Attack on farmer : ನಿರಾಣಿ ವಿರುದ್ಧ ಭಿಕ್ಷಾಟನಾ ಅಭಿಯಾನ; ರೈತ ಮುಖಂಡನ ಮೇಲೆ ದುಷ್ಕರ್ಮಿಗಳು ಅಟ್ಯಾಕ್‌! - Vistara News

ಕರ್ನಾಟಕ

Attack on farmer : ನಿರಾಣಿ ವಿರುದ್ಧ ಭಿಕ್ಷಾಟನಾ ಅಭಿಯಾನ; ರೈತ ಮುಖಂಡನ ಮೇಲೆ ದುಷ್ಕರ್ಮಿಗಳು ಅಟ್ಯಾಕ್‌!

Murugesh Nirani : ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಭಿಕ್ಷಾಟನಾ ಅಭಿಯಾನ ನಡೆಸಲು ಸಜ್ಜಾಗಿದ್ದ ರೈತ ಮುಖಂಡ (Attack on farmer) ಯಲ್ಲಪ್ಪ‌ ಹೆಗಡೆಗೆ ಅಪರಿಚಿತರು ದಾಳಿ ಮಾಡಿ ಮಾರಣಾಂತಿಕ ಹಲ್ಲೆ (Assault Case) ನಡೆಸಿದ್ದಾರೆ.

VISTARANEWS.COM


on

Farmer leader yelapa hegade attacked by miscreants
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೈತ ಮುಖಂಡ ಯಲ್ಲಪ್ಪ ಹೆಗಡೆ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಮುಖಕ್ಕೆ ಮಾಸ್ಕ್‌ ಹಾಕಿ ಬಂದ ಅಪರಿಚಿತರು ರೈತ ಮುಖಂಡ ಯಲ್ಲಪ್ಪ‌ ಹೆಗಡೆ ಮೇಲೆ ಮಾರಣಾಂತಿಕ ಹಲ್ಲೆ (Attack on farmer) ನಡೆಸಿದ್ದಾರೆ. ಬಾಗಲಕೋಟೆಯ ಮುಧೋಳ ತಾಲೂಕಿನ ಇಂಗಳಗಿ ಕ್ರಾಸ್‌ನಲ್ಲಿ ಈ ಘಟನೆ ನಡೆದಿದೆ.

ಮಾಜಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ರೈತ ಮುಖಂಡ ಯಲ್ಲಪ್ಪ ಹೆಗಡೆ ಬೀಳಗಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದರು. ಹೀಗಾಗಿ ಬೀಳಗಿ ಪಟ್ಟಣಕ್ಕೆ ಹೋಗಬೇಕಾದ ಸಮಯದಲ್ಲಿ ಬಂದ ಕಿಡಿಗೇಡಿಗಳು ಏಕಾಏಕಿ ದಾಳಿ ನಡೆಸಿ, ಮನಬಂದಂತೆ ಥಳಿಸಿದ್ದಾರೆ. ಯಲ್ಲಪ್ಪ ಹೆಗಡೆ ತಲೆಗೆ ಬಲವಾದ ಪೆಟ್ಟು ಬಿದ್ದು ಒದ್ದಾಡುತ್ತಿದ್ದವರನ್ನು ಸ್ಥಳೀಯರು ಮುಧೋಳದ ಖಾಸಗಿ ಆಸ್ಪತ್ರೆ ದಾಖಲು ಮಾಡಿದ್ದಾರೆ.

ರಾಡ್‌ನಿಂದ ಹಲ್ಲೆ

ಹಲ್ಲೆ ನಡೆಯುವಾಗ ಜತೆಯಲ್ಲಿದ್ದ ಯಲ್ಲಪ್ಪನ ಸ್ನೇಹಿತ ಹನುಮಂತ ಶಿಂಧೆ ಘಟನೆ ಕುರಿತು ಮಾಹಿತಿ ನೀಡಿದ್ದಾರೆ. ಭಿಕ್ಷಾಟನೆ ಅಭಿಯಾನ ಮಾಡಲು ಬೀಳಗಿಗೆ ಹೊರಟಿದ್ದವು. ಇಂಗಳಗಿ ಕ್ರಾಸ್‌ ಬಳಿ ಕಾರಲ್ಲಿ ಹೋಗುವಾಗ ಬುಲೆರೋ ಕಾರಲ್ಲಿ ಬಂದ ದುಷ್ಕರ್ಮಿಗಳು, ಕೈಯಲ್ಲಿ ರಾಡ್ ಹಿಡಿದು ಮೊದಲು ಕಾರಿನ ಗ್ಲಾಸ್ ಪುಡಿ ಪುಡಿ ಮಾಡಿದರು. ಬಳಿಕ ಯಲ್ಲಪ್ಪ ಹೆಗಡೆ ಮೇಲೆ ಹಲ್ಲೆ ಮಾಡಿದರು.

ಕಾರಿನಲ್ಲಿದ್ದ ನಾವುಗಳು ಅಲ್ಲಿಂದ ತಪ್ಪಿಸಿಕೊಂಡೆವು. ನನ್ನನ್ನೂ ಹಿಂಬಾಲಿಸಿ ಅಪರಿಚಿತರು ಬೆನ್ನಟ್ಟಿದರು. ಈ ವೇಳೆ ನಾನು 200 ಮೀಟರ್‌ವರೆಗೂ ಓಡಿ ಬಂದೆ. ಈ ವೇಳೆ ಅಲ್ಲೊಂದು ಬಸ್ ಬಂದಾಗ, ಅಪರಿಚಿತರು ಸ್ಥಳದಿಂದ ಕಾಲ್ಕಿತ್ತರು. ಐದಾರು ಮಂದಿ ಮಂಕಿ ಕ್ಯಾಪ್ ಹಾಕಿಕೊಂಡು ಬಂದಿದ್ದರು ಎಂದು ವಿವರಿಸಿದರು.

