Bagalkot News : ಕೂಲಿ ಕುಟುಂಬದಿಂದ ಬಂದ ಯುವತಿ ಈಗ ಸಿವಿಲ್‌ ನ್ಯಾಯಾಧೀಶೆ! - Vistara News

ಬಾಗಲಕೋಟೆ

Bagalkot News : ಕೂಲಿ ಕುಟುಂಬದಿಂದ ಬಂದ ಯುವತಿ ಈಗ ಸಿವಿಲ್‌ ನ್ಯಾಯಾಧೀಶೆ!

Civil Judge : ಕನ್ನಡ ಮೀಡಿಯಂನಲ್ಲಿ ಓದಿದ ಗ್ರಾಮೀಣ ಪ್ರತಿಭೆ ಈಗ ಸಿವಿಲ್‌ ನ್ಯಾಯಾಧೀಶೆಯಾಗಿ ಆಯ್ಕೆ (BhagyaShree Madara) ಆಗಿದ್ದಾರೆ. ಈ ಮೂಲಕ ಎಲ್ಲರ ಮೆಚ್ಚುಗೆಗೆ ಕಾರಣರಾಗಿದ್ದಾರೆ.

VISTARANEWS.COM


on

Bhagyashree Madara Selected as civil judge Bagalkote
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಗಲಕೋಟೆ: ಜ್ಞಾನವೆಂಬುದು ಯಾರಪ್ಪನ ಸ್ವತ್ತು ಅಲ್ಲ. ಸಾಧನೆಗೆ ಬಡವ-ಶ್ರೀಮಂತ ಎಂಬ ಭೇದಭಾವವಿಲ್ಲ. ಸಾಧಿಸುವ ಛಲವೊಂದು ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ಸಿವಿಲ್‌ ನ್ಯಾಯಾಧೀಶೆ ಹುದ್ದೆಗೆ ಆಯ್ಕೆಯಾಗಿರುವ ಭಾಗ್ಯಶ್ರೀ ಮಾದರ ಅವರೇ ಸಾಕ್ಷಿ.. ಬಾಗಲಕೋಟೆಯ (Bagalkot News) ಗಂಗೂರ ಗ್ರಾಮದ ಭಾಗ್ಯಶ್ರೀ ಮಾದರ ಅವರು ಬಡ ಕುಟುಂಬದವರು. ತಂದೆ, ತಾಯಿ ಕೂಲಿ ಮಾಡಿ ಮಕ್ಕಳನ್ನು ಓದಿಸಿದ್ದರು. ಕನ್ನಡ ಮೀಡಿಯಂ ಸ್ಟೂಡೆಂಟ್‌ ಆದ ಭಾಗ್ಯಶ್ರೀ 2023ರಲ್ಲಿ ನಡೆದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಇದೀಗ ಸಿವಿಲ್‌ ನ್ಯಾಯಾಧೀಶೆಯಾಗಿ ಆಯ್ಕೆ ಆಗಿದ್ದಾರೆ.

