುವಂತೆ ಕಂಡಕ್ಟರ್ ಹೇಳಿದ್ದಾನೆ. ಇದರಿಂದ ಮಹಿಳೆ ಕೆಂಡಾಮಂಡಲರಾಗಿದ್ದಾರೆ. ಇದರಿಂದ ಮಾತಿಗೆ ಮಾತು ಬೆಳೆದು ಕಂಡಕ್ಟರ್‌ಗೆ ಮಹಿಳೆ ಕಪಾಳ ಮೋಕ್ಷ ಮಾಡಿದ್ದಾರೆ. ಹೀಗಾಗಿ ರೊಚ್ಚಿಗೆದ್ದ ಕಂಡಕ್ಟರ್, ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾನೆ.
ಘಟನೆ ಸಂಬಂಧ ಐಪಿಸಿ 354A ಅಡಿ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಕಂಡಕ್ಟರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಬೆನ್ನಲ್ಲೇ ಹಲ್ಲೆ ಮಾಡಿದ ನಿರ್ವಾಹಕ ಬಸವರಾಜ್‌ನ ಅಮಾನತು ಮಾಡಿ ಬಿಎಂಟಿಸಿ ಆದೇಶ ಹೊರಡಿಸಿತ್ತು. ಡಿಪೋ ನಂಬರ್ 34ಕ್ಕೆ ಸೇರಿದ ಬಸ್‌ನಲ್ಲಿ ಮಹಿಳೆ ಮೇಲೆ ಹಲ್ಲೆ ನಡೆದಿತ್ತು. ಹೀಗಾಗಿ ಕರ್ತವ್ಯದಲ್ಲಿದ್ದ ವೇಳೆ ಕಂಡಕ್ಟರ್‌ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬ್ಯಾಂಕ್ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದಳು; ಕಿಲಾಡಿ ಕಳ್ಳಿ ಖಾಕಿಗೆ ಲಾಕ್ ಆಗಿದ್ದೇಗೆ?
ಬೆಂಗಳೂರು: ಎಚ್‌ಎಎಲ್ ಪೊಲೀಸರು (HAL Police) ಕಾರ್ಯಾಚರಣೆ ನಡೆಸಿ ಕಿಲಾಡಿ ಕಳ್ಳಿಯನ್ನು (Theft Case) ಬಂಧಿಸಿದ್ದಾರೆ. ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು (Laptop Theft) ಜೆಸ್ಸಿ ಅಗರ್ ವಾಲ್ ಎಂಬಾಕೆ ಕದಿಯುತ್ತಿದ್ದಳು.
ಹೋಟೆಲ್, ಪಿಜಿಗಳಲ್ಲಿ ರೂಂ ಪಡೆಯುವ ಈ ಖತರ್ನಾಕ್ ಲೇಡಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಳು. ಹೋಟೆಲ್ ಹಾಗೂ ಪಿಜಿಯಲ್ಲಿರವವರು ಟಿಫಿನ್, ಊಟಕ್ಕೆ ತೆರಳಿದ ಸಂದರ್ಭದಲ್ಲಿ ಕ್ಷಣಾರ್ಧದಲ್ಲಿ ಲ್ಯಾಪ್‌ಟಾಪ್ ಕದ್ದು ಎಸ್ಕೇಪ್ ಆಗುತ್ತಿದ್ದಳು.
ಇನ್ನೂ ಈಕೆ ಐಸಿಐಸಿಐ ಬ್ಯಾಂಕಿನಲ್ಲಿ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಕೆಲಸ ಬಿಟ್ಟು ಕೋರಮಂಗಲ, ಇಂದಿರಾನಗರ, ಎಚ್‌ಎಎಲ್ ಸುತ್ತಮುತ್ತ ಲ್ಯಾಪ್‌ಟಾಪ್‌ಗಳನ್ನು ಕಳ್ಳತನ ಮಾಡಿದ್ದಳು. ಸದ್ಯ ಲ್ಯಾಪ್‌ಟಾಪ್ ಕಳ್ಳಿಯನ್ನು ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ನಡೆಸುತ್ತಿದ್ದಾರೆ. ಬಂಧಿತಳಿಂದ 10 ಲಕ್ಷ ಮೌಲ್ಯದ 24 ಲ್ಯಾಪ್‌ಟಾಪ್‌ಗಳನ್ನು ಸೀಜ್ ಮಾಡಲಾಗಿದೆ.
