ಚಿಕ್ಕಮಗಳೂರು: ಗಲ್ಲಿ ಕ್ರಿಕೆಟ್ ಆಡುವಾಗ ಯುವಕರು ಕಿರಿಕ್ ಮಾಡಿಕೊಂಡು ಕಿತ್ತಾಡಿಕೊಂಡಿದ್ದಾರೆ. ಗಲಾಟೆಯಲ್ಲಿ ಯುವಕನ ಹೃದಯಕ್ಕೆ ಚಾಕು ಇರಿದಿರುವ (Assault Case) ಘಟನೆ ಚಿಕ್ಕಮಗಳೂರು ನಗರದ ಗೌರಿ ಕಾಲುವೆ ಬಡಾವಣೆಯಲ್ಲಿ ನಡೆದಿದೆ.
ಹಿಬ್ಬು ಎಂಬಾತ ಗಂಭೀರವಾಗಿ ಗಾಯಗೊಂಡವನು. ಕ್ರಿಕೆಟ್ ಆಡುತ್ತಿದ್ದಾಗ ಹಳೇ ದ್ವೇಷಕ್ಕೆ ಈ ಕೃತ್ಯ ಎಸಗಿದ್ದಾರೆ ಎಂಬ ಆರೋಪವಿದೆ. ಹಿಬ್ಬುಗೆ ಚಾಕು ಹಾಕಿದ ಗುಂಪು ಮನಬಂದಂತೆ ಥಳಿಸಿ ಬಳಿಕ ಗೌರಿ ಕಾಲುವೆಗೆ ಬಿಸಾಕಿ ಹೋಗಿದ್ದಾರೆ.
ಚರಂಡಿಯಲ್ಲಿ ಹಿಬ್ಬು ನರಳಾಟ ಕೇಳಿದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದು, ಕಾಲುವೆಯಲ್ಲಿ ಬಿದ್ದವನನ್ನು ಮೇಲಕ್ಕೆ ಎತ್ತಿದ್ದಾರೆ. ಬಳಿಕ ಆಟೋ ಮೂಲಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅದೃಷ್ಟವಶಾತ್ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಸ್ಥಳಕ್ಕೆ ಬಸವನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳಿಗೆ ಹುಡುಕಾಟ ನಡೆಸಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