ತಂದೆಯ ಹಠವೇ ಸಾಧನೆಗೆ ಪ್ರೇರಣೆ

ನ್ಯಾಯಾಧೀಶೆಯಾಗುವ ನನ್ನ ಕನಸನ್ನು ನನಸಾಗಿಸಿಕೊಂಡಿದ್ದೇನೆ. ತಂದೆಯ ಹಠವೇ ನನ್ನ ಈ ಸಾಧನೆಗೆ ಪ್ರೇರಣೆ ಆಯಿತು. ತಂದೆ-ತಾಯಿಯ ತ್ಯಾಗದಿಂದಲೇ ನ್ಯಾಯಾಧೀಶೆಯಾಗಲು ಕಾರಣವಾಯಿತು ಎಂದು ಭಾಗ್ಯಶ್ರೀ ಸಂತಸವನ್ನು ವ್ಯಕ್ತಪಡಿಸಿದ್ದಾರೆ. ಎಲ್ಎಲ್​ಬಿ ಪದವಿಯನ್ನು ನಂದಿಮಠ ಕಾಲೇಜಿನಲ್ಲಿ ಪಡೆದ ಭಾಗ್ಯಶ್ರೀಗೆ ತಾವು ಸೋತಾಗ, ತಾಳ್ಮೆ ಕಳೆದುಕೊಂಡ ಮಹಾಭಾರತ, ಭಗವದ್ಗೀತೆಯೇ ಸ್ಫೂರ್ತಿ ಆಗಿದೆ ಅಂತೆ. ಡಾ. ಬಿ.ಆರ್‌. ಅಂಬೇಡ್ಕರ್ ಅವರ ರೀತಿಯಲ್ಲಿ ಕರ್ತವ್ಯದಲ್ಲಿ ನಿರತಳಾಗಬೇಕೆಂದು ಆಸೆ ಹೊಂದಿದ್ದಾರೆ. ಮುಂದಿನ ದಿನದಲ್ಲಿ ಜಿಲ್ಲಾ ನ್ಯಾಯಾಧೀಶೆಯಾಗುವ ಗುರಿಯೂ ಇದ್ದು, ಇದಕ್ಕಾಗಿ ತಯಾರಿ ನಡೆಸುವುದಾಗಿ ತಿಳಿಸಿದ್ದಾರೆ.

ಕೂಲಿ ಮಾಡಿ ಮಗಳ ಕನಸು ನನಸು

ಭಾಗ್ಯಶ್ರೀ ತಂದೆ ದುರ್ಗಪ್ಪ, ತಾಯಿ ಯಮನವ್ವ ಬಡವರು. ಕೂಲಿನಾಲಿ ಮಾಡುವ ಈ ದಂಪತಿ ಇಬ್ಬರೂ ಅನಕ್ಷರಸ್ಥರಾದರೂ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ಕೊರತೆ ಮಾಡಿರಲಿಲ್ಲ. ದುರ್ಗಪ್ಪ, ಯಮನವ್ವ ದಂಪತಿಯ ಏಳು ಮಕ್ಕಳ ಪೈಕಿ ಭಾಗ್ಯಶ್ರೀ 5ನೇಯವರು. 2018ರಲ್ಲಿ ಕಾನೂನು ಪದವಿ ಪಡೆದಿರುವ ಭಾಗ್ಯಶ್ರೀ, ಹುನಗುಂದ ಕೋರ್ಟ್​ನಲ್ಲಿ 2018-20ರವರೆಗೆ ಎರಡು ವರ್ಷಗಳ ಕಾಲ ವಕೀಲ ವೃತ್ತಿ ಆರಂಭಿಸಿದ್ದರು.

ಇದನ್ನೂ ಓದಿ: Anil John Sequeira : ಬಂಟ್ವಾಳ ಯುವಕನ ಅಪರೂಪದ ಸಾಧನೆ; 25ನೇ ವಯಸ್ಸಿಗೆ ನ್ಯಾಯಾಧೀಶರಾಗಿ ಆಯ್ಕೆ

ಎರಡು ಬಾರಿ ಫೇಲ್‌ ಆಗಿದ್ದ ಭಾಗ್ಯಶ್ರೀ

2021-22ರವರೆಗೆ ಹೈಕೋರ್ಟ್​ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡಲು ಶುರು ಮಾಡಿದ್ದ ಭಾಗ್ಯಶ್ರೀ, ಲಾ ಕ್ಲರ್ಕ್ ಕಂ ರಿಸರ್ಚ್ ಅಸಿಸ್ಟೆಂಟ್ ಹುದ್ದೆ ನಿರ್ವಹಣೆಯನ್ನೂ ಮಾಡುತ್ತಿದ್ದರು. ಕೆಲಸದ ಜತೆ ಜತೆಗೆ ನ್ಯಾಯಧೀಶೆ ಹುದ್ದೆಯ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ಮಾಡುತ್ತಿದ್ದರು.