ಇವತ್ತು ಬೀಳಗಿಯಲ್ಲಿ ನಿರಾಣಿ ವಿರುದ್ಧ ನಮ್ಮ ಪ್ರತಿಭಟನೆ ಇತ್ತು. ಇದನ್ನೆಲ್ಲಾ ನೋಡಿದರೆ ಈ ಘಟನೆ ಹಿಂದೆ ಮುರುಗೇಶ್ ನಿರಾಣಿ ಅವರ ಕೈವಾಡ ಇರುವುದು ಸ್ಪಷ್ಟವಾಗಿದೆ ಎಂದು ನೇರವಾಗಿ ನಿರಾಣಿ ಕಡೆಯವರೆ ಹಲ್ಲೆ ಮಾಡಿದ್ದಾಗಿ ಆರೋಪಿಸಿದರು.

ಇದನ್ನೂ ಓದಿ: Electric Shock : ವಾಷಿಂಗ್ ಮೆಷಿನ್‌ಗೆ ಬಟ್ಟೆ ಹಾಕುವಾಗ ಕರೆಂಟ್‌ ಶಾಕ್‌; ಯುವಕ ಸಾವು!

ಭಿಕ್ಷಾಟಣೆ ಅಭಿಯಾನ

ಚುನಾವಣೆ ವೇಳೆ ಮುರುಗೇಶ್ ನಿರಾಣಿ ವಿರುದ್ಧ ರೈತ ಮುಖಂಡ ಯಲ್ಲಪ್ಪ‌ ಹೆಗಡೆ ಆರೋಪ ಮಾಡಿದ್ದರು. ಇದಕ್ಕಾಗಿ ನಿರಾಣಿ ಮಾನನಷ್ಟ ಮೊಕದ್ದಮೆ ಹೂಡಿ ಸುಮಾರು 5 ಕೋಟಿ ರೂ. ಮಾನಹಾನಿ ಪರಿಹಾರ ಕೇಳಿದ್ದ‌ರು. ತಮ್ಮ ವಕೀಲರ ಮೂಲಕ ಯಲ್ಲಪ್ಪ‌ ಹೆಗಡೆಗೆ ನೋಟಿಸ್ ಕಳುಹಿಸಿದ್ದರು. ಹೀಗಾಗಿ ಮುರುಗೇಶ್‌ ನಿರಾಣಿಗೆ ಭಿಕ್ಷಾಟಣೆ ಮೂಲಕ ಹಣ ಸಂಗ್ರಹಿಸಿ ನೀಡಲು ಯಲ್ಲಪ್ಪ ಹೆಗಡೆ ಉದ್ದೇಶಿಸಿದ್ದರು. ಆಗಸ್ಟ್‌ 28ರ ಬೆಳಗ್ಗೆ 11 ಗಂಟೆ ಸುಮಾರಿಗೆ ಬೀಳಗಿಯ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿ ಭಿಕ್ಷಾಟಣೆ ಅಭಿಯಾನ ಕೈಗೊಂಡಿದ್ದರು. ಬೀಳಗಿಗೆ ಬರುವಾಗ ಮಾರ್ಗ ಮಧ್ಯೆ ಕಿಡಿಗೇಡಿಗಳು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿ ಆಗಿದ್ದಾರೆ.

ಮುಧೋಳದಿಂದ ಬಾಗಲಕೋಟೆಗೆ ಶಿಫ್ಟ್‌

ರೈತ ಮುಖಂಡ ಯಲ್ಲಪ್ಪ‌ ಹೆಗಡೆ ಮೇಲೆ ಅಪರಿಚಿತರು ಮಾರಣಾಂತಿಕ ಹಲ್ಲೆ ನಡೆಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆಗೆ ರವಾನೆ ಮಾಡಲಾಗಿದೆ. ಮುಧೋಳದಿಂದ ಆಂಬ್ಯುಲೆನ್ಸ್‌ ಮೂಲಕ ಬಾಗಲಕೋಟೆ ಕಡೆಗೆ ಸ್ಥಳಾಂತರ ಮಾಡಲಾಗುತ್ತಿದೆ.

ಹಲ್ಲೆ ಖಂಡಿಸಿ ಪ್ರತಿಭಟನೆ

ಇತ್ತ ರೈತ ಮುಖಂಡ ಯಲ್ಲಪ್ಪ ಹೆಗಡೆ ಮೇಲಿನ ಹಲ್ಲೆ ಖಂಡಿಸಿ ಇತರೆ ರೈತರು ಪ್ರತಿಭಟನೆ ನಡೆಸಿದ್ದಾರೆ. ಮುಧೋಳದ ರನ್ನ ಸರ್ಕಲ್‌‌ನಲ್ಲಿ ರೈತರು ಹಲ್ಲೆಯನ್ನು ಖಂಡಿಸಿದರು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.

ರಾಜ್ಯದ ಇನ್ನಷ್ಟು ಸುದ್ದಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Shivamogga News : ಶಿವಮೊಗ್ಗದಲ್ಲಿ ಪುಂಡರು ಮತ್ತೆ ಬಾಲ ಬಿಚ್ಚಿದ್ದು, ಮನಸ್ಸಿಗೆ ಬಂದಂತೆ ರಸ್ತೆಯಲ್ಲಿದ್ದ ವಾಹನಗಳನ್ನು ಜಖಂ (Assault Case) ಮಾಡಿದ್ದಾರೆ. ದುಷ್ಕರ್ಮಿಗಳು ಗಾಂಜಾ ನಶೆಯಲ್ಲಿ ಈ ಕೃತ್ಯ ಎಸಗಿರಬಹುದೆಂದು ಶಂಕಿಸಲಾಗಿದೆ.

VISTARANEWS.COM


on

By

Assault Case in Shivamogga
Koo

ಶಿವಮೊಗ್ಗ: ಶಿವಮೊಗ್ಗದ (Shivamogga News) ಹೊಸಮನೆ ಬಡಾವಣೆಯಲ್ಲಿ ಕಿಡಿಗೇಡಿಗಳ ಹಾವಳಿ ಹೆಚ್ಚಾಗಿದೆ. ಮುನೆ ಮುಂದೆ ನಿಲ್ಲಿಸಿದ್ದ ಕಾರು, ಆಟೋ ಹಾಗೂ ಬೈಕ್‌ಗಳನ್ನು ಕಿಡಿಗೇಡಿಗಳು (Assault Case) ಧ್ವಂಸಗೊಳಿಸಿದ್ದಾರೆ. ಗಾಂಜಾ ನಶೆಯಲ್ಲಿ ವಾಹನಗಳನ್ನು ಜಖಂ ಮಾಡಿದ್ದಾರೆ ಎನ್ನಲಾಗಿದೆ.

