Ram Mandir: ಜ. 22ರಂದು ರಜೆ ಘೋಷಿಸಿ; ರಾಜ್ಯ ಸರ್ಕಾರಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹ - Vistara News

ಕರ್ನಾಟಕ

Ram Mandir: ಜ. 22ರಂದು ರಜೆ ಘೋಷಿಸಿ; ರಾಜ್ಯ ಸರ್ಕಾರಕ್ಕೆ ಬಿ.ವೈ.ವಿಜಯೇಂದ್ರ ಆಗ್ರಹ

Ram Mandir: ರಜೆ ನೀಡುವ ಮೂಲಕ ಹಿಂದುಗಳು ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಅವಕಾಶ ಮಾಡಿಕೊಡಬೇಕು ಎಂದು ರಾಜ್ಯ ಸರ್ಕಾರವನ್ನು ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯ ಮಾಡಿದ್ದಾರೆ.

VISTARANEWS.COM


on

BY Vijayendra
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮೂರ್ತಿ ಪ್ರಾಣ ಪ್ರತಿಷ್ಠಾಪನೆ (Ram Mandir) ಕಾರ್ಯವನ್ನು ವೀಕ್ಷಿಸಲು ಅವಕಾಶ ಮಾಡಿಕೊಡಲು ಜನವರಿ 22ರಂದು ರಾಜ್ಯದ ಕಾಂಗ್ರೆಸ್ ಸರ್ಕಾರವು ರಜೆ ಘೋಷಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.

ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಎಸ್‍ಟಿ ಮೋರ್ಚಾ ರಾಜ್ಯ ಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಅನೇಕ ರಾಜ್ಯಗಳು 22ರಂದು ರಜೆ ಘೋಷಿಸಿವೆ. ಕೇಂದ್ರ ಸರ್ಕಾರವೂ ಅರ್ಧ ದಿನ ರಜೆ ಘೋಷಿಸಿದೆ. ಹೀಗಾಗಿ ರಾಜ್ಯ ಸರ್ಕಾರವೂ ರಜೆ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಹಿಂದುಗಳು ಪ್ರಾಣ ಪ್ರತಿಷ್ಠಾಪನೆ ವೀಕ್ಷಿಸಲು ಈ ಮೂಲಕ ಅವಕಾಶ ಮಾಡಿಕೊಡಿ ಎಂದ ಅವರು, ವಾಲ್ಮೀಕಿ ಸಮಾಜ ಮತ್ತು ಬಿಜೆಪಿ ನಡುವೆ ಅವಿನಾಭಾವ ಸಂಬಂಧವಿದೆ. ಬಿಜೆಪಿ ಮತ್ತು ಎಸ್‍ಟಿ ಸಮಾಜದ ನಡುವೆ ಒಂದು ಅವಿನಾಭಾವ ಸಂಬಂಧ ಹಿಂದಿನಿಂದಲೂ ಇದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಲೆಲ್ಲ ಎಸ್‍ಟಿ ಸಮುದಾಯಗಳ ಪಾತ್ರ ದೊಡ್ಡ ಮಟ್ಟದಲ್ಲಿತ್ತು ಎಂದು ವಿಶ್ಲೇಷಿಸಿದರು.

ಇದನ್ನೂ ಓದಿ | Basavaraja Bommai : ಸಿದ್ದರಾಮಯ್ಯಗೆ ಉತ್ತರ ಕೊಡಲು ಬಿಜೆಪಿ ಐಟಿ ಸೆಲ್‌ ಹುಡುಗ್ರು ಸಾಕು ಎಂದ ಬೊಮ್ಮಾಯಿ!

ಹಿರಿಯರಾದ ಶ್ರೀರಾಮುಲು ಅವರು ಎಲ್ಲ ವಿಚಾರಗಳನ್ನು ಉಲ್ಲೇಖ ಮಾಡಿದ್ದಾರೆ. ಯಡಿಯೂರಪ್ಪ ಅವರು ಮಾಡಿದ ಅಭಿವೃದ್ಧಿ ಕಾರ್ಯದ ಹಿಂದೆ ವಾಲ್ಮೀಕಿ ಸಮುದಾಯದ ಶಾಸಕರ ತ್ಯಾಗ ಮತ್ತು ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ನುಡಿದರು.

ಈ ದೇಶದ ಹೆಮ್ಮೆಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಷ್ಟ್ರದ ಅತ್ಯುನ್ನತ ಹುದ್ದೆ ರಾಷ್ಟ್ರಪತಿಗಳ ಸ್ಥಾನಕ್ಕೆ ಎಸ್‍ಟಿ ಸಮುದಾಯದ ಗೌರವಾನ್ವಿತ ದ್ರೌಪದಿ ಮುರ್ಮು ಅವರನ್ನು ಆಯ್ಕೆ ಮಾಡಿದ್ದಾರೆ. ಪ್ರಧಾನಿಯವರು ಎಸ್‍ಟಿ ಸಮುದಾಯದ ಬಗ್ಗೆ ಇಟ್ಟ ಕಳಕಳಿಯನ್ನು ಇದು ಸೂಚಿಸುತ್ತದೆ ಎಂದು ಹೇಳಿದರು.

ಬಿಜೆಪಿ, ಎಸ್‍ಟಿ ಸಮುದಾಯಕ್ಕೆ ಅನೇಕ ಕೊಡುಗೆಗಳನ್ನು ನೀಡಿದೆ. ರಾಜ್ಯದಲ್ಲಿ ಎಸ್‍ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ನಿರಂತರ ಹೋರಾಟ ನಡೆದಿತ್ತು. ಮೀಸಲಾತಿ ಪ್ರಮಾಣ ಹೆಚ್ಚಿಸಿದ ಕೀರ್ತಿ ಬಿಜೆಪಿ, ಬಸವರಾಜ ಬೊಮ್ಮಾಯಿ ಮತ್ತು ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ ಎಂದು ವಿವರಿಸಿದರು.

ಕಾಂಗ್ರೆಸ್ ಪಕ್ಷದವರು ಚುನಾವಣೆ ಸಂದರ್ಭದಲ್ಲಿ ಕೇವಲ ಉದ್ದುದ್ದ ಭಾಷಣ ಮಾಡುತ್ತಾರೆ. ಆದರೆ, ಬಿಜೆಪಿ ಹಾಗಲ್ಲ. ವಾಲ್ಮೀಕಿ ಜಯಂತಿಗೆ ರಜೆ ಘೋಷಿಸಿದ್ದು, ಯಡಿಯೂರಪ್ಪ ಅವರ ಸರ್ಕಾರ. ಅದರ ಸರ್ಕಾರಿ ಆಚರಣೆಗೆ ಸೂಚಿಸಿತ್ತು ಎಂದು ನೆನಪಿಸಿದರು.

