Site icon Vistara News

Assembly Session: ಲಾರ್ವಾ ಸರ್ವೇ; ಜಿಪಿಎಸ್ ಇಲ್ಲದ ಹಳೆ ಫೋಟೋ ತೋರಿಸಿ ಕೋಟ್ಯಂತರ ರೂ. ಮೋಸ; ಶರವಣ ಆರೋಪ

Larva survey Show the old photo without GPS and get crores of rupees to the government Cheating Alleged by MLC TA Sharavana

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳು ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ಶೂನ್ಯ ವೇಳೆಯಲ್ಲಿ ವಿಧಾನ ಪರಿಷತ್ ಸದಸ್ಯ ಟಿ. ಎ. ಶರವಣ (Assembly Session) ಪ್ರಸ್ತಾಪಿಸಿದರು.

ಇತ್ತೀಚಿಗೆ ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಉಲ್ಬಣಗೊಳ್ಳುತ್ತಿರುವುದು ಜನರಲ್ಲಿ ಭಯ ಹುಟ್ಟಿಸುತ್ತಿದೆ. ಮಳೆಗಾಲದಲ್ಲಿ ಸೊಳ್ಳೆಗಳ ಸಂಖ್ಯೆ ಹೆಚ್ಚುವುದರಿಂದ ಡೆಂಗ್ಯೂ, ಮಲೇರಿಯಾ, ಚಿಕನ್‌ಗುನ್ಯಾದಂತಹ ರೋಗಗಳು ಜಾಸ್ತಿಯಾಗುತ್ತವೆ. ಈ ರೋಗಗಳ ನಿಯಂತ್ರಣಕ್ಕೆ ಪ್ರತಿ ವರ್ಷ ಸರ್ಕಾರ ಕೋಟ್ಯಾಂತರ ರೂಪಾಯಿಗಳನ್ನು ಖರ್ಚು ಮಾಡುತ್ತಿದೆ.

ಇದನ್ನೂ ಓದಿ: Assembly Session: ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ; ಏನೆಲ್ಲ ಅರ್ಹತೆ ಇರಬೇಕು?

ಸರ್ಕಾರಕ್ಕೆ ಕೋಟ್ಯಂತರ ರೂ. ಮೋಸ

ಈ ಸಮೀಕ್ಷೆ ಮಾಡಲು ಪ್ರತಿ ಮಳೆಗಾಲದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಆಶಾ ಕಾರ್ಯಕರ್ತೆಯರನ್ನೊಳಗೊಂಡ ತಂಡ ರಚಿಸಿ ಸಮೀಕ್ಷೆ ನಡೆಸಲಾಗುತ್ತದೆ. ಈ ಸಂಬಂಧ ನಗರ ಪ್ರದೇಶಗಳಲ್ಲಿ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶುಕ್ರವಾರ ಆರೋಗ್ಯ ನಿರೀಕ್ಷಣಾಧಿಕಾರಿಗಳು (HIO) ಮತ್ತು ಆರೋಗ್ಯ ಸುರಕ್ಷತಾಧಿಕಾರಿಗಳು (PHCO) ಲಾರ್ವಾ ಸಮೀಕ್ಷೆ ನಡೆಸುತ್ತಾರೆ. ಮನೆ-ಮನೆಗೆ ತೆರಳಿ ಸಮೀಕ್ಷೆ ಮಾಡಿ ಸೊಳ್ಳೆಗಳ ಉತ್ಪತ್ತಿ ತಾಣಗಳನ್ನು ನಾಶಪಡಿಸುವುದು ಈ ಸಮೀಕ್ಷೆಯ ಮೂಲ ಉದ್ದೇಶ. ಆದರೆ ಇವರಿಗೆ ಒಂದು ದಿನಕ್ಕೆ ತಲಾ ತಿಂಗಳಿಗೆ 300 ರೂ. ಗಳನ್ನು ಕೊಡಲಾಗುತ್ತಿದೆ ಎಂದು ಹೇಳಿಕೊಳ್ಳುತ್ತಿರುವ ಆರೋಗ್ಯ ಇಲಾಖೆ ಅಧಿಕಾರಿಗಳು, ಜಿಪಿಎಸ್ ಇಲ್ಲದ ಹಳೆಯ ಫೋಟೋಗಳನ್ನು ತೋರಿಸಿ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿಗಳನ್ನು ಮೋಸ ಮಾಡುತ್ತಿದ್ದಾರೆ ಎಂದು ಟಿ. ಎ. ಶರವಣ ಆರೋಪಿಸಿದರು.

ಇದನ್ನೂ ಓದಿ: Assembly Session: ಸರ್ಕಾರಕ್ಕೆ ವಾಲ್ಮೀಕಿ ಜನಾಂಗದ ಶಾಪ ತಟ್ಟಬಾರದೆಂದರೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ; ಆರ್‌. ಅಶೋಕ್‌ ಆಗ್ರಹ

ಇದು ನಾಗರಿಕರ ಆರೋಗ್ಯದ ಜತೆ ಚೆಲ್ಲಾಟ ನಡೆಸಿದಂತೆ, ಇಂತಹ ತಪ್ಪುಗಳು ಪುನರಾವರ್ತಿಸದಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಬೇಕು ಹಾಗೂ ತಪ್ಪುಗಳು ಪುನರಾವರ್ತಿಸಿದಲ್ಲಿ ಅಂತಹ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಎಂಎಲ್‌ಸಿ ಟಿ.ಎ. ಶರವಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Exit mobile version