ಪಂಚಮಸಾಲಿ ಮೀಸಲಾತಿ | ಮುಚ್ಚಿದ ಲಕೋಟೆಯಲ್ಲಿ ಮಧ್ಯಂತರ ವರದಿ; ಸೂಕ್ತ ಕಾನೂನಾತ್ಮಕ ಕ್ರಮ ಎಂದ ಸಿಎಂ - Vistara News

ಕರ್ನಾಟಕ

ಪಂಚಮಸಾಲಿ ಮೀಸಲಾತಿ | ಮುಚ್ಚಿದ ಲಕೋಟೆಯಲ್ಲಿ ಮಧ್ಯಂತರ ವರದಿ; ಸೂಕ್ತ ಕಾನೂನಾತ್ಮಕ ಕ್ರಮ ಎಂದ ಸಿಎಂ

ಪಂಚಮಸಾಲಿ ಸಮುದಾಯವು ಗುರುವಾರದ ಗಡುವು ನೀಡಿದ್ದು, ಈ ಹಿನ್ನೆಲೆಯಲ್ಲಿ ಸಿಎಂ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬ ಕುತೂಹಲ ಇದೆ.

VISTARANEWS.COM


on

Backward classes commission submits interim report in closed envelope
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಕುರಿತು ಹಿಂದುಳಿದ ವರ್ಗದ ಆಯೋಗದ ಮಧ್ಯಂತರ ವರದಿಯನ್ನು ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗಡೆ ಅವರಿಂದ ಮುಚ್ಚಿದ ಲಕೋಟೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಸ್ವೀಕರಿಸಿದರು.

ನಂತರ ಮಾಧ್ಯಮಗಳ ಜತೆಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಮಧ್ಯಂತರ ವರದಿಯನ್ನು ಆದಷ್ಟು ಬೇಗನೇ ಕಾನೂನಾತ್ಮಕ ಚರ್ಚೆ ಮಾಡಿ, ಎಲ್ಲ ಪಕ್ಷದ ನಾಯಕರೊಂದಿಗೆ ಸಮಾಲೋಚಿಸಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು

ವರದಿಯ ಮಾಹಿತಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ನಾಗಮೋಹನ್ ದಾಸ್ ವರದಿ ಬಂದು ಒಂದು ವರ್ಷದ ನಂತರ ವಿವರಗಳನ್ನು ನೀಡಲಾಗಿತ್ತು. ಸದಾಶಿವ ಆಯೋಗ ವರದಿ ಬಂದು ಹತ್ತು ವರ್ಷವಾಗಿದ್ದು, ಸರ್ಕಾರದ ಒಪ್ಪಿಗೆ ಪಡೆದಿಲ್ಲವಾದ್ದರಿಂದ ಇನ್ನೂ ವಿವರ ನೀಡಲಾಗಿಲ್ಲ. ಕಾಂತರಾಜು ವರದಿ ಇನ್ನೂ ಆಯೋಗದಲ್ಲೇ ಇದ್ದು, ಸರ್ಕಾರದ ಮಟ್ಟಕ್ಕೆ ಬಂದಿಲ್ಲವಾದ್ದರಿಂದ ವಿವರ ನೀಡಲಾಗಿಲ್ಲ. ಆದರೆ ಹಿಂದುಳಿದ ವರ್ಗದ ಆಯೋಗದ ಮಧ್ಯಂತರ ವರದಿ ಬಗ್ಗೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಕೋವಿಡ್ ನಿಯಂತ್ರಣ ಸಭೆ ಇಂದು
ಕೋವಿಡ್ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಕೆಲವೊಂದು ಸೂಚನೆಗಳನ್ನು ನೀಡಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೋವಿಡ್ ದೊಡ್ಡ ಪ್ರಮಾಣದಲ್ಲಿ ಹಾಗೂ ವಿವಿಧ ತಳಿಗಳಲ್ಲಿ ಬರುತ್ತಿದೆ. ಹೊಸ ತಳಿ ಕಂಡುಬಂದಿದ್ದು ವೇಗದಲ್ಲಿ ಹರುಡುತ್ತಿರುವ ಮಾಹಿತಿಗಳ ಹಿನ್ನೆಲೆಯಲ್ಲಿ ಇಂದು ಸಭೆಯನ್ನು ನಡೆಸಲಾಗುತ್ತಿದೆ.