2021ರಲ್ಲಿ ಮೊದಲ ಬಾರಿ ಪರೀಕ್ಷೆ ಬರೆದಾಗ ಪಾಸ್‌ ಆಗಿದ್ದ ಭಾಗ್ಯಶ್ರೀ ಮೌಖಿಕ ಸಂದರ್ಶನದಲ್ಲಿ ಆಯ್ಕೆ ಆಗಿರಲಿಲ್ಲ. ಆದರೂ ಪ್ರಯತ್ನ ಬಿಡದೇ 2022ರಲ್ಲಿ ಮತ್ತೊಮ್ಮೆ ಎಲ್ಲ ಪರೀಕ್ಷೆಗಳನ್ನೂ ಪಾಸ್ ಮಾಡಿದ್ದರು. ಆದರೆ ಮತ್ತೆ ಮೌಖಿಕ ಪರೀಕ್ಷೆಯಲ್ಲಿ ಸರಿಯಾಗಿ ಉತ್ತರಿಸದೇ ಅವಕಾಶವನ್ನು ಕಳೆದುಕೊಂಡಿದ್ದರು. ಇದರಿಂದ ಬೇಸರಗೊಂಡ ಭಾಗ್ಯಶ್ರೀ ತಾವು ಹೋಗುತ್ತಿದ್ದ ವಕೀಲಿ ವೃತ್ತಿಯನ್ನು ಬಿಟ್ಟು, ಮೂರನೇ ಬಾರಿಗೆ ಮಾಡಿದ ಪ್ರಯತ್ನದಲ್ಲಿ ನ್ಯಾಯಾಧೀಶೆಯಾಗಿ ಆಯ್ಕೆಯಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Prajwal Revanna Case: ಪ್ರಜ್ವಲ್ ದುಬೈ ಅಲ್ಲ, ಎಲ್ಲಿ ಎಸ್ಕೇಪ್‌ ಆದ್ರೂ ಅಲ್ಲಿಂದ್ಲೇ ಹಿಡಿದುಕೊಂಡು ಬರುತ್ತೇವೆ: ಸಿಎಂ ಸಿದ್ದರಾಮಯ್ಯ

Prajwal Revanna Case: ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Wherever Prajwal escapes we will pick him up says CM Siddaramaiah
Koo

ಬಾಗಲಕೋಟೆ: ಹಾಸನದ ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣದ (Hassan Pen Drive Case) ಪ್ರಮುಖ ಆರೋಪಿ ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ದುಬೈ ಅಲ್ಲ, ಎಲ್ಲಿಯಾದರೂ ಎಸ್ಕೇಪ್‌ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಬಾಗಲಕೋಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್ ಜರ್ಮನಿಯಿಂದ ದುಬೈಗೆ ಎಸ್ಕೇಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜ್ವಲ್‌ ಎಲ್ಲಿಯಾದರೂ ಎಸ್ಕೇಪ್ ಆಗಲಿ. ಅಲ್ಲಿಂದಲೇ ಹಿಡಿದುಕೊಂಡು ಬರುತ್ತೇವೆ. ಯಾವ ದೇಶದಲ್ಲಿ ಇದ್ದರೂ ಬಿಡುವುದಿಲ್ಲ. ಅಲ್ಲಿಂದಲೇ ಕರೆದುಕೊಂಡು ಬರುತ್ತೇವೆ ಎಂದು ಹೇಳಿದರು.

ಈ ಕಾರಣಕ್ಕಾಗಿಯೇ ನಾನು ಪ್ರಜ್ವಲ್‌ ರೇವಣ್ಣ ಅವರ ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌ ಅನ್ನು ರದ್ದು ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದೆ. ಪಾಸ್‌ಪೋರ್ಟ್ ಕ್ಯಾನ್ಸಲ್ ಆದ ಮೇಲೆ ಪ್ರಜ್ವಲ್‌ ವಿದೇಶದಲ್ಲಿ ಇರಲು ಆಗುವುದಿಲ್ಲವಲ್ಲ. ಈ ಕಾರಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಜ್ವಲ್‌ ಪಾಸ್‌ಪೋರ್ಟ್‌ ಅನ್ನು ಕ್ಯಾನ್ಸಲ್‌ ಮಾಡಲಿ ಮಾಡಲಿ. ಪ್ರಜ್ವಲ್‌ ವಿದೇಶಕ್ಕೆ ಹೋಗಬೇಕಾದರೆ ಕೇಂದ್ರ ಸರ್ಕಾರಕ್ಕೆ ಗೊತ್ತಿರುವುದಿಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದರು.

