Site icon Vistara News

Babaleshwar Election Results: ಬಬಲೇಶ್ವರ್ ಕ್ಷೇತ್ರದಲ್ಲಿ ಮಾಜಿ ಸಚಿವ ಎಂ ಬಿ ಪಾಟೀಲ್‌ಗೆ ಭರ್ಜರಿ ಜಯ

former minister m b patil won babaleshwar constituency

ಬೆಂಗಳೂರು, ಕರ್ನಾಟಕ: ಕರ್ನಾಟಕದ ಪ್ರತಿಷ್ಠಿತ ಕಣಗಳಲ್ಲಿ ಒಂದಾಗಿದ್ದ ಬಬಲೇಶ್ವರ್ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕ, ಮಾಜಿ ಸಚಿವ ಎಂ ಬಿ ಪಾಟೀಲ್ ಅವರು 14,943 ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ. ಇವರ ಪ್ರತಿಸ್ಪರ್ಧಿ ಬಿಜೆಪಿಯ ವಿಜುಗೌಡ ಪಾಟೀಲ್ ಅವರು 76541 ಮತಗಳನ್ನು ಪಡೆದುಕೊಂಡಿದ್ದಾರೆ. ಎಂ ಬಿ ಪಾಟೀಲ್ ಅವರು 91351 ಮತಗಳನ್ನು ಪಡೆದುಕೊಂಡಿದ್ದಾರೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಜಲಸಂಪನ್ಮೂಲ ಸಚಿವರಾಗಿ ಹೆಚ್ಚು ಜನಪ್ರಿಯರಾಗಿದ್ದರು. ಈ ಬಾರಿಯೂ ಬಬಲೇಶ್ವರ ಮತಕ್ಷೇತ್ರದ ಮತದಾರರು ಅವರ ಕೈ ಹಿಡಿದಿದ್ದಾರೆ(Babaleshwar Election Results).

2023ರ ಚುನಾವಣೆಯ ಅಭ್ಯರ್ಥಿಗಳು

ಪ್ರಸಕ್ತ ಚುನಾವಣೆಯಲ್ಲಿ ಹಾಲಿ ಶಾಸಕ ಎಂ ಬಿ ಪಾಟೀಲ್ ಅವರು ಕಾಂಗ್ರೆಸ್‌ನಿಂದ ಕಣದಲ್ಲಿದ್ದರು. ಬಿಜೆಪಿಯಿಂದ ವಿಜುಗೌಡ ಪಾಟೀಲ್ ಮತ್ತು ಜೆಡಿಎಸ್‌ನಿಂದ ಬಸವರಾಜ್ ಹೊನವಾಡ ಅವರು ಕಣದಲ್ಲಿದ್ದರು.

ಇದನ್ನೂ ಓದಿ: Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಸಿ.ಟಿ.ರವಿಗೆ ಸೋಲು

2018ರ ಚುನಾವಣೆಯ ಫಲಿತಾಂಶ ಏನಾಗಿತ್ತು?

2008ರಲ್ಲಿ ಕ್ಷೇತ್ರ ಪುನರ್ವಿಂಗಡಣೆಯಲ್ಲಿ ಹೊಸದಾಗಿ ರಚನೆಯಾದ ಕ್ಷೇತ್ರವಿದು. ಈ ಮೊದಲು ತಿಕೋಟಾ ಕ್ಷೇತ್ರ ಅಸ್ತಿತ್ವದಲ್ಲಿತ್ತು. ಬಳಿಕ ಅದು ಬಬಲೇಶ್ವರ್ ಕ್ಷೇತ್ರವಾಯಿತು. ಈ ಮೊದಲಿನಿಂದಲೂ ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ನದ್ದೇ ಪಾರುಪತ್ಯವಿದೆ. 2018ರ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಂ ಬಿ ಪಾಟೀಲ್ ಅವರು ಭರ್ಜರಿ ಜಯವನ್ನು ಕಂಡಿದ್ದರು. ಎಂ ಬಿ ಪಾಟೀಲ್ ಅವರು ‌98339 ಮತಗಳನ್ನು ಪಡೆದುಕೊಂಡಿದ್ದರು. ಬಿಜೆಪಿಯ ‌ವಿಜಯಕುಮಾರ ಎಸ್‌ ಪಾಟೀಲ್‌(ವಿಜುಗೌಡ ಪಾಟೀಲ್)‌ ಅವರು 68624 ಮತ ಪಡೆದುಕೊಂಡಿದ್ದರು. ಎಂ ಬಿ ಪಾಟೀಲ್ 29715 ಮತಗಳ ಅಂತರದಿಂದ ಗೆಲುವು ಕಂಡಿದ್ದರು.

Exit mobile version