ಆರೋಗ್ಯ ಸಚಿವರು, ಆರೋಗ್ಯ ಇಲಾಖೆ ಅಧಿಕಾರಿಗಳು, ತಜ್ಞರ ಸಮಿತಿಯೊಂದಿಗೆ ಚರ್ಚಿಸಿ, ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಹಾಗೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಗಳನ್ನು ಕೈಗೊಳ್ಳಲಾಗುವುದು. ಸಾರ್ವಜನಿಕರು ಈ ಬಗ್ಗೆ ಭಯ ಆತಂಕ ಪಡುವ ಅಗತ್ಯವಿಲ್ಲ. ತಜ್ಞರ ಸಲಹೆಗಳನ್ನು ಪರಿಪಾಲನೆ ಮಾಡುವ ಮೂಲಕ ಕೋವಿಡ್ ಅನ್ನು ಸಂಪೂರ್ಣ ನಿಯಂತ್ರಣ ಮಾಡಬಹುದು. ಬೂಸ್ಟರ್ ಡೋಸ್ ಕಾರ್ಯಕ್ರಮವನ್ನು ರೂಪಿಸುವ ಸಾಧ್ಯತೆ ಇಂದಿನ ಸಭೆಯಲ್ಲಿದೆ ಎಂದರು.

ಅವಧಿ ಮುನ್ನ ಚುನಾವಣೆಯ ಪ್ರಸ್ತಾವನೆ ಇಲ್ಲ
ಕೋವಿಡ್‌ನಿಂದಾಗಿ ಅವಧಿಗೆ ಮುನ್ನವೇ ಚುನಾವಣೆ ನಡೆಯಲಿದೆ ಹಾಗೂ ದಿಲ್ಲಿಯ ನಾಯಕರು ಮುಖ್ಯಮಂತ್ರಿಗಳ ಜತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಬೊಮ್ಮಾಯಿ, ದಿಲ್ಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ. ಅವಧಿಗೂ ಮುನ್ನವೇ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟೀಕರಿಸುತ್ತೇನೆ ಎಂದರು.

ಸಚಿವ ಸಂಪುಟ ವಿಸ್ತರಣೆ
ಮಾಜಿ ಸಚಿವರಾದ ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿಯವರು ಬುಧವಾರ ಭೇಟಿಯಾಗಿದ್ದು, ತಮ್ಮನ್ನು ಸಚಿವ ಸಂಪುಟದಲ್ಲಿ ವಿಸ್ತರಿಸುವ ಬಗ್ಗೆ ಕೇಳಿದ್ದರು. ನಾನು ನವದೆಹಲಿಗೆ ಹೋದಾಗ ಈ ಬಗ್ಗೆ ಮಾಡಿರುವ ಚರ್ಚೆಯ ವಿವರಗಳನ್ನು ಅವರಿಗೆ ನೀಡಿದ್ದೇನೆ. ಇಷ್ಟರಲ್ಲಿಯೇ ಮತ್ತೊಮ್ಮೆ ನವದೆಹಲಿಗೆ ಭೇಟಿ ನೀಡಿ ಈ ವಿಚಾರ ಹಾಗೂ ಇನ್ನಿತರ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಈಗಾಗಲೇ ಸಚಿವ ಸಂಪುಟ ವಿಸ್ತರಣೆ, ಅದರ ಅಗತ್ಯತೆಗಳ ಬಗ್ಗೆ ವಿವರಿಸಲಾಗಿದೆ. ಈ ಬಾರಿ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ಹೈಕಮಾಂಡ್ ಅಂತಿಮ ತೀರ್ಮಾನವನ್ನು ನೀಡಲಿದೆ ಎಂಬ ವಿಶ್ವಾಸವಿದೆ ಎಂದರು.

ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯ ತನ್ನ ನಿಲುವನ್ನು ಗಟ್ಟಿಯಾಗಿ ಮಂಡಿಸಲಿದೆ
ಮಹಾರಾಷ್ಟ್ರದಿಂದ ನೀರು ಬಿಡುವ ಬಗ್ಗೆ ಯೋಚಿಸಬೇಕಾಗುತ್ತದೆ ಎಂಬ ಮಹಾರಾಷ್ಟ್ರ ನಾಯಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಈ ಹೇಳಿಕೆಯನ್ನು ವಿಪಕ್ಷ ಸದಸ್ಯರು ಹೇಳಿದ್ದು, ಎಲ್ಲ ನದಿಗಳು ಮೂರ್ನಾಲ್ಕು ರಾಜ್ಯಗಳಲ್ಲಿ ಹರಿಯುತ್ತಿದೆ. ಅಂತರರಾಜ್ಯ ನದಿಗಳು ಅಂತರರಾಜ್ಯ ಜಲ ವಿವಾದ ಕಾಯ್ದೆಯಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ.

ರಾಜ್ಯಗಳ ನಡುವೆ ನಿಲುವುಗಳಲ್ಲಿ ವ್ಯತ್ಯಾಸವಿದ್ದರೂ, ಇಂತಹ ಹೇಳಿಕೆಗಳನ್ನು ನೀಡಬಾರದು. ಇಂತಹ ಉದ್ಘಟತನದ ಮಾತುಗಳಿಂದ ಏನೂ ಪ್ರಯೋಜನವಿಲ್ಲ. ರಾಜಕೀಯ ಪ್ರೇರಿತ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಇಂತಹ ಹೇಳಿಕೆಗಳನ್ನು ಕಾರ್ಯಗತ ಮಾಡುವುದು ಸಾಧ್ಯವಿಲ್ಲ. ರಾಜ್ಯಗಳ ನಡುವೆ ಪರಸ್ಪರ ಸಂಬಂಧವಿದ್ದೇ ಇರುತ್ತದೆ. ಈಗಾಗಲೇ ಗಡಿ ವಿಚಾರ ಸುಪ್ರೀಂಕೋರ್ಟ್ ನಲ್ಲಿದೆ. ಅಲ್ಲಿ ಅವರು ಹೋರಾಡಲಿ. ಸಂವಿಧಾನ ಪ್ರಕಾರ ರಾಜ್ಯ ನಿಲುವು ಸರಿಯಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ಕರ್ನಾಟಕದ ವಾದವನ್ನು ಗಟ್ಟಿಯಾಗಿ ಮಂಡಿಸಲಾಗುವುದು ಎಂದರು.

ಸಂಜಯ್ ರಾವತ್ ಅವರು ಚೀನಾ ಸೇನೆ ಭಾರತಕ್ಕೆ ನುಗ್ಗಿದಂತೆ, ಬೆಳಗಾವಿಗೆ ನುಗ್ಗುತ್ತೇವೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಸಂಜಯ್ ರಾವತ್ ಅವರ ಪ್ರಾಮುಖ್ಯತೆ ಏನು ಎಂದು ಎಲ್ಲರಿಗೂ ತಿಳಿದಿದೆ. ಅವರು ಸದಾ ಪ್ರಚೋದನಕಾರಿ ಹೇಳಿಕೆಗಳನ್ನೇ ನೀಡುತ್ತಾರೆ. ಅವರು ಚೈನಾದಂತೆ ಬಂದರೆ ಕನ್ನಡಿಗರು ಭಾರತೀಯ ಸೈನ್ಯದಂತೆ ಅವರನ್ನು ಹಿಮ್ಮೆಟ್ಟಿಸುತ್ತೇವೆ ಎಂದರು.

ಇದನ್ನೂ ಓದಿ | ರಾಜ ಮಾರ್ಗ ಅಂಕಣ | ರಾಮಾನುಜನ್‌ ಎಂಬ ದೈವದತ್ತ ಗಣಿತ ಪ್ರತಿಭೆ ಚೆನ್ನೈ ಬಂದರಿನಲ್ಲಿ ಮೂಟೆ ಲೆಕ್ಕ ಮಾಡುತ್ತಿತ್ತು!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಕ್ಷಿಣ ಕನ್ನಡ

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

Mrs India Karnataka: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ಮಿಸಸ್ ಕರ್ನಾಟಕ ಮಂಗಳೂರು ಕಾರ್ಯಕ್ರಮ ನೆರವೇರಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಫ್ಯಾಷನ್‌ ಶೋ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

