Site icon Vistara News

Badami Election Results: ಬಾದಾಮಿಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಭೀಮಸೇನ್ ಚಿಮ್ಮನಕಟ್ಟಿಗೆ ಗೆಲುವು

bhimasen chimmanakatti winner badami constituency

ಬೆಂಗಳೂರು, ಕರ್ನಾಟಕ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿನಿಧಿಸುತ್ತಿದ್ದ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಸೇನ್ ಚಿಮ್ಮನಕಟ್ಟಿ ಅವರು ಗೆಲವು ಸಾಧಿಸಿದ್ದಾರೆ. ಅಧಿಕೃತ ಘೋಷಣೆಯೊಂದಿಗೆ ಬಾಕಿ ಇದೆ. 2018ರ ಚುನಾವಣೆ ವೇಳೆ ಸಿದ್ದರಾಮಯ್ಯ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

2023ರ ಅಭ್ಯರ್ಥಿಗಳು ಯಾರು?

ಕಾಂಗ್ರೆಸ್ ಪಕ್ಷದಿಂದ ಭೀಮಸೇನ ಚಿಮ್ಮನಕಟ್ಟಿ ಅವರು ಸ್ಪರ್ಧಿಸಿದ್ದರು. ಬಿಜೆಪಿಯಿಂದ ಶಾಂತಗೌಡ ಪಾಟೀಲ್ ಅವರು ಕಣಕ್ಕಿಳಿದಿದ್ದರು. ಜೆಡಿಎಸ್‌ನಿಂದ ಹನಮಂತ ಮಾವಿನಮರದ್ ಅವರು ಸ್ಪರ್ಧಿಸಿದ್ದರು.

ಇದನ್ನೂ ಓದಿ: Karnataka Election Results Live Updates: ಕರ್ನಾಟಕ ವಿಧಾನಸಭೆ ಚುನಾವಣೆ ಫಲಿತಾಂಶ; ಕಾಗೇರಿ, ಕೆ.ಸುಧಾಕರ್​ಗೆ ಸೋಲು

2018ರ ಚುನಾವಣೆಯ ಫಲಿತಾಂಶ ಏನಾಗಿತ್ತು?

ಬಾದಾಮಿ ಕ್ಷೇತ್ರವು ಬಾಗಲಕೋಟೆಯ ಜಿಲ್ಲೆಯ ಪ್ರತಿಷ್ಠಿ ಕ್ಷೇತ್ರಗಳಲ್ಲಿ ಒಂದಾಗಿದೆ. 2018ರಲ್ಲಿ ಈ ಕ್ಷೇತ್ರವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಪ್ರತಿನಿಧಿಸಿದ್ದರು. 1957ರಿಂದ ಈ ಕ್ಷೇತ್ರವು ಅಸ್ತಿತ್ವದಲ್ಲಿದ್ದು, ಕಾಂಗ್ರೆಸ್‌ನ ಭದ್ರಕೋಟೆಯಾಗಿತ್ತು. 2004 ಮತ್ತು 2008ರಲ್ಲಿ ಈ ಕ್ಷೇತ್ರವನ್ನು ಬಿಜೆಪಿ ಗೆದ್ದುಕೊಂಡಿತ್ತು. 2013ರಲ್ಲಿ ಬಿಜೆಪಿಯ ಬಿ ಬಿ ಚಿಮ್ಮನಕಟ್ಟಿ ಅವರು ಗೆಲುವು ಸಾಧಿಸಿದ್ದರು. 2018ರಲ್ಲಿ ಅವರು ಸಿದ್ದರಾಮಯ್ಯ ಅವರಿಗೆ ಕ್ಷೇತ್ರ ಬಿಟ್ಟುಕೊಟ್ಟಿದ್ದರು. ಇವರ ವಿರುದ್ಧ ಬಿಜೆಪಿಯುವ ಬಿ ಶ್ರೀರಾಮುಲು ಅವರನ್ನು ಕಣಕ್ಕೆ ಇಳಿಸಿತ್ತು. ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರು 67599 ಮತಗಳನ್ನು ಪಡೆದುಕೊಂಡರೆ, ಶ್ರೀರಾಮಲು ಅವರು 65903 ಮತಗಳನ್ನು ಪಡೆದುಕೊಂಡರು. 1696 ಮತಗಳ ಅಂತದಲ್ಲಿ ಸಿದ್ದರಾಮಯ್ಯ ಅವರು ಗೆದ್ದಿದ್ದರು.

Exit mobile version