Bagalkot Election Result 2024: ಬಾಗಲಕೋಟೆಯಲ್ಲಿ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ಗೆ ಜಯ - Vistara News

ಬಾಗಲಕೋಟೆ

Bagalkot Election Result 2024: ಬಾಗಲಕೋಟೆಯಲ್ಲಿ ಬಿಜೆಪಿಯ ಪಿ.ಸಿ.ಗದ್ದಿಗೌಡರ್‌ಗೆ ಜಯ

Bagalkot Election Result 2024: ಬಿಜೆಪಿಯ ಪಿ.ಸಿ. ಗದ್ದಿಗೌಡರ್‌ ಅವರು 2004ರಿಂದಲೂ ಬಾಗಲಕೋಟೆಯ ಸಂಸದರಾಗಿದ್ದಾರೆ. ಇವರು ಈಗ ಸತತ ಐದನೇ ಬಾರಿಗೆ ಗೆಲುವು ಸಾಧಿಸುವ ಉತ್ಸಾಹದಲ್ಲಿದ್ದರು. ಇನ್ನು, ಸಂಯುಕ್ತಾ ಪಾಟೀಲ್‌ ಅವರು ಯುವ ನಾಯಕಿಯಾಗಿದ್ದು, ತಂದೆ ಶಿವಾನಂದ್‌ ಪಾಟೀಲ್‌ ಅವರ ಬಲದಿಂದ ಗೆಲುವು ಸಾಧಿಸುವ ಛಲದೊಂದಿಗೆ ಮುನ್ನುಗ್ಗಿದ್ದರು. ಇಲ್ಲಿ ಅನುಭವ ವರ್ಸಸ್‌ ಉತ್ಸಾಹ ಎಂಬಂತಾಗಿತ್ತು. ಕೊನೆಗೆ ಅನುಭವದ ಕೈ ಮೇಲಾಗಿದೆ.

VISTARANEWS.COM


on

Bagalkot Election Result 2024
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಬಿಜೆಪಿಯ ಸಿ.ಗದ್ದಿಗೌಡರ್‌ (PC Gaddigoudar) ಅವರು ಬಾಗಲಕೋಟೆ ಲೋಕಸಭೆ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇದರೊಂದಿಗೆ ಸತತ ಐದನೇ ಬಾರಿಗೆ ಗೆಲುವು ಸಾಧಿಸುವ ಮೂಲಕ ಪಿ.ಸಿ.ಗದ್ದಿಗೌಡರ್‌ ಅವರು ಇತಿಹಾಸ ಸೃಷ್ಟಿಸಿದ್ದಾರೆ. ಇನ್ನು ತುಸು ಭರವಸೆ ಮೂಡಿಸಿದ್ದ ಯುವ ನಾಯಕಿ, ಸಚಿವ ಶಿವಾನಂದ್‌ ಪಾಟೀಲ್‌ ಅವರ ಪುತ್ರಿ ಸಂಯುಕ್ತಾ ಪಾಟೀಲ್‌ (Samyukta Patil) ಅವರು ಪರಾಜಯಗೊಂಡಿದ್ದಾರೆ.

