Assault Case : ಆಂಟಿ ಎಂದವನಿಗೆ ಚಪ್ಪಲಿಯಿಂದ ಹೊಡೆದಳು! - Vistara News

ಕರ್ನಾಟಕ

Assault Case : ಆಂಟಿ ಎಂದವನಿಗೆ ಚಪ್ಪಲಿಯಿಂದ ಹೊಡೆದಳು!

Assault Case : ಯಾರನ್ನಾದರೂ ಆಂಟಿ ಎಂದು ಕರೆಯುವ ಮುನ್ನ ಎಚ್ಚರವಾಗಿರಿ. ಯಾಕೆಂದರೆ ಆಂಟಿ ಎಂದ ಸೆಕ್ಯುರಿಟ್‌ ಗಾರ್ಡ್‌ಗೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹೊಡೆದು ಕಪಾಳಮೋಕ್ಷ ಮಾಡಿರುವ ಘಟನೆ ಬೆಂಗಳೂರಲ್ಲಿ (Bengaluru News) ನಡೆದಿದೆ.

VISTARANEWS.COM


on

Assault by women in men
ಸಾಂದರ್ಭಿಕ ಚಿತ್ರ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಆಂಟಿ ಎಂದಿದ್ದಕ್ಕೆ ಮಹಿಳೆಯೊಬ್ಬರು ಸಿಟ್ಟಾಗಿ ಸೆಕ್ಯೂರಿಟಿ ಗಾರ್ಡ್‌ಗೆ ಚಪ್ಪಲಿಯಿಂದ (Assault Case) ಹೊಡೆದಿದ್ದಾರೆ. ಬೆಂಗಳೂರಿನ (Bengaluru News) ಮಲ್ಲೇಶ್ವರಂನಲ್ಲಿ ಈ ಘಟನೆ ನಡೆದಿದೆ. ಅಶ್ವಿನಿ ಎಂಬಾಕೆ ಸೆಕ್ಯುರಿಟಿ ಗಾರ್ಡ್ ಕೃಷ್ಣಯ್ಯ (64) ಎಂಬುವವರಿಗೆ ಹಲ್ಲೆ ನಡೆಸಿದ್ದಾರೆ.

ಕೃಷ್ಣಯ್ಯ ಅವರು ರಾಜಾಜಿನಗರದಲ್ಲಿರುವ ಪೊಲೈಟ್‌ ಎಂಬ ಸೆಕ್ಯೂರಿಟಿ ಏಜೆನ್ಸಿಯಲ್ಲಿ ಗಾರ್ಡ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಸೆಪ್ಟೆಂಬರ್ 19ರಂದು ಎಲ್ಲ ಬ್ಯಾಂಕ್‌ನ ಎಟಿಎಂಗೆ ಹಣ ಹಾಕುವಾಗ ಕೃಷಯ್ಯ ಸೆಕ್ಯೂರಿಟಿಯಾಗಿ ಕೆಲಸ ಮಾಡುತ್ತಿದ್ದರು. ಅಂದು ಮಲ್ಲೇಶ್ವರಂನ ಐಸಿಐಸಿಐ ಬ್ಯಾಂಕ್‌ ಎಟಿಎಂನಲ್ಲಿ ಹಣ ಹಾಕುತ್ತಿದ್ದಾಗ ಅಡ್ಡ ನಿಂತಿದ್ದ ಅಶ್ವಿನಿಗೆ ʻಆಂಟಿ ಸ್ವಲ್ಪ ಪಕ್ಕಕ್ಕೆ ಬನ್ನಿʼ ಎಂದಿದ್ದಾರೆ. ಇಷ್ಟಕ್ಕೆ ಸಿಟ್ಟಾದ ಮಹಿಳೆ ʻನನ್ನ ಆಂಟಿ ಅಂತೀಯಾʼ ಎಂದು ಅವಾಚ್ಯ ಶಬ್ಧದಿಂದ ಸೆಕ್ಯುರಿಟಿ ಗಾರ್ಡ್‌ ಕೃಷ್ಣಯ್ಯರಿಗೆ ನಿಂಧಿಸಿದ್ದಾರೆ.

ಮಾತ್ರವಲ್ಲದೆ ಕಪಾಳಕ್ಕೆ ಚಪ್ಪಲಿಯಿಂದ ಹೊಡೆದು ಹಲ್ಲೆ ಮಾಡಿ, ದಾಂಧಲೆ ಮಾಡಿದ್ದಾಳೆ. ಜತೆಗೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆಯನ್ನು ಹಾಕಿದ್ದಾರೆ. ಈ ಮಧ್ಯೆ ಸಾರ್ವಜನಿಕರು ಮಧ್ಯ ಪ್ರವೇಶಿ ಗಲಾಟೆಯನ್ನು ಬಿಡಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಮಹಿಳೆ ವಿರುದ್ಧ ಎಫ್‌ಐಆರ್‌ ದಾಖಲು