ಸಂತ್ರಸ್ತರ ರಕ್ಷಣೆ ಮಾಡಲು ಸೂಚಿಸಿದ್ದೇನೆ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ಸಂತ್ರಸ್ತೆ ಕಿಡ್ನ್ಯಾಪ್ ಆಗಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಹೆಣ್ಣುಮಕ್ಕಳ ಎಲ್ಲಿ ಹೋಗಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಅವರನ್ನು ರಕ್ಷಣೆ ಮಾಡುವಂತೆ ಪೊಲೀಸರಿಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌, ರೇವಣ್ಣಗೆ ಮತ್ತೊಂದು ನೋಟಿಸ್‌; ವಿಚಾರಣೆಗೆ ಬಾರದಿದ್ದರೆ ಅರೆಸ್ಟ್‌: ಡಾ. ಜಿ. ಪರಮೇಶ್ವರ್

ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ

ಪ್ರಜ್ವಲ್‌ ಅವರ ತಂದೆ ಎಚ್.ಡಿ. ರೇವಣ್ಣ ಅವರು ಲಾಯರ್ ಹತ್ತಿರ ಯಾಕೆ ಹೋಗಿದ್ದಾರೆ? ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಮನೆಗೆ ಲಾಯರ್ ಅನ್ನು ಕರೆಸಿಕೊಂಡು ಏಕೆ ಚರ್ಚೆ ಮಾಡಿದ್ದಾರೆ? ಎಚ್‌ಡಿಕೆ ಒಮ್ಮೆ ಹೇಳುತ್ತಾರೆ, ರೇವಣ್ಣ, ನಾನು ಬೇರೆ ಬೇರೆ ಆಗಿದ್ದೇವೆ ಅಂತ. ದೇವೇಗೌಡರಿಗೂ, ನಮಗೂ ಈ ಪ್ರಕರಣಕ್ಕೂ ಏನೂ ಸಂಬಂಧ ಇಲ್ಲ ಅಂತ ಹೇಳುತ್ತಾರೆ. ಇನ್ನೊಂದು ಕಡೆ ಇದೆಲ್ಲವನ್ನೂ ಮಾಡುತ್ತಾರೆ. ಚುನಾವಣೆ ಪ್ರಚಾರದಲ್ಲಿ ಪ್ರಜ್ವಲ್ ಬೇರೆ ಅಲ್ಲ, ನನ್ನ ಮಗ ಬೇರೆ ಅಲ್ಲ ಎಂದು ಹೇಳಿದ್ದು ಕುಮಾರಸ್ವಾಂಇ ಅಲ್ಲವೇ? ಇದರ ಅರ್ಥ ಏನು? (What is it mean?) ಅವರು ಮಾಡೋದೆಲ್ಲವನ್ನೂ ಒಟ್ಟಿಗೆ ಮಾಡೋದು. ರಾಜಕೀಯ ಮಾಡೋದು ಒಟ್ಟಿಗೆ, ಕುಕೃತ್ಯ ಮಾಡೋದೂ ಒಟ್ಟಿಗೆ ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದರು.

Continue Reading

ಮಳೆ

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

karnataka Weather Forecast: ಸುಡುವ ಬಿಸಿಲಿನಲ್ಲೂ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡಲ್ಲಿ ಶುಷ್ಕ ವಾತಾವರಣ ಇದ್ದರೆ, ಮಲೆನಾಡು ಹಾಗೂ ದಕ್ಷಿಣ ಒಳನಾಡಲ್ಲಿ ಮಳೆಯಾಗಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ಹಲವೆಡೆ ಗುಡುಗು ಸಹಿತ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸಚೂನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಉಳಿದೆಡೆ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರವಾದ ಮಳೆಯಾಗಬಹುದು. ಮಲೆನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಧಗೆಯು ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶವು 39ರ ಗಡಿದಾಟಲಿದೆ. ಇದರಿಂದಾಗಿ ಉರಿ ಬಿಸಿಲು ಜನರನ್ನು ಹೈರಾಣಾಗಿಸಲಿದೆ.

