ಹುಬ್ಬಳ್ಳಿ: ಹುಬ್ಬಳ್ಳಿಯ ಕಮರಿಪೇಟೆಯಲ್ಲಿ ರೌಡಿ ಶೀಟರ್ ರಾಜು ಕಠಾರಿ ಎಂಬಾತನ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿದೆ. ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಾವು ಬದುಕಿನ ಹೋರಾಟದಲ್ಲಿದ್ದಾನೆ ಎಂದು ತಿಳಿದುಬಂದಿದೆ.
ರೌಡಿ ಶೀಟರ್ ಆಗಿರುವ ರಾಜು ಕಠಾರಿ ಮನೆಯ ಮುಂದೆ ನಿಂತಿದ್ದಾಗ ತಂಡವೊಂದು ವಾಹನದಲ್ಲಿ ಆಗಮಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪರಾರಿಯಾಗಿದೆ. ರಾಜುವಿನ ಕುತ್ತಿಗೆ ಮತ್ತು ಹೊಟ್ಟೆಯ ಭಾಗಗಳಿಗೆ ಪ್ರಮುಖವಾಗಿ ಹೊಡೆಯಲಾಗಿದೆ.
ಕಮರಿಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನಡೆ ನಡೆದಿದ್ದು, ಹಳೇ ದ್ವೇಷದ ಹಿನ್ನೆಲೆಯಲ್ಲಿ ಕಾಂತಾ ಕಠಾರಿ ತಂಡದಿಂದ ದಾಳಿ ನಡೆದಿರುವ ಶಂಕೆ ಇದೆ. ಕಮರಿಪೇಟೆ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ರಾಜು ಕೊಠಾರಿ ಈಗ ಕಿಮ್ಸ್ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾನೆ.
ಇದನ್ನೂ ಓದಿ | ಪಿಎಚ್ಡಿ ಮಾಡಲು ಆಸ್ಟ್ರೇಲಿಯಾಕ್ಕೆ ತೆರಳಿದ್ದ ಭಾರತೀಯ ವಿದ್ಯಾರ್ಥಿ ಮೇಲೆ ಹಲ್ಲೆ; ಚೂರಿಯಿಂದ 11 ಬಾರಿ ಇರಿದ ದುಷ್ಕರ್ಮಿ