VISTARANEWS.COM


on

Mrs India Karnataka
Koo

ಮಂಗಳೂರು: ಮಹಿಳೆಯರಿಗೆ ಫ್ಯಾಷನ್ ಲೋಕದಲ್ಲಿ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರತಿಭಾ ಸಂಶೀಮಠ ಅವರ ನೇತೃತ್ವದಲ್ಲಿ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮಿಸಸ್ ಕರ್ನಾಟಕ ಮಂಗಳೂರು (Mrs India Karnataka) ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ನಡೆಯಿತು.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಸುಮಾರು 26 ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಾಲ್ಕು ವರ್ಷಗಳಿಂದ ಮಿಸಸ್ ಕರ್ನಾಟಕವನ್ನು ಆಯೋಜನೆ ಮಾಡುತ್ತಿದ್ದು, ಇದೀಗಾ 5ನೇ ವರ್ಷದ ಮಿಸಸ್ ಕರ್ನಾಟಕ ಆವೃತ್ತಿ ಮಂಗಳೂರಿನಲ್ಲಿ ನಡೆಯಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಈ ಗ್ರ್ಯಾಂಡ್ ಫಿನಾಲೆ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

ಇದನ್ನೂ ಓದಿ | Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Continue Reading

ಕರ್ನಾಟಕ

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

Tourist Boat Capsizes: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಬಳಿ ಸಮುದ್ರದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ.

VISTARANEWS.COM


on

Tourist boat capsizes
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Continue Reading

ಕರ್ನಾಟಕ

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Dangerous Bike Stunt: ಬೆಂಗಳೂರಿನಲ್ಲಿ ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Dangerous Bike Stunt
Koo

ಬೆಂಗಳೂರು: ನಗರದಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್ (Dangerous Bike Stunt) ಮಾಡಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

ಶಾಂಪುರ ನಿವಾಸಿ ಸಿಲಂಬರಸನ್ (21) ಬಂಧಿತ ಯುವಕ. ಯುವತಿಯನ್ನು ಯುವಕ ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಚಾಲನೆ ಮಾಡಿದ್ದ ವಿಡಿಯೊ ವೈರಲ್‌ ಆಗಿತ್ತು. ಇದರಿಂದ ಬೈಕ್ ನಂಬರ್ ಪ್ಲೇಟ್ ಅಧರಿಸಿ ಸಿಲಂಬರಸನ್‌ನನ್ನು ಪೊಲೀಸರು ಬಂಧಿಸಿ, ಡಿಎಲ್ ರದ್ದು ಮಾಡಲು ಆರ್‌ಟಿಒಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್!

yelahanka flyover

ಇತ್ತೀಚೆಗೆ ಜೋಡಿಗಳು ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್ (Romance in bike riding) ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಚ್ಚು ಸಾಹಸವೂ, ಪ್ರೇಮದ ಉನ್ಮಾದವೋ ಗೊತ್ತಿಲ್ಲ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಪರಸ್ಪರ ಎದುರುಬದುರು ಕುಳಿತುಕೊಂಡು ಮುದ್ದಾಡಿಕೊಂಡು ಹೋಗುವುದು, ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡೆಡ್ಲಿ ರೈಡಿಂಗ್‌ ಮಾಡುವುದು ಹೆಚ್ಚುತ್ತಿದೆ. ಅದೇ ರೀತಿ ಬೆಂಗಳೂರಲ್ಲಿ (Yelahanka flyover) ಜೋಡಿಯೊಂದರ ಬೈಕ್ ರೈಡಿಂಗ್ (Bike Riding ವಿಡಿಯೊ ವೈರಲ್‌ ಆಗಿತ್ತು.

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಸಿಲಂಬರಸನ್ ಬೈಕ್‌ ರೈಡ್ ಮಾಡಿದ್ದ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿತ್ತು. ಯುವ ಜೋಡಿಗಳು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ್ದರು. ಜೋಡಿಗಳ ಜಾಲಿ‌ ರೈಡ್‌ನ ದೃಶ್ಯ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರು.