ಮತಗಳ ಹಂಚಿಕೆ ಹೀಗಿದೆ

ಪಿ.ಸಿ.ಗದ್ದಿಗೌಡರ್‌ (ಬಿಜೆಪಿ): 6,71,039

ಸಂಯುಕ್ತಾ ಪಾಟೀಲ್‌ (ಕಾಂಗ್ರೆಸ್):‌ 6,02,640

ಗೆಲುವಿನ ಅಂತರ: 68,399

ಪಿ.ಸಿ.ಗದ್ದಿಗೌಡರ್‌ ಅವರು 2004ರಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಮೊದಲ ಬಾರಿಗೆ ಬಿಜೆಪಿಯ ಪತಾಕೆ ಹಾರಿಸಿದ್ದು, ಅದಾದ ನಂತರ ಅವರು ತಿರುಗಿ ನೋಡಿರಲ್ಲ. ಕ್ಷೇತ್ರದ ಜನರ ಜತೆ ಒಡನಾಟ, ಅಭಿವೃದ್ಧಿ ಯೋಜನೆಗಳು, ಸರಳತೆಯಿಂದ ಮನೆಮಾತಾಗಿರುವ ಇವರಿಗೆ ನರೇಂದ್ರ ಮೋದಿ ಅವರ ಅಲೆಯ ಕೃಪಾಕಟಾಕ್ಷವೂ ಇತ್ತು. ಅದರಲ್ಲೂ, ಸಂಯುಕ್ತಾ ಪಾಟೀಲ್‌ ಅವರು ಹೊರಗಿನವರು ಎಂಬ ಭಾವನೆ ಜನರಲ್ಲಿರುವುದು ಕೂಡ ಗದ್ದಿಗೌಡರ್‌ ಅವರಿಗೆ ನೆರವಾಗಲಿದೆ ಎಂದು ವಿಶ್ಲೇಷಿಸಲಾಗುತ್ತಿತ್ತು. ಅದರಂತೆ, ಗದ್ದಿಗೌಡರ್‌ ಅವರು ವಿಜಯ ಸಾಧಿಸಿದ್ದಾರೆ.

Bagalkot Lok Sabha Constituency

ಸಂಯುಕ್ತಾ ಪಾಟೀಲ್‌ ಅವರು ಬಾಗಲಕೋಟೆ ಕ್ಷೇತ್ರದ ಆಡಳಿತ ವಿರೋಧಿ ಅಲೆ, ತಂದೆ ಶಿವಾನಂದ್‌ ಪಾಟೀಲರ ಬಲವಿದೆ. ಪ್ರಚಾರದ ವೇಳೆ ಯುವಕರು, ಅದರಲ್ಲೂ, ಯುವತಿಯರನ್ನು ಸೆಳೆಯುವಲ್ಲಿ ಸಂಯುಕ್ತಾ ಪಾಟೀಲ್‌ ಅವರು ಯಶಸ್ವಿಯಾಗಿದ್ದರು. ಹೊರಗಿನವಳು ಎಂಬ ಮನೋಭಾವವನ್ನು ತೊಡೆದುಹಾಕಿ, ನಾನೂ ನಿಮ್ಮ ಮನೆಮಗಳು ಎಂಬ ಭಾವನೆಯು ಜನರಲ್ಲಿ ಮೂಡುವಂತೆ ಮಾಡಿದ್ದರು. ಆ ಮೂಲಕ, ಬಾಗಲಕೋಟೆಯಲ್ಲಿ ಸಂಯುಕ್ತಾ ಪಾಟೀಲ್‌ ಅವರು ಪಿ.ಸಿ.ಗದ್ದಿಗೌಡರ್‌ ಅವರಿಗೆ ತೀವ್ರ ಪೈಪೋಟಿ ನೀಡಿದ್ದರು.

2019, 2014ರ ಫಲಿತಾಂಶ ಏನಾಗಿತ್ತು?

2019ರ ಲೋಕಸಭೆ ಚುನಾವಣೆಯಲ್ಲಿ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ ಅಭ್ಯರ್ಥಿ ವೀಣಾ ಕಾಶಪ್ಪನವರ್‌ ಅವರ ವಿರುದ್ಧ 1.68 ಲಕ್ಷ ಮತಗಳ ಅಂತರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. 2014ರ ಲೋಕಸಭೆ ಚುನಾವಣೆಯಲ್ಲೂ ನರೇಂದ್ರ ಮೋದಿ ಅವರ ಅಲೆಯನ್ನು ಸದ್ಬಳಕೆ ಮಾಡಿಕೊಂಡಿದ್ದ ಪಿ.ಸಿ.ಗದ್ದಿಗೌಡರ್‌ ಅವರು ಕಾಂಗ್ರೆಸ್‌ನ ಅಜಯ್‌ ಕುಮಾರ್‌ ಸರನಾಯ್ಕ ಅವರ ವಿರುದ್ಧ 1 ಲಕ್ಷಕ್ಕೂ ಅಧಿಕ ಮತಗಳಿಂದ ಜಯಭೇರಿ ಬಾರಿಸಿದ್ದರು.