ಅಶ್ವಿನಿ ವಿರುದ್ಧ ಸಂತ್ರಸ್ತ ಕೃಷ್ಣಯ್ಯ ಅವರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಸಂಬಂಧ ಐಫ್‌ಐಆರ್‌ ದಾಖಲಾಗಿದೆ. ಅಶ್ವಿನಿ ವಿರುದ್ದ IPC 506. 504. 324. 355 ಅಡಿ ಕೇಸ್ ದಾಖಲಾಗಿದೆ. ಪೊಲೀಸರು ಪ್ರತ್ಯಕ್ಷದರ್ಶಿಗಳ ಹೇಳಿಕೆ ಮೇಲೆ ಎಫ್‌ಐಆರ್‌ ದಾಖಲಿಸಿದ್ದಾರೆ.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Karnataka Election Results 2024: ಮೈಸೂರಿನಲ್ಲಿ ಮೈತ್ರಿ ಮುಂದೆ ಮಂಡಿಯೂರಿದ ಸಿದ್ದರಾಮಯ್ಯ ತಂತ್ರಗಾರಿಕೆ

Karnataka Election Results 2024: ಮೈಸೂರು-ಕೊಡಗು ಕ್ಷೇತ್ರದಲ್ಲಿ ಕೈ ನಾಯಕರು, ಮುಖಂಡರು, ಕಾರ್ಯಕರ್ತರನ್ನು ಬೀದಿಗಿಳಿಸಿ ಗೆಲುವಿಗಾಗಿ ಸರ್ಕಸ್ ಮಾಡಿದ್ದ ಸಿಎಂ ಸಿದ್ದರಾಮಯ್ಯ ಅವರ ಶತಪ್ರಯತ್ನಕ್ಕೆ ಹಿನ್ನಡೆಯಾಗಿದೆ.

VISTARANEWS.COM


on

Karnataka election results 2024
Koo

ಮೈಸೂರು: ಕ್ಷೇತ್ರದ ಚುನಾವಣೆಯಲ್ಲಿ (Karnataka Election Results 2024) ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದೆ ಸಿಎಂ ಸಿದ್ದರಾಮಯ್ಯ ಅವರ ತಂತ್ರಗಾರಿಕೆ ಮಂಡಿಯೂರಿದೆ. ಬಿಜೆಪಿ- ಜೆಡಿಎಸ್ ಒಗ್ಗಟ್ಟು ಭೇದಿಸಲು ಕಾಂಗ್ರೆಸ್ ವಿಫಲವಾಗಿದ್ದು, ಗ್ಯಾರಂಟಿ, ಜಾತಿ ಲೆಕ್ಕಾಚಾರ, ಹಣ ಬಲ ಹಿಂದಿಕ್ಕಿ ಯದುವೀರ್ ಗೆಲುವಿನ ದಡ ಮುಟ್ಟಿದ್ದಾರೆ.

ಹಾಲಿ ಸಂಸದ ಪ್ರತಾಪ್ ಸಿಂಹ ಬದಲು ರಾಜವಂಶಸ್ಥ ಯದುವೀರ್ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಆದರೆ, ಹಠ ಹಿಡಿದು ಲಕ್ಷ್ಮಣ್‌ಗೆ ಸಿದ್ದರಾಮಯ್ಯ ಟಿಕೆಟ್ ಕೊಡಿಸಿದ್ದರು. ಅಲ್ಲದೇ ವಿಧಾನಸಭಾ ಕ್ಷೇತ್ರವಾರು ಟಾರ್ಗೆಟ್ ಫಿಕ್ಸ್ ಮಾಡಿದ್ದರು. ನಾಯಕರು, ಮುಖಂಡರು, ಕಾರ್ಯಕರ್ತರನ್ನು ಬೀದಿಗಿಳಿಸಿ ಗೆಲುವಿಗಾಗಿ ಸಿಎಂ ಸರ್ಕಸ್ ಮಾಡಿದ್ದ, ಶತಪ್ರಯತ್ನಕ್ಕೆ ಹಿನ್ನಡೆಯಾಗಿದೆ.

ನಿರಾಯಾಸವಾಗಿ ಮೈತ್ರಿಕೂಟ ಚುನಾವಣೆ ಎದುರಿಸಿತ್ತು. ಇನ್ನು ಚಾಮುಂಡೇಶ್ವರಿ, ಹುಣಸೂರು, ಪಿರಿಯಾಪಟ್ಟಣದಲ್ಲಿ ಜೆಡಿಎಸ್ ನಾಯಕರಿಗೇ ಚುನಾವಣೆ ನೇತೃತ್ವವನ್ನು ಬಿಜೆಪಿ ವಹಿಸಿತ್ತು. ಇದರಿಂದ ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಸಹಕಾರಿಯಾಗಿದೆ.