ಮನೆಯ ಮುಂದೆ ನಿಲ್ಲಿಸಿದ್ದ ನಾಲ್ಕು ಕಾರು, ನಾಲ್ಕು ದ್ವಿಚಕ್ರ ವಾಹನ ಹಾಗೂ ಎರಡು ಆಟೋಗಳನ್ನು ರಾತ್ರೋ ರಾತ್ರಿ‌ ಹಾನಿ ಮಾಡಿದ್ದಾರೆ. ಕಾರಗಳ ಗಾಜು ಚೂರು ಚೂರು ಮಾಡಿದ್ದು, ಜಗದೀಶ್ ಎಂಬವರಿಗೆ ಸೇರಿದ ಅಂಗಡಿಯ ಬೀಗವನ್ನು ಮಚ್ಚಿನಿಂದ ಹೊಡೆದು ಹಾನಿ ಮಾಡಿದ್ದಾರೆ.

ದೊಡ್ಡಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಶಾಸಕ ಎಸ್ಎ‌ನ್ ಚನ್ನಬಸಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ವೇಳೆ ಗಾಂಜಾ ಪ್ಯಾಕೇಟ್ ಹಾಗೂ ಮದ್ಯದ ಬಾಟಲ್‌ಗಳು ಪತ್ತೆಯಾಗಿವೆ. ಬಡಾವಣೆಯ ಪರಿಸ್ಥಿತಿ ಕಂಡು ಶಾಸಕ ಚನ್ನಬಸಪ್ಪ ಅಚ್ಚರಿಗೊಳಗಾದರು. ಇದೇ ವೇಳೆ ಸ್ಥಳೀಯರು ಕಿಡಿಗೇಡಿಗಳ ಹಾವಳಿಯನ್ನು ವಿವರಿಸಿದರು. ಕಿಡಿಗೇಡಿಗಳ ನಿರಂತರ ಹಾವಳಿಯಿಂದ ಬೇಸತ್ತಿರುವುದಾಗಿ ತಿಳಿಸಿದರು.

ಇದನ್ನೂ ಓದಿ: Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

ಕೋಲಾರದಲ್ಲಿ ಬಿಯರ್‌ ಬಾಟೆಲ್‌ಗಳಲ್ಲಿ ಬಡಿದಾಟ

ಕ್ಷುಲ್ಲಕ ಕಾರಣಕ್ಕೆ ಯುವಕರು ಬಿಯರ್ ಬಾಟೆಲ್‌ಗಳಿಂದ ಬಡಿದಾಡಿಕೊಂಡಿದ್ದಾರೆ. ಕೋಲಾರದ ಗಾಂಧಿನಗರ ಮತ್ತು ಶ್ರೀನಿವಾಸಪುರ ತಾಲೂಕಿನ ಮೊಗಿಲಹಳ್ಳಿ ಗ್ರಾಮಕ್ಕೆ ಸೇರಿದ ಯುವಕರು ಗಲಾಟೆ ಮಾಡಿಕೊಂಡಿದ್ದಾರೆ. ಶ್ರೀನಿವಾಸಪುರ ಪಟ್ಟಣದ ತಾಲೂಕು ಕಚೇರಿ ಎದುರು ಬಿಯರ್ ಬಾಟೆಲ್‌ನಿಂದ ಕಿತ್ತಾಡಿಕೊಂಡಿದ್ದಾರೆ.

ಇವರ ಬಡಿದಾಟಕ್ಕೆ ಸ್ಥಳೀಯರು ಮೂಕ ಪ್ರೇಕ್ಷಕರಾಗಿದ್ದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಶಾಂತಿ ಭಂಗ ಪ್ರಕರಣ ದಾಖಲಿಸಿ, ಇಬ್ಬರ ಮೇಲೆ ಎಫ್‌ಐಆರ್ ದಾಖಲಾಗಿದೆ. ಇಬ್ಬರನ್ನೂ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಮಂಜುನಾಥ್ ಹಾಗೂ ಹರೀಶ್ ಬಂಧಿತ ಆರೋಪಿಗಳಾಗಿದ್ದಾರೆ.

ಧಾರವಾಡದಲ್ಲಿ ಆಸ್ತಿ ವಿಚಾರಕ್ಕೆ ಕಿರಿಕ್‌; ಯುವತಿಯನ್ನು ಥಳಿಸಿದ ಗ್ರಾ.ಪಂ ಸದಸ್ಯ

ಆಸ್ತಿ ವಿಚಾರವಾಗಿ ಗ್ರಾಮ ಪಂಚಾಯತಿ ಸದಸ್ಯನೊಬ್ಬ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ಧಾರವಾಡ ತಾಲೂಕಿನ ಕನಕೂರ ಗ್ರಾಮದಲ್ಲಿ ಘಟನೆ ನಡೆದಿದೆ. ಮಾರುತಿ ಪವಾರ್ ಎಂಬ ಗ್ರಾಮ ಪಂಚಾಯತಿ ಸದಸ್ಯನೇ ಯುವತಿ ಮೇಲೆ ಹಲ್ಲೆ ಮಾಡಿದವನು.

ಹಲ್ಲೆ ಮಾಡುವ ದೃಶ್ಯವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಆಸ್ತಿ ವಿಚಾರಕ್ಕೆ ಸಂಬಂಧ ಪಟ್ಟಂತೆ ಮಾರುತಿ ತನ್ನ ಅಕ್ಕನ ಮಗಳ ಮೇಲೆ ಹಲ್ಲೆ ನಡೆಸಿದ್ದಾನೆ. ಮಾರುತಿ ಜತೆಗೆ ಮತ್ತೊಬ್ಬ ಸಂಬಂಧಿ ಸಹೋದರ ರಾಮಚಂದ್ರ ಕೂಡ ಸಾಥ್‌ ನೀಡಿದ್ದಾನೆ. ಆಸ್ತಿ ವಿಚಾರವಾಗಿ ಯುವತಿ ಪ್ರಶ್ನೆ ಮಾಡಿದ್ದಕ್ಕೆ ಮನಸ್ಸೋ ಇಚ್ಛೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧದಿಂದ ನಿಂದಿಸಿದ ಹಲ್ಲೆ ಮಾಡಿದ್ದಾರೆ. ಧಾರವಾಡ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Valmiki Corporation Scam: “ಈ ಹಣ ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿದೆ. ಇದನ್ನು ಸಿಬಿಐಗೆ ಒಪ್ಪಿಸಿದರೆ ಸತ್ಯಾಸತ್ಯತೆ ಹೊರಗಡೆಗೆ ಬರುತ್ತೆ. ಮುಖ್ಯಮಂತ್ರಿ ರಾಜೀನಾಮೆ ಕೇಳ್ತೀವಿ. ಮಂತ್ರಿ ರಾಜೀನಾಮೆ ಆಗಲೇಬೇಕು. ಆರನೇ ತಾರೀಖು ಡೆಡ್‌ಲೈನ್ ಕೊಡುತ್ತೇವೆ. ಅದರ ಒಳಗೆ ರಾಜೀನಾಮೆ ಪಡೆಯದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ” ಎಂದು ಅಶೋಕ್‌ ಆಗ್ರಹಿಸಿದರು.

VISTARANEWS.COM


on

Valmiki Corporation Scam
Koo

ಬೆಂಗಳೂರು: ವಾಲ್ಮೀಕಿ ನಿಗಮ ಅಧೀಕ್ಷಕ (Valmiki development corporation) ಚಂದ್ರಶೇಖರ್‌ ಆತ್ಮಹತ್ಯೆ (Officer self harming) ಮಾಡಿಕೊಂಡಿರುವ (valmiki corporation scam) ಪ್ರಕರಣದಲ್ಲಿ, ನಿಗಮದಿಂದ ವರ್ಗಾವಣೆಯಾಗಿರುವ ಹಣದ ಅಕ್ರಮದಲ್ಲಿ (Illegal money transfer) ಸಚಿವರ ಹಾಗೂ ಅವರ ಆಪ್ತ ನಾಗರಾಜ್‌ ಎಂಬಾತನ ಕೈವಾಡವಿದೆ ಎಂದು ಬಿಜೆಪಿ ಫೋಟೋ ಸಹಿತ ಆರೋಪಿಸಿದೆ. ನಾಗರಾಜ್‌, ಸಚಿವ ನಾಗೇಂದ್ರ, ಡಿಸಿಎಂ ಡಿಕೆ ಶಿವಕುಮಾರ್‌ ಹಾಗೂ ಸಿಎಂ ಸಿದ್ದರಾಮಯ್ಯಗೆ ಆಪ್ತವಾಗಿರುವ ಫೋಟೋಗಳನ್ನು ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ (BJP) ಬಿಡುಗಡೆ ಮಾಡಿದೆ.

ಬಿಜೆಪಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಆರ್. ಆಶೋಕ್, ಸಿಟಿ ರವಿ, ಗೋವಿಂದ ಕಾರಜೋಳ, ರಾಮಮೂರ್ತಿ, ಲೆಹರ್ ಸಿಂಗ್, ಪದ್ಮನಾಭ ರೆಡ್ಡಿ ಜಂಟಿ ಸುದ್ದಿಗೋಷ್ಠಿ ನಡೆಸಿದರು.

“ಇದೊಂದು ದೊಡ್ಡ ಹಗರಣ. ನಾಗರಾಜ್ ಅನ್ನುವ ಅಧಿಕಾರಿಯ ಹೆಸರು ಡೆತ್ ನೋಟ್‌ನಲ್ಲಿ ಇದೆ. ಈತ ಬಾರಿ ಪ್ರಭಾವಿ ಅಧಿಕಾರಿ. ಸಚಿವ ನಾಗೇಂದ್ರ ಜತೆ ಬ್ಯುಸಿನೆಸ್ ಪಾರ್ಟನರ್ ಆಗಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಆಪ್ತರಾಗಿದ್ದಾರೆ. ಹಗರಣದಲ್ಲಿ ಈತನ ಕೈವಾಡವಿದೆ. ಈ ದುಡ್ಡು ಬೇರೆ ರಾಜ್ಯಗಳಿಗೆ ಹೋಗಿದೆ. ಎಲೆಕ್ಷನ್ ಫಂಡ್‌ಗೆ ಬಳಸಿರುವ ಸಾಧ್ಯತೆ ಇದೆ. ಸಚಿವ ನಾಗೇಂದ್ರ ಕೂಡಲೇ ರಾಜೀನಾಮೆ ನೀಡಬೇಕು. ಇದರಲ್ಲಿ ಸಚಿವರ ಪಾತ್ರ ಇರುವುದರಿಂದ ರಾಜ್ಯ ಸರ್ಕಾರದ ವ್ಯಾಪ್ತಿಯ ತನಿಖಾ ಸಂಸ್ಥೆಯಿಂದ ತನಿಖೆ ಆಗಬಾರದು. ಹೀಗಾಗಿ ಇದನ್ನು ಸಿಬಿಐ ತನಿಖೆಗೆ ವಹಿಸಬೇಕು. ಸಿಬಿಐಯಿಂದ ಮಾತ್ರ ನಿಷ್ಪಕ್ಷಪಾತ ತನಿಖೆ ಸಾಧ್ಯ. ದೊಡ್ಡ ದೊಡ್ಡವರು ಸಹ ಇದರಲ್ಲಿ ಪಾತ್ರಧಾರಿಗಳು ಆಗಿರುವುದರಿಂದ ಸಿಬಿಐ ತನಿಖೆಯಿಂದ ಮಾತ್ರ ಸತ್ಯ ಹೊರಬರುತ್ತೆ” ಎಂದು ಬಿಜೆಪಿ ಮುಖಂಡ ಸಿಟಿ ರವಿ ಹೇಳಿದ್ದಾರೆ.

