ಬೆಳಗಾವಿ: ಬೆಳಗಾವಿಯ ಟಿಳಕವಾಡಿ ಕಾಲೇಜೊಂದರಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ವಿದ್ಯಾರ್ಥಿಯೊಬ್ಬ ಕನ್ನಡ ಬಾವುಟವನ್ನು (Kannada Flag) ಪ್ರದರ್ಶನ ಮಾಡಿದ್ದಕ್ಕೆ ಆತನ ಮೇಲೆ ಸಹಪಾಠಿಗಳು ನಡೆಸಿದ ಹಲ್ಲೆಯಲ್ಲಿ ತೀವ್ರವಾಗಿ ಖಂಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಪೊಲೀಸ್ ದರ್ಪದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಎಚ್‌ಡಿಕೆ, ಇದು ಕರ್ನಾಟಕಕ್ಕೆ ಬರೆದ ದ್ರೋಹ ಎಂದು ಹೇಳಿದ್ದಾರೆ.
ಟ್ವೀಟ್‌ನಲ್ಲಿ ಖಂಡನೆ
೧. ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಉಗ್ರವಾಗಿ ಖಂಡಿಸುತ್ತೇನೆ. ದೂರು ಕೊಡಲು ಹೋದ ಆ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ.
೨. ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ಬಾಲಕನ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ. ಡಿಸಿಪಿ ಅಧಿಕಾರಿ ಆ ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ.
ಇದನ್ನೂ ಓದಿ | ರೌಡಿ ನಾಗನನ್ನು ಸೋಮಣ್ಣ ಭೇಟಿ ಆಗಿದ್ದೇಕೆ ಎಂದ ಕಾಂಗ್ರೆಸ್: ನಾಗ, ತಿಮ್ಮ ಯಾರೂ ಗೊತ್ತಿಲ್ಲ ಎಂದ ಸಚಿವ
೩. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು.
4. ಈ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು.
#ಕನ್ನಡ #ಬೆಳಗಾವಿ ಹ್ಯಾಷ್‌ಟ್ಯಾಗ್ ಬಳಸಿ ಟ್ವೀಟ್ ಮಾಡಿದ್ದು, ಆರೋಪಿಗಳ ಬಂಧನ ಹಾಗೂ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ | Voter data | ಗದಗದಲ್ಲೂ ಮತದಾರರ ಹೆಸರು ಡಿಲಿಟ್? ಬೂತ್ ಮಟ್ಟದಿಂದಲೇ ಸಮೀಕ್ಷೆ ಆರಂಭಿಸಿದ ಕಾಂಗ್ರೆಸ್