ಇದನ್ನೂ ಓದಿ | Election Results 2024: ಆಲ್ ಮೋಸ್ಟ್ ನಾನು ಸೋತಂಗೆ- ಸುರಪುರ ಬಿಜೆಪಿ ಅಭ್ಯರ್ಥಿ ರಾಜುಗೌಡ ಬೇಸರ

ಮೈಸೂರಿನ ಯುವರಾಜ ಯದುವೀರ ಒಡೆಯರ್​​ಗೆ ಗೆಲುವು

Mysore Election Result 2024

ಬೆಂಗಳೂರು: ಕರುನಾಡಿನ ಸಾಂಸ್ಕೃತಿಕ ತವರೂರಾಗಿರುವ ಮೈಸೂರು ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ಬಿಜೆಪಿಯ ಯದುವೀರ್​ ಒಡೆಯರ್ (Yaduveer Wadiyar)​ ಗೆಲುವು ಸಾಧಿಸಿದ್ದಾರೆ (Mysore Election Result 2024). ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ರಾಜ್ಯ ವಕ್ತಾರ ಲಕ್ಷ್ಮಣ್ ವಿರುದ್ಧ 1,03,854 ಮತಗಳ ಅಂತರದ ವಿಜಯ ಸಾಧಿಸಿದ್ದಾರೆ.

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ: Mandya Election Result 2024 : ಮಂಡ್ಯದಲ್ಲಿ ಕುಮಾರ ಸ್ವಾಮಿಗೆ ಭರ್ಜರಿ ಗೆಲುವು

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

ಕ್ಷೇತ್ರದ ವಿಶೇಷತೆಯೇನು?

ಕಾಂಗ್ರೆಸ್ ಪ್ರಾಬಲ್ಯದ ಮೈಸೂರು ಲೋಕ ಸಭಾ ಕ್ಷೇತ್ರವು (Mysore lok sabha Constituency) ಕಳೆದ ಚುನಾವಣೆಗಳಲ್ಲಿ ಸಂಪೂರ್ಣ ಬದಲಾವಣೆಗೆ ಸಾಕ್ಷಿಯಾಗಿದೆ. ಪ್ರತಾಪ್ ಸಿಂಹ (Pratap Simha) ಸತತ ಎರಡು ಬಾರಿ ಗೆದ್ದಿರುವ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬಲವನ್ನು ಸಾಬೀತುಪಡಿಸಿದ್ದರು. ಅದಕ್ಕಿಂತ ಹಿಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ ಹಿಂದಿನ ಮೈಸೂರು ರಾಜಮನೆತನದ ಸದಸ್ಯರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು.

1977 ರಲ್ಲಿ ರಚನೆಯಾದ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಭಾವ ಹೊಂದಿತ್ತು. ಎಚ್.ಡಿ. ತುಳಸೀದಾಸ್, ಎಂ. ರಾಜಶೇಖರಮೂರ್ತಿ ಮತ್ತು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಂತಹ ಗಮನಾರ್ಹ ನಾಯಕರು ಇಲ್ಲಿ ಗೆದ್ದಿದ್ದರು. ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

ಕ್ಷೇತ್ರದ ವ್ಯಾಪ್ತಿಯೇನು?

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ. ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 67,65% ರಷ್ಟಿದೆ. ಸುಮಾರು 977500 ನಗರ ಮತದಾರರು 51.6% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಸುಮಾರು 13.9% ರಷ್ಟಿದ್ದಾರೆ.

ಇದನ್ನೂ ಓದಿ | Tumkur Result 2024 : ತುಮಕೂರಿನಲ್ಲಿ ಸೋಮಣ್ಣಗೆ ಗೆಲುವು, ಕಾಂಗ್ರೆಸ್​ಗೆ ಹಿನ್ನಡೆ

ಬೌಗೋಳಿಕ ಗಡಿಗಳು

ಮೈಸೂರು ಲೋಕಸಭೆ ಕ್ಷೇತ್ರ ಭಾರತದ ದಕ್ಷಿಣ ಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿದೆ. ಈ ಸ್ಥಾನವು ಕರ್ನಾಟಕದ ಕೊಡಗು, ಮೈಸೂರು ಜಿಲ್ಲೆಗಳನ್ನು ಒಳಗೊಂಡಿದೆ.

Continue Reading

ಕೊಪ್ಪಳ

Koppal Election Result 2024: ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ್‌ ಹಿಟ್ನಾಳ್‌ ಜಯಭೇರಿ

Koppal Election Result 2024: ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಸವರಾಜ್‌ ಕ್ಯಾವಟರ್‌ ಅವರು ಇದೇ ಮೊದಲ ಬಾರಿಗೆ ಚುನಾವಣೆ ರಾಜಕೀಯಕ್ಕೆ ಧುಮುಕಿದ್ದಾರೆ. ರಾಜಶೇಖರ್‌ ಹಿಟ್ನಾಳ್‌ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಸಹೋದರ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ಕೊಪ್ಪಳ ಕ್ಷೇತ್ರದ ಶಾಸಕರಾಗಿದ್ದಾರೆ. ಮಹಿಳೆಯರ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳಿವೆ. ಹಾಗಾಗಿ, ಕೊಪ್ಪಳದ ಲೋಕಸಭೆ ಚುನಾವಣೆಯು ಕುತೂಹಲ ಕೆರಳಿಸಿತ್ತು. ಈಗ ಕಾಂಗ್ರೆಸ್‌ ಗೆಲುವಿನ ನಗೆ ಬೀರಿದೆ.

