Site icon Vistara News

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದ ಐವರು ಆರೋಪಿಗಳ ಜಾಮೀನು ಅರ್ಜಿ ವಜಾ

ಡಿಜೆ ಹಳ್ಳಿ, ಕೆಜಿ ಹಳ್ಳಿ

ಬೆಂಗಳೂರು: ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣವನ್ನು ಪೊಲೀಸ್ ಠಾಣೆ ಮೇಲಿನ ದಾಳಿ ಭಯೋತ್ಪಾದನಾ ಕೃತ್ಯ ಎಂದಿರುವ ಹೈಕೋರ್ಟ್‌, ಅತೀಕ್ ಅಹ್ಮದ್ ಸೇರಿ ಐವರು ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ವ್ಯಾಪ್ತಿಯ ಗಲಭೆ ಪ್ರಕರಣದ ವಿಚಾರಣೆ ನಡೆಸಿರುವ ನ್ಯಾ.ಕೆ.ಸೋಮಶೇಖರ್, ನ್ಯಾ.ಶಿವಶಂಕರ್ ಅಮರಣ್ಣನವರ್ ಅವರಿದ್ದ ಹೈಕೋರ್ಟ್‌ ಪೀಠ, ಪೊಲೀಸ್ ಠಾಣೆ ಮೇಲೆ ದಾಳಿಗೆ ಆರೋಪಿಗಳು ಪೆಟ್ರೋಲ್ ಬಾಟಲ್ ಬಳಸಿದ್ದಾರೆ. ಪೊಲೀಸರ ಮೇಲೆ ರಾಡ್, ದೊಣ್ಣೆಯಿಂದ ದಾಳಿ ಮಾಡಿದ್ದು, ಜನರನ್ನು ಭೀತರಾಗಿಸಲು ಕೃತ್ಯ ಎಸಗಿದ್ದಾರೆ ಎಂದು ತಿಳಿಸಿದ್ದು, ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ.

2020ರ ಆ.11ರಂದು ನವೀನ್ ಎಂಬಾತ ಪ್ರವಾದಿ ಮೊಹಮ್ಮದರ ಕುರಿತಾಗಿ ಅವಹೇಳನಕಾರಿ ಪೋಸ್ಟ್‌ ಹಾಕಿದ್ದ ಎಂದು ಆರೋಪಿಸಿ ಒಂದು ಗುಂಪು ಡಿಜೆ ಹಳ್ಳಿ ಪೊಲೀಸ್ ಠಾಣೆ ಮೇಲೆ ದಾಳಿ ಮಾಡಿತ್ತು. ಪೊಲೀಸ್ ಠಾಣೆ ಮೇಲೆ ಕಲ್ಲೆಸೆತ, ಪೊಲೀಸ್ ವಾಹನಗಳಿಗೆ ಬೆಂಕಿ ಹಾಕಿದ್ದು ಸೇರಿ ಹಲವು ವಿಧ್ವಂಸಕ ಕೃತ್ಯಗಳನ್ನು ಈ ಗುಂಪು ಎಸಗಿತ್ತು. ಆ ಸಂದರ್ಭದಲ್ಲಿ ಶಾಸಕ ಅಖಂಡ ಶ್ರೀನಿವಾಸ್ ಮನೆಗೂ ಬೆಂಕಿ ಹಚ್ಚಲಾಗಿತ್ತು.

ಇದನ್ನೂ ಓದಿ | BBMP Election | ಆ.16ರವರೆಗೆ ಮೀಸಲಾತಿ ಪಟ್ಟಿ ಅಂತಿಮಗೊಳಿಸದಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

Exit mobile version