ಇದನ್ನೂ ಓದಿ: Uttara Kannada Election Result 2024: ಉತ್ತರ ಕನ್ನಡದಲ್ಲಿ ಗೆದ್ದು ಬೀಗಿದ ವಿಶ್ವೇಶ್ವರ ಹೆಗಡೆ ಕಾಗೇರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

Rain News : ಮುಲ್ಕಿ, ಉಡುಪಿ, ಭಾಗಮಂಡಲದಲ್ಲಿ ಭಾರಿ ಮಳೆಯಾಗಿದೆ. ವಾರಾಂತ್ಯದಲ್ಲೂ ಭಾರಿ ವರ್ಷಧಾರೆಯ (Heavy rain) ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ.

VISTARANEWS.COM


on

By

karnataka Weather Forecast
Koo

ಬೆಂಗಳೂರು: ಒಮ್ಮೆ ಬಾರಿ ಜೋರಾಗಿ ಮಳೆ (Heavy Rain) ಬಂದರೂ ಜನರಿಗೆ ಕಷ್ಟ ಕಷ್ಟ ಎನ್ನುವ ಪರಿಸ್ಥಿತಿ ಇದೆ. ಈ ನಡುವೆ ಎಂದಿಗಿಂತ ತುಸು ಜೋರಾಗಿ ಹಾಗೂ ಹೆಚ್ಚಾಗಿಯೇ ಮಳೆಯಾಗುತ್ತಿರುವುದು (Rain News) ಜನರನ್ನು ಹೈರಣಾಗಿಸಿದೆ. ಸದ್ಯ ಇನ್ನೊಂದು ವಾರಕ್ಕೂ ಮಳೆ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ವಾರಾಂತ್ಯದಲ್ಲಿ ಕರಾವಳಿಯ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಜತೆಗೆ ನಿರಂತರ ಗಾಳಿ ಬೀಸಲಿದ್ದು ಗಂಟೆಗೆ 40-50 ಕಿ.ಮೀನಲ್ಲಿ ವೇಗ ಇರಲಿದೆ. ಉಳಿದೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ-ಮಲೆನಾಡಿನಲ್ಲಿ ವಿಪರೀತ ಮಳೆ

ನೈರುತ್ಯ ಮುಂಗಾರು ಕರಾವಳಿಯಲ್ಲಿ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಧಾರಣವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿತ್ತು. ಇನ್ನೂ ಅತಿ ಹೆಚ್ಚು ಮಳೆಯು ದಕ್ಷಿಣ ಕನ್ನಡದ ಮುಲ್ಕಿಯಲ್ಲಿ 30 ಸೆಂ.ಮೀ, ಉಡುಪಿ ಹಾಗೂ ಕೊಡಗಿನ ಭಾಗಮಂಡಲದಲ್ಲಿ ತಲಾ 21 ಸೆಂ.ಮೀ ಮಳೆಯಾಗಿದೆ.

