Site icon Vistara News

Karnataka Election: ಬಿಜೆಪಿ ಆಡಳಿತದಡಿ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗಲಿದೆ: ಬಿ.ಎಸ್‌.ಯಡಿಯೂರಪ್ಪ

B S Yediyurappa Says The state will move forward on the path of development under BJP rule

B S Yediyurappa Says The state will move forward on the path of development under BJP rule

ತುಮಕೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ತಿಪಟೂರು ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಸಿ ಬಿಜೆಪಿ ಅಭ್ಯರ್ಥಿ ಬಿ.ಸಿ.ನಾಗೇಶ್‌ ಪರ ಭರ್ಜರಿ ಪ್ರಚಾರ (Karnataka Election) ನಡೆಸಿದರು. ರೋಡ್‌ ಶೋದಲ್ಲಿ ಸಾವಿರಾರು ಕಾರ್ಯಕರ್ತರು ಭಾಗವಹಿಸಿದ್ದರು.

ನಂತರ ತಿಪಟೂರಿನಲ್ಲಿ ಏರ್ಪಡಿಸಿದ್ದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಬಿ.ಎಸ್‌. ಯಡಿಯೂರಪ್ಪ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ನಮ್ಮ ಜತೆಗಿರುವಾಗ ರಾಜ್ಯ ಅಭಿವೃದ್ಧಿ ಪಥದಲ್ಲಿ ಸಾಗುವುದರಲ್ಲಿ ಅನುಮಾನ ಬೇಡ. ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡಿದ್ದೇನೆ. ರಾಜ್ಯದಲ್ಲಿ ನಾವು 135ಕ್ಕೂ ಹೆಚ್ಚು ಸೀಟುಗಳನ್ನು ಗೆದ್ದು ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿಜೆಪಿಯನ್ನು ಜನತೆ ಈ ಬಾರಿ ಬೆಂಬಲಿಸಲಿದ್ದಾರೆ. ಜನವಿರೋಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸುವುದು ಖಚಿತ. ಕಾಂಗ್ರೆಸ್ ಪಕ್ಷವು ವಿಷಯಗಳೇ ಇಲ್ಲದೆ ಅನಗತ್ಯ ಆರೋಪಗಳನ್ನು ಮಾಡುತ್ತಿದೆ ಎಂದು ಟೀಕಿಸಿದ ಅವರು, ಚುನಾವಣೆಯಲ್ಲಿ ಶಿಕ್ಷಣ ಸಚಿವ, ತಿಪಟೂರು ಶಾಸಕ ಬಿ.ಸಿ. ನಾಗೇಶ್ ಅವರನ್ನು 25 ಸಾವಿರ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಜನರಿಗೆ ಮನವಿ ಮಾಡಿದರು.

ಇದನ್ನೂ ಓದಿ | Karnataka Election 2023: ‘ಪ್ರಿಯಾಂಕ’ ಇದು ಸ್ತ್ರಿಲಿಂಗವೇ, ಪುಲ್ಲಿಂಗವೇ ತಿಳಿಯುತ್ತಿಲ್ಲ ಎಂದು ವ್ಯಂಗ್ಯ ಮಾಡಿದ ಯತ್ನಾಳ್

ಶಿಕ್ಷಣ ಸಚಿವ ನಾಗೇಶ್ ಅವರ ಬಗ್ಗೆ ನಾನು ಏನೂ ಹೇಳುವ ಅಗತ್ಯವಿಲ್ಲ. ಅವರು ತಿಪಟೂರು ಕ್ಷೇತ್ರವನ್ನು ಮಾದರಿ ತಾಲೂಕಾಗಿ ಅಭಿವೃದ್ಧಿಪಡಿಸುತ್ತಿದ್ದು, ಶಿಕಾರಿಪುರಕ್ಕಿಂತ ಹೆಚ್ಚಾಗಿ ಅಭಿವೃದ್ಧಿಪಡಿಸಿರುವ ನಾಗೇಶ್ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇಲ್ಲಿನ ಜನಸ್ತೋಮ ನೋಡಿದರೆ ನಾಗೇಶ್ ಅವರು 25 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಯಡಿಯೂರಪ್ಪ ಅವರು ನುಡಿದರು.

