ಕರ್ನಾಟಕ
Assault Case: ಹೇರ್ ಕಟಿಂಗ್ ನಾಳೆ ಮಾಡ್ತಿನಿ ಎಂದಿದ್ದಕ್ಕೆ ಶಾಪ್‌ನೊಳಗಿದ್ದ ವಸ್ತುಗಳನ್ನು ಕೆರೆಗೆ ಎಸೆದ ದುರುಳರು
Assault Case: ತಡರಾತ್ರಿ ಆಯಿತು, ಬೆಳಗ್ಗೆ ಹೇರ್ ಕಟಿಂಗ್ ಮಾಡುತ್ತೇನೆ ಎಂದಿದ್ದಕ್ಕೆ ಗ್ರಾಹಕನೊಬ್ಬ ಸಿಟ್ಟಿಗೆ ಎದ್ದಿದ್ದಾನೆ. ಕಟಿಂಗ್ ಶಾಪ್‌ನ ಬೀಗ ಮುರಿದು ಒಳಗೆ ಇದ್ದ ವಸ್ತುಗಳನ್ನೆಲ್ಲ ಕೆರೆ ಎಸೆದಿರುವ ಘಟನೆ ನಡೆದಿದೆ.
ಗದಗ: ಇಲ್ಲಿನ ರೋಣ ತಾಲೂಕಿನ ಮಾಡಲಗೇರಿ ಗ್ರಾಮದಲ್ಲಿ ಹೇರ್ ಕಟಿಂಗ್ (Hair Cutting) ವಿಚಾರಕ್ಕೆ ಗ್ರಾಹಕನೊಬ್ಬ ಕೋಪಗೊಂಡು ದಾಂಧಲೆ ಮಾಡಿದ್ದಾನೆ. ಕಟಿಂಗ್ ನಾಳೆ ಮಾಡುತ್ತೇನೆ ಎಂದಿದ್ದಕ್ಕೆ ಕ್ಷೌರಿಕನ ಅಂಗಡಿ ಮೇಲೆ ದಾಳಿ ಮಾಡಿ ಕಿಡಿಗೇಡಿಯೊಬ್ಬ ದರ್ಪ (Assault Case) ತೋರಿದ್ದಾನೆ.
ವಿಠ್ಠಲ ಹಡಪದ ಎಂಬುವವರ ಕಟಿಂಗ್ ಶಾಪ್‌ಗೆ ತಡರಾತ್ರಿ ನುಗ್ಗಿ ಬೀಗ ಮುರಿದಿರುವ ಕಿಡಿಗೇಡಿಯೊಬ್ಬ, ಕಟಿಂಗ್ ಶಾಪ್‌ನ ಚೇರ್, ಕತ್ತರಿ, ಮೇಕಪ್ ವಸ್ತುಗಳನ್ನು ಕೆರೆಗೆ ಎಸೆದು ದುಷ್ಕೃತ್ಯ ಮೆರೆದಿದ್ದಾನೆ.
ವಿಠ್ಠಲ್ ಅವರಿಗೆ ತಡರಾತ್ರಿ 11 ಗಂಟೆ ಸುಮಾರಿಗೆ ಅಪರಿಚಿತನೊಬ್ಬ ಫೋನ್ ಮಾಡಿ, ಹೇರ್ ಕಟಿಂಗ್ ಮಾಡುವಂತೆ ಹೇಳಿದ್ದಾನೆ. ರಾತ್ರಿಯಾಗಿದ್ದು ಅಂಗಡಿಯಲ್ಲಿ ಕರೆಂಟ್ ವ್ಯವಸ್ಥೆ ಇಲ್ಲ. ಹೀಗಾಗಿ ಬೆಳಗ್ಗೆ ಮಾಡುತ್ತೇನೆ ಎಂದಿದ್ದಾರೆ. ಇದಾದ ಬಳಿಕ ಎದ್ದು ಅಂಗಡಿಯತ್ತ ಬಂದಾಗ ಕಿಡಿಗೇಡಿಗಳ ದುಷ್ಕೃತ್ಯ ಬಯಲಾಗಿದೆ. ಅಂಗಡಿಯಲ್ಲಿನ ವಸ್ತುಗಳನ್ನೆಲ್ಲ ಕೆರೆಗೆ ಎಸೆದಿದ್ದಾರೆ.