ಇದನ್ನೂ ಓದಿ: Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ನಂತರ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದೆ. ಸಾರ್ವಜನಿಕ ಸುರಕ್ಷತೆ ಅಪಾಯಗಳ ಬಗ್ಗೆ ವ್ಯಾಪಕ ಕಳವಳ ಹುಟ್ಟುಹಾಕಿತ್ತು. ಹೆಲ್ಮೆಟ್ ಧರಿಸದೆ ಇರುವುದು ಜತೆಗೆ ಯುವತಿ ಪೆಟ್ರೋಲ್‌ ಟ್ಯಾಂಕ್ ಮೇಲೆ ಕುಳಿತು ತನ್ನ ಸಂಗಾತಿಯನ್ನು ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ಅಜಾಗರೂಕ ಮತ್ತು ಅನುಚಿತ ವರ್ತನೆಗಾಗಿ ದಂಡ ವಿಧಿಸಿ ಎಂದು ನೆಟ್ಟಿಗರು ಕಾಮೆಂಟ್‌ ಹಾಕಿದ್ದರು. ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದರು. ಹೀಗಾಗಿ ಯಲಹಂಕ ಸಂಚಾರ ಪೊಲೀಸ್ ಠಾಣೆ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

Continue Reading

ಕರ್ನಾಟಕ

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Drown in Lake: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರು ನೀರುಪಾಲಾಗಿದ್ದಾರೆ

VISTARANEWS.COM


on

Drowned in Lake
Koo

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಶಾಕ್‌ನಿಂದ ವ್ಯಕ್ತಿ ಸ್ಪಾಟ್‌ ಡೆತ್‌

Electric shock in udupi

ಉಡುಪಿ: ವಿದ್ಯುತ್ ತಂತಿ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ (Electric shock) ಮೃತಪಟ್ಟಿದ್ದಾರೆ. ಇರ್ಷಾದ್ (56) ಮೃತ ದುರ್ದೈವಿ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ಘಟನೆ ನಡೆದಿದೆ.

ಮನೆಯಿಂದ ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಈ ದುರಂತ ನಡೆದಿದೆ. ಶನಿವಾರ ರಾತ್ರಿ ಸುರಿದ ಬಿರುಗಾಳಿ ಸಹಿತ ಮಳೆ (Rain News) ವಿದ್ಯುತ್ ತಂತಿ ತುಂಡಾಗಿ ಬಿದ್ದಿತ್ತು. ವಿದ್ಯುತ್ ತಂತಿ ನೆಲದ ಮೇಲೆ ಬಿದ್ದಿರುವುದನ್ನು ಗಮನಿಸದ ಇರ್ಷಾದ್ ತುಳಿದಿದ್ದಾರೆ. ಕ್ಷಣಾರ್ಧದಲ್ಲೇ ಇರ್ಷಾದ್‌ ಶಾಕ್‌ನಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Suspicious Case : ಮೈಸೂರಿನಲ್ಲಿ ದಂಪತಿ ಅನುಮಾನಾಸ್ಪದ ಸಾವು; ಕೊಲೆಯೋ.. ಆತ್ಮಹತ್ಯೆಯೋ?

ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ ಮತ್ತು ಬೈಂದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇನ್ನೂ ತುಂಡಾಗಿದ್ದ ವಿದ್ಯುತ್ ತಂತಿಯನ್ನು ಸರಿಪಡಿಸುವ ಕಾರ್ಯದಲ್ಲಿ ಮೆಸ್ಕಾಂ ಸಿಬ್ಬಂದಿ ತೊಡಗಿದ್ದಾರೆ.

Continue Reading
Advertisement
Mrs India Karnataka
ದಕ್ಷಿಣ ಕನ್ನಡ17 seconds ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ29 mins ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ42 mins ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ59 mins ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ1 hour ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ1 hour ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ2 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ2 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Drowned in Lake
ಕರ್ನಾಟಕ2 hours ago

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

Bengaluru Rain
ಕರ್ನಾಟಕ3 hours ago

Bengaluru Rain: ಬೆಂಗಳೂರಿನಲ್ಲಿ ಮುಂದುವರಿದ ಮಳೆ ಆರ್ಭಟ; ರಸ್ತೆಗಳು ಜಲಾವೃತ, ಹಲವೆಡೆ ಸಂಚಾರ ಅಸ್ತವ್ಯಸ್ತ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ8 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ9 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ10 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ3 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