ಹಾಸನ: ಮಡದಿ ಮೇಲೆ ಎರಗಿ ಮಾರಣಾಂತಿಕ ಹಲ್ಲೆ ನಡೆಸಿದ ಪತಿಯೊಬ್ಬ ಆಕೆ ಸತ್ತು ಹೋಗಿದ್ದಾಳೆ (Attempt To Murder) ಎಂದು ತಿಳಿದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಬಿಟ್ಟಗೊಂಡನಹಳ್ಳಿ ಗ್ರಾಮದಲ್ಲಿ (Family Dispute) ಈ ಘಟನೆ ನಡೆದಿದೆ.
ಪ್ರಶಾಂತ್ (32) ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟವನು. ಮೂಲತಃ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗೌರಿಕೊಪ್ಪಲಿನ ಪ್ರಶಾಂತ, ಎರಡು ವರ್ಷಗಳ ಹಿಂದೆ ಬಿಟ್ಟಗೊಂಡನಹಳ್ಳಿಯ ಬಿಂದು (24) ಜತೆ ವಿವಾಹವಾಗಿದ್ದ. ಈ ನಡುವೆ ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿ ಬಿಂದು ತವರು ಮನೆ ಸೇರಿಕೊಂಡಿದ್ದಳು.
ಇದರಿಂದ ಮಾನಸಿಕವಾಗಿ ನೊಂದಿದ್ದ ಪ್ರಶಾಂತ್ ಬಿಂದು ಮನೆಗೆ ಬಂದಿದ್ದ. ಜ.9 ರಂದು ಬೆಳಗ್ಗೆ ಪತ್ನಿ ಮನೆಗೆ ಬಂದ ಪ್ರಶಾಂತ್ ಪತ್ನಿ ಬಿಂದು ಜತೆಗೆ ಗಲಾಟೆ ಮಾಡಿದ್ದಾನೆ. ಬಳಿಕ ಕುಡುಗೋಲಿನಿಂದ ಕೊಲೆ ಮಾಡಲು ಯತ್ನಿಸಿದ್ದಾನೆ. ಮಾರಣಾಂತಿಕ ಹಲ್ಲೆ ಮಾಡಿ ಬಳಿಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ತೀವ್ರ ಹಲ್ಲೆಗೊಳಗಾಗಿದ್ದ ಬಿಂದು ಪ್ರಾಣ ಉಳಿಸಿಕೊಳ್ಳಲು ಮನೆಯಿಂದ ಹೊರಗೆ ಓಡಿ ಬಂದಿದ್ದಾಳೆ.
ಆದರೆ ಇತ್ತ ಪತ್ನಿ ಸತ್ತು ಹೋಗಿದ್ದಾಳೆ ಎಂದು ತಿಳಿದ ಪ್ರಶಾಂತ್ ಆಕೆಯ ಮನೆಯಲ್ಲೇ ಸೀರೆಯಲ್ಲಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾನೆ. ಇತ್ತ ಪತಿಯಿಂದ ಮಾರಣಾಂತಿಕ ಹಲ್ಲೆಗೊಳಗಾಗಿದ್ದ ಬಿಂದುಳನ್ನು ಸ್ಥಳೀಯರು ಹಾಸನದ ವೈದ್ಯಕೀಯ ಬೋದಕ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಸಾವು-ಬದುಕಿನ ನಡುವೆ ಹೋರಾಡುತ್ತಿರುವ ಬಿಂದುವಿಗೆ ಚಿಕಿತ್ಸೆ ಮುಂದುವರಿದಿದೆ.
ಇತ್ತ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಹೊಳೆನರಸೀಪುರ ನಗರ ಪೊಲೀಸರು ಆಗಮಿಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: Killer CEO : ಗಂಡನ ಮೇಲಿನ ಸಿಟ್ಟಿಗೆ ಮಗುವನ್ನೇ ಬಲಿ ಕೊಟ್ಟಳಾ ಹಂತಕಿ ಸಿಇಒ?; ಏನಿದು ಕೌಟುಂಬಿಕ ಕಲಹ
ಬನ್ನೇರುಘಟ್ಟದ ಬೆಟ್ಟದ ಮೇಲೆ ಅಪರಿಚಿತ ವ್ಯಕ್ತಿಯ ಶವ ಪತ್ತೆ
ಬೆಂಗಳೂರು ಹೊರವಲಯದ ಬನ್ನೇರುಘಟ್ಟ ನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಅಪರಿಚಿತ ಶವವೊಂದು ಪತ್ತೆಯಾಗಿದೆ. ಸುಮಾರು 35 ವರ್ಷ ವಯಸ್ಸಿನ ವ್ಯಕ್ತಿಯ ಮೃತದೇಹವು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸ್ಥಳಕ್ಕೆ ಬನ್ನೇರುಘಟ್ಟ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಡಿದ ನಶೆಯಲ್ಲಿ ಬೆಟ್ಟದಿಂದ ಬಿದ್ದು ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ. ವಾರದ ಹಿಂದೆ ಮೃತಪಟ್ಟಿರುವ ಸಾಧ್ಯತೆ ಇದ್ದು, ಒಂದು ಕೈ ಮತ್ತು ಕಾಲನ್ನು ಕಾಡು ಪ್ರಾಣಿಗಳು ಎಳೆದೊಯ್ದಿವೆ.
ಸದ್ಯ ಈ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಸಿದ್ದಾರೆ. ಮೃತ ವ್ಯಕ್ತಿ ಯಾರು? ಈ ಸಾವು ಆಕಸ್ಮಿಕವೋ ಅಥವಾ ಕೊಲೆಯೊ ಎಂಬುದರ ಕುರಿತು ತನಿಖೆಯನ್ನು ನಡೆಸುತ್ತಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