VISTARANEWS.COM


on

Koppal Election Result 2024
Koo

ಕೊಪ್ಪಳ: ಸತತ ಮೂರು ಬಾರಿ ಸೋಲನುಭವಿಸಿದ್ದ ಕಾಂಗ್ರೆಸ್‌ಗೆ ಈ ಬಾರಿ ಕೊಪ್ಪಳ ಲೋಕಸಭೆ ಕ್ಷೇತ್ರದಲ್ಲಿ (Koppal Election Result 2024) ಗೆಲುವಿನ ಸಿಹಿ ಸಿಕ್ಕಿದೆ. ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಕೊಪ್ಪಳ ಮಾಜಿ ಶಾಸಕ ಕೆ. ಬಸವರಾಜ್‌ ಹಿಟ್ನಾಳ್‌ ಅವರ ಪುತ್ರ ಕೆ. ರಾಜಶೇಖರ್‌ ಹಿಟ್ನಾಳ್‌ (Rajashekar Hitnal) ಅವರು ಬಿಜೆಪಿ ಡಾ.ಬಸವರಾಜ್‌ ಕ್ಯಾವಟರ್‌ (Dr Basavaraj Kyavator) ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಅವರು ಬಿಜೆಪಿಯ ಭದ್ರಕೋಟೆಯನ್ನು ಭೇದಿಸಿದ್ದಾರೆ.

ವೃತ್ತಿಯಲ್ಲಿ ವೈದ್ಯರಾಗಿರುವ ಡಾ.ಬಸವರಾಜ್‌ ಕ್ಯಾವಟರ್‌ ಅವರು ಇದೇ ಮೊದಲ ಬಾರಿಗೆ ಚುನಾವಣೆ ರಾಜಕೀಯಕ್ಕೆ ಧುಮುಕಿದ್ದಾರೆ. ಖಂಡಿತವಾಗಿಯೂ ನರೇಂದ್ರ ಮೋದಿ ಅವರ ಅಲೆಯು ಕೆಲಸ ಮಾಡಲಿದೆ ಎಂದು ಹೇಳಲಾಗಿತ್ತು. ಆದರೆ, ಟಿಕೆಟ್‌ ವಂಚಿತ ಸಂಗಣ್ಣ ಕರಡಿ ಅವರು ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಬಸವರಾಜ್‌ ಕ್ಯಾವಟರ್‌ ಅವರಿಗೆ ನುಂಗಲಾರದ ತುತ್ತಾಗಿತ್ತು. ಹಾಗಾಗಿ, ಕೊಪ್ಪಳ ಲೋಕಸಭೆ ಚುನಾವಣೆ ಫಲಿತಾಂಶವು ಕುತೂಹಲ ಕೆರಳಿಸಿತ್ತು. ಆದರೆ, ಕಾಂಗ್ರೆಸ್‌ ಕೊನೆಗೂ ಗೆಲುವು ಸಾಧಿಸಿದೆ.

Koppal Lok Sabha Constituency

ರಾಜಶೇಖರ್‌ ಹಿಟ್ನಾಳ್‌ ಅವರು ಎರಡು ಬಾರಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಇವರ ಸಹೋದರ ಕೆ. ರಾಘವೇಂದ್ರ ಹಿಟ್ನಾಳ್‌ ಅವರು ಕೊಪ್ಪಳ ಕ್ಷೇತ್ರದ ಶಾಸಕರಾಗಿದ್ದಾರೆ. ಮಹಿಳೆಯರ ಮತಗಳನ್ನು ಸೆಳೆಯಲು ಗ್ಯಾರಂಟಿ ಯೋಜನೆಗಳಿದ್ದವು. ಡಾ.ಬಸವರಾಜ್‌ ಕ್ಯಾವಟರ್‌ ಅವರ ರಾಜಕೀಯ ಅನುಭವದ ಕೊರತೆಯನ್ನು ಪ್ಲಸ್‌ ಪಾಯಿಂಟ್ ಅನ್ನಾಗಿ ಮಾಡಿಕೊಂಡಿದ್ದರು. ಅದು ಈಗ ಅವರಿಗೆ ಫಲ ಸಿಕ್ಕಿದೆ.

2014, 2019ರ ಫಲಿತಾಂಶ ಏನಾಗಿತ್ತು?

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಸಂಗಣ್ಣ ಕರಡಿ ವಿರುದ್ಧ ಕಾಂಗ್ರೆಸ್‌ ಮಾಜಿ ಶಾಸಕ ಬಸವರಾಜ್‌ ಹಿಟ್ನಾಳ್‌ ಸೋಲನುಭವಿಸಿದ್ದರು. ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಬಸವರಾಜ್‌ ಹಿಟ್ನಾಳ್‌ ಅವರ ಪುತ್ರ ರಾಜಶೇಖರ್‌ ಹಿಟ್ನಾಳ್‌ ಅವರು ಸ್ಪರ್ಧಿಸಿ, ಬಿಜೆಪಿಯ ಸಂಗಣ್ಣ ಕರಡಿ ಅವರ ವಿರುದ್ಧವೇ ಪರಾಭವಗೊಂಡಿದ್ದರು. ಸುಮಾರು 38 ಸಾವಿರ ಮತಗಳಿಂದ ರಾಜಶೇಖರ್‌ ಹಿಟ್ನಾಳ್‌ ಅವರು ಸೋಲನುಭವಿಸಿದ್ದರು.