ಇದನ್ನೂ ಓದಿ: Karnataka Rain: ರಾಜ್ಯಾದ್ಯಂತ ಇನ್ನೆರಡು ದಿನ ವರುಣಾರ್ಭಟ; ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಆಲಿಕಲ್ಲು ಮಳೆ ಸಾಧ್ಯತೆ
ಇವರ ಕೃತ್ಯದಿಂದ ನಷ್ಟವನ್ನುಂಟು ಅನುಭವಿಸಿರುವ ವಿಠ್ಠಲ್ ದೂರು ನೀಡಿದ್ದಾರೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ
ಕರ್ನಾಟಕ
Fire tragedy : ಹೊಸಕೋಟೆಯಲ್ಲಿ ಭೀಕರ ದುರಂತ; ಗ್ಯಾಸ್ ಸಿಲಿಂಡರ್ ಲೀಕ್ ಆಗಿ 7 ಕಾರ್ಮಿಕರ ದಾರುಣ ಸಾವು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೇಡಹಳ್ಳಿಯಲ್ಲಿ ವಾರದ ಹಿಂದೆ ಸಂಭವಿಸಿದ ಗ್ಯಾಸ್ ಲೀಕೇಜ್ ಪ್ರಕರಣದಲ್ಲಿ ಗಾಯಗೊಂಡಿದ್ದವರು ದಿನಕ್ಕೊಬ್ಬರಂತೆ ಸಾಯುತ್ತಿದ್ದು, ಈಗ ಸಾವಿನ ಸಂಖ್ಯೆ ಏಳಕ್ಕೇರಿದೆ.
ದೇವನಹಳ್ಳಿ (ಬೆಂಗಳೂರು ಗ್ರಾಮಾಂತರ): ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಕಳೆದ ಭಾನುವಾರ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸೋರಿಕೆ (Fire tragedy) ಪ್ರಕರಣವೊಂದು ಏಳು ಮಂದಿಯ ಪ್ರಾಣವನ್ನೇ ಕಸಿದಿದೆ. ಸಾವನ್ನಪ್ಪಿದವರೆಲ್ಲರೂ ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರಾಗಿರುವುದರಿಂದ ಆರು ದಿನಗಳ ಕಳೆದರೂ ಇದರ ಸ್ಪಷ್ಟ ಮಾಹಿತಿ ಹೊರಬಿದ್ದಿರಲಿಲ್ಲ.
ಹೊಸಕೋಟೆ ತಾಲೂಕಿನ ಮೇಡಹಳ್ಳಿಯಲ್ಲಿ ಕಳೆದ ಭಾನುವಾರ ಶೆಡ್ ಒಂದರಲ್ಲಿ ರಾತ್ರಿ ಅನಿಲ ಸೋರಿಕೆ ಆಗಿದ್ದು, ರಾತ್ರಿ ಯಾರೋ ಕರೆಂಟ್ ಹಾಕಿದಾಗ ಬೆಂಕಿ ಹತ್ತಿಕೊಂಡು ಎಂಟು ಮಂದಿಗೆ ಬೆಂಕಿಯ ಗಾಯಗಳಾಗಿದ್ದವು. ಆರಂಭಿಕ ಹಂತದಲ್ಲಿ ಇದೇನೂ ತುಂಬ ದೊಡ್ಡ ಅವಘಡದಂತೆ ಕಾಣಿಸಿರಲಿಲ್ಲ. ಆದರೆ, ದಿನ ಕಳೆದಂತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರು ಒಬ್ಬೊಬ್ಬರಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದ ಈಗ ಎಂಟು ಮಂದಿಯಲ್ಲಿ ಏಳು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಉತ್ತರ ಪ್ರದೇಶ ಮತ್ತು ಬಿಹಾರ ಮೂಲದ ಕಾರ್ಮಿಕರನ್ನು ಕರೆದುಕೊಂಡು ಬಂದು ಇಲ್ಲಿ ಕಾಮಗಾರಿಗಳಲ್ಲಿ ದುಡಿಸಿಕೊಳ್ಳಲಾಗುತ್ತಿತ್ತು. ಅವರಿಗೆ ಒಂದು ಶೆಡ್‌ನಲ್ಲಿ ವಾಸವಾಗಿರಲು ವ್ಯವಸ್ಥೆ ಮಾಡಲಾಗಿತ್ತು. ಕಳೆದ ಭಾನುವಾರ ರಾತ್ರಿಯೂ ಈ ಕಾರ್ಮಿಕರು ಮೇಡಹಳ್ಳಿಯ ಅಂತಹುದೇ ಒಂದು ಶೆಡ್‌ನಲ್ಲಿ ಮಲಗಿದ್ದರು. ಹೊರಗಡೆ ಊಟ ಮಾಡಿಕೊಂಡು ಬಂದು ಅವರು ಇಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು. ಆಗ ಯಾವುದೋ ಕಾರಣದಿಂದ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿತ್ತು.
ನಡುವೆ ರಾತ್ರಿ ಯಾರೋ ಲೈಟ್ ಆನ್ ಮಾಡಿದಾಗ ಸೋರಿಕೆಯಾದ ಅನಿಲದಿಂದಾಗಿ ಬೆಂಕಿ ಹತ್ತಿಕೊಂಡಿತ್ತು. ಇದರಿಂದ ಮಲಗಿದ್ದವರಿಗೆಲ್ಲ ಸುಟ್ಟ ಗಾಯಗಳಾಗಿತ್ತು. ಅವರನ್ನು ಕೂಡಲೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರಂಭದಲ್ಲಿ ಆರೋಗ್ಯವಾಗಿದ್ದಾರೆ ಎಂಬಂತೆ ಕಂಡುಬಂದ ಇವರ ದೇಹದ ಒಳಗೆ ಬೆಂದ ಗಾಯಗಳು ಘಾಸಿಗೊಳಿಸಿತ್ತು. ಹೀಗಾಗಿ ದಿನ ಕಳೆದಂತೆ ಒಬ್ಬೊಬ್ಬರೇ ಪ್ರಾಣ ಕಳೆದುಕೊಳ್ಳಲಾರಂಭಿಸಿದ್ದಾರೆ. ಶುಕ್ರವಾರ ಏಳನೇ ಸಾವು ಸಂಭವಿಸಿದೆ.
ಅಮಿತ್, ಸನೋಜ್, ನೀರಜ್, ಸೋಮಯ್ ಗುಪ್ತಾ, ತಿಲಕ್ ರಾಮ್, ಲಕ್ಷ್ಮಣ್ ಮತ್ತು ಚಂದ್ರಭಾನ್ ಮೃತ ಕಾರ್ಮಿಕರು. ಈ ಘಟನೆಗೆ ಸಂಬಂಧಿಸಿ ಅರವಿಂದ ಗುಪ್ತಾ, ಮತ್ತು ಬಾಸ್ಕರ್ ಎಂಬುವವರ ವಿರುದ್ದ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶದಿಂದ, ಬಿಹಾರದಿಂದ ಕಾರ್ಮಿಕರನ್ನು ಕರೆತರುವ ಲೇಬರ್ ಕಂಟ್ರಾಕ್ಟರ್‌ಗಳು ಮತ್ತು ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಕೆಲಸಕ್ಕಾಗಿ ಕರೆತಂದು ಸೂಕ್ತ ಮೂಲ ಸೌಕರ್ಯ ನೀಡದ ಕಾರಣ ಅವಘಡ ಸಂಭವಿಸಿದೆ. ಅನುಗೊಂಡನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : Road Accident: ನೆಲಮಂಗಲದ ಬಳಿ ಲಾರಿ ಹರಿದು ಯುವತಿ ಸ್ಥಳದಲ್ಲೇ ಸಾವು
ಕರ್ನಾಟಕ
Karnataka Election: ಜೆಡಿಎಸ್, ಬಿಜೆಪಿಯ ತಲಾ ಒಂದು ವಿಕೆಟ್ ಪತನ: A.T. ರಾಮಸ್ವಾಮಿ, N.Y. ಗೋಪಾಲಕೃಷ್ಣ ರಾಜೀನಾಮೆ
ಅನೇಕ ವರ್ಷ ಕಾಂಗ್ರೆಸ್‌ನಲ್ಲಿದ್ದ ಗೋಪಾಲಕೃಷ್ಣ ಮತ್ತೆ ಅದೇ ಪಕ್ಷಕ್ಕೆ ತೆರಳಬಹುದು ಎನ್ನಲಾಗಿದ್ದು, ಎ.ಟಿ. ರಾಮಸ್ವಾಮಿ ಬಿಜೆಪಿ ಸೇರುವ ಸಾಧ್ಯತೆಯಿದೆ.
