Site icon Vistara News

Moral Policing: ಮಂಗಳೂರಲ್ಲಿ ಅನ್ಯಧರ್ಮೀಯ ಜೋಡಿ ಮೇಲೆ ದಾಳಿ; ಹಲ್ಲೆಗೆ ಯತ್ನ

Moral Policing

ಮಂಗಳೂರು: ನಗರದಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ನಗರದ ಮಿಲಾಗ್ರಿಸ್ ಬಳಿ ತೆರಳುತ್ತಿದ್ದ ಅನ್ಯಧರ್ಮೀಯ ಜೋಡಿ ಮೇಲೆ ಹಿಂದು ಕಾರ್ಯಕರ್ತರು ದಾಳಿ ಮಾಡಿದ್ದಾರೆ. ಈ ವೇಳೆ ಮುಸ್ಲಿಂ ಯುವಕನ ಮೇಲೆ ಹಲ್ಲೆಗೆ (Moral Policing) ಯತ್ನಿಸಿದಾಗ, ಪೊಲೀಸರ ಮಧ್ಯಪ್ರವೇಶದಿಂದ ಪರಿಸ್ಥಿತಿ ತಿಳಿಯಾಗಿದೆ.

ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ಮುಸ್ಲಿಂ ಯುವಕನ ಜತೆ ಹಿಂದು ಯುವತಿ ಶುಕ್ರವಾರ ಸಂಜೆ ಕಾಣಿಸಿಕೊಂಡಿದ್ದಾಳೆ. ಈ ವೇಳೆ ಯುವಕನನ್ನು ಹಿಂದು ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡು, ಆತನ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಪೊಲೀಸರ ಮಧ್ಯ ಪ್ರವೇಶದಿಂದ ವಾತಾವರಣ ತಿಳಿಯಾಗಿದ್ದು, ಹಲ್ಲೆಗೆ ಯತ್ನಿಸಿದ ಕಾರ್ಯಕರ್ತರು ಸ್ಥಳದಿಂದ ಪರಾರಿಯಾಗಿದ್ದಾರೆ.

ಇದನ್ನೂ ಓದಿ | Womens Help Desk :‌ ಠಾಣೆಗಳಲ್ಲಿ ಮಹಿಳಾ ಹೆಲ್ಪ್‌ ಡೆಸ್ಕ್‌ಗೆ ಗೇಟ್‌ ಪಾಸ್‌

ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬಾಜಾರು ಎಂಬಲ್ಲಿ ಮುಸ್ಲಿಂ ವಿದ್ಯಾರ್ಥಿ ಜೋಡಿ ಮೇಲೆ ನೈತಿಕ ಪೊಲೀಸ್ ಗಿರಿ ಪ್ರಕರಣ (Moral Policing) ನಡೆದಿತ್ತು. ಆಟೋದಲ್ಲಿ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದು ಹಲ್ಲೆಗೆ ಕೆಲವರು ಯತ್ನಿಸಿದ್ದರು. ಈ ಘಟನೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಆಟೋದಲ್ಲಿ ಹೋಗುತ್ತಿದ್ದ ಮುಸ್ಲಿಂ ವಿದ್ಯಾರ್ಥಿ ಜೋಡಿಯನ್ನು ತಡೆದು, ವಿದ್ಯಾರ್ಥಿಯನ್ನು ಕೆಳಗಿಳಿಸಿ ಹಲ್ಲೆಗೆ ಯತ್ನಿಸಲಾಗಿತ್ತು. ಘಟನೆಗೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ವಿದ್ಯಾರ್ಥಿನಿಯ ತಾಯಿ ನೀಡಿದ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

ಚಾಕುವಿನಿಂದ ಇರಿದು ಪತ್ನಿಯನ್ನೇ ಕೊಲೆಗೈದ ಪತಿ

ಹಾವೇರಿ: ಚಾಕುವಿನಿಂದ ಇರಿದು ಪತ್ನಿಯನ್ನೇ ಪತಿ ಕೊಲೆಗೈದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಹೂಲಿಹಳ್ಳಿಯಲ್ಲಿ ನಡೆದಿದೆ. ಪವಿತ್ರಾ ಹಳ್ಳೇರ (22) ಕೊಲೆಯಾದ ಮಹಿಳೆ. ರೇವಣ್ಣೆಪ್ಪ ಹಳ್ಳೇರ ಕೊಲೆ ಮಾಡಿದ ಆರೋಪಿ. ಕೌಟುಂಬಿಕ ಕಲಹ ತಾರಕಕ್ಕೇರಿ ಪತ್ನಿಯನ್ನು ಪತಿ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ರಾಣೆಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Exit mobile version