Site icon Vistara News

Attempt to Murder: ಶಿವಮೊಗ್ಗದಲ್ಲಿ ಮತ್ತೆ ಚಾಕು ಇರಿತ; ಇಬ್ಬರು ದುಷ್ಕರ್ಮಿಗಳಿಂದ ದಾಳಿ

Man killed in Kolar over old enmity

ಶಿವಮೊಗ್ಗ: ಶಿವಮೊಗ್ಗದಲ್ಲಿ ಕೆಲವು ತಿಂಗಳ ಬಳಿಕ ಮತ್ತೆ ಹಾಡಹಗಲೇ ರಸ್ತೆಯೊಂದರಲ್ಲಿ ಒಬ್ಬನ ಮೇಲೆ ಇಬ್ಬರು ದಾಳಿ ನಡೆಸಿ ಚಾಕು ಇರಿದಿದ್ದಾರೆ. ಅಪರಿಚಿತ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದು ಗಾಯಗೊಳಿಸಿ (Stab wound) ಪರಾರಿಯಾಗಿದ್ದಾರೆ. ಶಿವಮೊಗ್ಗದ ರಾಯಲ್ ಆರ್ಕೆಡ್ ಹೋಟೆಲ್ ಹಿಂಭಾಗದ ರಸ್ತೆಯಲ್ಲಿ ಈ ಕೊಲೆ ಯತ್ನ (Attempt to Murder) ಪ್ರಕರಣ ನಡೆದಿದೆ.

ಕಾರ್ತಿಕ್ (48) ಚಾಕು ಇರಿತಕ್ಕೆ ಒಳಗಾದವರು. ಘಟನೆ ಬಳಿಕ ದಾಳಿ ಮಾಡಿದ ವ್ಯಕ್ತಿಗಳು ಪರಾರಿಯಾಗಿದ್ದು, ಅವರನ್ನು ಹಿಡಿಯಲು ಯತ್ನಿಸಿದರೂ ತಪ್ಪಿಸಿಕೊಂಡು ಹೋಗಿದ್ದಾರೆನ್ನಲಾಗಿದೆ. ಕಾರ್ತಿಕ್‌ ಮೇಲಿನ ದಾಳಿಗೆ ಕಾರಣ ತಿಳಿದು ಬಂದಿಲ್ಲ.

ಕಾರ್ತಿಕ್‌ ಮೇಲೆ ಚಾಕು ಬೀಸಿದಾಗ ಅವರು ಕೈಯನ್ನು ಅಡ್ಡ ಇಟ್ಟಿದ್ದಾರೆ. ಆಗ ಕೈಗೆ ಚಾಕು ತಾಗಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ. ಆ ನೋವಿನಿಂದ ಅವರು ಜೋರಾಗಿ ಕೂಗಿಕೊಂಡಿದ್ದರಿಂದ ದುಷ್ಕರ್ಮಿಗಳಿಬ್ಬರು ಭಯದಿಂದ ಪರಾರಿಯಾಗಿದ್ದಾರೆ. ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ.

Attempt to Murder Stabbed again in Shivamogga Two miscreants attack and flee

ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಚಾಕು ಇರಿತಕ್ಕೊಳಗಾದ ವ್ಯಕ್ತಿ ಶಿವಮೊಗ್ಗದ ಮಿಳಘಟ್ಟ ಬಡಾವಣೆ ನಿವಾಸಿ ಎಂದು ತಿಳಿದುಬಂದಿದೆ. ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟಿದ್ದು, ದೂರು ದಾಖಲು ಮಾಡಿಕೊಂಡಿದ್ದಾರೆ. ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಪತ್ನಿ ಜತೆಗೆ ವಿಡಿಯೊ ಕಾಲ್‌; ಮಾತಲ್ಲಿ ಮೈಮರೆತಾಗ ಬಡಿಯಿತು ರೈಲು

ಮೈಸೂರು: ಮೊಬೈಲ್ ತಂದ ಆಪತ್ತು ವ್ಯಕ್ತಿಯೊಬ್ಬನ ಪ್ರಾಣವನ್ನೇ ಕಸಿದುಕೊಂಡಿದೆ. ಹಳಿ ಸಮೀಪದಲ್ಲಿ ಮಾತನಾಡುತ್ತಾ ನಡೆದುಕೊಂಡು ಹೋಗುತ್ತಿದ್ದಾಗ ವ್ಯಕ್ತಿಗೆ ರೈಲು ಬಡಿದಿದೆ. ಪರಿಣಾಮ ಬಿಹಾರ ಮೂಲದ ಮನು ಕುಮಾರ್(27) ಎಂಬಾತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದಲ್ಲಿ ಈ ದುರ್ಘಟನೆ (Mysuru News) ನಡೆದಿದೆ.

ಮನು ಕುಮಾರ್ ದೊಡ್ಡ ಕವಲಂದೆ ಗ್ರಾಮದಲ್ಲಿ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದ. ಮಂಗಳವಾರ ಬೆಳಗ್ಗೆ 7.40ಕ್ಕೆ ಪತ್ನಿ ಜತೆಗೆ ಮಾತನಾಡಲೆಂದು ಹೊರ ಬಂದಿದ್ದ. ವಾಟ್ಸಪ್ ವಿಡಿಯೊ ಕಾಲ್ ಮೂಲಕ ಮಾತನಾಡಿಕೊಂಡು ಹಳಿ ಸಮೀಪ ಬರುತ್ತಿದ್ದ. ಕಿವಿಗೆ ಹೆಡ್‌ಫೋನ್‌ ಹಾಕಿದ್ದರಿಂದಲೋ ಏನೋ ರೈಲು ಬರುವುದನ್ನೂ ಗಮನಿಸಿರಲಿಲ್ಲ.

ಚಾಮರಾಜನಗರ ಕಡೆಯಿಂದ ಮೈಸೂರು ಕಡೆಗೆ ಹೋಗುತ್ತಿದ್ದ ರೈಲು ಡಿಕ್ಕಿ ಹೊಡೆದಿದೆ. ರೈಲು ಬಡಿದ ರಭಸಕ್ಕೆ ಮನು ಕೆಳಗೆ ಬಿದ್ದವನೇ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಡಿಯೊ ಕಾಲ್‌ನಲ್ಲಿದ್ದ ಪತ್ನಿ ಕಣ್ಮುಂದೆಯೇ ದಾರುಣವಾಗಿ ಮೃತಪಟ್ಟಿದ್ದಾನೆ.

ಇದನ್ನೂ ಓದಿ: Murder Case : ಪ್ರೀತಿ ವಿಚಾರಕ್ಕೆ ಕಿತ್ತಾಟ; ಯುವಕನ ಕೊಲೆಯಲ್ಲಿ ಅಂತ್ಯ

ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕಾಮಿಸಿದ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯ ಆರ್‌ಪಿಎಫ್ ಜಗನ್ನಾಥ್, ಪೊಲೀಸ್ ಸಿಬ್ಬಂದಿ ಶ್ರೀನಿವಾಸ್, ಕುಮಾರ್ ಪರಿಶೀಲನೆ ನಡೆಸಿದ್ದಾರೆ. ಹಳಿ ಪಕ್ಕ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ನಂಜನಗೂಡಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ನಂಜನಗೂಡು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version