ಬೆಂಗಳೂರು: ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಇಬ್ಬರು ಶಾಸಕರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದು, ಒಬ್ಬರು ಬಿಜೆಪಿಗೆ, ಮತ್ತೊಬ್ಬರು ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಅರಕಲಗೂಡು ಜೆಡಿಎಸ್ ಶಾಸಕ ಹಾಗೂ ಮಾಜಿ ಸಚಿವ ಎ.ಟಿ. ರಾಮಸ್ವಾಮಿ ಬೆಂಗಳೂರಿನಲ್ಲಿ ವಿಧಾನಸಭೆ ಕಾರ್ಯದರ್ಶಿ ಮೂಲಕ ಸ್ಪೀಕರ್‌ಗೆ ರಾಜೀನಾಮೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಎ.ಟಿ. ರಾಮಸ್ವಾಮಿ, ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಸಂತೋಷದಿಂದ ರಾಜೀನಾಮೆ ನೀಡಿದ್ದೇನೆ. ಕಾರ್ಯದರ್ಶಿ ಗೆ ರಾಜೀನಾಮೆ ನೀಡಿದ್ದೇನೆ, ಸ್ಪೀಕರ್ ಬಂದ ಬಳಿಕ ಅಂಗೀಕಾರ ಮಾಡುವಂತೆ ಮನವಿ ಮಾಡುತ್ತೇನೆ ಎಂದರು.
ನಾನು ಇಂದೇ ಶಾಸಕರ ಭವನದ ಕೊಠಡಿ ಬಿಟ್ಟು ಕೊಡುತ್ತಿದ್ದೇನೆ. ಜೆಡಿಎಸ್ ನಾಯಕರು ನನಗೆ ಅವಕಾಶ ಮಾಡಿಕೊಟ್ಟಿದಕ್ಕೆ ಧನ್ಯವಾದಗಳನ್ನ ಸಲ್ಲಿಸುತ್ತೇನೆ. ನಾನು ಅಧಿಕಾರ ಆಸೆ ಪಡೆದವನಲ್ಲ. ನಾನು ವಿರೋಧ ಪಕ್ಷದವರ ಜತೆ ಸಹ ಉತ್ತಮವಾಗಿದ್ದೇನೆ. ನಾನು ರಾಜಕೀಯ ವಿರೋಧಿಗಳಿಗೂ ಒಳ್ಳೆಯದಾಗ್ಲಿ ಎಂದು ಭಾವಿಸುತ್ತೇನೆ. ಜನ ಸೇವೆಗಾಗಿ ಅವಕಾಶ ಸಿಕ್ಕಿತ್ತು.
