Auto Strike In Bangalore | ಬಾಡಿಗೆ ಬೈಕ್‌ ಸೇವೆಗೆ ವಿರೋಧ; ರಾಜಧಾನಿಯಲ್ಲಿ ಬೀದಿಗಿಳಿದ ಆಟೋ ಚಾಲಕರು - Vistara News

ಕರ್ನಾಟಕ

Auto Strike In Bangalore | ಬಾಡಿಗೆ ಬೈಕ್‌ ಸೇವೆಗೆ ವಿರೋಧ; ರಾಜಧಾನಿಯಲ್ಲಿ ಬೀದಿಗಿಳಿದ ಆಟೋ ಚಾಲಕರು

ರ‍್ಯಾಪಿಡೋ, ಬೌನ್ಸ್ ಸೇವೆಯ ವಿರುದ್ಧ ಬೆಂಗಳೂರು ಆಟೋ ಚಾಲಕರು (Auto Strike In Bangalore) ಸಿಡಿದಿದ್ದು, ಗುರುವಾರ ಸಂಚಾರವನ್ನು ನಿಲ್ಲಿಸಿದರು. ಸರ್ಕಾರದ ವಿರುದ್ಧ ಕಿಡಿಕಾರಿ ಪ್ರತಿಭಟನೆ ನಡೆಸಿದರು. ಈ ಮಧ್ಯೆ ರೋಡಿಗಿಳಿದ ಆಟೋ ತಡೆದು ಚಾಲಕರಿಗೆ ಪ್ರತಿಭಟನಾನಿರತ ಚಾಲಕರೇ ತರಾಟೆಗೆ ತೆಗೆದುಕೊಂಡರು.

VISTARANEWS.COM


on

Auto Strike In Bangalore
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆಟೋ ಚಾಲಕರು ಮುಷ್ಕರಕ್ಕೆ ಮುಂದಾಗಿದ್ದು, ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದಿದ್ದಾರೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡುವುದು ಹಾಗೂ ಬೌನ್ಸ್ ಎಲೆಕ್ಟ್ರಿಕ್ ಬೈಕ್‌ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ (Auto Strike In Bangalore) ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರು-ಪ್ರತಿಭಟನಾಕಾರರ ಮಧ್ಯೆ ತಳ್ಳಾಟ-ನೂಕಾಟಗಳು ನಡೆದವು. ಹಲವರು ಪೊಲೀಸರು ವಶಕ್ಕೆ ಪಡೆದುಕೊಂಡರು.

ಬೆಂಗಳೂರು ಆಟೋ ಚಾಲಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಿಂದ ಬೃಹತ್ ಆಟೋ ರ‍್ಯಾಲಿ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದರು. ಆದರೆ, ಇದಕ್ಕೆ ಅನುಮತಿ ಸಿಗದ ಕಾರಣಕ್ಕೆ ಕಾಲ್ನಡಿಗೆ ಮೂಲಕವೇ ವಿಧಾನಸೌಧ ಮುತ್ತಿಗೆಗೆ ಮುಂದಾದರು. ಮುಷ್ಕರಕ್ಕೆ ಸುಮಾರು 21 ಆಟೋ ಸಂಘಟನೆಗಳು ಸಾಥ್ ನೀಡಿದ್ದು, ರಾಜಧಾನಿಯ 2,10,000 ಚಾಲಕರು ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ | Kalasa Banduri | ಕಳಸಾ ಬಂಡೂರಿ ಯೋಜನೆಯ ಡಿಪಿಆರ್‌ಗೆ ಕೇಂದ್ರ ಜಲ ಆಯೋಗದ ಅನುಮತಿ: ಸಚಿವ ಪ್ರಲ್ಹಾದ್‌ ಜೋಷಿ ಮಾಹಿತಿ

ಯಾವ ಕಾರಣಕ್ಕೆ ಮುಷ್ಕರ?
ದಿನದಿಂದ ದಿನಕ್ಕೆ ರಾಜಧಾನಿಯಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಆಟೋ ಚಾಲಕರು ಬೀದಿಗೆ ಬೀಳುತ್ತಿದ್ದಾರೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ದರೂ ರಾಜಾರೋಷವಾಗಿ ಸಂಚಾರ ಮಾಡುತ್ತಿದೆ. ಆರ್‌ಟಿಒ ಅಧಿಕಾರಿಗಳು ಬೈಕ್ ಟ್ಯಾಕ್ಸಿಗಳನ್ನು ಮಟ್ಟ ಹಾಕುವಲ್ಲಿ ವಿಫಲರಾಗಿದ್ದಾರೆ ಎಂದು ಚಾಲಕರು ಅಸಮಾಧಾನ ತೋಡಿಕೊಂಡಿದ್ದಾರೆ.

ಜತೆಗೆ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ ಎಲೆಕ್ಟ್ರಿಕ್ ಬೈಕ್‌ಗಳ ಸೇವೆಗೂ ಅನುಮತಿ ನೀಡಿದ್ದು, ಇದನ್ನೂ ವಾಪಸ್‌ ಪಡೆಯಬೇಕು. ವಿಕೆಡ್ ರೈಡ್ ಭಾಗವಾಗಿರುವ ಬೌನ್ಸ್‌ ಕಂಪನಿಯಿಂದ ಮೊದಲ ಹಂತದಲ್ಲಿ 100 ಇ-ಬೈಕ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದ್ದು, ಬಳಿಕ ಹಂತ ಹಂತವಾಗಿ 1000 ಇ- ಬೈಕ್‌ಗಳನ್ನು ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದೆ. ಈ ಹಿಂದೆ ಕೂಡ ಬೈಕ್ ಸೇವೆ ನೀಡುತ್ತಿದ್ದ ವಿಕೆಡ್ ರೈಡ್ ಕಂಪನಿ, ಕೊರೊನಾ ಸಮಯದಲ್ಲಿ ಸ್ಥಗಿತಗೊಳಿಸಿತ್ತು. ಈಗ ಮತ್ತೆ ಇ-ಬೈಕ್ ಸೇವೆ ನೀಡಲು ಅನುಮತಿ ಕೇಳಿ ಅರ್ಜಿ ಸಲ್ಲಿಸಿದ್ದು ಇದಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಇದರಿಂದಾಗಿ ಆಟೋ ಬಳಸುವವರ ಸಂಖ್ಯೆ ಕಡಿಮೆ ಆಗಲಿದೆ. ಹೀಗಾಗಿ ಅನುಮತಿಯನ್ನು ವಾಪಸ್‌ ಪಡೆಯಬೇಕೆಂದು ಚಾಲಕರು ಮನವಿ ಮಾಡಿದ್ದಾರೆ.