ಮೋದಿ ಸರ್ಕಾರವು ಇಡೀ ದೇಶದಲ್ಲಿ ಎಸ್‍ಟಿ ಸಮುದಾಯದ ಉನ್ನತಿಗೆ ಕಾರಣರಾದ ಭಗವಾನ್ ಬಿರ್ಸಾ ಮುಂಡ ಅವರ ಜನ್ಮದಿನವನ್ನು ನವೆಂಬರ್ 15ರಂದು ರಾಷ್ಟ್ರೀಯ ಜನಜಾತಿಯ ದಿನವೆಂದು ಆಚರಿಸಲು ತಿಳಿಸಿದ್ದಾರೆ. ಅವರ ಅಪೇಕ್ಷೆಯಂತೆ ಈ ಆಚರಣೆ ನಡೆದಿದೆ ಎಂದು ತಿಳಿಸಿದರು.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಾವು 28ರಲ್ಲಿ 28 ಕ್ಷೇತ್ರಗಳನ್ನು ಗೆಲ್ಲಬೇಕಿದೆ. ಕಾಂಗ್ರೆಸ್ ಪಕ್ಷವು ಚುನಾವಣಾ ಗಿಮಿಕ್ ಮಾಡುತ್ತಿದೆ. ಗ್ಯಾರಂಟಿಗಳನ್ನು ಅದಕ್ಕಾಗಿಯೇ ಘೋಷಿಸಿದೆ. ಅದು ಫಲಾನುಭವಿಗಳನ್ನು ಸರಿಯಾಗಿ ತಲುಪುತ್ತಿಲ್ಲ. ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರಕಾರವು ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಕೊಡಲು ಶ್ರಮಿಸುತ್ತಿದೆ ಎಂದರು.

ಇದೆಲ್ಲವನ್ನೂ ಅರ್ಥ ಮಾಡಿಕೊಳ್ಳೋಣ. ಯಡಿಯೂರಪ್ಪ, ಬೊಮ್ಮಾಯಿಯವರ ನೇತೃತ್ವದ ಸರ್ಕಾರಗಳ ಯೋಜನೆಗಳ ಕುರಿತು ಜನರಿಗೆ ತಿಳಿಸಬೇಕು. ಬಿಜೆಪಿ- ಜೆಡಿಎಸ್ ಅಭ್ಯರ್ಥಿಗಳೆಲ್ಲರ ಗೆಲುವಿಗೆ ನಾವೆಲ್ಲರೂ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಕೋಟ್ಯಂತರ ಹಿಂದುಗಳು ಇವತ್ತು ಶ್ರೀರಾಮ ಮಂದಿರದ ಉದ್ಘಾಟನೆ, ಪ್ರಾಣ ಪ್ರತಿಷ್ಠಾಪನೆಯನ್ನು ಎದುರು ನೋಡುತ್ತಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಮುಖಂಡರು ಪ್ರಭು ಶ್ರೀರಾಮನ ಕುರಿತು ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಶ್ರೀರಾಮಚಂದ್ರ ಇದ್ದನೋ ಇಲ್ಲವೋ ಎಂಬಂತೆ ಕಾಂಗ್ರೆಸ್‍ನವರು ಮಾತನಾಡುತ್ತಿದ್ದಾರೆ. ಪ್ರಭು ಶ್ರೀರಾಮಚಂದ್ರನ ಅಸ್ತಿತ್ವವನ್ನು ಪ್ರಶ್ನಿಸುವ ಕಾಂಗ್ರೆಸ್ ಪಕ್ಷದವರು ಮಹರ್ಷಿ ವಾಲ್ಮೀಕಿಯವರ ರಾಮಾಯಣಕ್ಕೆ ಗೌರವ ಕೊಡುವುದಿಲ್ಲವೇ ಎಂದು ಪ್ರಶ್ನಿಸಿದರು.

ಮುಂದಿನ ಲೋಕಸಭಾ ಚುನಾವಣೆಯನ್ನು ಬಹಳ ಗಂಭೀರವಾಗಿ ತೆಗೆದುಕೊಂಡು ಕಾಂಗ್ರೆಸ್ ಪಕ್ಷದ ಬೋಗಸ್ ಗ್ಯಾರಂಟಿಗಿಂತ ನರೇಂದ್ರ ಮೋದಿಯವರ ಗ್ಯಾರಂಟಿಯೇ ಶ್ರೇಷ್ಠ ಎಂದು ಸಾಬೀತುಪಡಿಸಿ. ಇದು ಪಂಚರಾಜ್ಯಗಳ ಚುನಾವಣಾ ಫಲಿತಾಂಶದ ಮೂಲಕ ಸಾಬೀತಾಗಿದೆ. ಅದನ್ನು ಪುನರಾವರ್ತನೆ ಮಾಡಬೇಕಿದೆ ಎಂದು ತಿಳಿಸಿದರು.

ಇದನ್ನೂ ಓದಿ | Basavanna cultural leader : ಅಣ್ಣ ಬಸವಣ್ಣ ಇನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ

ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಅವರು ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಮಾಜಿ ಡಿಸಿಎಂ ಗೋವಿಂದ ಕಾರಜೋಳ, ಬಿಜೆಪಿ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸಚಿವ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಸುನೀಲ್ ಕುಮಾರ್, ಮಾಜಿ ಸಚಿವ ಬಿ. ಶ್ರೀರಾಮುಲು, ರಾಜ್ಯ ಉಪಾಧ್ಯಕ್ಷ ರಾಜುಗೌಡ ನಾಯಕ್, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೇರಿ, ಮಾಜಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ವಿಧಾನಪರಿಷತ್ ಸದಸ್ಯೆ ಮತ್ತು ರಾಜ್ಯ ವಕ್ತಾರೆ ಡಾ. ತೇಜಸ್ವಿನಿಗೌಡ, ಮಾಜಿ ಶಾಸಕ ಶಿವನಗೌಡ ನಾಯಕ್, ವಿಧಾನಪರಿಷತ್ ಸದಸ್ಯೆ ಹೇಮಲತಾ ನಾಯಕ್ ಮತ್ತು ಮುಖಂಡರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Parashuram D: ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್‌ ಡಿ ಅವರಿಗೆ ಜಿ.ಎಮ್‌ ಆಗಿ ಪದೋನ್ನತಿ ನೀಡಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ. ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭಿಕ ಕಾರ್ಯದಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ.

