ಹುಬ್ಬಳ್ಳಿ: ಒಂದು ಇಡೀ ಕುಟುಂಬ ಸೇರಿಕೊಂಡು ಮಹಿಳೆಯೊಬ್ಬಳನ್ನು ಅಟ್ಟಾಡಿಸಿ ಇಟ್ಟಿಗೆ ಹಾಗೂ ಚಪ್ಪಲಿಯಿಂದ ಥಳಿಸಿರುವ ಘಟನೆ (Assault Case) ಹುಬ್ಬಳ್ಳಿಯ ವಿದ್ಯಾನಗರದ ಕಿಮ್ಸ್ ಆಸ್ಪತ್ರೆಯ ಹಿಂಭಾಗದಲ್ಲಿ ನಡೆದಿದೆ. ಹಲ್ಲೆಗೆ ಕಾರಣವಾಗಿದ್ದು ಅನೈತಿಕ ಸಂಬಂಧ ಎನ್ನಲಾಗಿದೆ.
ಹಲ್ಲೆಗೊಳಗಾದ ಮಹಿಳೆಗೂ ಹಾಗೂ ಹಲ್ಲೆ ಮಾಡಿದ ಕುಟುಂಬದ ವ್ಯಕ್ತಿ ನಡುವೆ ಅಕ್ರಮ ಸಂಬಂಧ ಇತ್ತು ಎನ್ನಲಾಗಿದೆ. ಅಕ್ರಮ ಸಂಬಂಧ ಹೊಂದಿದ್ದ ವ್ಯಕ್ತಿಗೆ ಮಾನಸಿಕವಾಗಿ ಹಿಂಸೆ ನೀಡುತ್ತಿದ್ದಳು ಎಂಬ ಆರೋಪ ಕೇಳಿ ಬಂದಿದೆ.
ಸುಮಾರು 10 ವರ್ಷಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ಆಯಾ ಕೆಲಸ ಮಾಡುತ್ತಿದ್ದಳು. ಕೆಲಸದಿಂದ ಮನೆಗೆ ತೆರಳುತ್ತಿದ್ದ ಮಹಿಳೆ ವೇಳೆ ವ್ಯಕ್ತಿಯ ಕುಟುಂಬಸ್ಥರು ಏಕಾಏಕಿ ಎರಗಿ ಹಲ್ಲೆ ನಡೆಸಿದ್ದಾರೆ. ಪತಿಯ ಅನೈತಿಕ ಸಂಬಂಧದಿಂದ ಬೇಸತ್ತ ಹೆಂಡತಿ, ಮಕ್ಕಳು ಸೇರಿ ಮಹಿಳೆ ಮೇಲೆ ಹಲ್ಲೆ ನಡೆಸಿದ್ದಾರೆ.
ಹಳ್ಳೆಗೊಳಗಾದ ತಂಗಿಯನ್ನು ಬಿಡಿಸಲು ಬಂದ ಅಕ್ಕನನ್ನು ಹಿಡಿದು ಮನಬಂದಂತೆ ಥಳಿಸಿದ್ದಾರೆ. ಸಾರ್ವಜನಿಕ ಸ್ಥಳದಲ್ಲೇ ಒಬ್ಬರಿಗೊಬ್ಬರು ಕಿತ್ತಾಡಿಕೊಂಡಿದ್ದಾರೆ. ಇದನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಯಿಡಿದಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹುಬ್ಬಳ್ಳಿಯ ವಿದ್ಯಾನಗರ ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ್ದಾರೆ. ಬಳಿಕ ಎಲ್ಲರನ್ನೂ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದಾರೆ.
ಪೈಂಟ್ ಮಿಕ್ಸರ್‌ಗೆ ಕೂದಲು ಸಿಲುಕಿ ಮಹಿಳೆಯ ತಲೆಯೇ ಕಟ್
ಬೆಂಗಳೂರು: ಯಂತ್ರಗಳು ಇರುವ ಉದ್ಯಮಗಳಲ್ಲಿ ಕೆಲಸ ಮಾಡುವ ಹೆಣ್ಣುಮಕ್ಕಳು ಎಷ್ಟೇ ಎಚ್ಚರ ವಹಿಸಿದರೂ ಸಾಕಾಗುವುದಿಲ್ಲ. ಅವರ ತಲೆ ಕೂದಲು, ಧರಿಸುವ ಬಟ್ಟೆ, ವೇಲುಗಳೇ ಅವರಿಗೆ ಅಪಾಯ ತಂದಿಡುವುದುಂಟು. ಬೆಂಗಳೂರಿನ ಒಂದು ಕಾರ್ಖಾನೆಯಲ್ಲಿ ಅಂತಹುದೇ ಘಟನೆ (Accidental death) ನಡೆದಿದೆ. ಬಣ್ಣ ಬೆರೆಸುವ ಪೇಯಿಂಟ್ ಮಿಕ್ಸರ್ ಗೆ (Paint Mixer) ಕೂದಲು ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ (Woman Dead) ಮೃತಪಟ್ಟಿದ್ದಾರೆ.