ಇದನ್ನೂ ಓದಿ: Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

ಹೀಟ್‌ ವೇವ್‌

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ತಾಪಮಾನ ಹೆಚ್ಚಳ ಇರಲಿ ಎಚ್ಚರ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ರಾಜಕೀಯ

Lok Sabha Election 2024: ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಪರ ಭರ್ಜರಿ ಪ್ರಚಾರ

Lok Sabha Election 2024: ಬಾಗಲಕೋಟೆಯ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ ಮಾಡಲಾಯಿತು. ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಅಭ್ಯರ್ಥಿ ಪರ ಮತಯಾಚಿಸಿದರು.

VISTARANEWS.COM


on

Election campaign for Congress candidate Samyukta Patil in Prajadhwani convention at Bagalkot
Koo

ಬಾಗಲಕೋಟೆ: ಇಲ್ಲಿನ ನವನಗರದ ಅಂಜುಮಾನ್‌ ಇಸ್ಲಾಂ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್‌ ಪಕ್ಷದ ಪ್ರಜಾಧ್ವನಿ ಸಮಾವೇಶದಲ್ಲಿ ಬಾಗಲಕೋಟೆ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಅವರ ಪರ ಭರ್ಜರಿ ಮತಯಾಚನೆ (Lok Sabha Election 2024) ಮಾಡಲಾಯಿತು.

ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೇರಿದಂತೆ ಹಲವು ಸಚಿವರು, ಮುಖಂಡರು ಮಾತನಾಡಿದರು. ಯುವನಾಯಕಿಯನ್ನು ಗೆಲ್ಲಿಸಿ, ಸಂಸತ್ತಿನಲ್ಲಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ. ಅವರಿಗೆ ಮತವೆಂಬ ಆಶೀರ್ವಾದ ನೀಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.

ಇದನ್ನೂ ಓದಿ: AC Blast : ಕಲ್ಯಾಣ್​ ಜ್ಯುವೆಲರಿಯಲ್ಲಿ ಭಾರಿ ಅವಘಡ; ಏರ್​ ಕಂಡೀಷನರ್​ ಬ್ಲಾಸ್ಟ್​ ಆಗಿ ಮೂವರಿಗೆ ಗಾಯ

ಕಾಂಗ್ರೆಸ್‌ ಮುಖಂಡ ನಿಕೇತ್‌ ರಾಜ್‌ ಮೌರ್ಯ ಮಾತನಾಡಿ, ಕರ್ನಾಟಕ ಕಾಂಗ್ರೆಸ್‌ ಗ್ಯಾರಂಟಿ ಬಗ್ಗೆ ಇಡೀ ದೇಶದ ಜನ ಚರ್ಚೆ ಮಾಡುತ್ತಿದ್ದಾರೆ. ರಾಜ್ಯ ಕಾಂಗ್ರೆಸ್‌ ಸರ್ಕಾರವು ನುಡಿದಂತೆ ನಡೆದಿದ್ದು, 5 ಗ್ಯಾರೆಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ, ಜನರಿಗೆ ತಲುಪಿಸಿದೆ. ಆದರೆ ಗ್ಯಾರಂಟಿ ನೋಡಿ ಸಹಿಸಲು ಸಾಧ್ಯವಾಗದೇ ಬಿಜೆಪಿ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಈ ಬಾರಿಯ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಂಯುಕ್ತ ಪಾಟೀಲ್‌ ಗೆದ್ದೇ ಗೆಲ್ಲುತ್ತಾರೆ. ಸಂಸದರಾಗುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ತಿಳಿಸಿದರು.

ಸಮಾವೇಶದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್‌.ಬಿ. ತಿಮ್ಮಾಪುರ ಮಾತನಾಡಿದರು.