VISTARANEWS.COM


on

Parashuram D
Koo


ಬೆಂಗಳೂರು: ವಿಸ್ತಾರ ಮೀಡಿಯಾದ ನೂತನ ಜಿ ಎಮ್‌ (ಆಪರೇಷನ್‌) ಆಗಿ ಪರಶುರಾಮ್ ಡಿ (Parashuram D) ಅವರನ್ನು ನೇಮಕ ಮಾಡಲಾಗಿದೆ. ಪರಶುರಾಮ್‌ ಅವರು ಈಗ ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದರು.

ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ.

ಟೆಲಿವಿಷನ್ ಲೋಕದಲ್ಲಿನ ಎಲ್ಲಾ ಬಗೆಯ ವಿಡಿಯೊ – ಆಡಿಯೊ ಪ್ರೊಡಕ್ಷನ್ ಮತ್ತು ಬ್ರಾಡ್ಕಾಸ್ಟ್ ವಿಭಾಗದಲ್ಲಿ ಭಾರತದಲ್ಲಿಯೇ ಅತ್ಯುತ್ತಮ ತಂತ್ರಜ್ಞರೆಂದು ಗುರುತಿಸಲ್ಪಡುವ ಕೆಲವೇ ಕೆಲವು ಮಂದಿಯಲ್ಲಿ ಪರಶುರಾಮ್ ಅವರೂ ಒಬ್ಬರು ಎಂಬುದು ಹೆಮ್ಮೆಯ ಸಂಗತಿ. ಅವರ ಕಾರ್ಯವ್ಯಾಪ್ತಿ ಅಷ್ಟಕ್ಕೇ ನಿಲ್ಲದೇ ಇನ್ನೂ ಮುಂದಕ್ಕೆ ಹೋಗಿ, ಟಿವಿ ಮಾಧ್ಯಮ ಸಂಸ್ಥೆಗಳನ್ನು ಕಟ್ಟುವಲ್ಲಿಯೂ ಮುಂದುವರಿದಿದೆ. ಆರಂಭದ ಕಾರ್ಯಯೋಜನೆ ರೂಪಿಸುವ ಹಂತದಿಂದ ಹಿಡಿದು, ನಿರ್ಮಾಣ ಕಾರ್ಯ, ಲೋಕಾರ್ಪಣೆವರೆಗಿನ ಎಲ್ಲಾ ಹಂತದಲ್ಲೂ ದಕ್ಷತೆಯಿಂದ ಕಾರ್ಯನಿರ್ವಹಿಸಿ ಅದಕ್ಕೆ ಬೇಕಾಗಿರುವ ನುರಿತ ತಂತ್ರಜ್ಞರ ತಂಡವನ್ನು ಕಟ್ಟಿ ಮುನ್ನಡೆಸುವ ಅದಮ್ಯ ಸಾಮರ್ಥ್ಯವನ್ನು ಇವರು ಬೆಳೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ʼವಿಸ್ತಾರ ನ್ಯೂಸ್‌ʼ ಕನ್ನಡ ವಾಹಿನಿ.

ಈ ಟಿವಿಯಿಂದ ಬಿಗ್‌ ಬಾಸ್‌ವರೆಗೆ

ಪರಶುರಾಮ್‌ ಅವರು ಕನ್ನಡದ ಹೆಸರಾಂತ ಚಾನೆಲ್ ಎನಿಸಿಕೊಂಡ ʼಈ ಟಿವಿʼ ಕನ್ನಡ ವಾಹಿನಿಯ ತಾಂತ್ರಿಕ ವಿಭಾಗದಲ್ಲಿ ಕೆಲಸವನ್ನು ಪ್ರಾರಂಭಿಸಿದ್ದರು. ಕಿರುತೆರೆಯ ಮಾಧ್ಯಮ ಲೋಕದಲ್ಲಿ ಹೊಸ ಹೊಸ ಜವಾಬ್ದಾರಿಯನ್ನು, ಸಾಹಸವನ್ನು ಕೈಗೊಳ್ಳುತ್ತಾ ಟೆಕ್ನಿಕಲ್ ವಿಚಾರದಲ್ಲಿ ಹೆಚ್ಚು ಆಳವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಮುಂದೆ ʼಸಮಯʼ ಮತ್ತು ʼಜನಶ್ರೀʼ ನ್ಯೂಸ್ ಚಾನೆಲ್‌ನಲ್ಲಿ ತಮ್ಮ ಕ್ರಿಯೇಟಿವಿಟಿಯಿಂದ ಮಾಧ್ಯಮ ಲೋಕದಲ್ಲಿ ಸಾಕಷ್ಟು ಹೆಸರನ್ನು ಸಂಪಾದಿಸಿದರು. ಇಂದು ನಾಡಿನಾದ್ಯಂತ ಮನೆ ಮಾತಾಗಿರುವ ರಿಯಾಲಿಟಿ ಶೋ ʼಬಿಗ್ ಬಾಸ್ʼ ಕನ್ನಡದ ಆನ್ ಲೈನ್ ತಾಂತ್ರಿಕ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ‘ಎಂಡಮೋಲ್’ ಕಂಪನಿಯಿಂದ ವಿಶೇಷ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಲೇಟೆಸ್ಟ್​ ಸುದ್ದಿಗಳಿಗಾಗಿ ವಿಸ್ತಾರ ನ್ಯೂಸ್​ ಓದಿ

ಈಗಿನ ʼರಿಪಬ್ಲಿಕ್ ಕನ್ನಡʼ ಚಾನೆಲ್ ಆಗಿ ಪರಿವರ್ತನೆಯಾಗಿರುವ ಅಂದಿನ ʼದಿಗ್ವಿಜಯ ನ್ಯೂಸ್ʼ ಚಾನೆಲ್‌ನಲ್ಲಿ “ಪ್ರೊಡಕ್ಷನ್ ಹೆಡ್” ಆಗಿ ತಮ್ಮದೇ ಆದ ಕ್ರಿಯಾಶೀಲ ತಂಡವನ್ನು ರಚಿಸಿಕೊಂಡು ದಿಗ್ವಿಜಯ ಚಾನೆಲ್ ಅನ್ನು ಕ್ರಿಯೇಟಿವ್ ಆಗಿ ಮುನ್ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಛಾಪು

ತಮ್ಮದೇ ಆದ “ಅಧಿತಿ ಲಿಂಕ್ ಮೀಡಿಯಾ” ಎಂಬ ಸಂಸ್ಥೆಯ ಮೂಲಕ ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಲೋಕದಲ್ಲಿ ಹೊಸ ಛಾಪನ್ನೇ ಇವರು ಮೂಡಿಸಿ ಅಮೆಜಾನ್ ಪ್ರೈಮ್ ಮತ್ತು ಸ್ಪೈಸ್ ಕಂಪನಿಯೊಂದಿಗೆ ಚಲನಚಿತ್ರಗಳ ಪ್ರಮೋಷನ್ ವಿಭಾಗದಲ್ಲಿ ಹಾಗೂ ಮೈತ್ರಿ ಮೂವೀಸ್, ಗೀತಾ ಪಿಕ್ಚರ್ಸ್‌ನಂತಹ ತೆಲುಗಿನ ದೊಡ್ಡ, ದೊಡ್ಡ ಸಂಸ್ಥೆಯೊಂದಿಗೆ ಪ್ರಚಾರ ವಿಭಾಗದಲ್ಲಿ ಪಾಲುದಾರರಾಗಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಟೈಮ್ಸ್ ಗ್ರೂಪ್‌ನ ಇವೆಂಟ್ಸ್‌ಗಳನ್ನು ಸಮರ್ಥವಾಗಿ ತಮ್ಮ ಅಧಿತಿ ಲಿಂಕ್ ಮೀಡಿಯಾದ ಮೂಲಕ ನಿಭಾಯಿಸಿದ್ದಾರೆ. ತಮ್ಮದೇ ಆದ ಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿ ಆಡಳಿತಾತ್ಮಕ ವಿಚಾರದಲ್ಲಿ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.

ʼವಿಸ್ತಾರ ನ್ಯೂಸ್‌ʼ ಹಿಂದಿನ ಶಕ್ತಿ:

ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭದ ಮೊದಲ ಸದಸ್ಯರಾಗಿ, ಚಾನೆಲ್ ಪ್ರಾರಂಭಿಸಬೇಕೆಂಬ ಮೊದಲ ಹೆಜ್ಜೆಯಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ. ಪೂರ್ವ ತಯಾರಿಯಿಂದ ಹಿಡಿದು ಚಾನೆಲ್ ಲೋಕಾರ್ಪಣೆಯವರೆಗೆ ಆಡಳಿತ ಮಂಡಳಿ ಹಾಗೂ ಸಹೋದ್ಯೋಗಿಗಳ ಜೊತೆಗಿದ್ದು ಅವರು ಪಟ್ಟ ಕಠಿಣ ಪರಿಶ್ರಮ ಹಾಗೂ ಅವರ ನಿಷ್ಠೆ, ಪ್ರಾಮಾಣಿಕತೆ, ಬದ್ಧತೆಯ ಫಲವಾಗಿ ಈಗ ಸಂಸ್ಥೆಯ ಉನ್ನತವಾದ ಜವಾಬ್ದಾರಿಯನ್ನು ನಿರ್ವಹಿಸುವ ಹಂತಕ್ಕೆ ತಲುಪಿದ್ದಾರೆ.

ಶುಭ ಹಾರೈಕೆ:

ಮಾಧ್ಯಮ ಲೋಕದಲ್ಲಿನ ಎಲ್ಲಾ ಹಂತದ ಅವರ ಒಟ್ಟೂ ಅನುಭವಕ್ಕೆ ವಿಸ್ತಾರ ಮೀಡಿಯಾ ಸಂಸ್ಥೆಯನ್ನು ಬಹಳ ಎತ್ತರಕ್ಕೆ ಕೊಂಡೊಯ್ಯುವ ಶಕ್ತಿ ಇದೆ. ಅವರ ಹಾಗೂ ಇಡೀ ವಿಸ್ತಾರ ತಂಡದ ಪರಿಶ್ರಮ ಜೊತೆಗೂಡಿ ವಿಸ್ತಾರ ಮೀಡಿಯಾ ಸಂಸ್ಥೆ ದೇಶದಲ್ಲಿಯೇ ಗುರುತಿಸಿಕೊಳ್ಳುವಂತಹ ಹೆಮ್ಮೆಯ ಸಂಸ್ಥೆಯಾಗಿ ರೂಪುಗೊಳ್ಳಲಿದೆ ಎಂಬ ವಿಶ್ವಾಸ ನಮಗಿದೆ. ಪರಶುರಾಮ್‌ ಡಿ ಅವರಿಗೆ ಶುಭ ಹಾರೈಸುತ್ತೇವೆ ಎಂದು ವಿಸ್ತಾರ ಮೀಡಿಯಾ ಪ್ರೈ. ಲಿ.ನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಉಡುಪಿ

Lakshmi Hebbalkar: ನಕಲಿ ಪರಶುರಾಮ ಪ್ರತಿಮೆ ಸ್ಥಾಪನೆ; ಎಸ್ಐಟಿ ತನಿಖೆಗೆ ಹೆಬ್ಬಾಳಕರ್ ಒತ್ತಾಯ

Lakshmi Hebbalkar: ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

VISTARANEWS.COM


on

Protest by Congress alleged that MLA Sunil Kumar has built a fake Parashurama statue
Koo

ಬೆಂಗಳೂರು: ನಕಲಿ ಪರಶುರಾಮ ಮೂರ್ತಿ ಸ್ಥಾಪಿಸುವ ಮೂಲಕ ಕಾರ್ಕಳ ಕ್ಷೇತ್ರದ ಶಾಸಕ ಸುನೀಲ್ ಕುಮಾರ್‌, ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (Lakshmi Hebbalkar) ಕಿಡಿ ಕಾಡಿದ್ದಾರೆ.

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ನಕಲಿ ಪರಶುರಾಮ ಮೂರ್ತಿ ನಿರ್ಮಿಸಿರುವ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿ. ಸುನೀಲ್ ಕುಮಾರ್ ವಿರುದ್ಧ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆಯಲ್ಲಿ ಮಾತನಾಡಿದ ಸಚಿವರು, ಬಿಜೆಪಿ ಶಾಸಕ ಸುನೀಲ್ ಕುಮಾರ್ ವಿರುದ್ಧ ಟೀಕಾ ಪ್ರಹಾರ ನಡೆಸಿದರು.