ಇದನ್ನೂ ಓದಿ: Bagalkot Election Result 2024: ಬಾಗಲಕೋಟೆಯಲ್ಲಿ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ಗೆ ಜಯ

Continue Reading

ಚಿಕ್ಕೋಡಿ

Chikkodi Election Result 2024: ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿ’ಹೋಳಿ’; ಜೊಲ್ಲೆಗೆ ಸೋಲು

Chikkodi Election Result 2024: ಎಂಬಿಎ ಪದವೀಧರೆ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದರೂ ಅಪ್ಪ ಸತೀಶ್‌ ಜಾರಕಿಹೊಳಿ ಅವರ ರಾಜಕೀಯ ಅನುಭವವು ಜತೆಗಿತ್ತು. ಮತ್ತೊಂದೆಡೆ, ಅಣ್ಣಾಸಾಹೇಬ್‌ ಜೊಲ್ಲೆ ಅವರು ಭಿನ್ನಮತವನ್ನು ತಡೆದಿದ್ದು, ಮೋದಿ ಅವರ ಅಲೆ, ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇ ಅವರಿಗೆ ಸಕಾರಾತ್ಮಕವಾಗಲಿವೆ ಎಂದು ರಾಜಕೀಯ ತಜ್ಞರು ಹೇಳಿದ್ದರು.

VISTARANEWS.COM


on

Chikkodi Election Result 2024
Koo

ಚಿಕ್ಕೋಡಿ: ರಾಜ್ಯದ ಗಮನ ಸೆಳೆದಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಜಯಭೇರಿ (Chikkodi Election Result 2024) ಬಾರಿಸಿದೆ. ಬಿಜೆಪಿಯ ಅಣ್ಣಾಸಾಹೇಬ್‌ ಜೊಲ್ಲೆ (Annasaheb Jolle) ಅವರ ವಿರುದ್ಧ ಸಚಿವ ಸತೀಶ್‌ ಜಾರಕಿಹೊಳಿ ಅವರ ಪುತ್ರಿ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ (Priyanka Jarkiholi) ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಆ ಮೂಲಕ ಯುವ ನಾಯಕಿ ಪ್ರಯಾಂಕಾ ಜಾರಕಿಹೊಳಿ ಅವರು ಬಿಜೆಪಿಯ ಭದ್ರಕೋಟೆಯನ್ನು ಭೇದಿಸುವ ಜತೆಗೆ ರಾಜ್ಯದ ಗಮನ ಸೆಳೆದಿದ್ದಾರೆ. ಪ್ರಿಯಾಂಕಾ ಜಾರಕಿಹೊಳಿ ಅವರು 96,253 ಮತಗಳ ಅಂತರದಿಂದ ಜಯಿಸಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ 6,80,179 ಮತ ಗಳಿಸಿದರೆ, ಬಿಜೆಪಿ ಅಭ್ಯರ್ಥಿ 5,83,926 ಮತಗಳನ್ನು ಪಡೆದರು.

ಹಾಲಿ ಸಂಸದರೂ ಆಗಿರುವ ಅಣ್ಣಾ ಸಾಹೇಬ್‌ ಜೊಲ್ಲೆ ಅವರಿಗೆ ಟಿಕೆಟ್‌ ತಪ್ಪಿಸಿ, ತಾವು ಟಿಕೆಟ್‌ ಗಿಟ್ಟಿಸಿಕೊಳ್ಳಲು ರಮೇಶ್‌ ಕತ್ತಿ ಅವರು ತಂತ್ರ ಹೆಣೆದರೂ ಅದು ಸಫಲವಾಗಿಲ್ಲ. ಬಳಿಕ ರಮೇಶ್‌ ಕತ್ತಿ ಅವರು ಕಾಂಗ್ರೆಸ್‌ ಸೇರುತ್ತಾರೆ ಎಂಬ ಮಾತುಗಳು ಕೇಳಿಬಂದರೂ, ಅದು ಸಫಲವಾಗಲಿಲ್ಲ. ಅಷ್ಟರಮಟ್ಟಿಗೆ, ಅಣ್ಣಾಸಾಹೇಬ್‌ ಜೊಲ್ಲೆ ಅವರು ಭಿನ್ನಮತವನ್ನು ತಡೆದಿದ್ದು, ಮೋದಿ ಅವರ ಅಲೆ, ಕ್ಷೇತ್ರಕ್ಕೆ ಸಿಕ್ಕ ಯೋಜನೆಗಳೇ ಅವರಿಗೆ ಸಕಾರಾತ್ಮಕವಾಗಲಿವೆ ಎಂದು ರಾಜಕೀಯ ತಜ್ಞರು ಹೇಳುತ್ತಿದ್ದರು. ಅಣ್ಣಾ ಸಾಹೇಬ್‌ ಜೊಲ್ಲೆ ಅವರ ಪತ್ನಿ ಶಶಿಕಲಾ ಜೊಲ್ಲೆ ಅವರು ಶಾಸಕಿ ಆಗಿರುವ ಕಾರಣ ಅವರ ಪ್ರಾಬಲ್ಯ ಜಾಸ್ತಿ ಇತ್ತು. ಇದೆಲ್ಲವನ್ನು ಪ್ರಿಯಾಂಕಾ ಜಾರಕಿಹೊಳಿ ಅವರು ಹಿಮ್ಮೆಟ್ಟಿ ನಿಂತಿದ್ದಾರೆ.

