Site icon Vistara News

B.S.Yediyurappa: ಯಡಿಯೂರಪ್ಪಗೆ ಮತ್ತೆ ಬಿಗ್‌ ರಿಲೀಫ್‌; ಪೋಕ್ಸೊ ಕೇಸ್‌ನಲ್ಲಿ ಬಂಧಿಸದಂತೆ ಹೈಕೋರ್ಟ್‌ ಸೂಚನೆ

B.S.Yediyurappa

ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (B.S.Yediyurappa) ಅವರಿಗೆ ಮತ್ತೆ ಬಿಗ್‌ ರಿಲೀಫ್‌ ಸಿಕ್ಕಿದೆ. ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿಯನ್ನು ಬಂಧಿಸದಂತೆ ಸಿಐಡಿಗೆ ಹೈಕೋರ್ಟ್‌ ಸೂಚನೆ ನೀಡಿದೆ. ಜತೆಗೆ ಪೋಕ್ಸೋ ವಿಶೇಷ ಕೋರ್ಟ್‌ಗೆ ಹಾಜರಾಗುವುದಕ್ಕೆ ನೀಡಿದ್ದ ವಿನಾಯಿತಿಯನ್ನು ಕೋರ್ಟ್ ಮುಂದುವರಿಸಿದೆ.

ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಮತ್ತು ತನಿಖೆ ರದ್ದುಪಡಿಸುವಂತೆ ಕೋರಿ ಬಿಎಸ್‌ವೈ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್‌ವೈರನ್ನು ಬಂಧಿಸದಂತೆ ಸಿಐಡಿಗೆ ಸೂಚನೆ ನೀಡಿದೆ.

ಇದನ್ನೂ ಓದಿ | Martin Movie: ವಿಎಫ್‌ಎಕ್ಸ್‌ಗೆ 50 ಲಕ್ಷ ಕಮಿಷನ್‌ ಆರೋಪ; ʻಮಾರ್ಟಿನ್‌ʼ ನಿರ್ದೇಶಕ ಎ.ಪಿ. ಅರ್ಜುನ್‌ಗೆ ಸಂಕಷ್ಟ!

ಪೋಕ್ಸೊ ಪ್ರಕರಣಕ್ಕೆ (POCSO Case) ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಇತ್ತೀಚೆಗೆ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿತ್ತು. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಬಿ.ಎಸ್. ಯಡಿಯೂರಪ್ಪ, ಅರುಣ್‌ ಎಂವೈ, ಎಂ.ರುದ್ರೇಶ್‌, ಜಿ.ಮರಿಸ್ವಾಮಿ ಎಂಬುವರ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಹೀಗಾಗಿ ಒಂದನೇ ಪೋಕ್ಸೊ ತ್ವರಿತಗತಿ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಿಐಡಿ ಸಲ್ಲಿಸಿತ್ತು.

ಏನಿದು ಪ್ರಕರಣ?

2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

ದರ್ಶನ್‌ಗಾಗಿ ಕೊಲ್ಲೂರು ಮೂಕಾಂಬಿಕೆ ಮೊರೆ ಹೋದ ವಿಜಯಲಕ್ಷ್ಮಿ!

Actor Darshan wife Vijayalakshmi Darshan Visit Kollur Temple

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ (Actor Darshan) ಮನೆ ಊಟ ಕೋರಿ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್ ವಜಾ ಮಾಡಿ ಎಂಬ ಆದೇಶ ಈಗಾಗಲೇ ಬಂದಿದೆ. ಹೀಗಾಗಿ ದರ್ಶನ್‌ಗೆ ಸಂಕಷ್ಟಗಳು ಮಾತ್ರ ನಿವಾರಣೆ ಆಗುತ್ತಿಲ್ಲ. ಇದೀಗ ದರ್ಶನ್ ಬೇಗ ಬಿಡುಗಡೆ ಆಗಲಿ ಎಂದು ವಿಜಯಲಕ್ಷ್ಮೀ ಅವರು ದೇವರ ಮೋರೆ ಹೋಗಿದ್ದಾರೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿ ದೇವಾಲಯದಲ್ಲಿ ನವ ಚಂಡಿಕಾ ಹೋಮ ಮಾಡಿಸಿದ್ದಾರೆ.

ಇದನ್ನೂ ಓದಿ | Koppala News: ಗಾಯಗೊಂಡ ರಣಹದ್ದಿಗೆ ಆರೈಕೆ ಮೂಲಕ ಮಾನವೀಯತೆ ತೋರಿದ ಸ್ನೇಕ್ ಪುಟ್ಟು

ನರಸಿಂಹ ಅಡಿಗ ನೇತೃತ್ವದಲ್ಲಿ ನವ ಚಂಡಿಕಾ ಹೋಮ, ಪಾರಾಯಣ ನಡೆದಿದೆ. ದರ್ಶನ್ ಬಂಧನ ಮುಕ್ತಿಗಾಗಿ ವಿಜಯಲಕ್ಷ್ಮೀ ಪ್ರಾರ್ಥನೆ ಮಾಡಿದ್ದಾರೆ. ಜುಲೈ 24ರಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ದರ್ಶನ್ ಸಹೋದರ ದಿನಕರ್ ತೂಗುದೀಪ್ ಅವರು ಡಿಸಿಎಂ ಡಿಕೆ ಶಿವಕುಮಾರ್​ ಭೇಟಿ ಮಾಡಿದ್ರು. ಮಗನ ಸ್ಕೂಲ್ ಸೀಟ್ ವಿಚಾರಕ್ಕೆ ಚರ್ಚೆ ಮಾಡಿದ್ರು ಎನ್ನಲಾಗ್ತಿದೆ. ದರ್ಶನ್ ವಿಚಾರವಾಗಿ ಮಾತುಕತೆ ನಡೆದಿಲ್ಲ ಎನ್ನಲಾಗ್ತಿದೆ.

Exit mobile version