ಬೆಂಗಳೂರು: ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ತಮ್ಮ ಪುತ್ರ ಬಿ.ವೈ. ವಿಜಯೇಂದ್ರ ಯಾವುದೇ ಕಾರಣಕ್ಕೆ ವರುಣಾ ವಿಧಾನಸಭಾ ಕ್ಷೇತ್ರದಿಂಧ ಸ್ಪರ್ಧೆ ಮಾಡುವುದಿಲ್ಲ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಅತ್ತ ಮೈಸೂರುಗೆ ವಿಜಯೇಂದ್ರ ಭೇಟಿ ನೀಡಿದ್ದು, ವರುಣಾದಲ್ಲಿ ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಬಹುದು ಎಂಬ ನಿರೀಕ್ಷೆಗಳಿವೆ. ಅಲ್ಲಿನ ಕಾರ್ಯಕರ್ತರೂ ಇದಕ್ಕೆ ಒತ್ತಾಯ ಮಾಡುತ್ತಿರುವ ಬೆನ್ನಿಗೇ ಯಡಿಯೂರಪ್ಪ ಈ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಯಡಿಯೂರಪ್ಪ, ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಮಾಡುವ ಪ್ರಶ್ನೆಯೇ ಇಲ್ಲ. ವಿಜಯೇಂದ್ರ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡ್ತಾರೆ ಎಂದು ಹೇಳಿದ್ದಾರೆ.
ವರುಣ ಕ್ಷೇತ್ರದಲ್ಲಿ ನಿಲ್ಲುವಂತೆ ಒತ್ತಡ ಇದ್ದರೂ, ಶಿಕಾರಿಪುರದಿಂದಲೇ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಎಂದು ಈ ಹಿಂದೆಯೇ ಹೇಳಿದ್ದೇನೆ. ಯಾವ ಕಾರಣಕ್ಕೂ ವಿಜಯೇಂದ್ರ ವರುಣಕ್ಕೆ ಹೋಗೊ ಪ್ರಶ್ನೆ ಇಲ್ಲ. ನನ್ನ ಕ್ಷೇತ್ರ ಶಿಕಾರಿಪುರದಲ್ಲೇ ಸ್ಪರ್ಧೆ ಮಾಡ್ತಾರೆ. ಒತ್ತಡ ಇದ್ರು, ನಾನು ಹೇಳಿದ್ದೇನೆ ಅವರಿಗೆ. ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಹೈಕಮಾಂಡ್‌ಗೂ ತಿಳಿಸುತ್ತೇನೆ. ವಿಜಯೇಂದ್ರಗೂ ತಿಳಿಸುತ್ತೇನೆ ಎಂದಿದ್ದಾರೆ.
ಇದನ್ನೂ ಓದಿ: ಪುತ್ರ ವಿಜಯೇಂದ್ರಗೆ ಬಿಎಸ್‌ವೈ ಶಿಕಾರಿಪುರ ಕ್ಷೇತ್ರ ಬಿಟ್ಟುಕೊಡಲು 7 ಕಾರಣ