ಬಾಗಲಕೋಟೆ : ಬೈಕ್ ಹಾಗೂ ಟಿಪ್ಪರ್ (Road Accident) ನಡುವೆ ಡಿಕ್ಕಿಯಾಗಿದ್ದು, ಸವಾರ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಾಗರಾಜ ಚನ್ನದಾಸರ (30) ಮೃತ ದುರ್ದೈವಿ. ಬಾಗಲಕೋಟೆಯ ರಾಷ್ಟ್ರೀಯ ಹೆದ್ದಾರಿ 218ರ ಕೆರೂರು ಬಳಿ ಇರುವ ಬಟಕುರ್ಕಿ ಕ್ರಾಸ್ ಘಟನೆ ನಡೆದಿದೆ.
ನಾಗರಾಜ್ ಬಾಗಲಕೋಟೆ ನವನಗರದ ವಾಂಬೆ ಕಾಲೋನಿ ನಿವಾಸಿಯಾಗಿದ್ದಾರೆ. ಟಿಪ್ಪರ್ ಡಿಕ್ಕಿಯ ರಭಸಕ್ಕೆ ತೀವ್ರ ರಕ್ತಸ್ರಾವವಾಗಿ ನಾಗರಾಜ್ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕೆರೂರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಕೆರೂರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: Fraud Case: ಟ್ರೇಡಿಂಗ್ ಹೆಸ್ರಲ್ಲಿ ಕೋಟಿ ಕೋಟಿ ಗುಳುಂ; ಗುಜರಿ ವ್ಯಾಪಾರಿಗೆ ಖೋಟಾ ನೋಟು ಕೊಟ್ಟು ವಂಚನೆಗೆ ಯತ್ನ
ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ; ಕಾಲು ಮುರಿದುಕೊಂಡ ಸವಾರ
ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಕಾಲು ಮುರಿದುಕೊಂಡಿದ್ದಾರೆ. ರಾಯಚೂರು ತಾಲೂಕಿನ ಯರಗೇರಾ ಬಳಿ ಘಟನೆ ನಡೆದಿದೆ. ಬೈಕ್ ಸವಾರ ಜಿಟಿ ಜಿಟಿ ಮಳೆಯಲ್ಲಿ ರಾಯಚೂರಿನಿಂದ ಮಂತ್ರಾಲಯ ಕಡೆ ಹೊರಟಿದ್ದರು. ಕೆಎಸ್‌ಆರ್‌ಟಿಸಿ ಬಸ್ ಮಂತ್ರಾಲಯದಿಂದ ರಾಯಚೂರಿಗೆ ಬರುತ್ತಿದ್ದಾಗ, ಬೈಕ್‌ಗೆ ಗುದ್ದಿದೆ.
ರಾಯಚೂರು- ಮಂತ್ರಾಲಯ ಹೆದ್ದಾರಿಯಲ್ಲಿ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ನಜ್ಜುಗುಜ್ಜಾಗಿದ್ದು, ಗಾಯಾಳು ಸವಾರನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್‌ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಯರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಮನೆಯಿಂದ ಹೊರ ಹೋದವನು ಶವವಾಗಿ ಪತ್ತೆ
ಎರೆಡು ದಿನಗಳ ಹಿಂದೆ ಮನೆಯಿಂದ ಹೊರ ಹೋದ ವ್ಯಕ್ತಿ ಇಂದು ಶವವಾಗಿ ಪತ್ತೆಯಾಗಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹೆಸರೂರು ಗ್ರಾಮದ ತುಂಗಭದ್ರಾ ನದಿಯಲ್ಲಿ ಘಟನೆ ನಡೆದಿದೆ. ನದಿಗೆ ಸ್ನಾನಕ್ಕೆ ಹೋಗುತ್ತೆನೆಂದು ಮನೆಯಲ್ಲಿ ಹೇಳಿ ಹೋಗಿದ್ದ ನೀರಿಗಿಳಿದಾಗ ಈಜು ಬರಲಾರದೇ ಮುಳಗಿ ಮೃತಪಟ್ಟಿದ್ದಾರೆ. ಗರುಡಪ್ಪ ಕಕ್ಕೂರ (48) ಎಂಬಾತ ಮೃತ ದುರ್ದೈವಿ. ಸ್ಥಳಕ್ಕೆ ಮುಂಡರಗಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮುಂಡರಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