ಮಂಗಳೂರು ವಿಮಾನ ನಿಲ್ದಾಣ , ಮಣಿ , ಕಾರ್ಕಳ, ಆಗುಂಬೆಯಲ್ಲಿ ತಲಾ 17 ಸೆಂ.ಮೀ, ಪಣಂಬೂರು , ಬೆಳ್ತಂಗಡಿ, ಹೊನ್ನಾವರ, ಧರ್ಮಸ್ಥಳದಲ್ಲಿ ತಲಾ 15 ಸೆಂ.ಮೀ ಮಳೆಯಾಗಿದೆ. ಶಿರಾಲಿ, ಕೋಟ, ಉಪ್ಪಿನಂಗಡಿ, ಕೊಟ್ಟಿಗೆಹಾರದಲ್ಲಿ ತಲಾ 14 ಸೆಂ.ಮೀ, ನಾಪೋಕ್ಲು13, ಪೊನ್ನಂಪೇಟೆ 12 ಸೆಂ.ಮೀ ಮಳೆಯಾಗಿದೆ. ಪುತ್ತೂರು , ಕೊಲ್ಲೂರು, ಸುಳ್ಯ, ಮೂರ್ನಾಡು, ವಿರಾಜಪೇಟೆಯಲ್ಲಿ 11 ಸೆಂ.ಮೀ, ಮಂಗಳೂರು 10 ಸೆಂ.ಮೀ, ಮಂಕಿ, ಕಳಸ, ಶೃಂಗೇರಿಯಲ್ಲಿ 9 ಸೆಂ.ಮೀ, ಕುಂದಾಪುರ, ಕುಮಟಾ, ಅಂಕೋಲಾದಲ್ಲಿ 8 ಸೆಂ.ಮೀ ಮಳೆಯಾಗಿರುವ ವರದಿ ಆಗಿದೆ.

ಗೋಕರ್ಣ, ಕೊಪ್ಪ6 ಸೆಂ.ಮೀ, ಸಿದ್ದಾಪುರ , ಜಯಪುರ 5 ಸೆಂ.ಮೀ, ಕದ್ರಾ , ತಾಳಗುಪ್ಪ , ಬಂಡೀಪುರದಲ್ಲಿ 4 ಸೆಂ.ಮೀ ಮಳೆಯಾಗಿದೆ. ಲೋಂಡಾ, ಕುಶಾಲನಗರ, ಸೋಮವಾರಪೇಟೆ, ಹಾರಂಗಿ, ಹುಣಸೂರಿನಲ್ಲಿ 3 ಸೆಂ.ಮೀ ಮಳೆಯಾಗಿದೆ. ಜೋಯಿಡಾ, ಯಲ್ಲಾಪುರ, ಬಾಳೆಹೊನ್ನೂರು, ಹುಂಚದಕಟ್ಟೆ , ಸರಗೂರು 2 ಸೆಂ.ಮೀ, ಮುಂಡಗೋಡ , ಕಾರವಾರ , ಬನವಾಸಿ, ಹಳಿಯಾಳ, ಕಿರವತ್ತಿ , ತ್ಯಾಗರ್ತಿ, ಹಾಸನ , ಕೃಷ್ಣರಾಜಸಾಗರ, ಆನವಟ್ಟಿ, ಎನ್ ಆರ್ ಪುರ, ಗುಂಡ್ಲುಪೇಟೆ, ನಂಜನಗೂಡು, ಕೆ ಆರ್ ನಗರದಲ್ಲಿ 1 ಸೆಂ.ಮೀ ಮಳೆಯಾಗಿದೆ.

ಇದನ್ನೂ ಓದಿ: Road Accident : ಅಂತ್ಯಸಂಸ್ಕಾರ ಮುಗಿಸಿ ಬರುತ್ತಿದ್ದ ದಂಪತಿ ಮೇಲೆ ಮುರಿದು ಬಿದ್ದ ಬೃಹತ್‌ ಮರ!