ಸುಳ್ಳನ್ನು ನೂರು ಬಾರಿ ಹೇಳಿ ನಿಜ ಮಾಡುವ ಕಲೆ ಸುನೀಲ್ ಕುಮಾರ್ ಅವರಿಗಿದೆ. ನಾನು ಬೆಳಗಾವಿಯಲ್ಲಿ ಶಿವಾಜಿ ಪ್ರತಿಮೆ ನಿರ್ಮಿಸಿರುವೆ, ನನಗೂ ಗೊತ್ತಿದೆ ಎಷ್ಟು ಸಮಯ ಬೇಕಾಗುತ್ತದೆ ಎಂದು. ಆದರೆ ಕೇವಲ 3 ತಿಂಗಳಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಕಂಚಿನ ಪರಶುರಾಮ ಪ್ರತಿಮೆ ನಿರ್ಮಿಸಲಾಗಿದೆ. ಇಂಥ ಪ್ರತಿಮೆಗಳನ್ನು ನಿರ್ಮಿಸುವಾಗ ವರ್ಷಾನುಗಟ್ಟಲೆ ಸಮಯ ಹಿಡಿಯುತ್ತದೆ. ಚುನಾವಣೆಗಾಗಿ ಕೇವಲ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣ ಕಾರ್ಯ ಮುಗಿಸಿದ್ದು, ಕೇಳಿ ಆಶ್ಚರ್ಯ ಉಂಟಾಯಿತು ಎಂದರು.

ಇದನ್ನೂ ಓದಿ: Lakshmi Hebbalkar: ಇ.ಡಿ ಮೂಲಕ ಸಿದ್ದರಾಮಯ್ಯ ಹೆಸರು ಕೆಡಿಸಲು ಹುನ್ನಾರ; ಹೆಬ್ಬಾಳಕರ್ ಆರೋಪ

ಹಿಂದುತ್ವದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸಿ ಮತ ಪಡೆಯುವ ಬಿಜೆಪಿಗರಿಗೆ ಕರಾವಳಿ ಜನತೆ ಮುಂದಿನ ದಿನಗಳಲ್ಲಿ ಪಾಠ ಕಲಿಸಬೇಕಿದೆ. ರಾಮಮಂದಿರ ನಿರ್ಮಾಣಗೊಂಡಿರುವ ಅಯೋಧ್ಯೆಯಲ್ಲಿಯೇ ಬಿಜೆಪಿ ಸೋತಿದ್ದು, ಕರಾವಳಿ ಜನರು ಕೂಡ ಬಿಜೆಪಿಗೆ ಪಾಠ ಕಲಿಸಬೇಕಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಅಧಿವೇಶನದಲ್ಲಿ ಸುನೀಲ್ ಕುಮಾರ್, ಮುಖ್ಯಮಂತ್ರಿಗಳ ವಿರುದ್ಧ ಟೀಕಾ ಪ್ರಹಾರ ಮಾಡುವುದನ್ನು ನೋಡಿದರೆ ತಾನೊಬ್ಬ ಸಂಭಾವಿತ ಎಂದು ತೋರಿಸಿಕೊಳ್ಳುತ್ತಾರೆ. ಪರಶುರಾಮನ ನಕಲಿ ಪ್ರತಿಮೆ ಸ್ಥಾಪಿಸಿ ಜನರ ದಿಕ್ಕನ್ನು ತಪ್ಪಿಸುತ್ತಿರುವ ಸುನೀಲ್ ಕುಮಾರ್ ಮಾಡಿದ ತಪ್ಪಿಗೆ ಶಿಕ್ಷೆಯಾಗಲೇಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಗ್ರಹಿಸಿದರು.

ಈ ವೇಳೆ ಮಾಜಿ ಸಚಿವರಾದ ರಮಾನಾಥ್ ರೈ, ವಿನಯ್ ಕುಮಾರ್ ಸೊರಕೆ, ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜ, ಮುಖಂಡರಾದ ಜಯಪ್ರಕಾಶ್ ಹೆಗ್ಡೆ, ‌ಉದಯ್ ಕುಮಾರ್ ಶೆಟ್ಟಿ ಮುನಿಯಾಳ್, ಮಿಥುನ್ ರೈ, ದಿನೇಶ್ ಹೆಗ್ಡೆ ಮೊಳಹಳ್ಳಿ, ಸುಧೀರ್ ಕುಮಾರ್ ಮೊರಳ್ಳಿ, ಉಡುಪಿ‌ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಹರೀಶ್ ಕುಮಾರ್, ಕಿಶನ್ ಹೆಗ್ಡೆ, ಕಿರಣ್ ಹೆಗ್ಡೆ, ರಮೇಶ್ ಕಾಂಚನ್, ಕೃಪಾ ಆಳ್ವ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಇದನ್ನೂ ಓದಿ: IBPS: ರಾಷ್ಟ್ರೀಕೃತ ಬ್ಯಾಂಕ್‌ಗಳ 6,128 ಹುದ್ದೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ; ಇಲ್ಲಿದೆ ಹೊಸ ಟೈಮ್‌ ಟೇಬಲ್‌

ಎಸ್‌ಐಟಿ ತನಿಖೆಗೆ ಆಗ್ರಹಿಸಿ ಸಿಎಂಗೆ ಮನವಿ

ಪರಶುರಾಮ ಥೀಮ್ ನಿರ್ಮಾಣದಲ್ಲಿ ಆಗಿರುವ ಅವ್ಯವಹಾರ ಹಾಗೂ ನಕಲಿ ಪರಶುರಾಮ ಪ್ರತಿಮೆ ನಿರ್ಮಾಣದ ಪ್ರಕರಣವನ್ನು ವಿಶೇಷ ತನಿಖಾ ದಳ (ಎಸ್‌ಐಟಿ)‌ ರಚಿಸಿ ತನಿಖೆ ಮಾಡಿಸಬೇಕು ಎಂದು ಆಗ್ರಹಿಸಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ನೇತೃತ್ವದ ನಿಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಾಯಿತು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಮುಖಂಡರು ನಿಯೋಗದಲ್ಲಿ ಇದ್ದರು.