Valmiki Corporation Scam nagaraj with minister nagendra and cm siddaramiah

ಕರ್ನಾಟಕದ ಕಾಂಗ್ರೆಸ್‌ನ ಬ್ರಹ್ಮಾಂಡ ಭ್ರಷ್ಟಾಚಾರದ ಹಗರಣ ಬಯಲಿಗೆ ಬಂದಿದೆ. ಕಾಂಗ್ರೆಸ್‌ನ ಒಂದು ವರ್ಷದ ಸಾಧನೆ ಎಂದರೆ ಎಸ್‌ಟಿ ನಿಗಮದ 180 ಕೋಟಿ ರೂ. ಹಣ ಗುಳುಂ ಮಾಡಿರುವುದು. ಚುನಾವಣೆಗೂ ಮೊದಲು ದಲಿತರ ರಕ್ಷಣೆ ನಮ್ಮ ಹಕ್ಕು ಅಂತ ಹೇಳಿದ್ರು. ಅಧಿಕಾರ ಸಿಕ್ಕ ತಕ್ಷಣ ವಾಲ್ಮೀಕಿ ನಿಗಮದ 187 ಕೋಟಿ ಹಣ ಗುಳುಂ ಮಾಡಿದ್ದಾರೆ. ಒಂದು ವರ್ಷದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಮಾಡಿದ್ದೇ ಸಾಧನೆ ಎಂದು ಅಶೋಕ್‌ ಆರೋಪಿಸಿದರು.

ರಾಜ್ಯದಲ್ಲಿ ಹೆಣ್ಣು ಮಕ್ಕಳು ಹೊರಗಡೆ ಹೋದ್ರೆ ಗ್ಯಾರಂಟಿ ಇಲ್ಲ. ಈಗ ಸರ್ಕಾರಿ ಅಧಿಕಾರಿಗಳಿಗೂ ಗ್ಯಾರಂಟಿ ಇಲ್ಲ. ಚಂದ್ರಶೇಖರ್‌ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ 25 ವರ್ಷದ ರಾಜಕೀಯ ಜೀವನದಲ್ಲಿ ಡಿಟೈಲ್ ಆಗಿ ಡೆತ್ ನೋಟು ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದನ್ನು ನೋಡಿಲ್ಲ. ಕಾಂಗ್ರೆಸ್‌ನವರು ಲೂಟಿ ಮಾಡಿರುವುದು ಸ್ಪಷ್ಟವಾಗಿ ಕಾಣ್ತಿದೆ. 187 ಕೋಟಿ ರೂ. ಹಗರಣದಲ್ಲಿ ಇಡೀ ಸರ್ಕಾರ ಭಾಗಿಯಾಗಿದೆ ಎಂದು ಅವರು ಆರೋಪಿಸಿದರು.

ಮಹಿಳೆಯರ ಬ್ಯಾಂಕ್ ಅಕೌಂಟ್‌ಗೆ ಟಕಾಟಕ್‌ ಹಣ ಹಾಕ್ತೀವಿ ಅಂತ ರಾಹುಲ್ ಹೇಳಿದ್ರು. 4, 6, 21, 25 ದಿನಾಂಕಗಳಂದು ಟಕಾಟಕ್‌ ಟ್ರಾನ್ಸ್‌ಫರ್ ಮಾಡಿದ್ದಾರೆ. ಕಾಂಗ್ರೆಸ್‌ನ ಲೂಟಿ ಅಕೌಂಟ್‌ಗೆ ಹಾಕಿದ್ದಾರೆ. ಇದು ಬ್ರಹ್ಮಾಂಡ ಭ್ರಷ್ಟಾಚಾರ. ದಲಿತರ ಹಣ ಮಾಯವಾಗಿದೆ. ಅಧಿಕಾರಿಗಳು ಸತ್ತು ಹೋಗ್ತಿದ್ದಾರೆ. ಕ್ರೈಮ್ ರೇಟ್, ಕೋಮುವಾದ ಮತ್ತು ಭಯೋತ್ಪಾದನೆ ಟಕಾಟಕ್‌ ಜಾಸ್ತಿ ಆಗಿದೆ ಎಂದು ಅವರು ಕಿಡಿ ಕಾರಿದರು.

ಸರ್ಕಾರಕ್ಕೆ ಆರ್ ಆಶೋಕ್ ಆರು ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ:
1) ಚಂದ್ರಶೇಖರ್‌ ಡೆತ್ ನೋಟ್‌ನಲ್ಲಿ ಮಂತ್ರಿ ಹೆಸರಿದೆ. ಆದರೆ ಎಫ್ಐಆರ್‌ನಲ್ಲಿ ಯಾಕೆ ಇಲ್ಲ?
2) ಎಫ್ಐಆರ್‌ನಲ್ಲಿ ಹೆಸರಿರುವ ಅಧಿಕಾರಿಗಳನ್ನು ಯಾಕೆ ಬಂಧಿಸಿಲ್ಲ?
3) ಬಂಧಿಸಿದ್ರೆ ನಿಮ್ಮ ಬಂಡವಾಳ ಬಯಲಾಗುತ್ತಾ?
4) ಸಿಐಡಿ ಕೊಟ್ಟು ಮುಚ್ಚಿ ಹಾಕುವ ಪ್ಲಾನ್ ಮಾಡಿದ್ರಾ?
5) ಕಮಿಷನ್ ಪಡೆದಿದ್ದರೆ ರಾಜೀನಾಮೆ ಕೊಡ್ತೀನಿ ಅಂದ್ರಿ. ರಾಜೀನಾಮೆ ಯಾವಾಗ ಕೊಡ್ತೀರಾ ಸಿದ್ದರಾಮಯ್ಯ ಅವರೇ?
6) ಲ್ಯಾಪ್ ಟಾಪ್ ಕದ್ದು ಮುಚ್ಚಿ ತೆಗೆದುಕೊಂಡು ಹೋಗಿದ್ದು ಯಾಕೆ?