ನೆಲಗದರನಹಳ್ಳಿಯ ಶ್ರೀ ಪೇಯಿಂಟ್ಸ್ ಕಾರ್ಖಾನೆಯಲ್ಲಿ (Sri Paints Factory) ನಡೆದ ಘಟನೆಯಲ್ಲಿ ಶ್ವೇತಾ (34) ಎಂಬ ಮಹಿಳೆ ಮೃತಪಟ್ಟಿದ್ದಾರೆ. ಇದೊಂದು ಪೈಂಟ್ ಮಿಕ್ಸಿಂಗ್ ಕಾರ್ಖಾನೆಯಾಗಿದ್ದು, ಇಲ್ಲಿ ಒಂದು ಗ್ರೈಂಡರ್‌ನಲ್ಲಿ ಪೌಡರ್ ಮತ್ತು ಇತರ ಸಾಮಗ್ರಿಗಳನ್ನು ಹಾಕಿ ಬಣ್ಣವನ್ನು ತಯಾರಿಸಲಾಗುತ್ತದೆ. ಈ ಸಂದರ್ಭದಲ್ಲಿ ಗ್ರೈಂಡರ್‌ಗೆ ಜಡೆ ಸಿಲುಕಿ ಮಹಿಳೆಯ ತಲೆಯೇ ಕತ್ತರಿಸಿ ಹೋಗಿದೆ.
ಗ್ರೈಂಡರ್‌ನ ಒಳಗೆ ಬಣ್ಣ ಗಟ್ಟಿಯಾಗಿತ್ತು. ಅದನ್ನು ಚೆಕ್ ಮಾಡಲೆಂದು ಒಳಗೆ ಬಗ್ಗಿದಾಗ ಒಮ್ಮೆಗೇ ತಲೆಕೂದಲು ಸಿಕ್ಕಿಹಾಕಿಕೊಂಡಿದೆ. ಆಗ ಮಹಿಳೆ ಜೋರಾಗಿ ಕೂಗಿಕೊಂಡಿದ್ದಾರೆ. ಆದರೆ, ಗ್ರೈಂಡರ್ ಸದ್ದಿನಿಂದಾಗಿ ಅವರ ಕೂಗು ಯಾರಿಗೂ ಕೇಳಿಸಲಿಲ್ಲ. ಕೊನೆಗೆ ಉಳಿದ ಕೆಲಸಗಾರರು ಬಂದು ನೋಡಿದಾಗ ಶ್ವೇತಾ ಸತ್ತುಬಿದ್ದಿದ್ದು ಕಂಡುಬಂತು.
ತಲೆಕೂದಲು ಸಿಕ್ಕಿಕೊಂಡ ಬಳಿಕ ಬ್ಲೇಡ್‌ಗಳು ಆಕೆಯ ಕೊರಳನ್ನೇ ಕತ್ತರಿಸಿದ್ದವು. ಆಗ ಆಕೆ ಹೊರಕ್ಕೆ ಎಸೆಯಲ್ಪಟ್ಟರು. ಶ್ವೇತಾ ಅವರು ತಮ್ಮ ಗಂಡ ಮತ್ತು ಮಗನ ಜೊತೆ ಮಲ್ಲತ್ತಹಳ್ಳಿಯಲ್ಲಿ ವಾಸವಾಗಿದ್ದರು. ಈ ಘಟನೆಯಿಂದ ಕಾರ್ಖಾನೆ ಕಾರ್ಮಿಕರಲ್ಲಿ ಸೂತಕದ ಸ್ಥಿತಿ ನಿರ್ಮಾಣವಾಗಿದೆ. ಜತೆಗೆ ಇಂಥ ಅಪಾಯ ಯಾವಾಗ ಬೇಕಾದರೂ ಸಂಭವಿಸಬಹುದು ಎಂಬ ಆತಂಕ ಕೂಡಾ ಕಾಡುತ್ತಿದೆ. ಪ್ರಕರಣ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ. ಜತೆಗೆ ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