ಮುಂದೆ ಅವಕಾಶ ಸಿಕ್ರೆ ಜನರ ಸೇವೆಗೆ ಮುಡುಪಾಗಿ ಇಡುತ್ತಿದ್ದೇನೆ. ಕರ್ನಾಟಕದ ರಾಜಕಾರಣ ಕೆಟ್ಟು ಹೋಗಿದೆ. ಒಲೈಕೆ ರಾಜಕಾರಣ ಜಾಸ್ತಿ ಆಗಿದೆ. ವಿಧಾನ ಸಭೆ ಮತ್ತು ಪರಿಷತ್ ಹಣದ ಸಭೆ ಆಗದೇ ಜನರ ಸಭೆ ಆಗಲಿ. ಜನರ ಹಿತಾಸಕ್ತಿಗೆ ಕೆಲಸ ಮಾಡಿಕೊಂಡು ಬಂದಿದ್ದೇನೆ. ನಾನು ಜೆಡಿಎಸ್ ಬಿಡಲಿಲ್ಲ. ಎಂದೂ ಸಹ ಸಹ ಜೆಡಿಎಸ್ ಬಿಡಲಿಲ್ಲ. ಎಲ್ಲ ಪಕ್ಷಗಳಲ್ಲೂ ಲೋಪದೋಷಗಳಿವೆ. ಮನಿ ಪವರ್ ಮುಂದೆ ಬಲಿಪಶು ಆದೆ. ಅಕ್ರಮಗಳನ್ನ ಎತ್ತಿ ಹಿಡಿದಿದ್ದೆ ಶಾಪ ಎನ್ನುವುದಾದರೆ ಅದನ್ನು ಚಾಲೆಂಜ್ ಆಗಿ ಸ್ವೀಕರಿಸುತ್ತೇನೆ ಎಂದರು.
ಯಾವ ಪಕ್ಷ ಸೇರುತ್ತೇನೆ ಎನ್ನುವ ಕುರಿತು ರಾಮಸ್ವಾಮಿ ಸ್ಪಷ್ಟವಾಗಿ ತಿಳಿಸಿಲ್ಲ. ಅವರು ಬಿಜೆಪಿ ಅಭ್ಯರ್ಥಿಯಾಗಿ ಅರಕಲಗೂಡಿನಿಂದ ಸ್ಪರ್ಧೆ ಮಾಡಬಹುದು ಎನ್ನಲಾಗುತ್ತಿದೆ.
ಗೋಪಾಲಕೃಷ್ಣ ರಾಜೀನಾಮೆ
ಕೂಡ್ಲಿಗಿ ಕ್ಷೇತ್ರದ ಬಿಜೆಪಿ ಶಾಸಕ ಎನ್.ವೈ. ಗೋಪಾಲಕೃಷ್ಣ ರಾಜೀನಾಮೆ ನೀಡಿದ್ದಾರೆ. ಶಿರಸಿಯಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಮನೆಗೆ ತೆರಳಿ ರಾಜೀನಾಮೆ ನೀಡಿದ್ದಾರೆ. ವಯಸ್ಸಿನ ಕಾರಣಕ್ಕೆ ರಾಜಕೀಯ ನಿವೃತ್ತಿ ಪಡೆಯಲು ರಾಜೀನಾಮೆ ನೀಡುತ್ತೇನೆ ಎಂದು ಗೋಪಾಲಕೃಷ್ಣ ಹೇಳಿದ್ದಾರೆ.
ಆದರೆ ಅವರು ಮೊಳಕಾಲ್ಮೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ಮೊಳಕಾಲ್ಮೂರು ಕ್ಷೇತ್ರದ ಟಿಕೆಟ್ ಕನ್ಪರ್ಮ್ ಮಾಡಿಕೊಂಡೇ ರಾಜೀನಾಮೆ ನೀಡಿದ್ದಾರೆ. ಹಿಂದಿನ ಎಲೆಕ್ಷನ್ ನಲ್ಲಿ ಟಿಕೆಟ್ ನಿಂದ ವಂಚಿತ ಆಗಿದ್ದ ಗೋಪಾಲಕೃಷ್ಣ, ಜನಾರ್ದನ ರೆಡ್ಡಿ, ಶ್ರೀರಾಮುಲು ಪ್ರಭಾವದಿಂದ ಕೂಡ್ಲಿಗಿಯಿಂದ ಸ್ಪರ್ಧಿಸಿದ್ದರು. ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗುವ ಸಾಧ್ಯತೆಯಿದೆ.