ಸಾರಿಗೆ ಇಲಾಖೆಯ ಅಧಿಕಾರಿಗಳು ಮತ್ತು ಸಚಿವ ಶ್ರೀರಾಮುಲು ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಸಾರಿಗೆ ಇಲಾಖೆಯು ತನ್ನ ನಿರ್ಧಾರವನ್ನು ಕೂಡಲೇ ಹಿಂಪಡೆಯುವಂತೆ ಆಗ್ರಹಿಸಿದರು. ಪೊಲೀಸರ ವಿರೋಧದ ನಡುವೆಯೇ ಹೋರಾಟಕ್ಕೆ ಮುಂದಾದ ಚಾಲಕರು, ವೇದಿಕೆ ಕಾರ್ಯಕ್ರಮ ನಡೆಸಿ ಬಳಿಕ ವಿಧಾನಸೌಧಕ್ಕೆ ತೆರಳಲು ಯೋಜಿಸಿದ್ದಾರೆ. ಆದರೆ, ಫ್ರೀಡಂಪಾರ್ಕ್ ಗೇಟ್ ಅನ್ನು ಬಂದ್ ಮಾಡಲಾಗಿದ್ದು, ಅಲ್ಲಿ ಪೊಲೀಸರ ಜತೆಗೆ ವಾಗ್ವಾದ ನಡೆದಿದೆ. ನೂಕಾಟ-ತಳ್ಳಾಟಗಳೂ ನಡೆದಿವೆ. ಇದೇ ವೇಳೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಇದಕ್ಕೂ ಮೊದಲು ಸೇವೆಯಲ್ಲಿ ನಿರತವಾಗಿದ್ದ ಆಟೋಗಳನ್ನು ತಡೆದ ಪ್ರತಿಭಟನಾನಿರತ ಚಾಲಕರು, ಆಟೋ ಓಡಿಸುತ್ತಿದ್ದ ಚಾಲಕರನ್ನು ತರಾಟೆಗೆ ತೆಗೆದುಕೊಂಡರು.

ಪ್ರತಿಭಟನಾ ಸ್ಥಳಕ್ಕಾಗಮಿಸಿದ ರಾಮಲಿಂಗಾರೆಡ್ಡಿ
ಆಟೋ ಚಾಲಕರ ಪ್ರತಿಭಟನಾ ಸ್ಥಳಕ್ಕಾಗಮಿಸಿದ ಕಾಂಗ್ರೆಸ್‌ ನಾಯಕ ರಾಮಲಿಂಗಾರೆಡ್ಡಿ, ಬೈಕ್ ಟ್ಯಾಕ್ಸಿ ರದ್ದತಿಯ ಬಗ್ಗೆ ಸರ್ಕಾರಕ್ಕೆ ಮನವರಿಕೆ ಮಾಡಲಾಗುವುದು. ಮುಂದೆ ನಮ್ಮ ಸರ್ಕಾರವೇ ಅಧಿಕಾರಕ್ಕೆ ಬರಲಿದ್ದು, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ ಎಂದು ಭರವಸೆ ನೀಡಿದರು. ಜತೆಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿ, ನಾವು ಬಿಜೆಪಿ ರೀತಿ ಸುಳ್ಳು ಆಶ್ವಾಸನೆ ನೀಡುವುದಿಲ್ಲ. ನಿಮ್ಮ ಹೋರಾಟಕ್ಕೆ ನಮ್ಮ ಬೆಂಬಲ ಇರುತ್ತದೆ ಎಂದರು.