“ಈಶ್ವರಪ್ಪ ಪ್ರಕರಣದಲ್ಲಿ ಮೌಖಿಕ ಆದೇಶ ಅಷ್ಟೇ ಮಾಡಿದ್ದರು. ಅವರು ನೈತಿಕ ಹೊಣೆಗಾರಿಕೆ ಮೇಲೆ ರಾಜೀನಾಮೆ ಕೊಟ್ಟರು. ಈಶ್ವರಪ್ಪ ಅವರನ್ನ ಕೂಡಲೇ ಬಂಧಿಸಿ ಅಂತ ಸಿದ್ದರಾಮಯ್ಯ ಒತ್ತಾಯ ಮಾಡಿದ್ರು. ಈಗ ನೀವ್ಯಾರನ್ನು ಬಂಧಿಸಿದ್ದೀರಿ? ಇದು ಹಾದಿ ಬೀದಿಯಲ್ಲಿ ಮಾತನಾಡಿದ್ದು ಅಲ್ಲ, ಸದನದಲ್ಲಿ ಸಿದ್ದರಾಮಯ್ಯ ಹೇಳಿದ್ದು” ಎಂದು ಅಶೋಕ್ ಪ್ರಶ್ನಿಸಿದ್ದಾರೆ. “ಏನೂ ಆಗಿಲ್ಲ ಅಂತ ಪರಮೇಶ್ವರ್ ಹೇಳಿದ್ದಾರೆ. 20 ಕೋಟಿ ವಾಪಸು ಕೊಟ್ಟಿದ್ದಾರೆ ಅಂತ ಹೇಳಿದ್ದಾರೆ. ಹಣ ವಾಪಸು ತಂದಿದ್ದೀರಿ. ಅವನ ಪ್ರಾಣ ಸಹ ವಾಪಸು ತನ್ನಿ” ಎಂದರು.

“ಈ ಹಣ ಆಂಧ್ರಪ್ರದೇಶ, ತೆಲಂಗಾಣಕ್ಕೆ ಹೋಗಿದೆ. ಇದನ್ನು ಸಿಬಿಐಗೆ ಒಪ್ಪಿಸಿದರೆ ಸತ್ಯಾಸತ್ಯತೆ ಹೊರಗಡೆಗೆ ಬರುತ್ತೆ. ಮುಖ್ಯಮಂತ್ರಿ ರಾಜೀನಾಮೆ ಕೇಳ್ತೀವಿ. ಮಂತ್ರಿ ರಾಜೀನಾಮೆ ಆಗಲೇಬೇಕು. ಆರನೇ ತಾರೀಖು ಡೆಡ್‌ಲೈನ್ ಕೊಡುತ್ತೇವೆ. ಅದರ ಒಳಗೆ ರಾಜೀನಾಮೆ ಪಡೆಯದಿದ್ರೆ ರಾಜ್ಯಾದ್ಯಂತ ಪ್ರತಿಭಟನೆ ಮಾಡುತ್ತೇವೆ” ಎಂದು ಅಶೋಕ್‌ ಆಗ್ರಹಿಸಿದರು.

“ಡೆತ್‌ ನೋಟ್‌ ಬಗ್ಗೆ ಪರಮೇಶ್ವರ್‌ ಅನುಮಾನ ವ್ಯಕ್ತಪಡಿಸಿದ್ದಾರೆ. ಪರಮೇಶ್ವರ್ ಹೇಳಿಕೆಯೇ ತನಿಖೆ ಯಾವ ರೀತಿಯಲ್ಲಿ ನಡೆಯುತ್ತಿದೆ ಅಂತ ತಿಳಿಸುತ್ತಿದೆ. ಸಿಐಡಿ ತನಿಖೆಗೆ ಯಾರು ಒತ್ತಾಯ ಮಾಡಿದರು? ಇವರು ಈ ಕೇಸ್ ಮುಚ್ಚಿ ಹಾಕಲು ಸಿಐಡಿಗೆ ನೀಡಿದ್ದಾರೆ” ಎಂದು ಅಶೋಕ್ ಹೇಳಿದರು.

ಇದನ್ನೂ ಓದಿ: Valmiki Corporation Scam: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ; ಎಂಡಿ, ಲೆಕ್ಕಾಧಿಕಾರಿ ಅಮಾನತು

Continue Reading

ಕ್ರೈಂ

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

Cylinder Blast : ಬೆಂಗಳೂರಲ್ಲಿ ಮಧ್ಯರಾತ್ರಿ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡಿದ್ದು, ಒಂದೇ ಕುಟುಂಬದ ಐವರು ಗಂಭೀರ ಗಾಯಗೊಂಡಿದ್ದಾರೆ. ಪ್ರತ್ಯೇಕ ಕಡೆಗಳಲ್ಲಿ ಅಗ್ನಿ ಅವಘಡಗಳು (Fire Accident ) ಸಂಭವಿಸಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.

VISTARANEWS.COM


on

By

cylinder blast in Bengaluru
Koo

ಬೆಂಗಳೂರು: ಬೆಂಗಳೂರಿನ ಸಂಪಿಗೇಹಳ್ಳಿ ಸಮೀಪದ ಎಂಎಸ್ ನಗರದಲ್ಲಿ ಮನೆಯೊಂದರಲ್ಲಿ ಅಡುಗೆ ಅನಿಲ ಸ್ಫೋಟಗೊಂಡು (Cylinder Blast) ಐವರು ಗಂಭೀರ ಗಾಯಗೊಂಡಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಒಂದೇ ಕುಂಟುಂಬದ ಐವರಿಗೆ ಶೇ.90ರಷ್ಟು ಸುಟ್ಟ ಗಾಯಗಳಿಗೆ (Fire Accident ) ತುತ್ತಾಗಿದ್ದಾರೆ.

