ಬಾಗಲಕೋಟೆ: ರಾಜ್ಯದಲ್ಲಿ ಮೇ 7ರಂದು ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ (Lok Sabha Election 2024) ನಡೆಯುವ ಹಿನ್ನೆಲೆಯಲ್ಲಿ ಅಂತಿಮ ಹಂತದ ಸಿದ್ಧತೆ ನಡೆಯುತ್ತಿದೆ. ಈ ನಡುವೆ ಚುನಾವಣಾ ಕರ್ತವ್ಯದ ಮೇಲೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸೋಮವಾರ ಮೃತಪಟ್ಟಿದ್ದಾರೆ.
ಜಮಖಂಡಿ ತಾಲೂಕಿನ ಬಿದಿರಿಯ ಜನತಾ ಫ್ಲಾಟ್‌ನ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕ ಜಿ.ಡಿ.ಸಿದ್ದಾಪುರ ಮೃತರು. ಇವರು ಬಸ್‌ನಲ್ಲಿ ಜಮಖಂಡಿಯಿಂದ ಮುಧೋಳಕ್ಕೆ ಹೋಗುವಾಗ ಹೃದಯಾಘಾತವಾಗಿದ್ದರಿಂದ ಕೊನೆಯುಸಿರೆದಿದ್ದಾರೆ. ಮುಧೋಳ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಶಿಕ್ಷಕ ನಿಯೋಜನೆಗೊಂಡಿದ್ದರು.
ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ
ಚಿತ್ರದುರ್ಗ: 4 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ಸಿಕ್ಕಿಬಿದ್ದವರು.
ಗುತ್ತಿಗೆದಾರರಿಗೆ ಬಿಲ್ ಮಾಡಿಕೊಡಲು ಕಾರ್ಯದರ್ಶಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಚಿತ್ರದುರ್ಗದ ಮೆದೆಹಳ್ಳಿ ರಸ್ತೆಯಲ್ಲಿರುವ ಬಯಲುಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಎಸ್ಪಿ ವಾಸುದೇವರಾವ್, ಡಿವೈಎಸ್ಪಿ ಮೃತ್ಯುಂಜಯ ಬಣಕಾರ ನೇತೃತ್ವದಲ್ಲಿ ನಡೆದ ದಾಳಿ ವೇಳೆ ಸಿಕ್ಕಿಬಿದ್ದಿದ್ದಾರೆ.
ಇದನ್ನೂ ಓದಿ | Assault Case : ವಿಕೋಪಕ್ಕೆ ತಿರುಗಿದ ಜಗಳ; ಕಪಾಳಮೋಕ್ಷಕ್ಕೆ ವ್ಯಕ್ತಿ ಬಲಿ
ಕಾಫಿ ತೋಟದ ಮಧ್ಯೆ ನೇತಾಡುತ್ತಿತ್ತು ವ್ಯಕ್ತಿ ಶವ; ಕೆರೆಯಲ್ಲಿ ತೇಲಿ ಬಂದ ಅಪರಿಚಿತ
ಕೊಡಗು: ಕಾಫಿ ತೋಟದ ಮಧ್ಯೆ ನೇಣು ಬಿಗಿದು ವ್ಯಕ್ತಿಯೊಬ್ಬ ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಣೆ. ಮಾದಪುರ ಸಮೀಪದ ಗರಗಂದೂರು ಗ್ರಾಮದ ಮಧು ಮೃತ ದುರ್ದೈವಿ. ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಸುಂಟಿಕೊಪ್ಪ ವಸಮೀಪದ 7ನೇ ಹೊಸಕೋಟೆಯಲ್ಲಿ ಘಟನೆ (Dead Body Found) ನಡೆದಿದೆ.
ಕಾವೇರಿ ಎಸ್ಟೇಟ್ ಸಮೀಪದ ರಸ್ತೆ ಬದಿಯಲ್ಲಿ ಮಧು ತನ್ನ ಬೈಕ್ ನಿಲ್ಲಿಸಿ ನಂತರ ತೋಟಕ್ಕೆ ತೆರಳಿ, ಅಲ್ಲಿದ್ದ ಮರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಕಾರ್ಮಿಕರು ಮೃತದೇಹವನ್ನು ಕಂಡು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.
ಕೆರೆಯಲ್ಲಿ ತೇಲುತ್ತಿದ್ದ ಅಪರಿಚಿತ ಶವ
ಬೆಂಗಳೂರು ಹೊರವಲಯದ ಆನೇಕಲ್ ಪಟ್ಟಣದ ದೊಡ್ಡಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಮೀನು ಹಿಡಿಯಲು ಹೋಗಿ ಕೆರೆಗೆ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. 40 ವರ್ಷ ವಯಸ್ಸಿನ ಆಸುಪಾಸಿನಲ್ಲಿರುವ ವ್ಯಕ್ತಿಯ ಮೃತದೇಹವಾಗಿದ್ದು, ಗುರುತು ಪತ್ತೆಯಾಗಿಲ್ಲ.
ಇದನ್ನೂ ಓದಿ | Prajwal Revanna Case: ಪ್ರಜ್ವಲ್ ಅತ್ಯಾಚಾರ ಕೇಸ್; ಎಚ್.ಡಿ. ರೇವಣ್ಣ ನಿವಾಸದಲ್ಲಿ ಸ್ಥಳ ಮಹಜರು: ವಕೀಲರ ಅಸಮಾಧಾನ
ಕೆರೆಯಲ್ಲಿ ಶವ ತೇಲುತ್ತಿದ್ದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೊಲೀಸರು, ಕೆರೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ. ಸದ್ಯ ಇದು ಆಕಸ್ಮಿಕ ಸಾವೋ ಅಥವಾ ಕೊಲೆಯೋ ಎಂಬುದನ್ನು ತಿಳಿಯಲು ಮೃತದೇಹವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಜತೆಗೆ ಮೃತನ ಗುರುತು ಪತ್ತೆಗೆ ಮುಂದಾಗಿದ್ದಾರೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.