ಬಳಿಕ ಮಾತನಾಡಿದ ಬೆಂಗಳೂರು ಆಟೋ ಚಾಲಕರ ಮಾಲೀಕರ ಸಂಘದ ಸಂಚಾಲಕ ಮಂಜುನಾಥ್, ನಮ್ಮ ಬೇಡಿಕೆ ಈಡೇರದಿದ್ದರೆ ಹೋರಾಟದ ಸ್ವರೂಪ ಬದಲಿಸುತ್ತೇವೆ. ರ‍್ಯಾಪಿಡೋ ಆಟೋದಿಂದ ನಮ್ಮ ಆಟೋ ಕಾರ್ಮಿಕರ ಆದಾಯ ಕುಸಿದಿದೆ. ಸರ್ಕಾರ ಇದನ್ನು‌ ಗಂಭೀರವಾಗಿ ಪರಿಗಣಿಸಬೇಕು. ಪೊಲೀಸರು ರ‍್ಯಾಲಿಗೆ ಅವಕಾಶ ಇಲ್ಲವೆಂದು ಹೇಳುತ್ತಿದ್ದಾರೆ. ಆದರೆ, ಇವರನ್ನೆಲ್ಲ ಕೇಳಿಕೊಂಡು ಹೋರಾಟ ಮಾಡಲು ಆಗುವುದಿಲ್ಲ. 2 ಸಾವಿರ ಆಟೋ ಡ್ರೈವರ್‌ಗಳು ಪೋಸ್ಟಲ್ ಮೂಲಕ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ಇ-ಬೈಕ್ ಟ್ಯಾಕ್ಸಿ, ವೈಟ್ ಬೋರ್ಡ್ ಟ್ಯಾಕ್ಸಿಗಳನ್ನು ನಿಲ್ಲಿಸಬೇಕು, ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಹೋರಾಟ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ | Athiya Shetty | ಶೂಟಿಂಗ್‌ ವೇಳೆ ಒಟ್ಟಿಗೆ ಕಾಣಿಸಿಕೊಂಡ ನಟಿ ಅಥಿಯಾ ಶೆಟ್ಟಿ- ಕ್ರಿಕೆಟಿಗ ಕೆ ಎಲ್‌ ರಾಹುಲ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Theft Case : ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Theft Case : ಮೈ ತುಂಬ ಸಾಲ ಮಾಡಿಕೊಂಡಿದ್ದ ತಂಗಿ ಅಡ್ಡದಾರಿ ಹಿಡಿದಿದ್ದಳು. ಹಣಕ್ಕಾಗಿ ಸ್ವಂತ ಅಕ್ಕನ ಮನೆಗೆ ಕನ್ನ ಹಾಕಿ ಮಳ್ಳಿಯಂತೆ ಮನೆ ಸೇರಿಕೊಂಡಿದ್ದಳು. ಕಳ್ಳತನ ಗುಟ್ಟು ರಟ್ಟಾಗಬಾರದೆಂದು ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿ ಬಂದಿದ್ದಳು. ಆದರೆ ತನಿಖೆಗಿಳಿದ ಪೊಲೀಸರು ಆರೋಪಿ ತಂಗಿಯನ್ನು ಬಂಧಿಸಿದ್ದಾರೆ.

VISTARANEWS.COM


on

By

Theft Case In Bengaluru
Koo

ಬೆಂಗಳೂರು: ಈಗೀನ ಕಾಲದಲ್ಲಿ ಯಾರನ್ನಾ ನಂಬೋದು ಬಿಡೋದು? ಅಕ್ಕನ ಮನೆಯಲ್ಲಿಯೇ ಕಳ್ಳತನ ಮಾಡಿದ್ದ ತಂಗಿಯ (Theft Case) ಬಂಧನವಾಗಿದೆ. ಬೆಂಗಳೂರಿನ ಕೆಂಗೇರಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಉಮಾ ಬಂಧಿತ ಆರೋಪಿಯಾಗಿದ್ದಾಳೆ. ಬಂಧಿಯಾಗಿರುವ ಉಮಾಳಿಂದ 65 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

ಚೌಡೇಶ್ವರಿ ದೇವರ ಹಬ್ಬ ಎಂದು ಉಮಾಳ ಅಕ್ಕ ಊರಿಗೆ ಹೋಗಿದ್ದರು. ಹೋಗುವ ಮುನ್ನ ಸಂಬಂಧಿಗೆ ಮನೆಯ ಕೀ‌ ಕೊಟ್ಟು ಹೋಗಿದ್ದರು. ನಂತರ ಕಳೆದ ಏ. 24ರ ರಾತ್ರಿ ಆಕೆಯ ಸಂಬಂಧಿ ಮನೆಗೆ ಮಲಗಲು ಹೋಗಿದ್ದಾಗ ನಕಲಿ ಕೀ ಬಳಸಿ ಕಳ್ಳತನ ಮಾಡಿದ್ದಳು. ಉಮಾ 182 ಗ್ರಾಂ ಚಿನ್ನಾಭರಣ ಹಾಗು 52 ಲಕ್ಷ ನಗದು ಕಳ್ಳತನ ಮಾಡಿದ್ದಳು.

ಇನ್ನೂ ಮಂಡ್ಯ ಮೂಲದ ಆರೋಪಿ ಉಮಾ ಲಗ್ಗೆರೆಯಲ್ಲಿ ವಾಸವಾಗಿದ್ದಳು. ನಾಗವಾರದಲ್ಲಿ ಆಕೆಯ ಅಕ್ಕ ಹಾಗೂ ಬಾವ ವಾಸವಾಗಿದ್ದರು. ಉಮಾ ಸ್ತ್ರಿ ಶಕ್ತಿ ಸೇರಿದಂತೆ ಹಲವು ಕಡೆ ಸಾಲ ಮಾಡಿಕೊಂಡಿದ್ದಳು. ಇತ್ತೀಚೆಗೆ ಬಾವನ ಜತೆ ಕೂಡ ಹಣ ಕೇಳಿದ್ದಳು, ಆದರೆ ಅವರು ಕೊಟ್ಟಿರಲಿಲ್ಲ ಎನ್ನಲಾಗಿದೆ.

ಇದೇ ಕಾರಣಕ್ಕೆ ಅಕ್ಕ ಮನೆಯವರು ಊರಿಗೆ ಹೋದಾಗ, ನಕಲಿ ಕೀ ಬಳಸಿ ಚಿನ್ನ-ನಗದು ಎಗರಿಸಿದ್ದಳು. ಇತ್ತ ಕಳ್ಳತನ ಮಾಡಿದ ಬಳಿಕ ಖಾರದಪುಡಿ ಚೆಲ್ಲಿ ಸಾಕ್ಷಿ ನಾಶ ಮಾಡಿ ಕಾಲ್ಕಿತ್ತಿದ್ದಳು. ನಂತರ ಕಳ್ಳತನ ಕೇಸ್‌ನ ತನಿಖೆಗಿಳಿದ ಕೆಂಗೇರಿ ಪೊಲೀಸರು ಆರೋಪಿತೆಯನ್ನು ಬಂಧಿಸಿ ಆರು ದಿನಗಳ ಕಾಲ ಕಸ್ಟಿಡಿಗೆ ಪಡೆದಿದ್ದಾರೆ.