Continue Reading

ಕರ್ನಾಟಕ

CM Siddaramaiah: ರೈತರು, ರಾಜ್ಯಕ್ಕೆ ಕೇಂದ್ರ ಪಂಗನಾಮ; ತಿಂಡಿ ತಿನ್ನುತ್ತಲೇ ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಆಕ್ರೋಶ

CM Siddaramaiah: ಕೇಂದ್ರದ ಬಜೆಟ್‌ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಕೈಗಾರಿಕೆ, ರೈಲ್ವೆ ಸೇರಿ ಯಾವುದೇ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ಕೊಟ್ಟಿಲ್ಲ. ರಾಯಚೂರಿನಲ್ಲಿ ಒಂದು ಏಮ್ಸ್‌ ನಿರ್ಮಿಸಿ ಎಂದು ಬಹಳ ವರ್ಷಗಳಿಂದ ಕೇಳುತ್ತಿದ್ದೇವೆ. ಆದರೆ, ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಕೊಟ್ಟಿಲ್ಲ” ಎಂಬುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ. ಮಧ್ಯಮ ವರ್ಗದವರ

VISTARANEWS.COM


on

CM Siddaramaiah
Koo

ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ (Nirmala Sitharaman) ಅವರು ಬಜೆಟ್‌ (Union Budget 2024) ಮಂಡನೆ ಮಾಡಿದ್ದು, ಬಜೆಟ್‌ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಬಣ್ಣಿಸಿದ್ದಾರೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಸುದ್ದಿಗೋಷ್ಠಿ ನಡೆಸಿ, ಕೇಂದ್ರದ ಬಜೆಟ್‌ ಕುರಿತು ಅಸಮಾಧಾನ ವ್ಯಕ್ತಪಡಿಸಿದ್ದಾರೆ. “ಆಂಧ್ರಪ್ರದೇಶ ಹಾಗೂ ಬಿಹಾರ ಹೊರತುಪಡಿಸಿ ಬೇರೆ ರಾಜ್ಯಗಳಿಗೆ ಬಜೆಟ್‌ನಿಂದ ಯಾವುದೇ ಅನುಕೂಲ ಆಗಿಲ್ಲ. ಕರ್ನಾಟಕಕ್ಕಂತೂ ಭಾರಿ ಅನ್ಯಾಯವಾಗಿದೆ” ಎಂಬುದಾಗಿ ಹೇಳಿದರು. ಸುದ್ದಿಗೋಷ್ಠಿ ನಡೆಸುವಾಗ ಅವರು ತಿಂಡಿ ತಿನ್ನುತ್ತಲೇ ಸುದ್ದಿಗಾರರೊಂದಿಗೆ ಮಾತನಾಡಿದರು. ಕೊನೆಗೆ ಸುದ್ದಿಗಾರರಿಗೂ ತಿಂಡಿ ತಿನ್ನಿ ಎಂದರು.

“ಕೇಂದ್ರದ ಬಜೆಟ್‌ನಿಂದ ಕರ್ನಾಟಕಕ್ಕೆ ಯಾವುದೇ ರೀತಿಯಿಂದ ಅನುಕೂಲವಾಗಿಲ್ಲ. ಕೈಗಾರಿಕೆ, ರೈಲ್ವೆ ಸೇರಿ ಯಾವುದೇ ಕ್ಷೇತ್ರಗಳಿಗೂ ಹೆಚ್ಚಿನ ಅನುದಾನ ಕೊಟ್ಟಿಲ್ಲ. ರಾಯಚೂರಿನಲ್ಲಿ ಒಂದು ಏಮ್ಸ್‌ ನಿರ್ಮಿಸಿ ಎಂದು ಬಹಳ ವರ್ಷಗಳಿಂದ ಕೇಳುತ್ತಿದ್ದೇವೆ. ಆದರೆ, ಬಜೆಟ್‌ನಲ್ಲಿ ಕರ್ನಾಟಕಕ್ಕೆ ಏನೂ ಕೊಟ್ಟಿಲ್ಲ. ಒಟ್ಟಿನಲ್ಲಿ ಈ ಬಜೆಟ್‌ ನಿರಾಶಾದಾಯಕ, ನೀರಸವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ರೈತರಿಗೆ ಭಾರಿ ಅನ್ಯಾಯವಾಗಿದೆ. ಅವರಿಗೆ ಕೇಂದ್ರ ಸರ್ಕಾರ ಪಂಗನಾಮ ಹಾಕಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಕರ್ನಾಟಕದ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿ ಕೊಡುತ್ತೇವೆ ಎಂಬುದಾಗಿ ನಿರ್ಮಲಾ ಸೀತಾರಾಮನ್‌ ಅವರು ಹೇಳಿದ್ದರು. ಈ ಬಜೆಟ್‌ನಲ್ಲಾದರೂ ನಮಗೆ 5,300 ಕೋಟಿ ರೂ. ಕೊಡಿ ಎಂಬುದಾಗಿ ಮನವಿ ಮಾಡಿದ್ದೆವು. ಮೇಕೆದಾಟು, ಮಹದಾಯಿ, ಕೃಷ್ಣಾ ಮೇಲ್ದಂಡೆ ಯೋಜನೆ, ಬೆಂಗಳೂರು ನಗರಾಭಿವೃದ್ಧಿ ಯೋಜನೆ, 15ನೇ ಹಣಕಾಸು ಆಯೋಗದ ಶಿಫಾರಸುಗಳ ಜಾರಿ ಸೇರಿ ಹಲವು ಬೇಡಿಕೆಗಳನ್ನು ಇಡಲಾಗಿತ್ತು. ಒಟ್ಟು 11,495 ಕೋಟಿ ರೂ. ಕೊಡಿ ಎಂದು ಕೇಳಿದ್ದೆವು. ಆದರೆ, ಕೇಂದ್ರ ಸರ್ಕಾರವು ಯಾವುದೇ ರೀತಿಯ ಹಣ ಬಿಡುಗಡೆ ಮಾಡಿಲ್ಲ” ಎಂದು ಹೇಳಿದರು.

ಬಿಹಾರ, ಆಂಧ್ರಕ್ಕೆ ಮಾತ್ರ ಬಜೆಟ್‌ನಿಂದ ಅನುಕೂಲ

“ಬಿಹಾರ ಹಾಗೂ ಆಂಧ್ರಪ್ರದೇಶವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಬಜೆಟ್‌ ಮಂಡಿಸಿದೆ. ಆದರೆ, ಕರ್ನಾಟಕಕ್ಕೆ ಬಜೆಟ್‌ನಿಂದ ಯಾವುದೇ ಪ್ರಯೋಜನವಾಗಿಲ್ಲ. ನಿರ್ಮಲಾ ಸೀತಾರಾಮನ್‌ ಅವರು ಕರೆದ ಸಭೆಯಲ್ಲಿ ನಾವು ನೀಡಿದ ಬೇಡಿಕೆಗಳನ್ನು ಈಡೇರಿಸಿಲ್ಲ. ಬಜೆಟ್‌ಗೂ ಮುನ್ನ ಅವರೇ ಕರೆದ ಸಭೆಯಲ್ಲಿ ಕರ್ನಾಟಕಕ್ಕೆ ಏನು ಬೇಕು, ಬೇಡಿಕೆಗಳು ಏನು ಎಂಬುದನ್ನು ತಿಳಿಸಿದ್ದೆವು. ಆದರೆ, ಒಂದೇ ಒಂದು ಬೇಡಿಕೆಯನ್ನು ಅವರು ಈಡೇರಿಸಿಲ್ಲ” ಎಂದು ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದರು.

