Site icon Vistara News

Auto Strike In Bengaluru: ಆಟೋ ಚಾಲಕರ ರ‍್ಯಾಲಿಗೆ ಅವಕಾಶ ನೀಡದ ಖಾಕಿ ಪಡೆ; ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶ

BMTC bus window shattered as police refused to allow auto drivers rally

#image_title

ಬೆಂಗಳೂರು: ಆಟೋ ಚಾಲಕರ ರ‍್ಯಾಲಿಗೆ ಪೊಲೀಸರು ಅವಕಾಶ ನೀಡದ ಕಾರಣಕ್ಕೆ ಬಿಎಂಟಿಸಿ ಬಸ್ ಗಾಜು ಒಡೆದು ಆಕ್ರೋಶವನ್ನು ಹೊರಹಾಕಿದ್ದಾರೆ. ಅನಧಿಕೃತ ವೈಟ್‌ಬೋರ್ಡ್‌ ಬೈಕ್‌ ಟ್ಯಾಕ್ಸಿಯಿಂದಾಗಿ ಆಟೋರಿಕ್ಷಾ ಚಾಲಕರ (Auto Strike In Bengaluru) ದುಡಿಮೆಗೆ ಮಾರಕವಾಗಿದೆ ಎಂದು ಆಕ್ರೋಶ ಹೊರಹಾಕಿರುವ ಬೆಂಗಳೂರು ಆಟೋ ಚಾಲಕರ ಸಂಘಗಳ ಒಕ್ಕೂಟವು ಮಾ.20ರಂದು ಸೇವೆಯನ್ನು ಸ್ಥಗಿತಗೊಳಿಸಿ ಮುಷ್ಕರಕ್ಕೆ ಕರೆ ಕೊಟ್ಟಿದ್ದವು.

ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಪಾದಯಾತ್ರೆ ಮೂಲಕ ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಹೊರಟಿದ್ದವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ರ‍್ಯಾಲಿ ಆರಂಭಕ್ಕೂ ಮುನ್ನವೇ ಎಲ್ಲ ಆಟೋ ಚಾಲಕರನ್ನು ವಶಕ್ಕೆ ಪಡೆದುಕೊಂಡಿದ್ದಕ್ಕೆ ಪ್ರತಿಭಟನಾನಿರತ ಆಟೋ ಚಾಲಕರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು.

ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯಲು ಪೊಲೀಸರು ಮುಂದಾದಾಗ ರಸ್ತೆ ಮಧ್ಯೆ ಕುಳಿತು ಚಾಲಕರು ಕಿಡಿಕಾರಿದರು. ಸರ್ಕಾರದ ವಿರುದ್ಧ ಕಪ್ಪುಪಟ್ಟಿ ತೋರಿಸಿ, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮನೆಗೆ ಬಳೆ, ಅರಿಶಿಣ, ಕುಂಕುಮ‌ ಕಳಿಸಿಕೊಡಿ ಎಂದು ಆಕ್ರೋಶ ಹಾರಹಾಕಿದರು. ಆಟೋ ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ್ ಸೇರಿ ಇತರೆ ಪ್ರತಿಭಟನಾನಿರತರನ್ನು ವಶಕ್ಕೆ ಪಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು.

ಮುಷ್ಕರದ ಬಗ್ಗೆ ಪ್ರತಿಕ್ರಿಯೆ ಏನಿದೆ? ಇಲ್ಲಿದೆ ವಿಡಿಯೊ

ಈ ವೇಳೆ ಚಾಲಕರು ರಸ್ತೆ ತಡೆದ ಕಾರಣಕ್ಕೆ ಮೆಜೆಸ್ಟಿಕ್ ರೈಲು ನಿಲ್ದಾಣದ ರಸ್ತೆಯಲ್ಲಿ ಇತರೆ ವಾಹನಗಳ ಓಡಾಟವನ್ನು ಬಂದ್‌ ಮಾಡಲಾಯಿತು. ನೂರಾರು ಸಂಖ್ಯೆಯಲ್ಲಿ ಆಟೋ ಚಾಲಕರು ರಸ್ತೆಗಿಳಿದಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಯಿತು. ರಸ್ತೆಯಲ್ಲಿ ಕುಳಿತಿದ್ದವರನ್ನು ಚದುರಿಸಿ 3 ಬಸ್‌ಗಳಲ್ಲಿ ಮುಷ್ಕರ ನಿರತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