ಚಿಕ್ಕಮಗಳೂರಲ್ಲಿ ಭಾರಿ ಮಳೆಗೆ ರಸ್ತೆ ಕಾಣದೆ ನದಿಗೆ ಬಿದ್ದ ಕಾರು

ಭಾರಿ ಮಳೆಯಿಂದಾಗಿ ರಸ್ತೆ ಕಾಣದೆ ಕಾರೊಂದು ನದಿಗೆ ಬಿದ್ದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಜೂ 28ರಂದು ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಣಕಲ್ ಬಳಿ ಘಟನೆ ನಡೆದಿದೆ. ನೋಡ ನೋಡುತ್ತಿದ್ದಂತೆ ‌ಕಾರು ಹೇಮಾವತಿ ನದಿಗೆ ಹಾರಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನಿಂತ ಹಿನ್ನೆಲೆಯಲ್ಲಿ ರಸ್ತೆ ಕಾಣದೆ ಕಾರು ನಿಯಂತ್ರಣ ತಪ್ಪಿರುವ ಶಂಕೆ ವ್ಯಕ್ತವಾಗಿದೆ. ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಯಿಂದ ಜಿಗಿದು ನದಿಗೆ ಕಾರು ಬಿದ್ದಿದೆ. ಕಳೆದ ಎರಡು ತಿಂಗಳ ಹಿಂದೆ ನಾಲ್ವರು ಅಪಘಾತದಲ್ಲಿ ಮೃತಪಟ್ಟಿದ್ದರು. ಇದೀಗ ಇದೆ ಸ್ಥಳದಲ್ಲೇ ಮತ್ತೊಂದು ಅಪಘಾತ ಸಂಭವಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಾಗಲಕೋಟೆ

Electric shock : ಬೋರ್‌ವೆಲ್‌ ಆನ್‌ ಮಾಡುತ್ತಿದ್ದಂತೆ ಕರೆಂಟ್‌ ಶಾಕ್‌; ಹಾರಿ ಬಿದ್ದ ರೈತ ಸ್ಪಾಟ್‌ ಡೆತ್‌

Electric shock : ಬೋರ್‌ವೆಲ್‌ ಆನ್‌ ಮಾಡಲು ಹೋದಾಗ ವಿದ್ಯುತ್‌ ಪ್ರವಹಿಸಿ ರೈತರೊಬ್ಬರು ಮೃತಪಟ್ಟರೆ, ಸ್ಟೇ ವೈಯರ್‌ಗೆ ವಿದ್ಯುತ್‌ ಸ್ಪರ್ಶಿಸಿ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

VISTARANEWS.COM


on

By

Electric Shock
Koo

ಬಾಗಲಕೋಟೆ: ವಿದ್ಯುತ್ ತಗುಲಿ (Electric shock) ರೈತರೊಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಮೆಟಗುಡ್ಡ ಗ್ರಾಮದಲ್ಲಿ ನಡೆದಿದೆ. ಭೀಮಪ್ಪ ಯಾದವಾಡ (45) ಮೃತ ದುರ್ದೈವಿ.

ಭೀಮಪ್ಪ ನೀರು ಹಾಯಿಸಲು ಬೆಳಗ್ಗೆ ಹೊಲಕ್ಕೆ ಹೋಗಿದ್ದರು. ಬೋರ್‌ವೆಲ್‌ ಮೆಷಿನ್‌ ಡೋರ್‌ ತೆರೆದು ಆನ್ ಮಾಡಲು ಹೋಗಿದ್ದಾರೆ. ಆದರೆ ವಿದ್ಯುತ್ ತಂತಿ ಕಟ್ ಆಗಿ ಬೋರ್ಡ್‌ಗೆ ಸಂಚರಿಸಿ ಕರೆಂಟ್‌ ಶಾಕ್‌ ಹೊಡೆದಿದೆ.

ಸ್ಥಳಕ್ಕೆ ಲೊಕಾಪೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಸ್ಟೇ ವೈಯರ್‌ಗೆ ವಿದ್ಯುತ್ ಸ್ವರ್ಶಿಸಿ ಯುವತಿ ಸಾವು

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಸ್ಟೇ ವೈಯರ್‌ಗೆ ವಿದ್ಯುತ್‌ ಸ್ಪರ್ಶಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ ಮೃತ ದುರ್ದೈವಿ.