“ಬಿಜೆಪಿಗೆ ಕೇಂದ್ರದಲ್ಲಿ ಅಧಿಕಾರ ಕಳೆದುಕೊಳ್ಳುವ ಭೀತಿ ಇದೆ. ರಾಜಕೀಯ ಅಸ್ತಿತ್ವಕ್ಕಾಗಿ ಅದು ಹೋರಾಡುತ್ತಿದೆ. ಇದೇ ಕಾರಣಕ್ಕಾಗಿ, ಹೆಚ್ಚಿನ ಯೋಜನೆ, ಹಣವನ್ನು ಆಂಧ್ರಪ್ರದೇಶ ಹಾಗೂ ಬಿಹಾರಕ್ಕೆ ನೀಡಲಾಗಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಇಂತಹ ನಡೆ ಅನುಸರಿಸುವುದು ಮಾರಕವಾಗಿದೆ. ನಮಗೆ ಕೇಂದ್ರ ಸರ್ಕಾರದ ಬಜೆಟ್‌ ಮೇಲೆ ವಿಶ್ವಾಸವೇ ಹೊರಟು ಹೋಗಿದೆ” ಎಂದು ಹೇಳಿದರು.

ಇದನ್ನೂ ಓದಿ: Union Budget 2024 : ಬಜೆಟ್​ನಲ್ಲಿ ದೊಡ್ಡ ಮೊತ್ತ ಮೀಸಲಾಗಿರುವುದು ಸಾಲದ ಬಡ್ಡಿ ಕಟ್ಟಲು!

Continue Reading

ವಿಜಯನಗರ

Assault Case : ಹೋಮ್‌ ವರ್ಕ್‌ ಮಾಡದ್ದಕ್ಕೆ ಬಾಲಕಿಗೆ ಬಾಸುಂಡೆ ಬರುವಂತೆ ಬಾರಿಸಿದ ಮುಖ್ಯ ಶಿಕ್ಷಕಿ

Assault case : ವಿಜಯನಗರದಲ್ಲಿ ವಿದ್ಯಾರ್ಥಿನಿ ಹೋಮ್‌ ವರ್ಕ್‌ (Home Work) ಮಾಡದ್ದಕ್ಕೆ ಮುಖ್ಯ ಶಿಕ್ಷಕಿ ಮನಬಂದಂತೆ ಥಳಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಬಾಲಕಿ ಪೋಷಕರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

VISTARANEWS.COM


on

By

assault case
Koo

ವಿಜಯನಗರ : ಹೋಮ್‌ ವರ್ಕ್ (Home Work) ಮಾಡದಿದ್ದಕ್ಕೆ ವಿದ್ಯಾರ್ಥಿನಿಗೆ ಕಾಲು ಊತ ಬರುವಂತೆ ಮುಖ್ಯ ಶಿಕ್ಷಕಿ (Assault Case) ಬಾರಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಬಣವಿಕಲ್ಲು ಗ್ರಾಮದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಘಟನೆ ನಡೆದಿದೆ.

ವಿಜ್ಞಾನ ವಿಷಯದ ಹೋಂ ವರ್ಕ್ ಮಾಡದಿದ್ದಕ್ಕೆ ಮುಖ್ಯ ಶಿಕ್ಷಕಿ ವಾಣಿ ಎಂಬುವವರು ವಿದ್ಯಾರ್ಥಿನಿಗೆ ಮನಬಂದಂತೆ ಹೊಡೆದಿದ್ದಾರೆ. ಮಾನಸ ಎಂಬಾಕೆಗೆ ಈ ಮೊದಲು ಅಪಘಾತ ಆಗಿದ್ದರಿಂದ ಕಾಲಿಗೆ ರಾಡ್ ಅಳವಡಿಸಲಾಗಿತ್ತು. ಮತ್ತೆ ಅದೇ ಕಾಲಿಗೆ ಶಿಕ್ಷಕಿ ವಾಣಿ ಸ್ಕೇಲ್‌ನಿಂದ ಜೋರಾಗಿ ಹೊಡೆದಿದ್ದಾರೆ. ಜೋರಾಗಿ ಹೊಡೆತದಿಂದಾಗಿ ಕಾಲು ಊದಿಕೊಂಡು ಬಾಲಕಿಗೆ ನಡೆದಾಡುವುದಕ್ಕೂ ಸಾಧ್ಯವಾಗಿಲ್ಲ.

ಇನ್ನೂ ಮನಸೋ ಇಚ್ಛೆ ಥಳಿಸಿದ ಶಿಕ್ಷಕಿ ವಾಣಿಯೇ ಬಾಲಕಿಯನ್ನು ಚಿತ್ರದುರ್ಗದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಎಲುಬು ಮತ್ತು ಮೂಳೆ ತಜ್ಞರಿಂದ ತಪಾಸಣೆ ಮಾಡಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಬಾಲಕಿಯ ಕಾಲಿಗೆ ಬ್ಯಾಂಡೇಜ್ ಹಾಕಿ ಸೂಕ್ತ ಚಿಕಿತ್ಸೆ ನೀಡಿ ವೈದ್ಯರು ಕಳಿಸಿದ್ದಾರೆ. ಇತ್ತ ಬಾಲಕಿಯನ್ನು ನೋಡಲೆಂದು ಪಾಲಕರು ಭಾನುವಾರ ಶಾಲೆಗೆ ಬಂದಿದ್ದಾರೆ. ಆಗಲೇ ಮಗಳ ಕಾಲಿನ ಸ್ಥಿತಿ ನೋಡಿ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಪೋಷಕರು ಬಳಿಕ ಮುಖ್ಯ ಶಿಕ್ಷಕಿ ವಾಣಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Murder case : ಭೂ ವಿವಾದಕ್ಕಾಗಿ ಪರಸ್ಪರ ಹೊಡೆದಾಡಿಕೊಂಡ ಅಣ್ಣ-ತಮ್ಮ ಮೃತ್ಯು

ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರಗಳ ರಕ್ಷಣೆ

ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದಲ್ಲಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಜಾನುವಾರಗಳ ರಕ್ಷಣೆ ಮಾಡಲಾಗಿದೆ. ಬುಲೆರೋ ವಾಹನದಲ್ಲಿ ಸಾಗಿಸುತ್ತಿದ್ದ 7 ಹಸುಗಳನ್ನು ಸ್ಥಳೀಯರು ರಕ್ಷಿಸಿದ್ದಾರೆ. ಚಿತ್ರದುರ್ಗದಿಂದ ಮಧುಗಿರಿ ಮೂಲಕ ಗೌರಿಬಿದನೂರಿನ ಅಲ್ಲಿಪುರಕ್ಕೆ ಸಾಗಿಸುತ್ತಿದ್ದರು ಎನ್ನಲಾಗಿದೆ. ಮಧುಗಿರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಕಬ್ಬಿನ ಗದ್ದೆಯಲ್ಲಿ ಬಲೆಗೆ ಬಿದ್ದ ಚಿರತೆ

ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ಮಂಟೂರ ಗ್ರಾಮದಲ್ಲಿ ಕಳೆದೊಂದು ವಾರದಿಂದ ಆತಂಕ ಸೃಷ್ಟಿಸಿದ್ದ ಚಿರತೆಯು ಕೊನೆಗೂ ಕಬ್ಬಿನ ಗದ್ದೆಯಲ್ಲಿ ಬೋನಿಗೆ ಬಿದ್ದಿದೆ. ಬೋನಿಗೆ ಹಾಕಿ ಟ್ಯಾಕ್ಟರ್ ಮೂಲಕ ಸಾಗಾಟ ಮಾಡುವಾಗ ಚಿರತೆ ಎಸ್ಕೇಪ್ ಆಗಿತ್ತು. ಚಿರತೆ ಸೆರೆ ಹಿಡಿಯಲು ಅರಣ್ಯಾಧಿಕಾರಿಗಳು ಮಂಟೂರ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಬೋನು ಇಟ್ಟಿದ್ದರು.

ಬೋನಿನಿಂದ ಪರಾರಿಯಾದ ಚಿರತೆಗೆ ಮತ್ತೆ ಮೂರು ತಾಸು ಕಾರ್ಯಾಚರಣೆ ನಡೆಸಿದ್ದರು. ನಾಪತ್ತೆಯಾಗಿದ್ದ ಚಿರತೆ ಮತ್ತೆ ಮಂಟೂರ ಗ್ರಾಮಸ್ಥರ ಸಹಕಾರದೊಂದಿಗೆ ಸೆರೆಯಾಗಿದೆ. ಚಿರತೆ ಸೆರೆಯಿಂದ ಮಂಟೂರ, ಕಿಶೋರಿ, ಹಲಗಲಿ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Parashuram D
ಪ್ರಮುಖ ಸುದ್ದಿ5 mins ago

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Train Tragedy
Latest10 mins ago

Train Tragedy: ರೈಲ್ವೆ ಹಳಿಗೆ ಬಿದ್ದ ಮಕ್ಕಳನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ತಂದೆ!

Union Budget 2024
ದೇಶ10 mins ago

Union Budget 2024: ಬಜೆಟ್‌ನಲ್ಲಿ ಬಿಹಾರ, ಆಂಧ್ರಪ್ರದೇಶಕ್ಕೆ ಬಂಪರ್‌ ಕೊಡುಗೆ: ಇಲ್ಲಿದೆ ನಗೆಯುಕ್ಕಿಸುವ ಮೀಮ್ಸ್‌

Protest by Congress alleged that MLA Sunil Kumar has built a fake Parashurama statue
ಉಡುಪಿ12 mins ago

Lakshmi Hebbalkar: ನಕಲಿ ಪರಶುರಾಮ ಪ್ರತಿಮೆ ಸ್ಥಾಪನೆ; ಎಸ್ಐಟಿ ತನಿಖೆಗೆ ಹೆಬ್ಬಾಳಕರ್ ಒತ್ತಾಯ

Harshika Poonacha Bhuvann Ponnannaa shares opinion about marriage
ಸ್ಯಾಂಡಲ್ ವುಡ್19 mins ago

Harshika Poonacha: ಮದುವೆ ಆದ್ರೂ ಮಕ್ಕಳು ಬೇಡ ಅನ್ನೋರಿಗೆ ಮುಟ್ಟಿ ನೋಡ್ಕೊಳ್ಳೋ ಹಾಗೆ ಉತ್ತರ ಕೊಟ್ಟ ಹರ್ಷಿಕಾ ಪೂಣಚ್ಚ ದಂಪತಿ!

Team India
ಕ್ರೀಡೆ22 mins ago

Team India: ನೂತನ ಕೋಚ್​ ಗಂಭೀರ್​ ಮಾರ್ಗದರ್ಶನದಲ್ಲಿ ಅಭ್ಯಾಸ ನಡೆಸಿದ ಟೀಮ್​ ಇಂಡಿಯಾ ಆಟಗಾರರು

Viral Video
Latest28 mins ago

Viral Video: ಮೃಗಾಲಯದ ಸಿಬ್ಬಂದಿ ಮೇಲೆ ಸಿಂಹದ ದಾಳಿ; ತಡೆದು ನಿಲ್ಲಿಸಿದ ಸಿಂಹಿಣಿ!

CM Siddaramaiah
ಕರ್ನಾಟಕ29 mins ago

CM Siddaramaiah: ರೈತರು, ರಾಜ್ಯಕ್ಕೆ ಕೇಂದ್ರ ಪಂಗನಾಮ; ತಿಂಡಿ ತಿನ್ನುತ್ತಲೇ ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಆಕ್ರೋಶ

assault case
ವಿಜಯನಗರ45 mins ago

Assault Case : ಹೋಮ್‌ ವರ್ಕ್‌ ಮಾಡದ್ದಕ್ಕೆ ಬಾಲಕಿಗೆ ಬಾಸುಂಡೆ ಬರುವಂತೆ ಬಾರಿಸಿದ ಮುಖ್ಯ ಶಿಕ್ಷಕಿ

Kannada New Movie Simha Roopini Character Introduction Teaser
ಸಿನಿಮಾ47 mins ago

Kannada New Movie: ಮಾರಮ್ಮ ದೇವಿ ಸಮ್ಮುಖದಲ್ಲಿ ʻಸಿಂಹರೂಪಿಣಿʼ ಟೀಸರ್ ಬಿಡುಗಡೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ4 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ5 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ5 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ1 week ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