ಇದನ್ನೂ ಓದಿ: Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

ವಿದೇಶಿ ಪ್ರಜೆಗಳ ಬಂಧನ

ಮೆಡಿಕಲ್ ವೀಸಾದಲ್ಲಿ ಬಂದು ಅನಧಿಕೃತವಾಗಿ ವಾಸವಾಗಿದ್ದ ವಿದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ. ಮಹಿಳೆಯೊಬ್ಬಳು ಚಿಕಿತ್ಸೆಗೆಂದು ಮೆಡಿಕಲ್ ವೀಸಾದಲ್ಲಿ ಬಂದಿದ್ದಳು. ಸದ್ಯಕ್ಕೆ ಮಹಿಳೆ ಜತೆಗೆ ಇನ್ನೊಬ್ಬರನ್ನು ಬಂಧಿಸಿ ಫಾರಿನರ್ಸ್ ರಿಸ್ಟ್ರಿಕ್ಷನ್ ಸೆಂಟರ್‌ನಲ್ಲಿ ಇರಿಸಲಾಗಿದೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಯೂನೋ ಕಾನ್ ಕಳವು – ಶ್ರೀಖಿ ಅರೆಸ್ಟ್‌

ಬಿಟ್ ಕಾಯಿನ್ ಹಗರಣ ಪ್ರಕರಣ ಸಂಬಂಧಿಸಿದಂತೆ ಶ್ರೀಖಿ @ ಶ್ರೀಕೃಷ್ಣನನ್ನು ಬಂಧಿಸಲಾಘಿದೆ. ಶ್ರೀಖಿಯನ್ನು ಸಿಐಡಿ ಎಸ್‌ಐಟಿ ಬಂಧಿಸಿದೆ. ಯೂನೋ ಕಾನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಶ್ರೀಖಿಯನ್ನು ಬಂಧಿಸಿ ತನಿಖೆಯನ್ನು ನಡೆಸಲಾಗುತ್ತಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Prajwal Revanna Case: ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಸುಖಾಸುಮ್ಮನೆ ತಮ್ಮ ಕಕ್ಷಿದಾರರನ್ನು ಸಿಲುಕಿಸಲಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು. ಇದಕ್ಕೆ ಮಧ್ಯಪ್ರವೇಶದ ಮಾಡಿದ ನ್ಯಾಯಾಧೀಶರು, ಆರೋಪಿ ಪೊಲೀಸ್ ವಶದಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ಮಾಡಲು ಹೇಗೆ ಸಾಧ್ಯ? ಎಂದು ನಾಗೇಶ್‌ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಒಂದು ವೇಳೆ‌ ಬೇಲ್ ನೀಡಿದರೆ ಪೊಲೀಸ್ ಕಸ್ಟಡಿಯನ್ನು ಹೇಗೆ ಮುಂದುವರಿಸಲು ಸಾಧ್ಯ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case HD Revanna gets bail today court asked if there was a chance Hearing adjourned till tomorrow
Koo

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣದಲ್ಲಿ (Hassan Pen Drive Case) ಹಾಗೂ ಸಂತ್ರಸ್ತೆಯನ್ನು ಅಪಹರಣ ಮಾಡಿದ ಆರೋಪ ಹೊತ್ತಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ (HD Revanna) ಅವರಿಗೆ ಮಂಗಳವಾರ (ಮೇ 7) ಕೋರ್ಟ್‌ನಲ್ಲಿ ಸಣ್ಣ ಮಟ್ಟದ ಹಿನ್ನಡೆಯಾಗಿದೆ. ಆರೋಪಿ ಕಸ್ಟಡಿಯಲ್ಲಿರುವಾಗ ಜಾಮೀನು ಅರ್ಜಿ ವಿಚಾರಣೆ ಮಾಡಬಹುದೇ? ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸುವಂತೆ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನ್ಯಾಯಾಧೀಶರು ಸೂಚನೆ ನೀಡಿದ್ದಾರೆ.

ಎಚ್.ಡಿ. ರೇವಣ್ಣ ಪರ ವಕೀಲರು ಜಾಮೀನು ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಾದ – ಪ್ರತಿವಾದವನ್ನು ಆಲಿಸಿತು.

ಎಚ್.ಡಿ. ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ವಾದ ಮಂಡಿಸಿದ್ದು, ಈ ಪ್ರಕರಣದಲ್ಲಿ ಸುಖಾಸುಮ್ಮನೆ ತಮ್ಮ ಕಕ್ಷಿದಾರರನ್ನು ಸಿಲುಕಿಸಲಾಗಿದ್ದು, ಜಾಮೀನು ನೀಡಬೇಕು ಎಂದು ಕೋರಿದರು. ಇದಕ್ಕೆ ಮಧ್ಯಪ್ರವೇಶದ ಮಾಡಿದ ನ್ಯಾಯಾಧೀಶರು, ಆರೋಪಿ ಪೊಲೀಸ್ ವಶದಲ್ಲಿದ್ದಾಗ ಜಾಮೀನು ಅರ್ಜಿ ವಿಚಾರಣೆ ಮಾಡಲು ಹೇಗೆ ಸಾಧ್ಯ? ಎಂದು ನಾಗೇಶ್‌ಗೆ ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಒಂದು ವೇಳೆ‌ ಬೇಲ್ ನೀಡಿದರೆ ಪೊಲೀಸ್ ಕಸ್ಟಡಿಯನ್ನು ಹೇಗೆ ಮುಂದುವರಿಸಲು ಸಾಧ್ಯ ಎಂದು ನ್ಯಾಯಾಧೀಶರು ಪ್ರಶ್ನೆ ಮಾಡಿದರು.