ಎಂಬಿಎ ಪದವೀಧರೆ, ಯುವ ನಾಯಕಿ ಪ್ರಿಯಾಂಕಾ ಜಾರಕಿಹೊಳಿ ಅವರು ಮೊದಲ ಬಾರಿಗೆ ಸ್ಪರ್ಧಿಸಿದ್ದರೂ ಅಪ್ಪ ಸತೀಶ್‌ ಜಾರಕಿಹೊಳಿ ಅವರ ರಾಜಕೀಯ ಅನುಭವವು ಜತೆಗಿತ್ತು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಜಾರಕಿಹೊಳಿ ಅವರು ಅಪ್ಪನ ಗೆಲುವಾಗಿ ಓಡಾಟ ನಡೆಸಿದ್ದರು. ಇನ್ನು, ಚಿಕ್ಕೋಡಿಯಲ್ಲಿ ಲಿಂಗಾಯತ ಸಮುದಾದಯವರ ಮತಗಳೇ ನಿರ್ಣಾಯಕವಾಗಿದ್ದವು. ಸುಮಾರು 4.10 ಲಕ್ಷ ಲಿಂಗಾಯತ ಮತಗಳಿದ್ದು, ಪರಿಶಿಷ್ಟ ಜಾತಿ 1.65 ಲಕ್ಷ, ಪರಿಶಿಷ್ಟ ಪಂಗಡ 9೦, ಮುಸ್ಲಿಮರ 1.80 ಲಕ್ಷ ಮತಗಳು ಕೂಡ ನಿರ್ಣಾಯಕವಾಗಿದ್ದವು.

2019, 2014ರ ಫಲಿತಾಂಶ ಏನಾಗಿತ್ತು?

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ಅಣ್ಣಾ ಸಾಹೇಬ್‌ ಜೊಲ್ಲೆ ಅವರು ಪ್ರಕಾಶ್‌ ಹುಕ್ಕೇರಿ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಆದರೆ, 2014ರಲ್ಲಿ ನರೇಂದ್ರ ಮೋದಿ ಅವರ ಅಲೆಯ ಮಧ್ಯೆಯೂ ಕಾಂಗ್ರೆಸ್‌ನ ಪ್ರಕಾಶ್‌ ಹುಕ್ಕೇರಿ ಅವರು ಬಿಜೆಪಿಯ ರಮೇಶ್‌ ಕತ್ತಿ ವಿರುದ್ಧ ಗೆಲುವು ಸಾಧಿಸಿದ್ದರು. ಇನ್ನು 2009ರಲ್ಲಿ ರಮೇಶ್‌ ಕತ್ತಿ, 2004ರಲ್ಲಿ ರಮೇಶ್‌ ಜಿಗಜಿಣಗಿ ಅವರು ಚಿಕ್ಕೋಡಿ ಕ್ಷೇತ್ರದ ಸಂಸದರಾಗಿ ಆಯ್ಕೆಯಾಗಿದ್ದರು.

ಇದನ್ನೂ ಓದಿ: Election Results 2024: 5 ಲಕ್ಷ ಮತಗಳಿಂದ ಗೆದ್ದು ಬೀಗಿದ ಅಮಿತ್‌ ಶಾ; ಬಿಜೆಪಿಗೆ ಮೊದಲ ಗೆಲುವು

Continue Reading

ದಾವಣಗೆರೆ

Davangere Election Result 2024: ದಾವಣಗೆರೆಯಲ್ಲಿ ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್‌ಗೆ ಗೆಲುವು

Davangere Election Result 2024: ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಯಾರು ಗೆದ್ದರೂ ಇತಿಹಾಸ ಸೃಷ್ಟಿಯಾಗಲಿದೆ ಎಂದೇ ಹೇಳಲಾಗುತ್ತಿತ್ತು. ಕಾಂಗ್ರೆಸ್‌ನಿಂದ ಪ್ರಭಾ ಮಲ್ಲಿಕಾರ್ಜುನ್‌, ಬಿಜೆಪಿಯಿಂದ ಗಾಯತ್ರಿ ಸಿದ್ದೇಶ್ವರ್‌ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಜಿ.ಬಿ.ವಿನಯ್‌ ಕುಮಾರ್‌ ಅವರು ಕಣಕ್ಕಿಳಿದಿದ್ದು, ಯಾರು ಗೆಲುವು ಸಾಧಿಸಲಿದ್ದಾರೆ ಎಂಬ ಕುತೂಹಲ ಜಾಸ್ತಿಯಾಗಿತ್ತು. ಈಗ ಪ್ರಭಾ ಮಲ್ಲಿಕಾರ್ಜುನ್‌ ಅವರು ಗೆಲುವಿನ ನಗೆ ಬೀರಿದ್ದಾರೆ.