ಗಣೇಶ್ ಶೆಟ್ಟಿ ಮತ್ತು ರೋಹಿನಿ ಪುತ್ರಿ ಪ್ರತೀಕ್ಷಾ ಶೆಟ್ಟಿ(20) ಕೊಕ್ಕಡ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಮನೆಗೆ ಪಾರ್ಸೆಲ್ ಬಂದಿತ್ತು. ಹೀಗಾಗಿ ಅದನ್ನು ಪಡೆಯಲು ಹೋದಾಗ ಸ್ಟೇ ವೈಯರ್‌ನಿಂದ ನೀರಿಗೆ ವಿದ್ಯುತ್ ಪ್ರವಹಿಸಿದೆ. ಗಂಭೀರ ಗಾಯಗೊಂಡ ಪ್ರತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಆಕೆಯ ಮೃತದೇಹವನ್ನು ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

ಬಿಹಾರ: ಕೆಲವೊಂದು ಕಡೆಗಳಲ್ಲಿ ಮಹಿಳೆಯ ಕುತ್ತಿಗೆಗೆ ಮಾಂಗಲ್ಯ ಸರ ಕಟ್ಟಿದರೆ ಮದುವೆಯಾದ ಹಾಗೇ. ಅದೇರೀತಿ ಕೆಲವು ಕಡೆಗಳಲ್ಲಿ ಹಣೆಗ ಸಿಂಧೂರ ಹಚ್ಚಿದರೆ ಅವರಿಬ್ಬರು ದಂಪತಿ ಎಂದು ಪರಿಗಣಿಸುತ್ತಾರೆ. ಹಾಗಾಗಿ ಇಂತಹದೊಂದು ಸಂಪ್ರದಾಯವನ್ನಿಟ್ಟುಕೊಂಡು ಯುವಕನೊಬ್ಬ ಶಾಲಾ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಆಕೆಯ ತಂದೆಯ ಎದುರೇ ಬಲವಂತವಾಗಿ ಮದುವೆಯಾಗಲು ಯತ್ನಿಸಿದ ಘಟನೆ ಬಿಹಾರದ ಬಂಕಾ ಜಿಲ್ಲೆಯ ಅಮರಪುರ ಬ್ಲಾಕ್‌ನಲ್ಲಿ ನಡೆದಿದೆ. ಇದಕ್ಕೆ ಸಂಬಂಧಪಟ್ಟ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್(Viral Video) ಆಗಿದೆ.

ವಿಡಿಯೊದಲ್ಲಿ ಶಾಲೆ ಕೆಲಸ ಮುಗಿಸಿ ಶಿಕ್ಷಕಿ ತನ್ನ ತಂದೆಯೊಂದಿಗೆ ಬೈಕಿನಲ್ಲಿ ಬರುವಾಗ ಯುವಕರಿಬ್ಬರು ಅವರನ್ನು ರಸ್ತೆಯಲ್ಲಿ ತಡೆದು ನಿಲ್ಲಿಸಿದ್ದಾರೆ. ಅದರಲ್ಲಿ ಒಬ್ಬ ಯುವಕ ಬಲವಂತವಾಗಿ ಆಕೆಯ ಹಣೆಗೆ ಸಿಂಧೂರವನ್ನು ಹಚ್ಚಲು ಪ್ರಯತ್ನಿಸಿದ್ದಾನೆ. ಯುವಕ ತನ್ನ ಮುಖವನ್ನು ಬಟ್ಟೆಯಿಂದ ಮುಚ್ಚಿಕೊಂಡಿದ್ದಾನೆ. ಹಾಗೇ ಶಿಕ್ಷಕಿಯ ತಂದೆ ಯುವಕನಿಂದ ತಮ್ಮ ಮಗಳನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಶಿಕ್ಷಕಿ ತಲೆಯನ್ನು ತನ್ನ ದುಪ್ಪಟ್ಟದಿಂದ ಮುಚ್ಚಿಕೊಂಡಿದ್ದರು ಕೂಡ ಆತ ಸಿಂಧೂರ ಹಚ್ಚಿದ್ದಾನೆ. ಇನ್ನೊಬ್ಬ ಯುವಕ ಇದನ್ನು ವಿಡಿಯೊ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾನೆ. ಇದು ವೈರಲ್ ಆಗಿದೆ.