ತಿಪಟೂರಿನಲ್ಲಿ ನಡೆದ ಬಿ.ಎಸ್‌.ಯಡಿಯೂರಪ್ಪ ರೋಡ್‌ ಶೋನಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ತಿಪಟೂರು ತಾಲೂಕಿನ ಜನ ನಾಗೇಶ್ ಅವರನ್ನು ಶಾಸಕರಾಗಿ ಮಾತ್ರವಲ್ಲ, ಮಂತ್ರಿಯಾಗಿ ಆಯ್ಕೆ ಮಾಡಿ ಕಳುಹಿಸುತ್ತಿರುವಿರಿ. ಹೀಗಾಗಿ, ತಮ್ಮ ಸಂಪೂರ್ಣ ಆಶೀರ್ವಾದ ನಾಗೇಶ್ ಅವರ ಮೇಲಿರಲಿ ಎಂದು ಕೋರಿದರು.

ಕಾಂಗ್ರೆಸ್ ಮುಳುಗುತ್ತಿರುವ ಹಡಗು, ಅಧಿಕಾರಕ್ಕೆ ಬರಲ್ಲ: ಬಿ.ಎಸ್‌. ಯಡಿಯೂರಪ್ಪ

ಮಂಡ್ಯ: ಪಕ್ಷ ಸಂಘಟನೆಗೆ ನಾನು ರಾಜ್ಯ ಪ್ರವಾಸ ಮಾಡುತ್ತಿದ್ದೇನೆ. ಪ್ರಧಾನಿ ಮೋದಿ ಕೈ ಬಲಪಡಿಸಲು ನಾನು ಪಕ್ಷದ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಬಿಜೆಪಿ ಈ ಬಾರಿ 130 ಸೀಟ್ ಗೆದ್ದು ಅಧಿಕಾರಕ್ಕೆ ಬರಲಿದೆ. ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು, ಅದು ಅಧಿಕಾರಕ್ಕೆ ಬರಲ್ಲ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ಜಿಲ್ಲೆಯ ಕೆ.ಆರ್‌.ಪೇಟೆ ಕ್ಷೇತ್ರದ ಬೂಕನಕೆರೆಯಲ್ಲಿ ಗುರುವಾರ ಆಯೋಜಿಸಿದ್ದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಪಕ್ಷ ನನಗೆ ಎಲ್ಲವನ್ನೂ ಕೊಟ್ಟಿದೆ. ಇದಕ್ಕಾಗಿ ನಾನು ಆಭಾರಿ. ಕೆಲವರು ಈ ಬಗ್ಗೆ ವದಂತಿ ಹರಡುವ ಕೆಲಸ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ, ಅಮಿತ್ ಶಾ ಮುಂದೆ ರಾಹುಲ್ ಗಾಂಧಿ ಏನೂ ಅಲ್ಲ ಎಂದು ಕಿಡಿಕಾರಿದರು.

ಇದನ್ನೂ ಓದಿ | Karnataka Election: ಬಜರಂಗದಳ ನಿಷೇಧ ಭರವಸೆ; ಒಂಟಿಯಾದ್ರಾ ಡಿಕೆಶಿ? ಉಳಿದ ನಾಯಕರಿಂದೇಕೆ ಸಿಗುತ್ತಿಲ್ಲ ಬೆಂಬಲ?

ಉತ್ತರದ ಪ್ರದೇಶದ ಚುನಾವಣೆ ವೇಳೆ ಕಾಂಗ್ರೆಸ್‌ನ ಎಲ್ಲ ನಾಯಕರು ಇದ್ದರೂ ಅವರು ಗೆದ್ದಿದ್ದು ಬೆರಳಣಿಕೆ ಕ್ಷೇತ್ರ ಮಾತ್ರ. ದೇಶದ ಜನ ಜಾಗೃತರಾಗಿದ್ದಾರೆ, ನಾವು ಹಿಂದುಳಿದ ವರ್ಗಕ್ಕೆ ಕೊಟ್ಟ ಸವಲತ್ತಿನಿಂದ ಜನ ಬಿಜೆಪಿ ಕೈ ಹಿಡಿಯುತ್ತಾರೆ. ಅದೂ ಅಲ್ಲದೆ ನಮ್ಮ ಪಕ್ಷ ಈಗ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಜನಪರವಾಗಿದೆ. ಹೀಗಾಗಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ಖಚಿತ ಎಂದು ತಿಳಿಸಿದರು.

Exit mobile version