Site icon Vistara News

BJP Yuva Morcha Meeting: ಸಕ್ಕರೆನಾಡಿನಲ್ಲಿ 2ನೇ ದಿನವೂ ಬಿ.ವೈ.ವಿಜಯೇಂದ್ರ ಹವಾ; ಯುವ ನಾಯಕನಿಗೆ ಅದ್ಧೂರಿ ಸ್ವಾಗತ

BY Vijayendra gets a grand welcome on day 2 in Mandya

#image_title

ಮಂಡ್ಯ: ಸಕ್ಕರೆನಾಡಿನಲ್ಲಿ ಎರಡನೇ ದಿನವೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಹವಾ ಮುಂದುವರಿದಿದ್ದು, ಜಿಲ್ಲಾ ಪ್ರವಾಸದ ಎರಡನೇ ದಿನ ಬುಧವಾರ ಬಿಜೆಪಿ ಯುವ ನಾಯಕನಿಗೆ ಅದ್ಧೂರಿ ಸ್ವಾಗತ ದೊರೆಯಿತು. ತೆರೆದ ವಾಹನದಲ್ಲಿ ವಿಜಯೇಂದ್ರ ಅವರು ಭರ್ಜರಿ ರೋಡ್ ಶೋ ನಡೆಸಿದರು. ಇಂಡುವಾಳುನಿಂದ ವಿಜಯೇಂದ್ರ ಅವರನ್ನು ಸ್ವಾಗತಿಸಿದ ಕಾರ್ಯಕರ್ತರು ಬೈಕ್ ರ‍್ಯಾಲಿ ಮೂಲಕ ನೆಚ್ಚಿನ ಯುವಕ ನಾಯಕನನ್ನು ಮೆರವಣಿಗೆಯಲ್ಲಿ ಮಂಡ್ಯದ ಮೈಷುಗರ್ ಆವರಣದ ಮೈದಾನದಲ್ಲಿ ಏರ್ಪಡಿಸಿದ್ದ ಯುವ ಮೋರ್ಚಾ ಸಮಾವೇಶಕ್ಕೆ (BJP Yuva Morcha Meeting) ಕರೆತಂದರು.

ಮಂಡ್ಯದಲ್ಲಿ ಬೈಕ್‌ ರ‍್ಯಾಲಿ ನಡೆಸಿದ ಬಿಜೆಪಿ ಕಾರ್ಯಕರ್ತರು

ಬಿಜೆಪಿಯಿಂದ ಮಾತ್ರ ಅಭಿವೃದ್ಧಿ ಸಾಧ್ಯ

ಕಾಂಗ್ರೆಸ್, ಜೆಡಿಎಸ್ ಜಾತಿ ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿವೆ. ಕಾಂಗ್ರೆಸ್ ಪಕ್ಷ ಇನ್ನೇನು ಅಧಿಕಾರಕ್ಕೆ ಬಂದೇ ಬಿಟ್ಟಿದೆ ಎನ್ನುವ ಹಾಗೆ ಹಗಲು ಕನಸು ಕಾಣುತ್ತಿದೆ. ಕಳೆದ ಬಾರಿ ಐದು ವರ್ಷ ಆಡಳಿತ ನಡೆಸಿದರೂ ಅವರು ಏನೂ ಅಭಿವೃದ್ಧಿ ಮಾಡಲಿಲ್ಲ. ರಾಜ್ಯದಲ್ಲಿ ಏನೇ ಅಭಿವೃದ್ಧಿ ಆಗಬೇಕಾದರೂ ಬಿಜೆಪಿಯಿಂದ ಮಾತ್ರ ಸಾಧ್ಯ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಇದನ್ನೂ ಓದಿ | Shivamogga News | ರಾಜ್ಯದ 224 ಕ್ಷೇತ್ರಗಳಲ್ಲೂ ಆಪ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು: ಭಾಸ್ಕರ್ ರಾವ್

ಮೈಷುಗರ್‌ ಕಾರ್ಖಾನೆ ಆವರಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಯುವ ಮೋರ್ಚಾ ಸಮಾವೇಶದಲ್ಲಿ ಮಾತನಾಡಿದ ಅವರು, ದಲಿತರ ಬಗ್ಗೆ ಮಾತನಾಡುವ ಕಾಂಗ್ರೆಸ್ ಬೆಂಗಳೂರಿನಲ್ಲಿ ದಲಿತ ಶಾಸಕರೊಬ್ಬರ ಮನೆಗೆ ಬೆಂಕಿ ಬೀಳುವುದನ್ನು ತಡೆಯಲಾಗಲಿಲ್ಲ. ರಾಜ್ಯದಲ್ಲಿ ನಾವು ಅಧಿಕಾರಕ್ಕೆ ಬರುವುದಕ್ಕಾಗಿಯೇ ಎಲ್ಲ ಕ್ಷೇತ್ರಗಳಲ್ಲೂ ಸಮಾವೇಶವನ್ನು ಆಯೋಜನೆ ಮಾಡುತ್ತಿದ್ದೇವೆ. ಪ್ರಧಾನ ಮಂತ್ರಿ ಅವರ ಕಾರ್ಯಕ್ರಮಗಳನ್ನು ಮನೆ ಮನೆಗೂ ತಲುಪಿಸಿದರೆ ನಾವು ಮತ್ತೆ ಅಧಿಕಾರಕ್ಕೆ ಬರುವುದನ್ನು ಯಾವ ದುಷ್ಟ ಶಕ್ತಿಯೂ ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದರು.

ಕೆ.ಆರ್.ಪೇಟೆ ಉಪ ಚುನಾವಣೆಯಲ್ಲಿ ವಿರೋಧ ಪಕ್ಷಗಳು ನಮ್ಮನ್ನು ಲೆಕ್ಕಕ್ಕೇ ಇಟ್ಟುಕೊಂಡಿರಲಿಲ್ಲ. ಕೆ.ಆರ್.ಪೇಟೆಯ ವಿಜಯಯಾತ್ರೆ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲೂ ಸಾಗುವಂತಾಗಲಿ ಎಂದು ತಿಳಿಸಿದರು. ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಇದ್ದರು.

Exit mobile version