ಇದನ್ನೂ ಓದಿ: Lok Sabha Election 2024: ಮಹಾರಾಷ್ಟ್ರ ಸಿಎಂ ಕರೆಸಿ ಕನ್ನಡಿಗರಿಗೆ ಅವಮಾನ ಮಾಡಿದ ಜೋಶಿ: ಸಂತೋಷ್‌ ಲಾಡ್‌

ಸಮಾವೇಶದಲ್ಲಿ ಸಚಿವರಾದ ಕೆ.ಎನ್‌. ರಾಜಣ್ಣ, ಶಿವಾನಂದ ಪಾಟೀಲ್‌, ಶಾಸಕರಾದ ವಿಜಯಾನಂದ ಕಾಶಪ್ಪನವರ್‌, ಭೀಮಸೇನ್‌ ಚಿಮ್ಮನಕಟ್ಟಿ, ಎಚ್‌.ವೈ. ಮೇಟಿ, ಪ್ರದೀಪ್‌ ಈಶ್ವರ್‌, ಮಾಜಿ ಶಾಸಕಿ ಸೌಮ್ಯಾ ರೆಡ್ಡಿ, ಮೊಹಮ್ಮದ್‌ ನಲಪಾಡ್‌ ಹ್ಯಾರಿಸ್‌, ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ನಂಜಯ್ಯನಮಠ, ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ರಕ್ಷಿತಾ ಈಟಿ, ಆನಂದ ನ್ಯಾಮಗೌಡ, ಅಜಯ್‌ ಕುಮಾರ್‌ ಸರ್‌ ನಾಯಕ್‌, ಪಕ್ಷದ ಮುಖಂಡರಾದ ಬಿ.ಆರ್‌. ಯಾವಗಲ್‌, ಎಂ.ಪಿ. ನಾಡಗೌಡ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇತರರು ಉಪಸ್ಥಿತರಿದ್ದರು.

Continue Reading

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಹಾಗೂ ಹೀಟ್‌ ವೇವ್‌ (Heat wave) ಪರಿಸ್ಥಿತಿಗಳು ಮೇಲುಗೈ ಸಾಧಿಸಿವೆ. ಈ ವಾರವೆಲ್ಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಒಣ ಹವೆ (Dry Weather) ಮುಂದುವರಿಯಲಿದ್ದು, ತಾಪಮಾನ ಏರಿಕೆ ಆಗಲಿದೆ. ಶಾಖದ ಹೊಡೆತಕ್ಕೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ. ಇದರೊಟ್ಟಿಗೆ ಆರೋಗ್ಯ ಕಾಳಜಿ ವಹಿಸುವಂತೆ ಜನರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ಬಿಸಿಗಾಳಿ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ರೆಡ್ ಮತ್ತು ಆರೆಂಜ್‌, ಯೆಲ್ಲೋ ಅಲರ್ಟ್ ಇರುವ ಪ್ರದೇಶಗಳಿವು

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಬೆಂಗಳೂರಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ. ತಾಪಮಾನ ಏರಿಕೆಯು ಜನರನ್ನು ಕಂಗಾಲು ಮಾಡಿದೆ. ಇದೇ ವಾತಾವರಣವು ಈ ಪೂರ್ತಿ ಮುಂದುವರಿಯಲಿದೆ.

ಕೋಲಾರದಲ್ಲಿ ಮಳೆಯ ಸಿಂಚನ

ಕೋಲಾರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಗುರುವಾರ ಸತತ ಒಂದು ಗಂಟೆಯಿಂದ ಮಳೆ ಸುರಿಯುತ್ತಿದೆ. ಮೂರ್ನಾಲ್ಕು ತಿಂಗಳಿಂದ ಬೇಸಿಗೆ ಬಿಸಿಯಿಂದ ಬಸವಳಿದ ಜನರಿಗೆ ಮಳೆಯು ತಂಪೆರೆದಿದೆ. ಭರಣಿ ನಕ್ಷತ್ರದ ಮೊದಲ ಮಳೆ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಸುರಿಯುತ್ತಿದೆ. ಬಿಸಿಲಿನ ತಾಪ, ಬಿಸಿ ಗಾಳಿಗೆ, ಪರದಾಡುತ್ತಿದ್ದ ಜನರಿಗೆ ಮಳೆಯ ಸಿಂಚನದಿಂದ ಬಿಸಿಯಿಂದ ಮುಕ್ತರಾಗಿದ್ದಾರೆ