ಈ ಕುರಿತು ಮಾತನಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ಪಿಜಿಗಳಲ್ಲಿ ಲ್ಯಾಪ್ ಟಾಪ್ ಕಳ್ಳತನ ಮಾಡುತ್ತಿದ್ದ ಮಹಿಳೆಯನ್ನು ಎಚ್‌ಎಎಲ್ ಪೊಲೀಸರು ಬಂಧಿಸಿದ್ದಾರೆ. ವಿಚಾರಣೆ ವೇಳೆ ಕೋರಮಂಗಲ, ಎಚ್ಎಎಲ್, ಇಂದಿರಾನಗರ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗಿದ್ದಾಳೆ. ಪಿಜಿಯಲ್ಲಿದ್ದವರು ತಿಂಡಿ, ಕಾಫಿಗೆ ಹೋದಾಗ ತನ್ನ ಕೈಚಳಕ ತೋರುತ್ತಿದ್ದಳು.
ಜೆಸ್ಸಿ ಅಗರ್ ವಾಲ್ ಮೂಲತಃ ರಾಜಸ್ಥಾನದವಳು. ಈ ಮುಂಚೆ ಬ್ಯಾಂಕ್‌ವೊಂದರಲ್ಲಿ ಪಾರ್ಟ್ ಟೈಂ ಕೆಲಸ ಮಾಡುತ್ತಿದ್ದಳು. ನಂತರ ಲ್ಯಾಪ್ ಟಾಪ್ ಕಳ್ಳತನಕ್ಕೆ ಇಳಿದಿದ್ದಳು. ಆಕೆಯನ್ನ ಬಂಧಿಸಿ 24 ಲ್ಯಾಪ್ ಟಾಪ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.
ಇದನ್ನೂ ಓದಿ: BBMP Marshals : ಜಯನಗರದ ಬೀದಿಯಲ್ಲಿ ಬ್ಯಾಗ್ ಮಾರುತ್ತಿದ್ದ ವೃದ್ಧನ ಮೇಲೆ ದರ್ಪ ಮೆರೆದ ಮಾರ್ಷಲ್ಸ್
ಮೊಬೈಲ್ ಕಳ್ಳರ ಬಂಧನ
ಇನ್ನು ಎಚ್‌ಎಎಲ್ ಪೊಲೀಸರು ಮತ್ತೊಂದು ಪ್ರಕರಣವನ್ನು ಭೇದಿಸಿದ್ದಾರೆ. ಮೊಬೈಲ್‌ಗಳನ್ನು ಕದಿಯುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ. ಬಸ್‌ಗಳಲ್ಲಿ ಪಿಕ್ ಪ್ಯಾಕೆಟ್ ಮಾಡಿವುದು, ಮೊಬೈಲ್‌ಗಳನ್ನು ಎಗರಿಸುವುದು ಮಾಡುತ್ತಿದ್ದರು. ಇಬ್ಬರಲ್ಲಿ ಓರ್ವ ಈ ಹಿಂದಿನಿಂದಲೂ ಆ್ಯಕ್ಟಿವ್ ಆಗಿದ್ದ ಎನ್ನಲಾಗಿದೆ. ಸದ್ಯ ಇಬ್ಬರನ್ನೂ ಬಂಧಿಸಿ 7ಲಕ್ಷ ಮೌಲ್ಯದ 20 ಫೋನ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