ಅದಕ್ಕೆ ವಾದ ಮಂಡಿಸಿದ ಸಿ.ವಿ. ನಾಗೇಶ್‌, ಪೊಲೀಸ್ ಕಸ್ಟಡಿಯಲ್ಲಿ ಇದ್ದಾಗಲೂ ಜಾಮೀನು ನೀಡಬಹುದು. ಈ ಬಗ್ಗೆ ಇರುವ ಕಾನೂನಿನ ಬಗ್ಗೆ ಹಾಗೂ ಸುಪ್ರೀಂ ಕೋರ್ಟ್‌ನ ಕೆಲವು ತೀರ್ಪುಗಳನ್ನು ಉಲ್ಲೇಖಿಸಿ ನ್ಯಾಯಾಲಯದ ಗಮನಕ್ಕೆ ತಂದರು. ಈ ವೇಳೆ ಎಸ್‌ಐಟಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ವಾದ – ಪ್ರತಿವಾದ ಆಲಿಸಿದ ನ್ಯಾಯಾಧೀಶರು, ಎಸ್ಐಟಿಯ ವಿಶೇಷ ಸಾರ್ವಜನಿಕ ಅಭಿಯೋಜಕರಿಗೆ ನೋಟಿಸ್ ಜಾರಿ ಮಾಡಿದ್ದು, ಪೊಲೀಸ್ ಕಸ್ಟಡಿಯಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಸಬಹುದೇ ಎಂಬ ಬಗ್ಗೆ ಆಕ್ಷೇಪಣೆ ಸಲ್ಲಿಸಲು ಸೂಚನೆ ನೀಡಿದ್ದಾರೆ. ಹೀಗಾಗಿ ವಿಚಾರಣೆಯನ್ನು ನಾಳೆಗೆ (ಮೇ 8) ಮುಂದೂಡಿಕೆ ಮಾಡಲಾಗಿದೆ.

ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೊ ಇದ್ದರೆ ಡಿಲೀಟ್‌ ಮಾಡಿ

ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ನಿಮ್ಮ ಮೊಬೈಲ್‌ ಅಥವಾ ಲ್ಯಾಪ್‌ಟಾಪ್‌ನಲ್ಲಿದೆಯೇ? ಇದ್ದರೆ ಅದು ದೊಡ್ಡ ಅಪರಾಧವಾಗಿದೆ. ಈಗಲೇ ಅದನ್ನು ಡಿಲೀಟ್‌ ಮಾಡಿಬಿಡಿ. ಒಂದು ವೇಳೆ ನೀವು ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಅಧಿಕೃತ ಪ್ರಕಟಣೆ ನೀಡಿದ್ದಾರೆ.

ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಈಗ ದೇಶಾದ್ಯಂತ ವೈರಲ್ ಆಗಿದೆ. ಈಗಾಗಲೇ ಈ ಪ್ರಕರಣ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಎಸ್‌ಐಟಿಯನ್ನು ರಚನೆ ಮಾಡಿದೆ. ಇನ್ನು ವಿಡಿಯೊದಲ್ಲಿ ಹಾಸನ ಸೇರಿದಂತೆ ಹಲವು ಕಡೆಯ ಮಹಿಳೆಯರು ಇದ್ದಾರೆನ್ನಲಾಗಿದ್ದು, ಅವರ ಮುಖವನ್ನು ಬ್ಲರ್‌ ಮಾಡಲಾಗಿಲ್ಲ. ಹೀಗಾಗಿ ಈ ಕೇಸ್‌ ಮತ್ತಷ್ಟು ಜಟಿಲವಾಗಿದೆ.

ಈ ಸಂಬಂಧ ಎಸ್ಐಟಿಯ ಮುಖ್ಯಸ್ಥ ಬಿ.ಕೆ. ಸಿಂಗ್ ಪ್ರಕಟಣೆ ನೀಡಿದ್ದು, ಅಶ್ಲೀಲ ವಿಡಿಯೊವನ್ನು ಸಾರ್ವಜನಿಕರು ತಮ್ಮ ಮೊಬೈಲ್‌ನಲ್ಲಿ‌ ಇಟ್ಟುಕೊಳ್ಳುವುದು ಸಹ ಅಪರಾಧ. ಯಾವುದೇ ವ್ಯಕ್ತಿ ಸಂದೇಶಗಳನ್ನು ರೂಪಿಸುವ, ಇಟ್ಟುಕೊಳ್ಳುವ ಹಾಗೂ ಪ್ರಸಾರ ಮಾಡುವ ಕೆಲಸವನ್ನು ಮಾಡಿದರೆ, ಅಂಥ ವ್ಯಕ್ತಿಗಳ‌ನ್ನು ಸಂದೇಶ ರಚನೆಕಾರರು ಎಂದು ಪರಿಗಣಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Prajwal Revanna Case Delete vulgar video and avoid legal action says SIT chief

ಇದನ್ನೂ ಓದಿ: Prajwal Revanna Case: ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಪೋಸ್ಟರ್ ವಾರ್‌

ಡಿಲೀಟ್‌ ಮಾಡಿ ಕಾನೂನು ಕ್ರಮದಿಂದ ಪಾರಾಗಿ

ಅಶ್ಲೀಲ ವಿಡಿಯೊ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಹೀಗೆ ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ.

Continue Reading

ಬೆಂಗಳೂರು

Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

Theft Case : ಸ್ನೇಹಿತರ ಜತೆ ಸೇರಬೇಡ ಎಂದು ತಂದೆ ಬೈದಿದ್ದಕ್ಕೆ ಸಿಟ್ಟಾದ ಮಗನೊಬ್ಬ ಮನೆ ಬಿಟ್ಟು ಹೋಗಿದ್ದ. ಅಲ್ಲಿಂದ ಮೆಜೆಸ್ಟಿಕ್‌ಗೆ ಹೋಗಲು ಯುವಕ ಆಟೋ ಹತ್ತಿದ್ದ. ಆದರೆ ಖತರ್ನಾಕ್‌ ಚಾಲಕ ಆ ಯುವಕನಿಂದ ಚಿನ್ನಾಭರಣವನ್ನು ದೋಚಿ ಪರಾರಿ ಆದವನು ಸಿಕ್ಕಿಬಿದ್ದಿದ್ದಾನೆ.