VISTARANEWS.COM


on

Davangere Election Result 2024
Koo

ದಾವಣಗೆರೆ: ಬೆಣ್ಣೆ ದೋಸೆಗೆ ಹೆಸರುವಾಸಿಯಾಗಿರವ ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ (Davangere Election Result 2024) ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್‌ ಅವರು ಗೆಲುವು ಸಾಧಿಸಿದ್ದಾರೆ. ಆ ಮೂಲಕ ದಾವಣಗೆರೆ ಜಿಲ್ಲೆಯ ಮೇಲೆ ಶಾಮನೂರು ಶಿವಶಂಕರಪ್ಪ ಅವರ ಕುಟುಂಬವು ಸಂಪೂರ್ಣ ಹಿಡಿತ ಸಧಿಸಿದಂತಾಗಿದೆ. ಬಿಜೆಪಿಯ ಗಾಯತ್ರಿ ಸಿದ್ದೇಶ್ವರ್‌ ಅವರು ದಾವಣಗೆರೆ ಲೋಕಸಭೆ ಕ್ಷೇತ್ರದಲ್ಲಿ ಸೋಲನುಭವಿಸಿದ್ದು, ಭಾರಿ ಹಿನ್ನಡೆಯಾದಂತಾಗಿದೆ.

ಜಿ.ಎಂ.ಸಿದ್ದೇಶ್ವರ್‌ ಅವರು ಅನಾರೋಗ್ಯದ ಮಧ್ಯೆಯೂ ಪ್ರಚಾರದಲ್ಲಿ ತೊಡಗಿಕೊಂಡಿದ್ದರು. ನರೇಂದ್ರ ಮೋದಿ ಅವರ ಅಲೆಯು ಕೂಡ ಕ್ಷೇತ್ರದಲ್ಲಿತ್ತು. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಮಧ್ಯಸ್ಥಿಕೆಯಿಂದಾಗಿ ಕ್ಷೇತ್ರದಲ್ಲಿ ಭುಗಿಲೆದ್ದಿದ್ದ ಭಿನ್ನಮತವು ಶಮನವಾಗಿತ್ತು. ಹಾಗಾಗಿ, ಗಾಯತ್ರಿ ಸಿದ್ದೇಶ್ವರ್‌ ಅವರಿಗೆ ಗೆಲುವು ಸಿಕ್ಕರೂ ಅಚ್ಚರಿ ಇಲ್ಲ ಎಂದು ಹೇಳಲಾಗುತ್ತಿತ್ತು. ಆದರೂ ಕ್ಷೇತ್ರದಲ್ಲಿ ಕಮಲ ಪಾಳಯಕ್ಕೆ ಹಿನ್ನಡೆಯಾದಂತಾಗಿದೆ.

ದಾವಣಗೆರೆ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ವರ್ಚಸ್ಸಿದೆ. ಇವರ ಪುತ್ರ ಎಸ್‌.ಎಸ್‌.ಮಲ್ಲಿಕಾರ್ಜುನ್‌ ಸಚಿವರೂ ಆಗಿದ್ದಾರೆ. ಲಿಂಗಾಯತ ಮತಗಳ ಮೇಲೆ ಇವರ ಕುಟುಂಬದ ಹಿಡಿತವಿದೆ. ಡಾ.ಪ್ರಭಾ ಮಲ್ಲಿಕಾರ್ಜುನ್‌ ಅವರು ಕಳೆದ ಒಂದು ವರ್ಷದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಅವರು ಜನರಿಗೆ ಹತ್ತಿರವಾಗಿದ್ದರು. ಮಾವ, ಪತಿಯ ಬಲದಿಂದ, ಸಮಾಜ ಸೇವೆ, ಕಾಂಗ್ರೆಸ್‌ ಗ್ಯಾರಂಟಿಗಳ ಫಲವಾಗಿ ಪ್ರಭಾ ಮಲ್ಲಿಕಾರ್ಜುನ್‌ ಅವರು ಮುನ್ನಡೆಯ ವಿಶ್ವಾಸದಲ್ಲಿದ್ದರು. ಆದರೆ, ಜಿ.ಬಿ.ವಿನಯ್‌ ಕುಮಾರ್‌ ಅವರು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿಯಾಗಿರುವುದು ಪ್ರಭಾ ಮಲ್ಲಿಕಾರ್ಜುನ್‌ ಅವರಿಗೆ ತುಸು ಹಿನ್ನಡೆ ಎಂದೇ ಹೇಳಲಾಗುತ್ತಿತ್ತು. ಇದೆಲ್ಲವನ್ನೂ ಮೀರಿ ಪ್ರಭಾ ಮಲ್ಲಿಕಾರ್ಜುನ್‌ ಅವರು ಗೆಲುವು ಸಾಧಿಸಿದ್ದಾರೆ.

2019, 2014ರ ಫಲಿತಾಂಶ ಏನಾಗಿತ್ತು?