ಇದನ್ನೂ ಓದಿ: Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Viral News
ವೈರಲ್ ನ್ಯೂಸ್18 mins ago

Viral News: 17 ವರ್ಷದ ಯುವತಿ ಎರಡು ಬಾರಿ ಗರ್ಭಿಣಿ; ಪೋಷಕರು ಸೇರಿ 16 ಜನರ ವಿರುದ್ಧ ಕೇಸ್‌

Gratuity
ದೇಶ28 mins ago

Gratuity: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಗ್ರಾಚ್ಯುಟಿ, ಶಿಕ್ಷಣ ಭತ್ಯೆ ಶೀಘ್ರವೇ 25% ಹೆಚ್ಚಳ!

Prajwal Revanna Case I was raped at gunpoint JDS women leader files complaint against Prajwal
ಹಾಸನ29 mins ago

Prajwal Revanna Case‌: ಗನ್‌ ಪಾಯಿಂಟ್‌ನಲ್ಲಿ ಜೆಡಿಎಸ್‌ ನಾಯಕಿ ಮೇಲೆ ಪ್ರಜ್ವಲ್‌ರಿಂದ ರೇಪ್‌? ಎಫ್‌ಐಆರ್‌ನಲ್ಲಿದೆ ಇಂಚಿಂಚು ಡಿಟೇಲ್ಸ್!

icc men's test team rankings
ಕ್ರೀಡೆ44 mins ago

ICC Men’s Test Team Rankings: ಅಗ್ರಸ್ಥಾನದಿಂದ ಕುಸಿತ ಕಂಡ ಭಾರತ; ವಿಶ್ವ ಚಾಂಪಿಯನ್​ ಆಸೀಸ್​ ನಂ.1

Bengaluru Rains
ಮಳೆ47 mins ago

Bengaluru Rains : ಬೆಂಗಳೂರಲ್ಲಿ ಶುರುವಾಯ್ತು ಮಳೆಗಾಲ; ಕವಿದ ಕಾರ್ಮೋಡ, ಭಯಂಕರ ವರ್ಷಧಾರೆ

Press Freedom Day
Latest54 mins ago

Press Freedom Day: ಇಂದು ಪತ್ರಿಕಾ ಸ್ವಾತಂತ್ರ್ಯ ದಿನ; ಏನಿದರ ಮಹತ್ವ?

Job Alert
ಉದ್ಯೋಗ1 hour ago

Job Alert: 76 ಮೋಟಾರ್ ವೆಹಿಕಲ್ ಇನ್ಸ್​ಪೆಕ್ಟರ್ ಹುದ್ದೆಗಳಿಗೆ ಇಂದೇ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ

Prajwal Revanna Case Another case against Revanna transferred to SIT Notice to Bhavani
ಕ್ರೈಂ2 hours ago

Prajwal Revanna Case: ರೇವಣ್ಣ ಮೇಲಿನ ಮತ್ತೊಂದು ಕೇಸ್‌ ಎಸ್‌ಐಟಿಗೆ ವರ್ಗ; ಭವಾನಿಗೂ ನೋಟಿಸ್‌!

Narendra Modi
Lok Sabha Election 20242 hours ago

Narendra Modi: ಅಮೇಥಿ ಬದಲು ರಾಯ್‌ ಬರೇಲಿಯಿಂದ ರಾಹುಲ್‌ ಗಾಂಧಿ ಸ್ಪರ್ಧೆ; ಓಡಬೇಡಿ ಎಂದು ವ್ಯಂಗ್ಯವಾಡಿದ ಮೋದಿ

Helicopter Crash
ದೇಶ2 hours ago

Helicopter Crash: ಶಿವಸೇನೆ ನಾಯಕಿ ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್‌ ಪತನ;ವಿಡಿಯೋ ವೈರಲ್‌

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ11 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ21 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