ಚಿತ್ರದುರ್ಗ: ಇಲ್ಲಿನ ಮುರುಘಾ ಮಠದ ಶರಣರು ಹಾಗೂ ಅವರ ಉತ್ತರಾಧಿಕಾರಿ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ನಿರೀಕ್ಷಣಾ ಜಾಮೀನು ಕೋರಿ ಆ.30ರಂದು ಶರಣರು ಅರ್ಜಿ ಸಲ್ಲಿಸಿದ್ದರು. ಮುರುಘಾ ಶರಣರ ಉತ್ತರಾಧಿಕಾರಿ ಬಸವಾದಿತ್ಯ ಅವರೂ ಫೋಕ್ಸೊ ಪ್ರಕರಣದಲ್ಲಿ A-3 ಆರೋಪಿಯಾಗಿದ್ದು, ಅವರೂ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಯೂ ಇಂದು ವಿಚಾರಣೆಗೆ ಬರಲಿದೆ.
ಇಂದು ಬೆಳಗ್ಗೆ 10.30ರ ಬಳಿಕ ಅರ್ಜಿ ವಿಚಾರಣೆಗೆ ಬರಲಿದೆ. 939/22 ಅರ್ಜಿ ಸಂಖ್ಯೆಯ ಜಾಮೀನು ಅರ್ಜಿಯನ್ನು ಜಿಲ್ಲಾ ನ್ಯಾಯಾಲಯದಲ್ಲಿ ಸಲ್ಲಿಸಲಾಗಿದ್ದು, ಇಲ್ಲಿ ರದ್ದಾದರೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ ಸಾಧ್ಯವಿದೆ. ಇಂದು ಮಧ್ಯಾಹ್ನದ ಒಳಗೆ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ ಎಂದು ತಿಳಿದುಬಂದಿದೆ. NCPCR ನೋಟೀಸ್ ಜಾರಿಯಾಗಿದ್ದು ಮುರುಘಾ ಮಠದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಇದನ್ನೂ ಓದಿ | ಮುರುಘಾಶ್ರೀ ವಿರುದ್ಧ ಪೋಕ್ಸೊ ಪ್ರಕರಣ; ಚಿತ್ರದುರ್ಗ ಎಸ್‌ಪಿಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನೋಟಿಸ್