Site icon Vistara News

ಹಣ್ಣಿನ ಅಂಗಡಿಗೆ ನುಗ್ಗಿದ ಕಾರು, ಐವರಿಗೆ ಗಾಯ, ಹಣ್ಣುಗಳೆಲ್ಲ ಚೆಲ್ಲಾಪಿಲ್ಲಿ

ಬಾಗಲಕೋಟೆ: ರಬಕವಿ-ಬನಹಟ್ಟಿ ತಾಲೂಕಿನ ಆಸಂಗಿ ಕ್ರಾಸ್‌ ನ ರಸ್ತೆ ಬದಿಯ ಹಣ್ಣಿನ ಅಂಗಡಿಗೆ ಕಾರು ಡಿಕ್ಕಿ ಹೊಡೆದು ಐವರು ಗ್ರಾಹಕರು ಗಾಯಗೊಂಡಿದ್ದಾರೆ. ಕಾರು ಅಪ್ಪಳಿಸಿದ ರಭಸಕ್ಕೆ ಹಣ್ಣುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.

ಜಮಖಂಡಿ-ಕಾಗವಾಡ ರಾಜ್ಯ ಹೆದ್ದಾರಿಯ ಆಸಂಗಿ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಹಣ್ಣು ಖರೀದಿಸುತ್ತಿದ್ದ ಕಂಕಣವಾಡಿ ಗ್ರಾಮದ ಈಶ್ವರ ಅತ್ಯಪ್ಪನವರ, ಅವರ 5 ವರ್ಷದ ಮಗಳು ರುಕ್ಮವ್ವ, ಜಮಖಂಡಿಯ ಸಾಧಿಕ್ ಮುಜಾವರ, ಮೋಸಿನ್ ಔರಸಿಂಗ್ ಸೇರಿದಂತೆ ಐವರು ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡ ಇಬ್ಬರನ್ನು ಜಮಖಂಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬನಹಟ್ಟಿ ಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ| ಬಾಗಲಕೋಟೆ BJP ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿರುದ್ಧ ಆಸ್ತಿ ವಿಚಾರವಾಗಿ ದಬ್ಬಾಳಿಕೆ ಆರೋಪ

Exit mobile version