Site icon Vistara News

Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

Assembly Session Job reservation for Kannadigas in private sectors Cabinet meeting approves bill

ಬೆಂಗಳೂರು: ಖಾಸಗಿ ಕ್ಷೇತ್ರಗಳಲ್ಲಿ ದುಡಿಯುವ ಕನ್ನಡಿಗರಿಗೆ ಉದ್ಯೋಗ ಮೀಸಲು ನೀಡುವ ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಭೆಯಲ್ಲಿ (Assembly Session) ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಇದೇ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯುವುದಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

‘ದಿ ಕರ್ನಾಟಕ ಸ್ಟೇಟ್ ಎಂಪ್ಲಾಯ್ಮೆಂಟ್ ಆಫ್ ಲೋಕಲ್ ಕ್ಯಾಡಿಡೇಟ್ಸ್ ಇನ್ ದಿ ಇಂಡಸ್ಟ್ರೀಸ್, ಫ್ಯಾಕ್ಟರೀಸ್ ಆ್ಯಂಡ್ ಲೋಕಲ್ ಎಷ್ಟಾಬ್ಲಿಷ್‌ಮೆಂಟ್ ಬಿಲ್-2024 ವಿಧೇಯಕದಂತೆ ಮ್ಯಾನೇಜ್‌ಮೆಂಟ್ ಹುದ್ದೆಗಳು ಶೇ.50 ಹಾಗೂ ನಾನ್ ಮ್ಯಾನೇಜ್‌ಮೆಂಟ್ ಶೇ.75 ರಷ್ಟು ಹುದ್ದೆಗಳು ಸ್ಥಳೀಯರಿಗೆ ಮೀಸಲಿಡಲಾಗುತ್ತದೆ.

ಇದನ್ನೂ ಓದಿ: Assembly Session: ಕಾರ್ಮಿಕ ಇಲಾಖೆಯಿಂದ ಸಿನಿ ಕಾರ್ಮಿಕರಿಗೆ ಭರ್ಜರಿ ಗಿಫ್ಟ್!

ಕರ್ನಾಟಕದಲ್ಲಿಯೇ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷದಿಂದ ವಾಸಿಸುತ್ತಿರುವವರು, ಕನ್ನಡ ಓದಲು, ಬರೆಯಲು ಮತ್ತು ಮಾತನಾಡಲು ಬರುವವರು, ನೋಡಲ್ ಏಜೆನ್ಸಿ ನಡೆಸುವ ಕನ್ನಡ ಪರೀಕ್ಷೆಯಲ್ಲಿ ಪಾಸಾದವರನ್ನು ಸ್ಥಳೀಯರು ಎಂದು ಪರಿಗಣಿಸಲಾಗುವುದು. ಮ್ಯಾನೇಜ್‌ಮೆಂಟ್‌ನಲ್ಲಿ ಸೂಪರ್‌ವೈಸ‌ರ್, ಮ್ಯಾನೇಜಿರಿಯಲ್, ಟೆಕ್ನಿಕಲ್, ಆಪರೇಷನಲ್, ಆಡಳಿತ ಸೇರಿ ಉನ್ನತ ಹುದ್ದೆಗಳಲ್ಲಿ ಶೇ.50 ಉದ್ಯೋಗ ಸ್ಥಳೀಯರಿಗೆ ಮೀಸಲಿಡಲಾಗುವುದು. ಇನ್ನು ನಾನ್-ಮ್ಯಾನೇಜ್‌ಮೆಂಟ್ನಲ್ಲಿ ಕ್ಲರ್ಕ್‌ಗಳು, ಕೌಶಲ, ಕೌಶಲ ರಹಿತ ಹಾಗೂ ಅರೆಕೌಶಲ, ಗುತ್ತಿಗೆ ನೌಕರ ಹಾಗೂ ಐಟಿ ಹುದ್ದೆಗಳಲ್ಲಿ ಶೇ.75 ಮೀಸಲು ಸ್ಥಳೀಯರಿಗೆ ನೀಡುವ ವಿಧೇಯಕ ಇದಾಗಿದೆ.

ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ದಂಡ ವಿಧಿಸುವ ಅಂಶವನ್ನೂ ವಿಧೇಯಕದಲ್ಲಿ ಸೇರಿಸಲಾಗಿದೆ. ಕನಿಷ್ಠ 10 ಸಾವಿರ ರೂ. ಹಾಗೂ 25 ಸಾವಿರ ರೂ.ಗಳ ವರೆಗೆ ದಂಡ ವಿಸ್ತರಣೆ ಮಾಡಲು ಅವಕಾಶ ನೀಡಲಾಗುತ್ತದೆ. ಆ ನಂತರವೂ ಉದ್ಯೋಗ ನೀಡದೇ ಹೋದರೆ ದಿನಕ್ಕೆ 100 ರೂ. ದಂಡ ವಿಧಿಸಲಾಗುತ್ತದೆ.

ಇದನ್ನೂ ಓದಿ: Lakshmi Hebbalkar: ವಿಶೇಷ ಶಾಲೆಗಳ ಶಿಕ್ಷಕರ ವೇತನ ಪರಿಷ್ಕರಣೆಗೆ ಅಗತ್ಯ ಕ್ರಮ: ಹೆಬ್ಬಾಳಕರ್ ಭರವಸೆ

ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗಬೇಕು. ಈ ನಿಟ್ಟಿನಲ್ಲಿ ವಿಧೇಯಕವು ಮಹತ್ವದ ಪಾತ್ರ ವಹಿಸಲಿದೆ. ಕನ್ನಡಿಗ ನೌಕರರ ಜೀವನ ಭದ್ರತೆಗೆ ಇದು ಸಹಾಯವಾಗಲಿದೆ ಎಂದು ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ತಿಳಿಸಿದ್ದಾರೆ.

Exit mobile version