VISTARANEWS.COM


on

By

Theft Case In Bengaluru
Koo

ಬೆಂಗಳೂರು: ಕೋಪದಲ್ಲಿ ಮನೆ ಬಿಟ್ಟು ಓಡಿ ಹೋಗುತ್ತಿದ್ದ ಯುವಕನ ಬಳಿಯೇ 100 ಗ್ರಾಂ ಚಿನ್ನಾಭರಣವನ್ನು ಸುಲಿಗೆ ಮಾಡಿ (Theft Case) ಪರಾರಿ ಆಗಿದ್ದ ಆಟೋ ಚಾಲಕನನ್ನು (Auto Driver) ಬಂಧಿಸಲಾಗಿದೆ. ಸಾಧಿಕ್@ ಅನಿಲ್ @ ಅನಿ ಬಂಧಿತ ಆರೋಪಿ.

ಸ್ನೇಹಿತರ ಜತೆಗೆಲ್ಲ ಸೇರಬೇಡ ಎಂದು ಬೈದು ಬುದ್ಧಿ ಮಾತು ಹೇಳಿದ್ದಕ್ಕೆ ತಂದೆ ಮೇಲೆ ಕೋಪಿಸಿಕೊಂಡ ಯುವಕ ಮನೆಯಿಂದ ಹೊರ ನಡೆಸಿದ್ದ. ಈ ಊರು ಬಿಟ್ಟೆ ದೂರ ಹೋಗಬೇಕು ಎಂದುಕೊಂಡ ಯುವಕ ಬಸವೇಶ್ವರನಗರದಿಂದ ಮೆಜೆಸ್ಟಿಕ್‌ಗೆ ಹೋಗಲು ಆಟೋ ಹತ್ತಿದ್ದ.

ಆಟೋ ಹತ್ತಿದ ಕೂಡಲೇ ತನ್ನ ಮೈ ಮೇಲಿದ್ದ ಒಡವೆಗಳನ್ನು ಬ್ಯಾಗ್‌ನಲ್ಲಿ ಇಟ್ಟುಕೊಳ್ಳುತ್ತಿದ್ದ. ಇದೆಲ್ಲವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದ ಆಟೋ ಚಾಲಕನ ಬುದ್ಧಿ ಆದಾಗಲೇ ಕ್ರಿಮಿನಲ್‌ ಕಡೆಗೆ ತಿರುಗಿತ್ತು. ಹೇಗಾದರೂ ಮಾಡಿ ಯುವಕನನ್ನು ಯಾಮಾರಿಸಿ ಚಿನ್ನವನ್ನೆಲ್ಲ ದೋಚಬೇಕೆಂದು ಪ್ಲ್ಯಾನ್‌ ಮಾಡಿದ್ದ.

ಅದರಂತೆ ಯುವಕ ರಮೇಶ್ ನಗರ ಸಮೀಪ ಬಂದಾಗ ಮೂತ್ರ ವಿಸರ್ಜನೆಗೆಂದು ಆಟೋ ಇಳಿದಿದ್ದ. ಇದೇ ಸರಿಯಾದ ಸಮಯ ಎಂದುಕೊಂಡ ಆಟೋ ಚಾಲಕ ಯುವಕನ ಕೈಯಿಂದ ಬ್ಯಾಗ್‌ ಕಿತ್ತುಕೊಂಡು ಆತನನ್ನು ತಳ್ಳಿ ಎಸ್ಕೇಪ್ ಆಗಿದ್ದ.

ಇದನ್ನೂ ಓದಿ: Liquid Nitrogen : ಕಾಟನ್ ಕ್ಯಾಂಡಿ ಬಳಿಕ ಕರ್ನಾಟಕದಲ್ಲಿ ಲಿಕ್ವಿಡ್ ನೈಟ್ರೋಜನ್ ಬಳಕೆ ನಿಷೇಧ

ಇತ್ತ ಯುವಕ ಈ ವಿಚಾರವನ್ನು ಯಾರಿಗೂ ಹೇಳದೆ ಮತ್ತೊಂದು ಆಟೋ ಹತ್ತಿ ಮೆಜೆಸ್ಟಿಕ್‌ಗೆ ಬಂದಿದ್ದ. ನಂತರ ರೈಲಿನ ಮೂಲಕ ಪುರಿ ಜಗನ್ನಾಥ ದೇವಸ್ಥಾನಕ್ಕೆ ತೆರಳಿದ್ದ. ರಾತ್ರಿಯಾದರೂ ಮಗ ಬಾರದಿದ್ದಾಗ ಆತಂಕಗೊಂಡ ಪೋಷಕರು ಎಲ್ಲ ಕಡೆ ಹುಡುಕಾಡಿದ್ದಾರೆ. ಸಿಗದೆ ಇದ್ದಾಗ ಪೊಲೀಸ್‌ ಮೆಟ್ಟಿಲೇರಿದ್ದಾರೆ. ಅಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ದಾಖಲಿಸಿದ್ದರು. ಇತ್ತ ತನಿಖೆಗಿಳಿದಾಗ ಪೊಲೀಸರಿಗೆ ಯುವಕ ಪುರಿ ಜಗನ್ನಾಥ ದೇವಸ್ಥಾನದ ಬಳಿ ಇರುವುದು ತಿಳಿದು ಬಂದಿದೆ.

