ಬೆಂಗಳೂರು: ಹೈಕೋರ್ಟ್ ನಿರ್ದೇಶನದಂತೆ ಕೆರೆಗಳ ಒತ್ತುವರಿ ತೆರವಿಗೆ 16 ವಾರಗಳ ಕ್ರಿಯಾಯೋಜನೆ ತಯಾರಿಸಲಾಗಿದೆ. ಕೆಂಪಾಂಬುದಿ ಕೆರೆಯ ಸರ್ವೆ ಕಾರ್ಯ ಪ್ರಗತಿಯಲ್ಲಿದ್ದು, ಶೀಘ್ರದಲ್ಲೇ ನ್ಯಾಯಾಲಯದ ಆದೇಶದಂತೆ ಒತ್ತುವರಿ ತೆರವು ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಿಧಾನಸಭೆಯಲ್ಲಿ (Assembly Session 2024) ತಿಳಿಸಿದ್ದಾರೆ.
ಶಾಸಕ ರವಿಸುಬ್ರಮಣ್ಯ ಅವರ ಗಮನ ಸೆಳೆವ ಸೂಚನೆಗೆ ಉತ್ತರಿಸಿದ ಡಿಸಿಎಂ ಅವರು, ಕೆಂಪಾಂಬುದಿ ಕೆರೆಗೆ ರಾಜಕಾಲುವೆ ಮೂಲಕ ಹರಿದು ಬರುವ ತ್ಯಾಜ್ಯ ನೀರನ್ನು ತಡೆಗಟ್ಟಲು ತಿರುವುಗಾಲುವೆ ನಿರ್ಮಿಸಲಾಗಿದೆ. ಆದರೆ ಹೆಚ್ಚು ಮಳೆ ಬಂದಾಗ ಮ್ಯಾನ್ ಹೋಲ್‌ಗಳಿಂದ ಉಕ್ಕಿ ಹರಿಯುವ ನೀರು ರಾಜಕಾಲುವೆ ಮೂಲಕ ಕೆರೆ ಸೇರುತ್ತಿದೆ. ಇದನ್ನು ಬಿಡಬ್ಲ್ಯೂಎಸ್‌ಎಸ್‌ಬಿ ಗಮನಕ್ಕೆ ತಂದು ತ್ಯಾಜ್ಯ ನೀರನ್ನು ಸಾಗಿಸುವ ಕೊಳವೆಗಳ ಸಾಮರ್ಥ್ಯ ಹೆಚ್ಚಿಸುವ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ಇದನ್ನೂ ಓದಿ: 7th Pay Commission: 7ನೇ ವೇತನ ಆಯೋಗದ ವರದಿ ಜಾರಿಗೆ ಅಧಿಕೃತ ಆದೇಶ; ಪರಿಷ್ಕೃತ ವೇತನ ಶ್ರೇಣಿ ಪಟ್ಟಿ ಇಲ್ಲಿದೆ
ಕೆರೆಯ ಕೆಳಭಾಗದಲ್ಲಿ 10 ಲಕ್ಷ ಲೀ. ಸಾಮರ್ಥ್ಯದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡುತ್ತಿದ್ದು, 2025 ರ ವೇಳೆಗೆ ಕಾಮಗಾರಿ ಮುಗಿಯಲಿದೆ. ಸಂಸ್ಕರಿಸಿದ ನೀರನ್ನು ಕೆರೆಗೆ ಹರಿಸಿ ಪುನರುಜ್ಜೀವನಗೊಳಿಸುವ ಉದ್ದೇಶವಿದೆ ಎಂದು ಅವರು ಹೇಳಿದ್ದಾರೆ.
ರಸ್ತೆ ವಿಸ್ತರಣೆಗೆ ಶೀಘ್ರ ಭೂಸ್ವಾಧೀನ
ಗೊಟ್ಟಿಗೆರೆ ಗ್ರಾಮದ ಸರ್ವೆ ನಂ 98/3 ಮತ್ತು 98/7 ರಲ್ಲಿ ಭಾಗಶಃ ಹಾದು ಹೋಗಲಿದ್ದು ಶೀಘ್ರದಲ್ಲೇ ಭೂಸ್ವಾಧೀನ ಪ್ರಕ್ರಿಯೆಯನ್ನು ಅಂತಿಮಗೊಳಿಸಿ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಇದನ್ನೂ ಓದಿ: Kannada New Movie: ಗಣೇಶ್ ಅಭಿನಯದ ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ʼದ್ವಾಪರ ದಾಟುತʼ ಹಾಡು ರಿಲೀಸ್!
ಬನ್ನೇರುಘಟ್ಟ ಮತ್ತು ಕನಕಪುರ ಮುಖ್ಯ ರಸ್ತೆಯ ಮಧ್ಯೆ ಗೊಟ್ಟಿಗೆರೆ ಬಳಿ 200 ಮೀ ಉದ್ದದ ರಸ್ತೆಯು ಕೇವಲ 20 ಅಡಿಯಿದ್ದು ಸಾಕಷ್ಟು ಸಂಚಾರ ದಟ್ಟಣೆ ಉಂಟಾಗುತ್ತಿದೆ ಎಂಬ ಕೃಷ್ಣಪ್ಪ ಅವರ ಗಮನ ಸೆಳೆವ ಸೂಚನೆಗೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಬೆಂಗಳೂರು ದಕ್ಷಿಣ ತಾಲೂಕಿನ ಉತ್ತರಹಳ್ಳಿಯ ಗೊಟ್ಟಿಗೆರೆ ಗ್ರಾಮದ ಸರ್ವೆ ನಂ 98/3 ಅಲ್ಲಿನ 0.09 ಗುಂಟೆ ಮತ್ತು 98/7 ರಲ್ಲಿನ 0.07 ಗುಂಟೆ ಜಮೀನನ್ನು ರಸ್ತೆ ವಿಸ್ತರಣೆಗೆ ಸ್ವಾಧೀನ ಮಾಡಿಕೊಳ್ಳಲಾಗುವುದು. 98/7 ರಲ್ಲಿನ 0- 24 ಗುಂಟೆ ಜಮೀನು ಅಂಜನಾಪುರ ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನಗೊಂಡಿದೆ” ಎಂದು ತಿಳಿಸಿದ್ದಾರೆ.