ಮಂಗಳೂರು: ಅಯ್ಯಪ್ಪ ಮಾಲಾಧಾರಿ (Ayyappa Divoti Assaulted) ಎಬಿವಿಪಿ ಮುಖಂಡನಿಗೆ ಪ್ರಾಂಶುಪಾಲರೊಬ್ಬರು ಹಲ್ಲೆ ಮಾಡಿದ್ದಾರೆಂದು ಆರೋಪಿಸಿ ಮಂಗಳೂರಿನ ಕೆಪಿಟಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳ ಪ್ರತಿಭಟನೆ ನಡೆಸಿದ್ದಾರೆ.
ಕೆಪಿಟಿ ಕಾಲೇಜಿನ ಸಮಸ್ಯೆ ಬಗ್ಗೆ ವಿದ್ಯಾರ್ಥಿಗಳು ಎಬಿವಿಪಿ ಮುಖಂಡ ನಿಶಾನ್ ಆಳ್ವ ಗಮನಕ್ಕೆ ತಂದಿದ್ದರು. ಹೀಗಾಗಿ ಸೋಮವಾರ (ಡಿ.೫) ಸಂಜೆ ಕಾಲೇಜಿಗೆ ಆಗಮಿಸಿ ಪ್ರಾಂಶುಪಾಲರ ಬಳಿ ಮಾತುಕತೆಗೆ ಮುಂದಾಗಿದ್ದಾರೆನ್ನಲಾಗಿದೆ. ಕಾಲೇಜಿನ ಸಮಸ್ಯೆಗಳ ಬಗ್ಗೆ ಪ್ರಾಂಶುಪಾಲ ಹರೀಶ್ ಶೆಟ್ಟಿ ಅವರ ಬಳಿ ನಿಶಾನ್ ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಾದ ಹರೀಶ್ ಶೆಟ್ಟಿ ಬಾಯಿಗೆ ಬಂದಂತೆ ಮಾತನಾಡಿ ಹಲ್ಲೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಹಲ್ಲೆಯನ್ನು ವಿರೋಧಿಸಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಪ್ರಾಂಶುಪಾಲ ಹರೀಶ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಧರಣಿ ಮಾಡಿದ್ದಾರೆ. ಅಯ್ಯಪ್ಪ ಮಾಲೆಯನ್ನು ಧರಿಸಿದ್ದರೂ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕದ್ರಿ ಪೊಲೀಸರು ಆಗಮಿಸಿ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಇದೇ ವೇಳೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಸ್ಥಳಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳ ಅಹವಾಲು ಆಲಿಸಿದ್ದಾರೆ. ಕೊನೆಗೆ ವಿದ್ಯಾರ್ಥಿಗಳನ್ನು ಸಮಾಧಾನ ಪಡಿಸಿದ್ದಾರೆ. ಬಳಿಕ ವಿದ್ಯಾರ್ಥಿಗಳು ಕಾಲೇಜಿನಿಂದ ತೆರಳಿದ್ದಾರೆ.
ಇದನ್ನೂ ಓದಿ | ರೋಹಿಣಿ ಸಿಂಧೂರಿ ವಿರುದ್ಧ ಲಕ್ಕಿ ಅಲಿ ಆರೋಪ: ಕಾನೂನು ಕ್ರಮದ ಎಚ್ಚರಿಕೆ ನೀಡಿದ IAS ಅಧಿಕಾರಿ