ನಂತರ ಪೊಲೀಸರು ಆತನನ್ನು ಕರೆ ತಂದು ಮನೆಯವರಿಗೆ ಒಪ್ಪಿಸಿದ್ದಾರೆ. ಈ ವೇಳೆ ಪೋಷಕರು ಮೈಮೇಲಿದ್ದ ಚಿನ್ನಾಭರಣ ಎಲ್ಲಿ ಎಂದು ಕೇಳಿದಾಗ ಸುಲಿಗೆ ಪ್ರಕರಣ ಬಯಲಿಗೆ ಬಂದಿದೆ. ಆ ಬಳಿಕ ಈ ಬಗ್ಗೆ ಎಚ್‌ಎಎಲ್ ಪೊಲೀಸ್ ಠಾಣೆಯಲ್ಲಿ ಕಳ್ಳತನ ಸಂಬಂಧ ದೂರು ದಾಖಲಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಸಿಸಿಟಿವಿ ಪರಿಶೀಲಿಸಿದಾಗ ವಿದ್ಯಾರಣ್ಯಪುರ ಬಳಿ ಇರುವ ಎಂಎಸ್ ಪಾಳ್ಯದಲ್ಲಿ ಆರೋಪಿಯ‌ನ್ನು ಬಂಧಿಸಲಾಗಿದೆ. ಬಂಧಿತನಿಂದ 6 ಲಕ್ಷಕ್ಕೂ ಹೆಚ್ಚು ಮೌಲ್ಯದ 100 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಚಿನ್ನದ ದರ

Gold Rate Today: ಚಿನ್ನದ ಬೆಲೆ ಗ್ರಾಂಗೆ ₹33 ಏರಿಕೆ; 24 ಕ್ಯಾರಟ್‌ ಬಂಗಾರದ ದರ ಇಂದು ₹7,238

Gold Rate Today: ಇಂದು ಬೆಂಗಳೂರಿನಲ್ಲಿ 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,350 ಮತ್ತು ₹6,63,500 ದರದಲ್ಲಿ ಖರೀದಿಸಬಹುದು. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,380 ಮತ್ತು ₹7,23,800 ವೆಚ್ಚವಾಗಲಿದೆ.

VISTARANEWS.COM


on

Gold rate today
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಇಂದು 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಕ್ರಮವಾಗಿ ₹30 ಹಾಗೂ ₹33 ಏರಿಕೆಯಾಗಿವೆ. ವಾರಾಂತ್ಯದಲ್ಲಿ ಕೂಡ ಚಿನ್ನದ ಬೆಲೆಗಳು ಏರಿಕೆ ಕಂಡಿದ್ದವು.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,635ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,080 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹66,350 ಮತ್ತು ₹6,63,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,238 ಆಗಿದ್ದರೆ, ಎಂಟು ಗ್ರಾಂ ಬೆಲೆ ₹57,904 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72,380 ಮತ್ತು ₹7,23,800 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹82.50, ಎಂಟು ಗ್ರಾಂ ₹660 ಮತ್ತು 10 ಗ್ರಾಂ ₹825ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,250 ಮತ್ತು 1 ಕಿಲೋಗ್ರಾಂಗೆ ₹82,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ66,50072,530
ಮುಂಬಯಿ66,350 72,380
ಬೆಂಗಳೂರು66,350 72,380
ಚೆನ್ನೈ66,40072,430

ಚಿನ್ನದ ದರದ ಮೇಲೆ ಪರಿಣಾಮ ಬೀರುವ ಅಂಶಗಳು

ಬೇಡಿಕೆ ಮತ್ತು ಪೂರೈಕೆ: ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಮತ್ತು ಪೂರೈಕೆಯಿಂದ ಚಿನ್ನದ ದರವನ್ನು ಹೆಚ್ಚಾಗಿ ನಿರ್ಧರಿಸಲಾಗುತ್ತದೆ. ಚಿನ್ನಕ್ಕೆ ಬೇಡಿಕೆ ಹೆಚ್ಚಾದರೆ ದರವೂ ಹೆಚ್ಚಾಗಲಿದೆ. ವ್ಯತಿರಿಕ್ತವಾಗಿ, ಚಿನ್ನದ ಪೂರೈಕೆ ಹೆಚ್ಚಾದರೆ, ದರ ಕಡಿಮೆಯಾಗುತ್ತದೆ.

ಜಾಗತಿಕ ಆರ್ಥಿಕ ಪರಿಸ್ಥಿತಿಗಳು: ಚಿನ್ನದ ದರದ ಮೇಲೆ ಜಾಗತಿಕ ಆರ್ಥಿಕ ಪರಿಸ್ಥಿತಿಗಳು ಕೂಡ ಪರಿಣಾಮ ಬೀರುತ್ತದೆ. ಉದಾಹರಣೆಗೆ, ಜಾಗತಿಕ ಆರ್ಥಿಕತೆಯು ಕಳಪೆಯಾಗಿ ಕಾರ್ಯನಿರ್ವಹಿಸುತ್ತಿದ್ದರೆ, ಹೂಡಿಕೆದಾರರು ಚಿನ್ನವನ್ನು ಸುರಕ್ಷಿತ ಹೂಡಿಕೆಯಾಗಿ ಕಾಣಬಹುದು. ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ರಾಜಕೀಯ ಅಸ್ಥಿರತೆ: ರಾಜಕೀಯ ಅಸ್ಥಿರತೆ ಚಿನ್ನದ ದರದ ಮೇಲೂ ಪರಿಣಾಮ ಬೀರಬಹುದು. ಉದಾಹರಣೆಗೆ, ಒಂದು ದೊಡ್ಡ ದೇಶದಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾದರೆ, ಹೂಡಿಕೆದಾರರು ಅನಿಶ್ಚಿತತೆಯ ವಿರುದ್ಧ ಸುರಕ್ಷಿತರಾಗಲು ಚಿನ್ನವನ್ನು ಖರೀದಿಸಬಹುದು, ಇದು ಚಿನ್ನದ ದರವನ್ನು ಹೆಚ್ಚಿಸುತ್ತದೆ.

