Site icon Vistara News

Davanagere News: ದುಶ್ಚಟಗಳಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಅತ್ಯವಶ್ಯಕ

bad habbits Awareness Program at Honnalli

ಹೊನ್ನಾಳಿ: ತಾಲೂಕಿನ ಹಳದಮ್ಮ ಬಾಲಕಿಯರ ಹಾಗೂ ಅಕ್ಕಮಹಾದೇವಿ ಪ್ರೌಢಶಾಲೆಯಲ್ಲಿ (High School) ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಮಂಜುನಾಥ್ ಮಾತನಾಡಿ, ದುಶ್ಚಟಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಜಾಗೃತಿ ಅತ್ಯವಶ್ಯಕವಾಗಿದೆ. ವಿದ್ಯಾರ್ಥಿಗಳೂ ಈ ಕುರಿತು ಮಾಹಿತಿ ತಿಳಿದುಕೊಳ್ಳುವುದರಿಂದ ಉತ್ತಮ ಸಮಾಜ ನಿರ್ಮಾಣ ಮಾಡಬಹುದಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Viral News : ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಇನ್ನಿಲ್ಲ; ಅಬ್ಬಾ! ಎಷ್ಟೊಂದು ವರ್ಷ ಬದುಕಿದ್ದರು!

ಕಾರ್ಯಕ್ರಮವನ್ನು ಜಿಲ್ಲಾ ಜನಜಾಗೃತಿ ವೇದಿಕೆಯ ನಿಕಟಪೂರ್ವ ಅಧ್ಯಕ್ಷ ಹೊಸಕೇರಿ ಸುರೇಶ್ ಉದ್ಘಾಟಿಸಿದರು. ಬಳಿಕ ಮಾತನಾಡಿ, ದುಶ್ಚಟದ ಪರಿಣಾಮದ ಬಗ್ಗೆ ಅರಿವು ಮೂಡಿಸಿದರು.

ಕಾರ್ಯಕ್ರಮದಲ್ಲಿ ಮನು ಡುಮ್ಮಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಇದನ್ನೂ ಓದಿ: Weather Report : ಕರಾವಳಿಯಲ್ಲಿ ನಾಳೆ ಗುಡುಗು ಸಹಿತ ವ್ಯಾಪಕ ಮಳೆ

ಈ ಸಂದರ್ಭದಲ್ಲಿ ಕತ್ತಗಿ ನಾಗರಾಜ್. ಯೋಜನಾಧಿಕಾರಿ ನವೀನ್. ಎಂ ಪಿ ಎಂ ಷಣ್ಮುಖಯ್ಯ . ಶಂಕರ್ ಸ್ವಾಮಿ. ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು, ಸಿಬ್ಬಂದಿ ಉಪಸ್ಥಿತರಿದ್ದರು.

Exit mobile version