Site icon Vistara News

Auto Strike In Bangalore | ಬಾಡಿಗೆ ಬೈಕ್‌ ಸೇವೆಗೆ ವಿರೋಧ; ಡಿ. 29ಕ್ಕೆ ರಾಜಧಾನಿಯಲ್ಲಿ ಆಟೋ ಸಂಚಾರ ಸ್ತಬ್ಧ

auto service

ಬೆಂಗಳೂರು: ರಾಜಧಾನಿ ಬೆಂಗಳೂರಿನ ಆಟೋ ಚಾಲಕರು ಮುಷ್ಕರಕ್ಕೆ ಮುಂದಾಗಿದ್ದು, ರಾಜ್ಯ ಸಾರಿಗೆ ಇಲಾಖೆಯ ವಿರುದ್ಧ ಸಿಡಿದಿದ್ದಾರೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಆ್ಯಪ್ ಬ್ಯಾನ್ ಮಾಡುವುದು ಹಾಗೂ ಬೌನ್ಸ್ ಎಲೆಕ್ಟ್ರಿಕ್ ಬೈಕ್‌ಗೆ ನೀಡಿರುವ ಅನುಮತಿ ವಾಪಸ್ ಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ (Auto Strike In Bangalore) ನಡೆಸುತ್ತಿದ್ದಾರೆ.

ಈ ತಿಂಗಳ 29ರ ಗುರುವಾರದಂದು ಬೆಂಗಳೂರು ಆಟೋ ಚಾಲಕರು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ಸ್ಟೇಷನ್‌ನಿಂದ ಬೃಹತ್ ಆಟೋ ರ‍್ಯಾಲಿ ನಡೆಸಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಮುಷ್ಕರಕ್ಕೆ 21 ಆಟೋ ಸಂಘಟನೆಗಳು ಸಾಥ್ ನೀಡಿದ್ದು, ರಾಜಧಾನಿಯ 2,10,000 ಚಾಲಕರು ಪ್ರತಿಭಟನೆ ನಡೆಸಲಿದ್ದಾರೆ.

ದಿನದಿಂದ ದಿನಕ್ಕೆ ರಾಜಧಾನಿಯಲ್ಲಿ ರ‍್ಯಾಪಿಡೋ ಬೈಕ್ ಟ್ಯಾಕ್ಸಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಆಟೋ ಚಾಲಕರು ಬೀದಿಗೆ ಬೀಳುತ್ತಿದ್ದಾರೆ. ರ‍್ಯಾಪಿಡೋ ಬೈಕ್ ಟ್ಯಾಕ್ಸಿಗೆ ಅನುಮತಿ ಇಲ್ಲದಿದ್ದರೂ ರಾಜಾರೋಷವಾಗಿ ಸಂಚಾರ ಮಾಡುತ್ತಿದೆ. ಆರ್‌ಟಿಒ ಅಧಿಕಾರಿಗಳು ಬೈಕ್ ಟ್ಯಾಕ್ಸಿಗಳನ್ನು ಮಟ್ಟ ಹಾಕುವಲ್ಲಿ ವಿಫಲರಾಗಿದ್ದಾರೆ.

ಜತೆಗೆ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರ ಎಲೆಕ್ಟ್ರಿಕ್ ಬೈಕ್‌ಗಳಿಗೆ ಅನುಮತಿ ನೀಡಿದ್ದು ಇದನ್ನು ವಾಪಸ್‌ ಪಡೆಯಬೇಕು. ವಿಕೆಡ್ ರೈಡ್ ಭಾಗವಾಗಿರುವ ಬೌನ್ಸ್‌ ಕಂಪನಿಯಿಂದ ಮೊದಲ ಹಂತದಲ್ಲಿ 100 ಇ-ಬೈಕ್‌ಗಳನ್ನು ರಸ್ತೆಗಿಳಿಸಲು ನಿರ್ಧರಿಸಿದ್ದು, ಬಳಿಕ ಹಂತ ಹಂತವಾಗಿ 1000 ಇ- ಬೈಕ್‌ಗಳನ್ನು ರಸ್ತೆಗಿಳಿಸಲು ನಿರ್ಧಾರ ಮಾಡಲಾಗಿದೆ. ಈ ಹಿಂದೆ ಕೂಡ ಬೈಕ್ ಸೇವೆ ನೀಡುತ್ತಿದ್ದ ವಿಕೆಡ್ ರೈಡ್ ಕಂಪನಿ, ಕೊರೊನಾ ಸಮಯದಲ್ಲಿ ಸ್ಥಗಿತಗೊಳಿಸಿತ್ತು. ಈಗ ಮತ್ತೆ ಇ-ಬೈಕ್ ಸೇವೆ ನೀಡಲು ಅನುಮತಿ ಕೇಳಿ ಅರ್ಜಿ ಸಲ್ಲಿಸಿದ್ದು ಇದಕ್ಕೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಇದರಿಂದಾಗಿ ಆಟೋ ಬಳಸುವವರ ಸಂಖ್ಯೆ ಕಡಿಮೆ ಆಗಲಿದೆ. ಹೀಗಾಗಿ ಅನುಮತಿಯನ್ನು ವಾಪಸ್‌ ಪಡೆಯಬೇಕೆಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ | WhatsApp New Feature | ಆಕ್ಸಿಡೆಂಟಲ್ ಡಿಲೀಟ್ ಹೊಸ ಫೀಚರ್ ಪರಿಚಯಿಸಿದ ವಾಟ್ಸ್ಆ್ಯಪ್!

Exit mobile version