ದಂಪತಿ ಮದನ್ ಚೌಹಾರ (32), ಪ್ರೇಮ್ ಜಾಲ(28) ಹಾಗೂ ಮಕ್ಕಳಾದ ಹಿರದ್ (12), ಪ್ರಶಾಂತ್ (06), ಅನಿತಾ (8) ಈ ಐವರು ಗಂಭೀರ ಗಾಯಗೊಂಡಿದ್ದಾರೆ. ತಡರಾತ್ರಿ ಗ್ಯಾಸ್‌ ಲಿಂಕ್‌ ಆಗಿದ್ದು, ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಏಕಾಏಕಿ ಸಿಲಿಂಡರ್‌ ಸ್ಫೋಟಗೊಂಡಿದೆ ಎನ್ನಲಾಗಿದೆ. ನಿದ್ದೆ ಮಂಪರಿನಲ್ಲಿದ್ದವರಿಗೆ ಗಂಭೀರವಾದ ಸುಟ್ಟು ಗಾಯವಾಗಿವೆ.

ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಅಸ್ಪತ್ರೆಗೆ ರವಾನೆ ಮಾಡಲಾಗಿದೆ. ನೇಪಾಳ ಮೂಲದ ಕುಟುಂಬವು ಬೆಂಗಳೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಸಂಪಿಗೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್‌ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

ಬಾಗಲಕೋಟೆಯಲ್ಲೂ ಸಿಲಿಂಡರ್‌ ಸ್ಫೋಟ; ಸುಟ್ಟು ಭಸ್ಮವಾದ ಫ್ಯಾಕ್ಟರಿ

ಸಿಲಿಂಡರ್ ಸ್ಫೋಟಕ್ಕೆ ಸ್ವೀಟ್, ಬಡಂಗ್ ತಯಾರಿಕ ಫ್ಯಾಕ್ಟರಿ ಸುಟ್ಟು ಭಸ್ಮವಾಗಿದೆ. ಬಾಗಲಕೋಟೆಯ ರಬಕವಿ ನಗರದದಲ್ಲಿ ಘಟನೆ ನಡೆದಿದೆ. ರಬಕವಿಯ ಕಂಟಿ ಬಸವೇಶ್ವರ ದೇವಾಲಯ ಹತ್ತಿರ ಇರುವ ಬಡಂಗ್ ಫ್ಯಾಕ್ಟರಿಯಲ್ಲಿ ಬುಧವಾರ ತಡರಾತ್ರಿ ಸಿಲಿಂಡರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡಿದೆ.

ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಮಹಮ್ಮದ್ ಹುಸೇನ್ ಗೋಕಾಕ್ ಎಂಬುವರಿಗೆ ಸೇರಿದ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡದಿಂದಾಗಿ ಅಂದಾಜು 50-60 ಲಕ್ಷ ರೂ ಹಾನಿ ಸಾಧ್ಯತೆ ಇದೆ. ತೇರದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Fire Accident

ಟೆಕ್ನೋವಾ ಟೇಪ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರದ ಕೈಗಾರಿಕಾ ಪ್ರದೇಶದಲ್ಲಿರುವ ಟೇಪ್ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಟೆಕ್ನೋವಾ ಟೇಪ್ಸ್ ಕಾರ್ಖಾನೆಯಲ್ಲಿ ಅಗ್ನಿ ಅವಘಡದಿಂದಾಗಿ ಕಾಟಾನ್ ಬಾಕ್ಸ್ ಮತ್ತು ಟೆಪ್ಸ್ ಎಲ್ಲವೂ ಸುಟ್ಟು ಕರಕಲಾಗಿದೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ನಾಲ್ಕು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸಲು ಹರಸಾಹಸ ಪಡಬೇಕಾಯಿತು. ಲಕ್ಷಾಂತರ ರೂ.ಗಳ ಕಚ್ಚಾವಸ್ತುಗಳು ಬೆಂಕಿಗಾಹುತಿ ಆಗಿದ್ದವಿ.

ಉಡುಪಿಯಲ್ಲೂ ಅಗ್ನಿ ಅವಘಡ

ಉಡುಪಿಯ ಪಾದೂರು ಮರದ ಹುಡಿ ಗೋಡೌನ್‌ನಲ್ಲಿ ಆಕಸ್ಮಿಕ ಅಗ್ನಿ ಅವಘಡ ಸಂಭವಿಸಿದೆ. ಪಾಪು ತಾಲೂಕಿನ ಮಾದೂರಿನಲ್ಲಿರುವ ಮರದಹುಡಿ ಸಂಗ್ರಹದ ಘಟಕದಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಬಂದ ಉಡುಪಿ ಅಗ್ನಿಶಾಮಕ ದಳದವರಿಂದ ಕಾರ್ಯಾಚರಣೆ ನಡೆಸಿದ್ದರು, ಮರದ ಹುಡುಗಿ ತಗಳಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಸಕಾಲದಲ್ಲಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದರಿಂದ ಅವಘಡ ತಪ್ಪಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Lokayukta Raid : ಲಂಚಕ್ಕೆ ಕೈವೊಡ್ಡಿದ ಕೆಆರ್‌ ಆಸ್ಪತ್ರೆ ವೈದ್ಯನಿಗೆ 4 ವರ್ಷ ಶಿಕ್ಷೆ, 50 ಸಾವಿರ ರೂ. ದಂಡ

Lokayukta Raid: ಮೈಸೂರಿನಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೈದ್ಯನಿಗೆ ನಾಲ್ಕು ವರ್ಷ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ. ಉಡುಪಿಯಲ್ಲಿ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ.

VISTARANEWS.COM


on

By

Lokayukta Raid
Koo

ಮೈಸೂರು/ಉಡುಪಿ: ಮೈಸೂರಿನ ಕೆ.ಆರ್‌ ಆಸ್ಪತ್ರೆಯಲ್ಲಿ ವೈದ್ಯರೊಬ್ಬರು ಲಂಚಕ್ಕೆ ಬೇಡಿಕೆ (Lokayukta Raid) ಇಟ್ಟಿದ್ದರು. ಇದೀಗ ಲಂಚಕ್ಕೆ ಕೈವೊಡ್ಡಿದ ವೈದ್ಯನಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಲಾಗಿದೆ. 3ನೇ ಅಪರ ಜಿಲ್ಲಾ ಸತ್ರ ಮತ್ತು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕೆ.ಆರ್. ಆಸ್ಪತ್ರೆಯ ಮೂಳೆ ಶಸ್ತ್ರಚಿಕಿತ್ಸಕ ಡಾ.ಪುಟ್ಟಸ್ವಾಮಿ ಶಿಕ್ಷೆಗೊಳಗಾದ ವೈದ್ಯರಾಗಿದ್ದಾರೆ. ಕಳೆದ 2017ರ ಏಪ್ರಿಲ್ 12ರಂದು ದೇವರಾಜು ಎಂಬುವವರು ದೂರು ನೀಡಿದ್ದರು. ಪುಟ್ಟಸ್ವಾಮಿ 26 ಸಾವಿರ ರೂ. ಲಂಚ ಸ್ವೀಕರಿಸುವಾಗ ಎಸಿಬಿ ಪೊಲೀಸಲಿಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದರು.

