ಬಾಗಲಕೋಟೆ: ದೇಶದಲ್ಲಿ ನಿಷೇಧ ಹೇರಿದ ಬಳಿಕ ಪಿಎಫ್‌ಐ ಸಂಘಟನೆಗಳ ಮುಖಂಡರ ಮೇಲೆ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಅದರ ಭಾಗವಾಗಿ ಇದೀಗ ಜಿಲ್ಲೆಯ ಇಳಕಲ್ ನಗರದ ಪಿಎಫ್ಐ ಮುಖಂಡ ರಿಯಾಜ್ ಬನ್ನು ಮತ್ತು ರಫೀಕ್ ನದಾಫ್ ಎಂಬುವರ ಮನೆಗಳ ಮೇಲೆ ಪೊಲೀಸರು ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.
ಬಾಗಲಕೋಟೆ: ಸ್ಥಳೀಯ ಕೋರ್ಟ್‌ನಿಂದ ಸರ್ಚ್ ವಾರಂಟ್ ಪಡೆದು ಹುನಗುಂದ ಸಿಪಿಐ ಸುರೇಶ ಬೆಂಡೆಗುಂಬಳ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದೆ. ನಗರದ ಅಲಾಂಪೂರ ಪೇಟೆಯಲ್ಲಿರುವ ಇಬ್ಬರು ಮುಖಂಡರು ಈ ವೇಳೆ ಮನೆಯಲ್ಲಿ ಇರಲಿಲ್ಲ. ಪರಿಶೀಲನೆ ವೇಳೆ ಯಾವುದೇ ಮಹತ್ವದ ದಾಖಲೆಗಳು ದೊರೆತಿಲ್ಲ ಎಂದು ತಿಳಿದು ಬಂದಿದೆ.
ರಾಮಮಂದಿರ ಸ್ಫೋಟಕ್ಕೆ ಸಂಚು
ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರವನ್ನು ಸ್ಫೋಟಿಸಲು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI Plot) ಸಂಚು ರೂಪಿಸಿದೆ. ಹಾಗೆಯೇ, ೨೦೪೭ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವ ಗುರಿ ಹೊಂದಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಇದರ ಬೆನ್ನಲ್ಲೇ ರಾಜ್ಯದಲ್ಲೂ ಈ ಸಂಘಟನೆಯ ಮೇಲೆ ಕಣ್ಣಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ತಿಳಿಸಿದ್ದರು.
ಇದನ್ನೂ ಓದಿ | PFI Plot | ರಾಮಮಂದಿರ ಸ್ಫೋಟಿಸಲು ಪಿಎಫ್‌ಐ ಸಂಚು, ರಾಜ್ಯದಲ್ಲಿ ಸಂಘಟನೆ ಮೇಲೆ ನಿಗಾ ಎಂದ ಬೊಮ್ಮಾಯಿ