ಇದಲ್ಲದೆ, ಭಾರತದಲ್ಲಿನ ಚಿಲ್ಲರೆ ಚಿನ್ನದ ಬೆಲೆಯು ಭಾರತದಲ್ಲಿ ಗ್ರಾಹಕರಿಗೆ ಚಿನ್ನವನ್ನು ಮಾರಾಟ ಮಾಡುವ ಬೆಲೆಯಾಗಿದೆ. ಜಾಗತಿಕ ಚಿನ್ನದ ಬೆಲೆ, ಭಾರತೀಯ ರೂಪಾಯಿ, ಮತ್ತು ಚಿನ್ನದ ಆಭರಣಗಳ ತಯಾರಿಕೆಯಲ್ಲಿ ತೊಡಗಿರುವ ಕಾರ್ಮಿಕ ಮತ್ತು ಸಾಮಗ್ರಿಗಳ ವೆಚ್ಚ ಸೇರಿದಂತೆ ಹಲವಾರು ಅಂಶಗಳಿಂದ ಇದನ್ನು ನಿರ್ಧರಿಸಲಾಗುತ್ತದೆ. ಭಾರತದಲ್ಲಿ ಚಿಲ್ಲರೆ ಚಿನ್ನದ ಬೆಲೆಯು ಸಾಮಾನ್ಯವಾಗಿ ಜಾಗತಿಕ ಚಿನ್ನದ ಬೆಲೆಗಿಂತ ಹೆಚ್ಚಾಗಿರುತ್ತದೆ, ಏಕೆಂದರೆ ಇದು ಆಭರಣ ಮತ್ತು ಇತರ ವೆಚ್ಚ ಒಳಗೊಂಡಿರುತ್ತದೆ.

ಇದನ್ನೂ ಓದಿ: Gold Rate Today: ವೀಕೆಂಡ್‌ನಲ್ಲಿ ಬೆಲೆ ಏರಿಕೆ ಕಾಣದ ಚಿನ್ನ, ಈಗಲೇ ಖರೀದಿಸಿದರೆ ಚೆನ್ನ

Continue Reading
Advertisement
Theft Case In Bengaluru
ಬೆಂಗಳೂರು2 mins ago

Theft Case : ಹಬ್ಬಕ್ಕೆ ಊರಿಗೆ ಹೋದ ಅಕ್ಕನ ಮನೆಗೆ ಕನ್ನ; ಸಾಕ್ಷಿ ನಾಶಕ್ಕೆ ಖಾರದ ಪುಡಿ ಚೆಲ್ಲಿದ ತಂಗಿ!

Sunita Williams
ತಂತ್ರಜ್ಞಾನ10 mins ago

Sunita Williams: ಸುನೀತಾ ವಿಲಿಯಮ್ಸ್‌ ಮೂರನೇ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ; ಹೊಸ ದಿನಾಂಕ ಶೀಘ್ರ ಘೋಷಣೆ

Money Guide
ಮನಿ ಗೈಡ್17 mins ago

Money Guide: ಮಹಿಳಾ ಸಮ್ಮಾನ್‌ ಸರ್ಟಿಫಿಕೆಟ್‌ ಮತ್ತು ಸುಕನ್ಯಾ ಸಮೃದ್ಧಿ; ಇವುಗಳ ಪ್ರಯೋಜನ ಏನೇನು?

Prajwal Revanna Case HD Revanna gets bail today court asked if there was a chance Hearing adjourned till tomorrow
ಕ್ರೈಂ19 mins ago

Prajwal Revanna Case: ಎಚ್‌.ಡಿ. ರೇವಣ್ಣಗೆ ಇಂದು ಸಿಗದ ಜಾಮೀನು; ಅವಕಾಶ ಇದೆಯೇ ಎಂದು ಕೋರ್ಟ್‌ ಪ್ರಶ್ನೆ; ನಾಳೆಗೆ ವಿಚಾರಣೆ ಮುಂದೂಡಿಕೆ

Rahul Gandhi
ದೇಶ23 mins ago

Rahul Gandhi: ಮೇಲ್ವರ್ಗದವರಿಂದಾಗಿ ಪರೀಕ್ಷೆಗಳಲ್ಲಿ ದಲಿತರು ಫೇಲ್‌; ರಾಹುಲ್‌ ಗಾಂಧಿ ಹೊಸ ವಿವಾದ

5 Day Work in Banks
ವಾಣಿಜ್ಯ35 mins ago

5 Days Work in Banks: ಬ್ಯಾಂಕ್‌ಗಳು ವಾರದಲ್ಲಿ ಐದೇ ದಿನ ಓಪನ್‌ ಇರಲಿವೆ; ಪರ್ಯಾಯ ವ್ಯವಸ್ಥೆಗೆ ಸಜ್ಜಾಗಿ

Theft Case In Bengaluru
ಬೆಂಗಳೂರು46 mins ago

Theft Case : ತಂದೆ ಬೈದಿದ್ದಕ್ಕೆ ಮನೆ ಬಿಟ್ಟು ಆಟೋ ಹತ್ತಿದ ಯುವಕ; 100 ಗ್ರಾಂ ಚಿನ್ನ ಕಸಿದು ಚಾಲಕ ಎಸ್ಕೇಪ್

Salman Khan
ಸಿನಿಮಾ1 hour ago

Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; ಐದನೇ ಆರೋಪಿಯ ಬಂಧನ

Dharamsala Stadium
ಕ್ರೀಡೆ1 hour ago

Dharamsala Stadium: ಧರ್ಮಶಾಲಾದಲ್ಲಿ ಅನಾವರಣಗೊಂಡ ದೇಶದ ಮೊದಲ ಹೈಬ್ರಿಡ್‌ ಕ್ರಿಕೆಟ್ ಪಿಚ್​ನ ವಿಶೇಷತೆ ಏನು?

Gold rate today
ಚಿನ್ನದ ದರ1 hour ago

Gold Rate Today: ಚಿನ್ನದ ಬೆಲೆ ಗ್ರಾಂಗೆ ₹33 ಏರಿಕೆ; 24 ಕ್ಯಾರಟ್‌ ಬಂಗಾರದ ದರ ಇಂದು ₹7,238

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ18 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ19 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ19 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ2 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ2 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ2 days ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ4 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