ವಿಡಿಯೊದಲ್ಲಿ ಯುವಕ ತನ್ನ ಜೀವನ ಆಕೆಯಿಂದ ಹಾಳಾಗಿದೆ ಎಂದು ಹೇಳಿದ್ದಾನೆ. ಈ ಘಟನೆ ಬಳಿಕ ಶಿಕ್ಷಕಿ ಯುವಕನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾಳೆ. ದೂರಿನಲ್ಲಿ ಶಿಕ್ಷಕಿ, ಬಭಂಗಮಾ ನಿವಾಸಿ ಸೌರಭ್ ಸೋನು ಎಂಬ ಯುವಕನೊಬ್ಬ ಪೋನ್‌ನಲ್ಲಿ ತನಗೆ ವೈಯಕ್ತಿಕವಾಗಿ ಕಿರುಕುಳ ನೀಡುತ್ತಿದ್ದಾನೆ. ತಾನು ಬಿಪಿಎಸ್‌ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಅಮರಪುರದ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡಲು ಶುರುಮಾಡಿದಾಗಿನಿಂದ ತನ್ನನ್ನು ಮದುವೆಯಾಗುವಂತೆ ಆತ ಒತ್ತಡ ಹಾಕುತ್ತಿದ್ದಾನೆ ಎಂದು ತಿಳಿಸಿದ್ದಾಳೆ. ಅಲ್ಲದೇ ಎರಡು ತಿಂಗಳ ಹಿಂದೆ ಯುವಕನ ವಿರುದ್ಧ ಲಿಖಿತ ದೂರು ನೀಡಿದ ಹಿನ್ನಲೆಯಲ್ಲಿ ಪೊಲೀಸರು ಆತನನ್ನು ಕರೆದು ಎಚ್ಚರಿಕೆ ನೀಡಿದ್ದರೂ ಕೂಡ ಆತ ಆಕೆಗೆ ಕಿರುಕುಳ ನೀಡುವುದನ್ನು ಮುಂದುವರಿಸಿದ್ದಾನೆ. ಇದೀಗ ಆತನ ವಿರುದ್ಧ ಮತ್ತೊಂದು ದೂರು ದಾಖಲಿಸಿದ ಶಿಕ್ಷಕಿ ನ್ಯಾಯಕ್ಕಾಗಿ ಕಾಯುತ್ತಿದ್ದಾಳೆ.

ಈ ವಿಡಿಯೊ ಜೂನ್ 27ರಂದು ಪೋಸ್ಟ್ ಆಗಿದ್ದು, ಇದಕ್ಕೆ 3.5 ಲಕ್ಷ ಲೈಕ್ಸ್ ಬಂದಿದೆ. ಹಾಗೇ ಅನೇಕ ಜನರು ಇದಕ್ಕೆ ಕಾಮೆಂಟ್ ಮಾಡಿದ್ದಾರೆ. ಇಂತಹ ಘಟನೆಗಳು ಹಲವು ಕಡೆ ನಡೆಯುತ್ತಿರುತ್ತದೆ. ಇದರಿಂದ ಅದೆಷ್ಟೋ ಹೆಣ್ಣುಮಕ್ಕಳ ಜೀವನ ಹಾಳಾಗಿದೆ. ಹಾಗಾಗಿ ಭವಿಷ್ಯದಲ್ಲಿ ಮಹಿಳೆಯರ ಮೇಲೆ ಮತ್ತೆ ಇಂತಹ ಘಟನೆಗಳು ನಡೆಯದಂತೆ ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗದುಕೊಳ್ಳುವಂತೆ ನೆಟ್ಟಿಗರು ಆಗ್ರಹಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಬೃಹತ್‌ ಮರವೊಂದು ಬುಡ ಸಮೇತ ಕಿತ್ತುಬಂದಿದೆ. ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಕರಾವಳಿಗೆ ರೆಡ್‌, ಮಲೆನಾಡಿಗೆ ಆರೆಂಜ್‌ ಅಲರ್ಟ್‌; ತಿಂಗಳಾಂತ್ಯದವರೆಗೆ ಮೀನುಗಾರರಿಗೆ ನಿರ್ಬಂಧ

