ಬಾಗಲಕೋಟೆ: ಬಾಗಲಕೋಟೆ ತಾಲೂಕಿನ ಕಲಾದಗಿ ಗ್ರಾಮದ ಗರ್ಭಿಣಿ ಆಶಾ ಕಾಳೆ ಎಂಬುವವರು ಆತ್ಮಹತ್ಯಗೆ ಯತ್ನಿಸಿದ್ದಾರೆ. ಪತಿಯ ಕಿರುಕುಳ ಸಹಿಸಲಾರದೆ ಮನನೊಂದು ಆತ್ಮಹತ್ಯಗೆ ಯತ್ನಿಸಿದ್ದಾರೆ ಎಂದು ತಿಳಿದುಬಂದಿದೆ. ಗರ್ಭಿಣಿ ಮಹಿಳೆ ಆಶಾ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ದುರ್ದೈವವಶಾತ್ ಆಕೆಯ ಮಗು ಹೊಟ್ಟೆಯಲ್ಲೆ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಕೆಯ ಪತಿಯ ಪರಶುರಾಮ್ ಅನೈತಿಕ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಈ ಬಗ್ಗೆ ಪ್ರಶ್ನಿಸಿದ್ದಕ್ಕೆ ಆಕೆಯನ್ನು ಪ್ರತಿದಿನ ಕಿರುಕುಳ ಮಾಡುತ್ತಿದ್ದ. ಪತಿಯ ಜತೆಗೆ ಅತ್ತೆ ಸೇರಿದಂತೆ ಮನೆಯವರಿಂದಲೂ ಗರ್ಭಿಣಿ ಮಹಿಳೆಗೆ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೊಪಿಸಿದ್ದಾರೆ. ಕಿರುಕುಳ ತಾಳದೇ ಆಶಾ ಮನೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಿಸಿದ ಆಶಾಳನ್ನ ಪತಿ ಪರಶುರಾಮನೇ ನವನಗರದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ನವನಗರದ ಮಹಿಳಾ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ. ವಿಚಾರಣೆ ಮುಂದುವರಿದಿದೆ.
ಇದನ್ನೂ ಓದಿ: ಕನ್ನಡದ ಕೋಟ್ಯಧಿಪತಿಯಲ್ಲಿ ಭಾಗವಹಿಸಿದ್ದ ಯುವಕ ಆತ್ಮಹತ್ಯೆ