2019ರಲ್ಲಿ ಬಿಜೆಪಿಯ ಜಿ.ಎಂ.ಸಿದ್ದೇಶ್ವರ್‌ ಅವರು ಕಾಂಗ್ರೆಸ್‌ನ ಎಚ್‌.ಬಿ.ಮಂಜಪ್ಪ ಅವರ ವಿರುದ್ಧ ಸುಮಾರು 1.69 ಲಕ್ಷ ಮತಗಳ ಅಂತರದಿಂದ ಗೆಲುವಿನ ನಗೆ ಬೀರಿದ್ದರು. ಕಳೆದ 4 ಲೋಕಸಭೆ ಚುನಾವಣೆಗಳಲ್ಲೂ ಬಿಜೆಪಿಯಿಂದ ಜಿ.ಎಂ.ಸಿದ್ದೇಶ್ವರ್‌ ಅವರೇ ಗೆಲುವು ಸಾಧಿಸಿದ್ದಾರೆ. 2004, 2009 ಹಾಗೂ 2014ರಲ್ಲೂ ಜಿ.ಎಂ.ಸಿದ್ದೇಶ್ವರ್‌ ಅವರೇ ಗೆಲುವು ಸಾಧಿಸಿಕೊಂಡು ಬಂದಿದ್ದಾರೆ.

ಇದನ್ನೂ ಓದಿ: Bagalkot Election Result 2024: ಬಾಗಲಕೋಟೆಯಲ್ಲಿ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ಗೆ ಜಯ

Continue Reading
Advertisement
Election Results 2024
Lok Sabha Election 202410 mins ago

Election Results 2024: ಇಂದೋರ್‌ನಲ್ಲಿ NOTAಕ್ಕೆ ಲಭಿಸಿತು ಬರೋಬ್ಬರಿ 1 ಲಕ್ಷಕ್ಕೂ ಅಧಿಕ ಮತ; ಹಿಂದಿನ ದಾಖಲೆಗಳೆಲ್ಲ ಉಡೀಸ್‌

Karnataka election results 2024
ಕರ್ನಾಟಕ23 mins ago

Karnataka Election Results 2024: ಮೈಸೂರಿನಲ್ಲಿ ಮೈತ್ರಿ ಮುಂದೆ ಮಂಡಿಯೂರಿದ ಸಿದ್ದರಾಮಯ್ಯ ತಂತ್ರಗಾರಿಕೆ

Koppal Election Result 2024
ಕೊಪ್ಪಳ23 mins ago

Koppal Election Result 2024: ಕೊಪ್ಪಳದಲ್ಲಿ ಕಾಂಗ್ರೆಸ್‌ನ ರಾಜಶೇಖರ್‌ ಹಿಟ್ನಾಳ್‌ ಜಯಭೇರಿ

Chikkodi Election Result 2024
ಚಿಕ್ಕೋಡಿ35 mins ago

Chikkodi Election Result 2024: ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಜಾರಕಿ’ಹೋಳಿ’; ಜೊಲ್ಲೆಗೆ ಸೋಲು

Davangere Election Result 2024
ದಾವಣಗೆರೆ42 mins ago

Davangere Election Result 2024: ದಾವಣಗೆರೆಯಲ್ಲಿ ಕಾಂಗ್ರೆಸ್‌ನ ಪ್ರಭಾ ಮಲ್ಲಿಕಾರ್ಜುನ್‌ಗೆ ಗೆಲುವು

Chitrdurga Result 2024
ಪ್ರಮುಖ ಸುದ್ದಿ46 mins ago

Chitrdurga Result 2024 : ಚಿತ್ರದುರ್ಗ ಕ್ಷೇತ್ರದಲ್ಲಿ ಗೋವಿಂದ ಕಾರಜೋಳಗೆ ಗೆಲುವು

Election Results 2024
ದೇಶ46 mins ago

Election results 2024: ಜಮ್ಮು-ಕಾಶ್ಮೀರದಲ್ಲಿ ಮಾಜಿ ಸಿಎಂಗಳಿಗೆ ಹೀನಾಯ ಸೋಲು

election results 2024 Congress party
ಪ್ರಮುಖ ಸುದ್ದಿ50 mins ago

Election Results 2024: 2014ರ ಬಳಿಕ ಮೊದಲ ಬಾರಿಗೆ ಕಾಂಗ್ರೆಸ್‌ಗೆ 100 ಸೀಟು, ಮತ್ತೆ ಚಿಗುರಿದ ಪುರಾತನ ಪಕ್ಷ!

Bagalkot Election Result 2024
ಬಾಗಲಕೋಟೆ52 mins ago

Bagalkot Election Result 2024: ಬಾಗಲಕೋಟೆಯಲ್ಲಿ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ಗೆ ಜಯ

Tumkur Result 2024
ಪ್ರಮುಖ ಸುದ್ದಿ52 mins ago

Tumkur Result 2024 : ತುಮಕೂರಿನಲ್ಲಿ ಸೋಮಣ್ಣಗೆ ಗೆಲುವು, ಕಾಂಗ್ರೆಸ್​ಗೆ ಹಿನ್ನಡೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ7 hours ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ23 hours ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ23 hours ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ2 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು3 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ5 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ7 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