ಆರೋಪಿ ಪುಟ್ಟಸ್ವಾಮಿ ವಿರುದ್ಧ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಡಾ ಪುಟ್ಟಸ್ವಾಮಿಗೆ ನಾಲ್ಕು ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ಹಾಕಲಾಗಿದೆ.

Lokayukta Raid

ಉಡುಪಿಯಲ್ಲಿ ಲೋಕಾಯುಕ್ತ ದಾಳಿ; ಬಲೆಗೆ ಬಿದ್ದ ಅಧಿಕಾರಿಗಳು

ಉಡುಪಿ ಜಿಲ್ಲೆಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ದಾಳಿ ವೇಳೆ ಉಪ್ಪೂರು ಪಿಡಿಓ ಇನಾಯತ್ ಉಲ್ಲಾ ಬೇಗ್ ಹಾಗೂ ಪಂಚಾಯತ್ ಬಿಲ್ ಕಲೆಕ್ಟರ್ ಸಂಜಯ್ ಕೂಡ ಸಿಕ್ಕಿಬಿದ್ದಿದ್ದಾರೆ. ರವಿ ಡಿಲಿಮಾ ಅವರಿಂದ 13,300 ರೂ. ಲಂಚ ಪಡೆಯುತ್ತಿದ್ದಾಗ ಲೋಕಾ ಬಲೆಗೆ ಸಿಲುಕಿದ್ದಾರೆ. ಲೋಕಾಯುಕ್ತ ಎಸ್‌ಪಿ ನಟರಾಜ್ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬಂಧಿತರಿಬ್ಬರಿಗೂ ಜೂನ್ 12ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Assault Case in Shivamogga
ಕ್ರೈಂ8 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Team India Dream 11
ಕ್ರಿಕೆಟ್9 mins ago

Team India T20 World Cup: ಚಿಂಟುವಿನ ಆಸೆ ನೆರವೇರಿಸಲು ಟೀಮ್​ ಇಂಡಿಯಾ ಜತೆ ನ್ಯೂಯಾರ್ಕ್​ಗೆ ತೆರಳಿದ ತಾಯಿ

Shiva Rajkumar support Tamil Movie Non Voilance Cinema
ಸ್ಯಾಂಡಲ್ ವುಡ್14 mins ago

Shiva Rajkumar: ತಮಿಳಿನ ‘ನಾನ್ ವೈಲೆನ್ಸ್’ ಸಿನಿಮಾಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್: ಫಸ್ಟ್ ಲುಕ್ ಔಟ್‌!

Narendra Modi
Lok Sabha Election 202415 mins ago

Narendra Modi: ಲೋಕಸಭಾ ಚುನಾವಣೆ ಫಲಿತಾಂಶದ 6 ತಿಂಗಳ ಬಳಿಕ ‘ರಾಜಕೀಯ ಭೂಕಂಪ’; ಮೋದಿನ ಮಾತಿನ ಮರ್ಮವೇನು?

Valmiki Corporation Scam
ಪ್ರಮುಖ ಸುದ್ದಿ17 mins ago

Valmiki Corporation Scam: ಹಗರಣದ ಆರೋಪಿ ಜೊತೆಗೆ ಸಚಿವ ನಾಗೇಂದ್ರ ಕ್ಲೋಸ್‌? ಫೋಟೋ ಬಿಡುಗಡೆ ಮಾಡಿದ ಬಿಜೆಪಿ

Mansoon
ದೇಶ26 mins ago

Monsoon: ವಾಡಿಕೆಗಿಂತ ಮುನ್ನವೇ ಲಗ್ಗೆ ಇಟ್ಟ ಮಾನ್ಸೂನ್‌; ಕೇರಳದಲ್ಲಿ ಮುಂಗಾರು ಆರಂಭ

Ravichandran Birthday Premaloka 2 update
ಸ್ಯಾಂಡಲ್ ವುಡ್38 mins ago

Ravichandran Birthday: `ಪ್ರೇಮಲೋಕ 2’ಬಗ್ಗೆ ಅಪ್‌ಡೇಟ್‌ ಹಂಚಿಕೊಂಡ ‘ಕ್ರೇಜಿ ಸ್ಟಾರ್’ ರವಿಚಂದ್ರನ್‌!

cylinder blast in Bengaluru
ಕ್ರೈಂ58 mins ago

Fire Accident : ಗಾಢ ನಿದ್ರೆಯಲ್ಲಿರುವಾಗಲೇ ಸಿಲಿಂಡರ್‌ ಸ್ಫೋಟ; ಬೆಂಕಿಯ ಕೆನ್ನಾಲಿಗೆಗೆ ಐವರು ಗಂಭೀರ

T20 World Cup 2007
ಕ್ರಿಕೆಟ್1 hour ago

T20 World Cup 2007: ಚೊಚ್ಚಲ ಟಿ20 ವಿಶ್ವಕಪ್ ಭಾರತ-ಪಾಕ್​ ಫೈನಲ್​ ಪಂದ್ಯದ ಮೆಲುಕು ನೋಟ

Gold Rate Today
ಚಿನ್ನದ ದರ1 hour ago

Gold Rate Today: ತುಸು ಇಳಿಕೆ ಕಂಡ ಚಿನ್ನದ ಬೆಲೆ; ಇಲ್ಲಿದೆ ದರದ ವಿವರ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ8 mins ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