ಸಿಎಂ ಮನೆಯತ್ತ ಆಟೋ ಚಾಲಕರು; ಹೇಳಿದ್ದೇನು? ಇಲ್ಲಿದೆ ವಿಡಿಯೊ

ಏನಿದು ಆಟೋ ಚಾಲಕರ ಪ್ರತಿಭಟನೆ?

ಅನಧಿಕೃತ ವೈಟ್‌ಬೋರ್ಡ್‌ ಬೈಕ್‌ ಟ್ಯಾಕ್ಸಿಯಿಂದಾಗಿ ಆಟೋರಿಕ್ಷಾ ಚಾಲಕರ ದುಡಿಮೆಗೆ ಕಂಟಕವಾಗುತ್ತಿದೆ. ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಯನ್ನು ರಾಜ್ಯದಲ್ಲಿ ಬ್ಯಾನ್‌ ಮಾಡುವಂತೆ ಆಟೋ ಚಾಲಕರು ಒತ್ತಾಯಿಸಿದ್ದಾರೆ. ಈಗಾಗಲೇ ದೆಹಲಿ, ಮಹಾರಾಷ್ಟ್ರ ಮತ್ತು ತೆಲಂಗಾಣದಲ್ಲಿ ಬೈಕ್‌ ಟ್ಯಾಕ್ಸಿಗಳನ್ನು ಬಹಿಷ್ಕಾರ ಮಾಡಲಾಗಿದೆ. ಆದರೆ, ರಾಜ್ಯದಲ್ಲಿ ಈ ಯೋಜನೆಗೆ ಸರ್ಕಾರವೇ ಬೆಂಬಲ ನೀಡುತ್ತಿದೆ. ಕಳೆದ ಎರಡು ವರ್ಷಗಳಿಂದ ಸಾರಿಗೆ ಇಲಾಖೆ ಮತ್ತು ಸಚಿವರ ಬೆಂಬಲದಿಂದಾಗಿ ಆ್ಯಪ್‌ ಆಧಾರಿತ ಅನಧಿಕೃತವಾಗಿ ವೈಟ್‌ಬೋರ್ಡ್‌ ಬೈಕ್‌ ಟ್ಯಾಕ್ಸಿಗಳ ಹಾವಳಿ ಹೆಚ್ಚಾಗಿದೆ ಎಂದು ಆಟೋ ಸಂಘಟನೆ ಮುಖಂಡರು ಕಿಡಿಕಾರಿದ್ದಾರೆ.

ಇದನ್ನೂ ಓದಿ: Auto Strike: ರ‍್ಯಾಪಿಡೋ ಬೈಕ್‌ ಟ್ಯಾಕ್ಸಿಗೆ ವಿರೋಧ; ಆಟೋ ಓಡಾಟಕ್ಕೆ ಬ್ರೇಕ್‌, ರೋಡಿಗಿಳಿದ ಹೆಚ್ಚುವರಿ ಬಿಎಂಟಿಸಿ ಬಸ್‌

ಆಟೋ ಚಾಲಕರು ರಾಜ್ಯ ಸರ್ಕಾರಕ್ಕೆ ಮೂರು ದಿನಗಳ ಡೆಡ್‌ಲೈನ್‌ ಕೊಟ್ಟಿದ್ದು, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಸೋಮವಾರ ಮುಷ್ಕರ ನಡೆಸಲು ಕರೆ ಕೊಟ್ಟಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

Exit mobile version