ಇದನ್ನೂ ಓದಿ: Karnataka Elections : ಕೂಡ್ಲಿಗಿ ಶಾಸಕ ಗೋಪಾಲಕೃಷ್ಣ ನಾಳೆ ಬಿಜೆಪಿಗೆ ರಾಜೀನಾಮೆ, ಕಾಂಗ್ರೆಸ್‌ಗೆ ಸೇರ್ಪಡೆ
ಕರ್ನಾಟಕ
Hiriyur News: ಕಾಂಗ್ರೆಸ್ ಸೇರಿದ ನಗರಸಭೆ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್; ಬಿಜೆಪಿಗೆ ಆಘಾತ
Hiriyur News: ಬಿಜೆಪಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ ನಗರ ಸಭೆಯ ಮಾಜಿ ಅಧ್ಯಕ್ಷ ಟಿ. ಚಂದ್ರಶೇಖರ್ ಅವರನ್ನು ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಬರ ಮಾಡಿಕೊಂಡರು.
ಹಿರಿಯೂರು: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೇ, ನಗರಸಭೆಯ (city council) ಮಾಜಿ ಅಧ್ಯಕ್ಷ ಹಾಗೂ ಭೋವಿ ಸಮಾಜದ ನಾಯಕ ಟಿ. ಚಂದ್ರಶೇಖರ್ ಬಿಜೆಪಿಗೆ ಸದ್ದಿಲ್ಲದೆ ಗುಡ್ ಬೈ ಹೇಳಿ ಕಾಂಗ್ರೆಸ್ ಸೇರಿದ್ದಾರೆ.
ಟಿ. ಚಂದ್ರಶೇಖರ್, ಎಸ್‌ಟಿ ಮೋರ್ಚಾ ಅಧ್ಯಕ್ಷ ಮಂಜುನಾಥ್, ತಿಮ್ಮಭೋವಿ, ರಂಗಸ್ವಾಮಿ ಸೇರಿದಂತೆ ಮತ್ತಿತರರನ್ನು ಕಾಂಗ್ರೆಸ್ ಪಕ್ಷದ ಬಾವುಟ ನೀಡಿ ಮಾಜಿ ಸಚಿವ ಡಿ. ಸುಧಾಕರ್ ಅವರು ಪಕ್ಷಕ್ಕೆ ಸೇರಿಸಿಕೊಂಡಿದ್ದಾರೆ.
ಕಾಂಗ್ರೆಸ್‌ನಲ್ಲಿದ್ದ ಟಿ. ಚಂದ್ರಶೇಖರ್ ಅವರು, ಕಳೆದ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿದ್ದರು. ನಂತರ ನಗರಸಭಾ ಅಧ್ಯಕ್ಷರಾಗಿದ್ದರು. ಬಳಿಕ ನಡೆದ ನಗರಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಆದರೆ ಶಾಸಕಿ ಕೆ. ಪೂರ್ಣಿಮಾ ಅವರ ಪತಿ ಡಿ.ಟಿ. ಶ್ರೀನಿವಾಸ್ ಅವರ ಜತೆಗಿದ್ದ ಚಂದ್ರಶೇಖರ್ ಅವರು ಚುನಾವಣೆ ಹತ್ತಿರವಾಗುತ್ತಿದ್ದಂತೆ ಅಂತರ ಕಾಯ್ದುಕೊಂಡಿದ್ದರು. ಇದೀಗ ಗುರುವಾರ (ಮಾ.30) ರಾತ್ರಿ ಮಾಜಿ ಸಚಿವ ಡಿ. ಸುಧಾಕರ್ ಅವರು ತಮ್ಮ ಮನೆಯಲ್ಲಿಯೇ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದ್ದಾರೆ.