Karnataka Weather Forecast: ಭಾರಿ ಮಳೆಯಾಗುವ (Rain News) ಸಾಧ್ಯತೆ ಇದ್ದು, ಕರಾವಳಿ ಭಾಗಕ್ಕೆ ರೆಡ್‌ ಹಾಗೂ ಮಲೆನಾಡಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದ್ದು, ತಿಂಗಳಾಂತ್ಯದವರೆಗೆ ಮೀನುಗಾರರಿಗೆ ಕಡಲತೀರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅವಾಂತರವನ್ನೇ ಸೃಷ್ಟಿಸಿದೆ. ಇನ್ನೊಂದು ವಾರ ಮಳೆಯು (Rain News) ಅಬ್ಬರಿಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ (Karnataka Weather Forecast) ನೀಡಿದೆ. ಈ ದಿನ ಕರ್ನಾಟಕ ಕರಾವಳಿಯಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡು ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ದಕ್ಷಿಣ ಒಳನಾಡಿನಲ್ಲಿ ಪ್ರತ್ಯೇಕವಾಗಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಹಗುರವಾದ ವರ್ಷಧಾರೆಯಾಗಲಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡಿನ ಭಾಗಗಳಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಆದರೆ ಬೆಳಗಾವಿಯಲ್ಲಿ ಭಾರೀ ಮಳೆಯಾಗುವ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಸುತ್ತಮುತ್ತ ಸಾಧಾರಣ ಮಳೆಯೊಂದಿಗೆ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯಲ್ಲಿ ವ್ಯಾಪಕವಾದ ಮಧ್ಯಮದಿಂದ ಭಾರಿ ಮಳೆಯಾಗಲಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಶುಕ್ರವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಈ ಜಿಲ್ಲೆಗಳಲ್ಲಿ ಭಯಂಕರ ಮಳೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಂಟೆಗೆ 45-55 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ನೀಡಲಾಗಿದೆ. ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಸನ ಜಿಲ್ಲೆಗೆ ಯೆಲ್ಲೋ ಎಚ್ಚರಿಕೆ ನೀಡಲಾಗಿದೆ.

ಮೀನುಗಾರರಿಗೆ ಮುಂದುವರಿದ ಎಚ್ಚರಿಕೆ

ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಹೀಗಾಗಿ ಜೂನ್‌ 30ರವರೆಗೆ ಮೀನುಗಾರರು ಸಮುದ್ರ ಪ್ರದೇಶಗಳಿಗೆ ಹೋಗದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
UGC NET Exam
ದೇಶ3 hours ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ3 hours ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ3 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ3 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ5 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ5 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Application Invitation to Join Air Wing NCC July 09 is the last day for submission of application
ಕರ್ನಾಟಕ5 hours ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Tulu language
ತಂತ್ರಜ್ಞಾನ6 hours ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

India is a secular nation because Hindus are the majority says Union Minister Pralhad Joshi
ಕರ್ನಾಟಕ6 hours ago

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

IND vs SA
ಪ್ರಮುಖ ಸುದ್ದಿ6 hours ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ9 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ15 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