ಬಾಗಲಕೋಟೆ: ಬೈಕ್ ಸ್ಕಿಡ್ ಆಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದುದರಿಂದ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಇಳಕಲ್ಲ ನಗರದಲ್ಲಿ ತಡರಾತ್ರಿ ಈ ದುರ್ಘಟನೆ ನಡೆದಿದೆ. ಆದೇಶ ಈರಪ್ಪ ನಾಗೂರ (22) ಮೃತ ವ್ಯಕ್ತಿ. ಇವರು ಜೋಶಿ ಗಲ್ಲಿ ಬಡಾವಣೆಯ ನಿವಾಸಿಯಾಗಿದ್ದರು. ಸಾಗರ್ ನೈಟಿಂಗ್ನಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುವ ವೇಳೆ ದುರ್ಘಟನೆ ನಡೆದಿದೆ.