ಚಂದ್ರಶೇಖರ್ ಅವರು ಬಿಜೆಪಿ ತೊರೆದಿರುವುದರಿಂದ ಶಾಸಕಿ ಕೆ. ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಹಿನ್ನಡೆ ಉಂಟಾಗಲಿದೆ ಎಂಬ ವಿಶ್ಲೇಷಣೆ ಸಹ ಈ ವೇಳೆ ನಡೆಯುತ್ತಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಭೋವಿ ಸಮಾಜದ ಮತಗಳು ಹೆಚ್ಚು ಬಂದಿದ್ದವು. ಆದರೆ, ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಸಹಕಾರಿಯಾಗಲಿದೆಯೇ ಎಂಬ ಬಗ್ಗೆ ಚರ್ಚೆಗಳು ನಡೆಯುತ್ತಿವೆ.
ಪಕ್ಷ ಸೇರ್ಪಡೆ ಕುರಿತು ಮಾತನಾಡಿದ ಮಾಜಿ ಸಚಿವ ಡಿ. ಸುಧಾಕರ್, ಚಂದ್ರಶೇಖರ್ ಅವರು ಕಾಂಗ್ರೆಸ್‌ನ ತತ್ತ್ವ ಸಿದ್ಧಾಂತಗಳನ್ನು ಒಪ್ಪಿಕೊಂಡು ಪಕ್ಷಕ್ಕೆ ವಾಪಸ್ ಬಂದಿದ್ದರಿಂದ ನಮಗೆ ಆನೆ ಬಲ ಬಂದಂತಾಗಿದೆ. ಕ್ಷೇತ್ರದಲ್ಲಿ ಭ್ರಷ್ಟಾಚಾರ, ಜನ ವಿರೋಧಿ ಆಡಳಿತ ಕೊನೆಗೊಂಡಿದೆ. ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಆರೋಗ್ಯ
Shivamogga News: ವಿನ್‌ಲೈಫ್ ಟ್ರಸ್ಟ್ ವತಿಯಿಂದ ಏ. 2ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ
Shivamogga News: ಆರೋಗ್ಯ ಉತ್ಸವ ಜನಜಾಗೃತಿ ಸಮಾವೇಶದಲ್ಲಿ ಜೀವ ರಕ್ಷಕ ತರಬೇತಿ, ಕಿರು ನಾಟಕ ಪ್ರದರ್ಶನವನ್ನು ಏರ್ಪಡಿಸಲಾಗಿದೆ ಎಂದು ವಿನ್‌ಲೈಫ್ ಟ್ರಸ್ಟಿ ಡಾ.ಪೃಥ್ವಿ ಮಾಹಿತಿ ನೀಡಿದ್ದಾರೆ.
ಶಿವಮೊಗ್ಗ: ವಿನ್‌ಲೈಫ್ ಟ್ರಸ್ಟ್ (WinLife Trust) ವತಿಯಿಂದ ಕುವೆಂಪು ರಂಗ ಮಂದಿರದಲ್ಲಿ ಏ.2 ರಂದು ಆರೋಗ್ಯ ಉತ್ಸವ ಜನ ಜಾಗೃತಿ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿನ್‌ಲೈಫ್ ಟ್ರಸ್ಟಿ ಡಾ.ಪೃಥ್ವಿ, “ಈ ಸಮಾವೇಶದಲ್ಲಿ ತುರ್ತು ಜೀವ ರಕ್ಷಕ ತರಬೇತಿ ಮತ್ತು ಕಾರ್ಯಾಗಾರ ನಡೆಯಲಿದ್ದು, ದೈನಂದಿನ ಬದುಕಿನಲ್ಲಿ ಒತ್ತಡ ನಿರ್ವಹಣೆ, ಮಧುಮೇಹ @360 ಈ ವಿಷಯ ಕುರಿತು ಅರಿವು ಮೂಡಿಸಲಾಗುವುದು. ಆರೋಗ್ಯ ಕುರಿತು ಪ್ರಾಯೋಗಿಕ ತರಬೇತಿ, ಕಾರ್ಯಾಗಾರ, ಯೋಗ, ವಸ್ತು ಪ್ರದರ್ಶನ, ಕಿರು ನಾಟಕ ಪ್ರದರ್ಶನ, ಸಮಾಲೋಚನೆ ಹಾಗೂ ಉಪನ್ಯಾಸವನ್ನು ಏರ್ಪಡಿಸಲಾಗಿದೆ” ಎಂದು ಹೇಳಿದರು.
ಇದನ್ನೂ ಓದಿ: Ananya Panday: ತನ್ನನ್ನು ಎಸಿಪಿ ಎಂದು ಕರೆಯದಂತೆ ಮಾಧ್ಯಮಗಳಿಗೆ ವಿನಂತಿಸಿದ ಅನನ್ಯಾ ಪಾಂಡೆ
ಸುದ್ದಿಗೋಷ್ಠಿಯಲ್ಲಿ ವಿನ್‌ಲೈಫ್ ನಿರ್ದೇಶಕರಾದ ಡಾ.ಶಂಕರ್, ಡಾ.ವಿಜಯ ಕುಮಾರ್, ರೆಹಮತ್ ಹಾಗೂ ಬದ್ರಿನಾಥ್ ಉಪಸ್ಥಿತರಿದ್ದರು.
-
ಸುವಚನ10 hours ago
ಸುವಚನ, ಶುಭನುಡಿ, ಪಂಚಾಂಗ, ಓಂಕಾರದ ಸಂಗಮ
-
ದೇಶ6 hours ago
Chenab Bridge | ಐಫೆಲ್ ಟವರ್ಗಿಂತಲೂ ಎತ್ತರದ ರೈಲ್ವೇ ಸೇತುವೆ ಜಮ್ಮು ಕಾಶ್ಮೀರದಲ್ಲಿ ಲೋಕಾರ್ಪಣೆಗೆ ಸಿದ್ಧ
-
ಕರ್ನಾಟಕ7 hours ago
SSLC Exam 2023: ಇಂದಿನಿಂದ SSLC ಎಕ್ಸಾಂ; ಪರೀಕ್ಷೆ ಬರೆಯಲಿರುವ 8.42 ಲಕ್ಷ ವಿದ್ಯಾರ್ಥಿಗಳು
-
ಪ್ರಮುಖ ಸುದ್ದಿ15 hours ago
ವಿಸ್ತಾರ ಸಂಪಾದಕೀಯ: ಹಿಂದಿ ಬಗ್ಗೆ ಪೂರ್ವಗ್ರಹ ಬೇಡ, ಹಾಗಂತ ಹೇರಿಕೆ ಸಲ್ಲದು
-
ಕ್ರಿಕೆಟ್23 hours ago
IPL 2023: ಗುಜರಾತ್ vs ಚೆನ್ನೈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡ
-
ವೈರಲ್ ನ್ಯೂಸ್22 hours ago
Viral Video: ಇದು ರೋಲ್ಸ್ ರಾಯ್ಸ್ ಆಫ್ ಆಟೋ; ಒಂದು ಬಟನ್ ಪ್ರೆಸ್ ಮಾಡಿದ್ರೆ ಸಾಕು ಮೇಲ್ಭಾಗ ತೆರೆದುಕೊಳ್ಳತ್ತೆ!
-
ಕರ್ನಾಟಕ19 hours ago
ವಿಸ್ತಾರ Special: ಬಿಜೆಪಿ ಇತಿಹಾಸದಲ್ಲೇ ಮೊದಲ ಪ್ರಯತ್ನ ಇದು: ಅಭ್ಯರ್ಥಿ ಆಯ್ಕೆಗೆ ಶುಕ್ರವಾರ ನಡೆಯಲಿದೆ ಆಂತರಿಕ ಚುನಾವಣೆ
-
ಕ್ರಿಕೆಟ್19 hours ago
IPL 203 : ಐಪಿಎಲ್ 16ನೇ ಆವೃತ್ತಿಯ ವೇಳಾಪಟ್ಟಿ ಇಲ್ಲಿದೆ